Untitled Document
Sign Up | Login    
Dynamic website and Portals
  

Related News

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಅಬು ಜುಂದಾಲ್ ಸೇರಿದಂತೆ 7 ಜನರಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಔರಂಗಾಬಾದ್​ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 26/11ಮುಂಬೈ ದಾಳಿಯ ಸೂತ್ರಧಾರ ಅಬು ಜುಂದಾಲ್ ಸೇರಿ 7 ಜನರಿಗೆ ಮೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮೋಕಾ ವಿಶೇಷ ನ್ಯಾಯಾಲಯ ಕಳೆದ ಗುರುವಾರ ಅಬು ಜುಂದಾಲ್...

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...

ಭಾರತದ ಭೂಪಟದಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶ ತೋರಿಸದಿದ್ದಲ್ಲಿ ದಂಡ ಹಾಗೂ ಜೈಲುಶಿಕ್ಷೆ

ಭಾರತದ ಭೂಪಟದಲ್ಲಿ ಇನ್ನು ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು (ಪಿಓಕೆ) ಹಾಗೂ ಅರುಣಾಚಲ ಪ್ರದೇಶವನ್ನು ಭಾರತದ ಭೂಭಾಗವಾಗಿ ತೋರಿಸದಿದ್ದರೆ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂ.ದಂಡ ವಿಧಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಈ...

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀ ರಾಮಚಂದ್ರಾಪುರ ಮಠದ ಸನ್ಮಾನ

ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ. ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ...

ಇಬ್ಬರು ಸೇನಾಧಿಕಾರಿಗಳ ವಿರುದ್ದ ಸಿಬಿಐ ತನಿಖೆ ನಡೆಸಲು ಮನೋಹರ್ ಪಾರಿಕ್ಕರ್ ಆದೇಶ

ಅಕ್ರಮ ಆಸ್ತಿ ಗಳಿಕೆ ಹಾಗೂ ಲಂಚ ನೀಡಿ ಉನ್ನತ ಹುದ್ದೆ ಗಿಟ್ಟಿಸಿದ ಆರೋಪ ಸಂಬಂಧ ಸೇವೆಯಲ್ಲಿರುವ ಇಬ್ಬರು ಮೇಜರ್‌ ಜನರಲ್‌ಗ‌ಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಕ್ಷಣಾ ಸಚಿವಾಲಯ ಹೇಳಿದೆ. ಗುರುವಾರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಇಬ್ಬರು ಮೇಜರ್‌ ಜನರಲ್‌ಗ‌ಳ...

ಅಕ್ರಮವಾಗಿ ದಾಸ್ತಾನು ಮಾಡಲಾದ 36000 ಟನ್‌ ಬೇಳೆಕಾಳು ವಶ

ತೊಗರಿ, ಉದ್ದಿನಂಥ ಬೇಳೆಕಾಳುಗಳು 200 ರೂ. ಗಡಿ ದಾಟಿ ಬೆಲೆ ಗಗನಕ್ಕೇರಿರುವಂತೆಯೇ, ಅಕ್ರಮ ದಾಸ್ತಾನುಗಾರರ ಮೇಲೆ ಸರ್ಕಾರಗಳು ತೀವ್ರ ದಾಳಿ ನಡೆಸಿವೆ. 10 ರಾಜ್ಯಗಳಲ್ಲಿ 36 ಸಾವಿರ ಟನ್‌ ಬೇಳೆಕಾಳು ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿವೆ. ಅಲ್ಲದೆ, ವಿದೇಶಗಳಿಂದ 5 ಸಾವಿರ ಟನ್‌...

ದ್ವಿದಳ ಧಾನ್ಯ ಅಕ್ರಮ ಸಂಗ್ರಹ ತಡೆಗೆ ಕೇಂದ್ರ ಸರ್ಕಾರದಿಂದ ಕ್ರಮ

ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ. ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ...

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಮತ್ತು ಇತರ ಮೂವರಿಗೆ ನೋಟಿಸ್ ಜಾರಿ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...

ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ವಿರುದ್ಧ ಎಫ್‌.ಐ.ಆರ್ ದಾಖಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಎಫ್‌.ಐ.ಆರ್ ದಾಖಲಿಸಿದೆ. ವೀರಭದ್ರ ಸಿಂಗ್ ಅವರು ಕೇಂದ್ರ ಸಚಿವರಾಗಿದ್ದ ವೇಳೆ 6.1 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದು, ಪ್ರಕರಣದ...

ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳ ಎಂಟು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ಎಂಟು ಭ್ರಷ್ಟ ಅಧಿಕಾರಿಗಳ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...

ರೇಣುಕಾಚಾರ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ...

ಒಂದಂಕಿ ಲಾಟರಿ ಹಗರಣ: 6 ಅಧಿಕಾರಿಗಳಿಗೆ ಸಿಐಡಿ ನೋಟಿಸ್

ರಾಜ್ಯದಲ್ಲಿ ನಡೆಯುತ್ತಿದ್ದ ಬಹುಕೋಟಿ ಒಂದಂಕಿ ಅಕ್ರಮ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಐಜಿ ಮಟ್ಟದ 6 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಇಂದೂ ಕೂಡ ಅವರ...

ಸಿಐಡಿ ಪೊಲೀಸರಿಂದ ಅಲೋಕ್ ಕುಮಾರ್ ವಿಚಾರಣೆ

ಅಕ್ರಮ ಲಾಟರಿ ಮಾರಾಟ ದಂಧೆ ರೂವಾರಿ ಪಾರಿರಾಜನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಕಾನೂನು ಸುವ್ಯವಸ್ಥೆ ವಿಭಾಗ (ಪಶ್ಚಿಮ) ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್‌ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆಯೇ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ಬಗ್ಗೆ ನಿರ್ಧರಿಸಿಲ್ಲ-ಸಿಎಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ...

ಮೇ 23ರಂದು ತಮಿಳುನಾಡು ಸಿಎಂ ಆಗಿ ಜಯಲಲಿತಾ ಅಧಿಕಾರ ಸ್ವೀಕಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡಿರುವ ಜೆ.ಜಯಲಲಿತಾ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸರಸ್ವತಿ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಸಂದರ್ಭದಲ್ಲಿ ಜಯಲಲಿತಾ ಅವರು...

ಜಯಲಲಿತಾ ಮತ್ತೆ ಪಟ್ಟಕ್ಕೇರಲು ಸಿದ್ಧತೆ: ಮೇ 22ಕ್ಕೆ ಶಾಸಕಾಂಗ ಪಕ್ಷದ ಸಭೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ. ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ...

ಜಯಲಲಿತಾ ಖುಲಾಸೆ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ-ಸುಬ್ರಮಣಿಯನ್‌ ಸ್ವಾಮಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ನೀಡಿದ್ದಾರೆ. ಕರ್ನಾಟಕ ಹೈಕೋರ್ಟ್‌ ನ ತೀರ್ಪು ತಪ್ಪು ಗಣಿತದ ದುರಂತ...

ಜಯಲಲಿತಾ ಪ್ರಕರಣ: ತೀರ್ಪು ಅಚ್ಚರಿ ತಂದಿದೆ-ಸುಬ್ರಹ್ಮಣ್ಯನ್ ಸ್ವಾಮಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ. ತಮಿಳುನಾಡು ಮಾಜಿ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ತೀರ್ಪು ಇಂದು ಪ್ರಕಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್‌ ನಲ್ಲಿ ಪ್ರಕಟವಾಗಲಿದೆ. ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...

ಅಕ್ರಮ ಆಸ್ತಿಗಳಿಕೆ ಪ್ರಕರಣ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿರ್ದೋಷಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100...

ಶೀಘ್ರವೇ ಪನ್ನೀರ್ ಸೆಲ್ವಂ ರಾಜೀನಾಮೆ: ಮೇ 20ರೊಳಗೆ ಜಯಲಲಿತಾ ಪ್ರಮಾಣ ವಚನ ಸಾಧ್ಯತೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...

ಕುಮಾರ್ ವಿಶ್ವಾಸ್ ವಿರುದ್ಧ ಅಕ್ರಮ ಸಂಬಂಧ ಆರೋಪ: ನೋಟಿಸ್ ಜಾರಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ...

ಜಯಾಲಲಿತಾ ಪ್ರಕರಣ: ಎಸ್‌.ಪಿ.ಪಿ ಭವಾನಿ ಸಿಂಗ್ ನೇಮಕ ಅಸಿಂಧು-ಸುಪ್ರೀಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌.ಪಿ.ಪಿ) ಭವಾನಿಸಿಂಗ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ಅಸಿಂಧುಗೊಳಿಸಿದೆ. ಎಸ್‌.ಪಿ.ಪಿ ಭವಾನಿಸಿಂಗ್ ನೇಮಕವನ್ನು ಪ್ರಶ್ನಿಸಿ ಡಿಎಂಕೆ ಪ್ರಧಾನ ಕಾರ‌್ಯದರ್ಶಿ ಕೆ ಅನ್ಬುಗನ್...

ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ: ಜಾರ್ಜ್

ತಮ್ಮ ವಿರುದ್ಧ ಭೂ ಅಕ್ರಮ ಆರೋಪ ಮಾಡಿರುವ ಎಸ್.ಆರ್ ಹಿರೇಮಠ್ ವಿರುದ್ಧ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದು...

ಅಕ್ರಮ-ಸಕ್ರಮ ಯೋಜನೆ ಎಲ್ಲರಿಗೂ ಅನ್ವಯ: ಶ್ರೀನಿವಾಸ್‌ ಪ್ರಸಾದ್

ಗ್ರಾಮೀಣ ಪ್ರದೇಶದ ಅಕ್ರಮ-ಸಕ್ರಮ ಯೋಜನೆಗೆ ಅರ್ಜಿಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ಜತೆಗೆ ಎಪಿಎಲ್ ಸೇರಿದಂತೆ ಎಲ್ಲಾ ಬಡವರಿಗೂ ಅಕ್ರಮ-ಸಕ್ರಮ ಯೋಜನೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಶ್ರೀನಿವಾಸ್‌ ಪ್ರಸಾದ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ...

ಆನಂದ್‌ ರಾಜೀನಾಮೆ ವಾಪಸ್‌

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್‌ ಸಿಂಗ್‌ ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಮಾಜಿ ಸಚಿವ ಸಿ.ಟಿ.ರವಿ ಅವರು ಮಾತುಕತೆ ನಡೆಸಿ ಮನವೊಲಿಸಿದ ನಂತರ ಆನಂದ್‌ ಸಿಂಗ್‌...

ಬೆಂಗಳೂರಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ: ಹೆಚ್.ಡಿ.ಕೆ

ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸುದೀಪ್ ಶೆಟ್ಟಿ ಅವರು ಅಕ್ರಮ ವಲಸಿಗರ ಕುರಿತಂತೆ ಹೊರತಂದಿರುವ ಸಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ...

ಜನಾರ್ದನ ರೆಡ್ಡಿ ಮತ್ತೆ ಬಂಧನ ಸಾಧ್ಯತೆ

ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ. ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...

ಸಿಬಿಐ ನಿಂದ ತಪ್ಪಿಸಿಕೊಳ್ಳಲು ಮೋದಿಯೊಂದಿಗೆ ಸ್ನೇಹ ಬಯಸುತ್ತಿರುವ ಮುಲಾಯಂ ಸಿಂಗ್ ಯಾದವ್

ತಮ್ಮ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ನಿಂದ ತಪ್ಪಿಸಿಕೊಳ್ಳಲು ಸಮಾಜವಾದಿ ಮುಖಂಡ ಮುಲಾಯಂ ಸಿಂಗ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ನೇಹ ಬೆಳೆಸಲು ಮುಂದಾಗಿದ್ದಾರೆ. ಈ ಹಿಂದೆ ಛಿದ್ರಗೊಂಡಿದ್ದ ಜನತಾ ಪರಿವಾರ...

ವಾಧ್ರ ಅಕ್ರಮಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಹರ್ಯಾಣ ಸರ್ಕಾರ ಕಾರಣ: ಸಿಎಜಿ ವರದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...

ಬಿಬಿಎಂಪಿ ಅಕ್ರಮ: ಮೇಯರ್,ಉಪಮೇಯರ್,ಆಯುಕ್ತರಿಗೆ ನೋಟಿಸ್

ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿದ ತನಿಖಾ ವರದಿ ಅನುಸಾರ ಕ್ರಮ...

ಮೃತ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಮರಣೋತ್ತರ ಪರೀಕ್ಷೆ ಅಂತ್ಯ

ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...

ಅಕ್ರಮ-ಸಕ್ರಮ ಯೋಜನೆ: ಮಾ.23ರಿಂದ ರಾಜ್ಯಾದ್ಯಂತ ಜಾರಿ

ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ನಿರ್ಮಾಣ ಮತ್ತು ಅಭಿವೃದ್ಧಿಗಳನ್ನು ಅಧಿಕೃತಗೊಳಿಸುವ ಅಕ್ರಮ-ಸಕ್ರಮ ಯೋಜನೆ ಕೊನೆಗೂ ಜಾರಿಗೆ ಬಂದಿದೆ. ಅಕ್ರಮ-ಸಕ್ರಮ ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಫೆ.27ರಂದು ಅಧಿಸೂಚನೆ ಹೊರಡಿಸಿದ್ದು, ಇದೀಗ ನಿಯಮಾವಳಿಗಳನ್ನು ರಚಿಸಲಾಗಿದೆ. ಮಾ.23ರಿಂದ ಅರ್ಜಿ...

ಜಯಲಲಿತಾ ಪ್ರತಿವಾದಿಯಾಗಲು ಸುಬ್ರಹ್ಮಣಿಯನ್ ಸ್ವಾಮಿಗೆ ಅನುಮತಿ ನಿರಾಕರಿಸಿದ ಕೋರ್ಟ್

'ತಮಿಳುನಾಡು' ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಡಾ.ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ವಿಶೇಷ...

ಅಕ್ರಮ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಲು ನಗರಾಭಿವೃದ್ಧಿ ಸಚಿವರ ಸೂಚನೆ

ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್‌ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ...

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...

ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯುವೆ: ದಯಾನಿಧಿ ಮಾರನ್

ಅಕ್ರಮ ಟೆಲಿಫೋನ್ ಎಕ್ಸ್ ಚೇಂಜ್ ಸ್ಥಾಪನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಕಾರ್ಯದರ್ಶಿ ಸೇರಿದಂತೆ ಸಿಬಿಐ ಅಧಿಕಾರಿಗಳು ಮೂವರನ್ನು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್, ಸಿಬಿಐ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ...

ಜನಾರ್ದನ ರೆಡ್ಡಿ ಬಿಡುಗಡೆ ಹಿನ್ನೆಲೆ: ಜೈಲಿನ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ನೆ

'ಒಎಂಸಿ' ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲಿನಿಂದ ಜ.22ರಂದು ಬಿಡುಗಡೆಯಾಗಲಿದ್ದಾರೆ. ರೆಡ್ದಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜನಾರ್ದನ ರೆಡ್ಡಿ ಅವರ ಜಮೀನು ಪ್ರತಿ ದೊರೆತಿದ್ದು ಅವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ....

ಜನಾರ್ಧನ ರೆಡ್ಡಿಗೆ ಸಿಗಲಿದೆಯೇ ಬಿಡುಗಡೆ ಭಾಗ್ಯ?

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ. ಜನಾರ್ಧನ ರೆಡ್ಡಿ ವಿರುದ್ಧ...

ವಿಚಾರಣೆಗೆ ಬಾರದ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

ಜನಾರ್ದನ ರೆಡ್ಡಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಮಂಜೂರು

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...

ಅಧಿವೇಶನದೊಳಗೆ ಡಿ.ಕೆ.ಶಿ ರಾಜೀನಾಮೆ ಕೇಳಲಾಗುವುದು: ಬಿಜೆಪಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ...

ರಾಬರ್ಟ್ ವಾದ್ರಾ ಆಸ್ತಿ ವಿವರ ಕೇಳಿದ ಹರ್ಯಾಣ ಬಿಜೆಪಿ ಸರ್ಕಾರ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ವಿರುದ್ಧದ ಅಕ್ರಮ ಭೂ ವ್ಯವಹಾರ ಆರೋಪಗಳ ತನಿಖೆಯನ್ನು ಹರ್ಯಾಣ ಸರ್ಕಾರ ಇನ್ನಷ್ಟು ತೀವ್ರಗೊಳಿಸಿದೆ. ರಾಬರ್ಟ್‌ ವಾದ್ರಾ ಹೊಂದಿರುವ ಎಲ್ಲ ಆಸ್ತಿ ಮತ್ತು ಅವರ ಒಡೆತನದ ಕಂಪನಿಗಳ ವಿವರಗಳನ್ನು ನೀಡುವಂತೆ ರಾಜ್ಯ...

ನೈಸ್ ಅಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ: ದೇವೇಗೌಡ

ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...

ಸೋನಿಯಾ ಗಾಂಧಿ ಕುಟುಂಬ ಇಟಲಿಗೆ ಸ್ಥಳಾಂತರವಾಗುವ ಚಿಂತನೆಯಲ್ಲಿದೆ: ಹರ್ಯಾಣ ಸಚಿವ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬ ಭಾರತ ಬಿಟ್ಟು ಇಟಲಿಗೆ ಸ್ಥಳಾಂತರವಾಗುವ ಯೋಚನೆಯಲ್ಲಿದೆ ಎಂದು ಹರ್ಯಾಣ ಆರೋಗ್ಯ ಸಚಿವ ಅನಿಲ್ ವ್ಯಂಗ್ಯವಾಡಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದು ರಾಬರ್ಟ್ ವಾಧ್ರ ಅವರ ಭೂ ಅಕ್ರಮಗಳ ಬಗ್ಗೆ ತನಿಖೆ...

ಮಾಧ್ಯಮ ಪ್ರತಿನಿಧಿಗಳ ಮೈಕ್ ಕಿತ್ತೆಸೆದ ಸೋನಿಯಾ ಗಾಂಧಿ ಅಳಿಯ ವಾಧ್ರ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ, ನ.1ರಂದು ಮಾಧ್ಯಮ ಪ್ರತಿನಿಧಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹರ್ಯಾಣದಲ್ಲಿ ವಾಧ್ರ ನಡೆಸಿರುವ ಭೂ ಅಕ್ರಮದ ಬಗ್ಗೆ ವರದಿಗಾರನ ಪ್ರಶ್ನೆಗೆ ಕೋಪಗೊಂಡ ವಾಧ್ರ, ಮಾಧ್ಯಮ ಪ್ರತಿನಿಧಿಯ ಮೈಕ್(ಧ್ವನಿವರ್ಧಕವನ್ನು) ನೂಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ.ವಿ...

ಅಕ್ರಮವಾಗಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆಗಳ ಬಂಧನ

ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ 5 ಬಾಂಗ್ಲಾ ದೇಶದ ಪ್ರಜೆಗಳನ್ನು ಉತ್ತರ ಪ್ರದೇಶ ಪೊಲೀಸರು ಅ.29ರಂದು ಬಂಧಿಸಿದ್ದಾರೆ. ಕಳೆದ ಹತ್ತು ವರ್ಷದಿಂದ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆಗಳ ವಿರುದ್ಧ ವಿದೇಶಿ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ....

ಅಕ್ರಮ ಆಸ್ತಿ ಗಳಿಕೆ ಪ್ರಕರಣ :ಬಿಎಸ್ ವೈ, ಈಶ್ವರಪ್ಪಗೆ ಸಂಕಷ್ಟ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಅರುಣಾದೇವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳನ್ಯಾಯಾಲಯ ನೀಡಿದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಹೊಸದಾಗಿ ಅರ್ಜಿ ಪರಿಗಣಿಸುವಂತೆ ಸೂಚಿಸಿದೆ. ಈ...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಜೈಲಿನಿಂದ ಬಿಡುಗಡೆಗೊಂಡ ಜಯಲಲಿತಾ

ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾಯಿಸಿ: ದೇವೇಗೌಡ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾವಣೆ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಯಲಲಿತಾ ಪ್ರಕರಣವನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ ಎಂದರು. ನಿತ್ಯ...

ಎಐಎಡಿಎಂಕೆ ಪ್ರತಿಭಟನೆಗೆ ವಿಜಯಕಾಂತ್ ಖಂಡನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. ರಜಾಕಾಲದ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದ್ದು, 28 ಅರ್ಜಿಗಳ ವಿಚಾರಣೆಯಾದ ಬಳಿಕ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರೀಯ ವಕೀಲ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಲಾಗಿದೆ. ತಮ್ಮ ವಿರುದ್ಧದ ಶಿಕ್ಷೆ ರದ್ದು ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಜಯಲಲಿತಾ ಸೆ.29ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ...

ಸುಬ್ರಹ್ಮಣ್ಯನ್ ಸ್ವಾಮಿಗೆ ಮತಿಭ್ರಮಣೆ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್

ಅಕ್ರಮ ಸೈಟ್ ಪಡೆದ ಆರೋಪ ಹಿನ್ನಲೆಯಲ್ಲಿ ಸಕ್ಕರೆ ಹಾಗೂ ಸಹಕಾರ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಖಾಸಗಿ ದೂರಿನ ಅನ್ವಯ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಪೊಲೀಸರು ಚಾಮರಾಜನಗರ ಸೆಷನ್ ಕೋರ್ಟ್ ಗೆ ಚಾರ್ಜ್ ಶೀಟ್...

ಜಯಲಲಿತಾಗೆ ಜೈಲು ಶಿಕ್ಷೆ ಹಿನ್ನಲೆ: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರಸೆಲ್ವಂ ಆಯ್ಕೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಉತ್ತರಾಧಿಕಾರಿ ಆಯ್ಕೆ ಹುಡುಕಾಟ ಆರಂಭವಾಗಿದ್ದು, ಪನ್ನೀರಸೆಲ್ವಂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಚಿವರು ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪನ್ನೀರಸೆಲ್ವಂ...

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪಿಗೆ ಕ್ಷಣಗಣನೆ

ದೇಶಾದ್ಯಂತ ಕುತೂಹಲ ಕೆರಳಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ ಪ್ರಕಟಿಸಲಿದೆ. 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನು ಬೆಳಿಗ್ಗೆ 11 ಗಂಟೆಗೆ...

ಜಯಲಲಿತಾ ಪ್ರಕರಣದ ತೀರ್ಪು ಹಿನ್ನಲೆ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...

ಜಯಲಲಿತಾ ಅಕ್ರಮ ಆಸ್ತಿಗಳಿಕೆ ತೀರ್ಪು ಪ್ರಕಟ: ಆರೋಪ ಸಾಬೀತು

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ತಪ್ಪಿತಸ್ಥೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ,...

ಎಐಎಡಿಎಂಕೆ ಆಕ್ರೋಶ: ಡಿಎಂಕೆ ಸಂಭ್ರಮಾಚರಣೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧಾರ: ಟಿ.ಬಿ.ಜಯಚಂದ್ರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...

ಡಿ.ಕೆ ಸಹೋದರರು ದಾಖಲೆ ತಿರುಚುವುದರಲ್ಲಿ ನಿಸ್ಸೀಮರು-ಹೆಚ್.ಡಿ ಕುಮಾರಸ್ವಾಮಿ

ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೆ.22ರಂದು ರಾಮನಗರದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್...

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...

ವಾದ್ರ ಭೂ ಹಗರಣ: ಸಿ.ಬಿ.ಐ ತನಿಖೆಗೆ ಒತ್ತಾಯಿಸಿ ಸಲ್ಲಿಸಿದ್ದ ಪಿಐಎಲ್ ವಜಾ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ಅವರ ಕಂಪನಿಗೆ ಅಕ್ರಮವಾಗಿ ನೀಡಲಾಗಿದ್ದ ಪರವಾನಗಿ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಹರ್ಯಾಣದಲ್ಲಿ, ರಾಬರ್ಟ್ ವಾದ್ರ ಅವರದ್ದೂ ಸೇರಿದಂತೆ ಹಲವು ಡೆವಲಪರ್ ಹಾಗೂ ಬಿಲ್ಡರ್ಸ್...

ಮಾಜಿ ಸಿ.ಎಂ ಶೆಟ್ಟರ್ ವಿರುದ್ಧ ಟಿ.ಜೆ ಅಬ್ರಾಹಂ ಗಂಭೀರ ಆರೋಪ

ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ. ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...

ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಕೇಂದ್ರ ಸರ್ಕಾರ, ಸೇನೆ ವಿರುದ್ಧ ಸುಪ್ರೀಂ ಅಸಮಾಧಾನ

'ಅಕ್ರಮ ಶಸ್ತ್ರಾಸ್ತ್ರ ಮಾರಾಟ' ದಂಧೆಯಲ್ಲಿ ಭಾಗಿಯಾಗಿರುವ ಕೆಲವು ಸೇನಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವುದಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ. ಸೇನೆಗೆ ಸೇರಿದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ...

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ: ಸುಪ್ರೀಂ ಕೋರ್ಟ್

ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, 1993ರಿಂದ ಈ ವರೆಗಿನ ಎಲ್ಲಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಆರ್.ಎಂ.ಲೋಧಾ ನೇತೃತ್ವದ ತ್ರಿಸದಸ್ಯ ಪೀಠ,...

ಅಕ್ರಮ ಗಣಿ ಕಂಪನಿಗಳಿಗೆ ಪರವಾನಗಿ ನೀಡದಿರಲು ಹಿರೇಮಠ ಆಗ್ರಹ

ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...

ಬಳ್ಳಾರಿ ಸಂಪತ್ತಿನ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ತೇಜಸ್ವಿನಿ ಗೌಡ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ. ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...

ಜನಾರ್ದನ ರೆಡ್ಡಿ ದಂಪತಿಯ 38 ಕೋಟಿ ಆಸ್ತಿ ಮುಟ್ಟುಗೋಲು

ಮಾಜಿ ಸಚಿವ, ಅಕ್ರಮ ಗಣಿಗಾರಿಕೆಯ ಆರೋಪಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ 37.86 ಕೋಟಿ ರೂಗಳನ್ನು ಅಕ್ರಮ ಹಣ ವರ್ಗವಣೆ ಕುರಿತ ವಿಶೇಷ ನ್ಯಾಯಲಯ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ 4 ಕೋಟಿ...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited