Untitled Document
Sign Up | Login    
Dynamic website and Portals
  

Related News

ಸುಳ್ಳು ಅತ್ಯಾಚಾರ ಪ್ರಕರಣಗಳ ವಿರುದ್ಧ ಕಾನೂನು ಅಗತ್ಯ

ಸುಳ್ಳು ಅತ್ಯಾಚಾರ ಪ್ರಕರಣಗಳ ಪರಿಣಾಮಗಳಿಂದ ಪುರುಷರನ್ನು ರಕ್ಷಿಸುವ ಮತ್ತು ಅವರ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಸಮಯ ಬಂದಿದೆ ಎಂದು ದೆಹಲಿಯ ವಿಚಾರಣಾ ನ್ಯಾಯಾಲಯ ಹೇಳಿದೆ. ವಕೀಲರೊಬ್ಬರ ಮೇಲೆ ದಾಖಲಾಗಿದ್ದ ಅತ್ಯಾಚಾರ ಕೇಸ್ ನ ವಿಚಾರಣೆ ನಡೆಸಿದ ನ್ಯಾಯಾಲಯ, ಇದೊಂದು ಸುಳ್ಳು...

42 ವರ್ಷಗಳಿಂದ ಕೋಮಾಲ್ಲಿದ್ದ ಅರುಣಾ ಶಾನಭಾಗ್ ನಿಧನ

ಕಳೆದ 42 ವರ್ಷಗಳ ಹಿಂದೆ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಕೋಮಾದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ನರ್ಸ್ ಅರುಣಾ ಶಾನಭಾಗ್ ಮುಂಬೈನ ಕೆಇಎಂ (ಕಿಂಗ್ ಎಡ್ವರ್ಡ್ ಮೆಮೋರಿಯಲ್)ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ವೈದ್ಯರು ಖಚಿತಪಡಿದ್ದಾರೆ. ಕಳೆದ ಮೂರು ದಿನಗಳಿಂದ ಅರುಣಾ ಶಾನಭಾಗ್ ನಿಮೋನಿಯಾದಿಂದ...

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಪಾದ್ರಿಗಾಗಿ ಜಾಲ ಬೀಸಿದ ಕೇರಳ ಪೊಲೀಸ್

ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ ಆರೋಪಕ್ಕೆ ಗುರಿಯಾಗಿರುವ ಕ್ಯಾಥೋಲಿಕ್‌ ಪಾದ್ರಿಗಾಗಿ ಕೇರಳ ಪೊಲೀಸರೀಗ ಹಲವರು ರಾಜ್ಯಗಳಲ್ಲಿ ಜಾಲ ಬೀಸಿದ್ದಾರೆ. ಆರೋಪಿ ಪಾದ್ರಿಯ ವಿರುದ್ಧ ಲುಕ್‌ ಔಟ್‌ ನೊಟೀಸ್‌ ಜಾರಿ ಮಾಡಿರುವ ಕೇರಳ ಪೊಲೀಸರು, ವಿಮಾನ ನಿಲ್ದಾಣಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಈತನ...

ಭಾರತದಲ್ಲಿ ವೈವಾಹಿಕ ಅತ್ಯಾಚಾರವೆಂಬ ವ್ಯಾಖ್ಯಾನ ಒಪ್ಪಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ಭಾರತದಲ್ಲಿ ವಿವಾಹವನ್ನು ಪವಿತ್ರ ಸಂಸ್ಕಾರವನ್ನಾಗಿ ಪರಿಗಣಿಸಲಾಗಿರುವುದರಿಂದ ವೈವಾಹಿಕ ಅತ್ಯಾಚಾರ ಎಂಬ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವೈವಾಹಿಕ ಅತ್ಯಾಚಾರ ಎಂಬುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣಿಸಲ್ಪಟ್ಟಿದೆ, ಆದರೆ ಭಾರತದಲ್ಲಿ ಅದೇ ರೀತಿಯ ಕಲ್ಪನೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ಭಾರತೀಯರ ಶೈಕ್ಷಣಿಕ...

ರೇಪ್‌ ಗೆ ಪ್ರತಿರೋಧಿಸಿದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ

ರೇಪ್‌ ಯತ್ನಕ್ಕೆ ಪ್ರತಿರೋಧ ತೋರಿದ 30 ವರ್ಷದ ಮಹಿಳೆಯನ್ನು ಯುವಕ ಬೆಂಕಿ ಹಚ್ಚಿದ ಘಟನೆ ಮುಜಾಫರ್ ನಗರದ ಸಿಸೋಲಿ ಪಟ್ಟಣದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿರುವ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ದೇಹ ಸ್ಥಿತಿಯು ಗಂಭೀರವಿದೆ ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಂಕ್‌ ಉದ್ಯೋಗಿಯೋರ್ವರ...

ಅತ್ಯಾಚಾರ ಪ್ರಕರಣ : ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾಣಯ್ಯ ರಾಜೀಜಿನಾಮೆ

ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ. ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....

ಭಾರತೀಯ ವಿದ್ಯಾರ್ಥಿಗೆ ಜರ್ಮನ್ ವಿವಿಯಲ್ಲಿ ಪ್ರವೇಶ ನಿರಾಕರಣೆ!

ಭಾರತದ ರೇಪ್ ಕಲ್ಚರ್ ನ್ನೇ ಕಾರಣವಾಗಿಟ್ಟುಕೊಂಡು ಜರ್ಮನಿಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ಲೈಪ್ಜಿಗ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯಲು ಭಾರತೀಯ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಮುಖ್ಯಸ್ಥರು, ಭಾರತದಲ್ಲಿರುವ ಅತ್ಯಾಚಾರ ಸಂಸ್ಕೃತಿಯ ಕಾರಣ ನೀಡಿ ವಜಾಗೊಳಿಸಿದ್ದಾರೆ. ತಮ್ಮ ಬಳಿ...

ಬಿಬಿಸಿ ಸಾಕ್ಷ್ಯಚಿತ್ರ: ಅತ್ಯಾಚಾರ ಅಪರಾಧಿ ಪರ ವಕೀಲರ ವಿರುದ್ಧ ಕ್ರಮ ಸಾಧ್ಯತೆ

'ಬಿಬಿಸಿ' ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅಪರಾಧಿ ಮುಖೇಶ್ ಸಿಂಗ್ ಪರ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಅಪರಾಧಿ ಮುಖೇಶ್ ಸಿಂಗ್ ಪರವಾಗಿ ಹೇಳಿಕೆ ನೀಡಿದ್ದೂ ಅಲ್ಲದೇ, ಅತ್ಯಾಚಾರ ನಡೆಯುವುದಕ್ಕೆ ಮಹಿಳೆಯರೇ ಕಾರಣ ಎಂಬ...

ಜೈಲಿಗೆ ನುಗ್ಗಿ ರೇಪ್‌ ಆರೋಪಿ ಹತ್ಯೆ

ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಪ್ರತಿನಟನೆಗಿಳಿದ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಜೈಲಿಗೆ ನುಗ್ಗಿ ಆರೋಪಿಯನ್ನು ಹೊರಗೆಳೆದು ತಂದು ನಗ್ನಗೊಳಿಸಿ ಥಳಿಸಿ ಹತ್ಯೆಗೈದ ಘಟನೆ ನಾಗಾಲ್ಯಾಂಡ್‌ ನ‌ ದಿಮಾಪುರ್ ನ ವಾಣಿಜ್ಯ ನಗರದಲ್ಲಿ ನಡೆದಿದೆ. ಹತ್ಯೆಗೀಡಾದ ಅತ್ಯಾಚಾರ ಆರೋಪಿ 35...

ನಿಷೇಧದ ನಡುವೆ ಬಿಬಿಸಿ ಸಾಕ್ಷ್ಯ ಚಿತ್ರ ಪ್ರಸಾರ: ಕೇಂದ್ರ ಸರ್ಕಾರದಿಂದ ಕ್ರಮ ಸಾಧ್ಯತೆ

'ನಿಷೇಧ'ದ ಹೊರತಾಗಿಯೂ ಬಿಬಿಸಿ ವಾಹಿನಿ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಖೇಶ್ ಸಿಂಗ್ ಸಂದರ್ಶನವನ್ನು ನಿಗದಿಗಿಂತ ಮೊದಲೇ ಪ್ರಸಾರ ಮಾಡಿದೆ. ಸಂದರ್ಶನ ಪ್ರಸಾರ ಮಾಡುವ ಮೂಲಕ, ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಇಂಗ್ಲೆಂಡ್ ಸೇರಿದಂತೆ ಇತರೆ...

ಅತ್ಯಾಚಾರಿ ಸಂದರ್ಶನಕ್ಕೆ ಅನುಮತಿ ನೀಡಿದ್ದು ಸರಿಯಲ್ಲ : ಕೇಂದ್ರ ಸಚಿವ ನಖ್ವಿ

ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ. ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...

ರೇಪ್ ಪ್ರಕರಣ: ಯೂಬರ್ ಕ್ಯಾಬ್ ಚಾಲಕನಿಗೆ 14 ದಿನ ನ್ಯಾಯಾಂಗ ಬಂಧನ

ಎಂ.ಎನ್.ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಯೂಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್‌ ನನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅತ್ಯಾಚಾರದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಶಿವಕುಮಾರ್ ಯಾದವ್‌ ನನ್ನು ಡಿ.11ರಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ...

ಲೈಸೆನ್ಸ್‌ ಇಲ್ಲದ ವೆಬ್‌ ಆಧರಿತ ಟ್ಯಾಕ್ಸಿ ನಿಷೇಧ: ರಾಜನಾಥ್ ಸಿಂಗ್

ದೆಹಲಿಯಲ್ಲಿ 'ಉಬರ್‌' ಕಂಪನಿಗೆ ಸೇರಿದ ಕ್ಯಾಬ್‌ ಚಾಲಕ ಯುವತಿ ಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಪರಿಣಾಮ ಇದೀಗ ಇಡೀ ದೇಶದ ಮೇಲಾಗಿದೆ. ಪ್ರಕರಣ ನಡೆದ ಸ್ಥಳವಾದ ದೆಹಲಿ ಮಾತ್ರವಲ್ಲದೆ ಎಲ್ಲಾ ರಾಜ್ಯಗಳಲ್ಲೂ ಲೈಸೆನ್ಸ್‌ ಹೊಂದಿರದ ವೆಬ್‌ ಆಧರಿತ ಟ್ಯಾಕ್ಸಿ ಸೇವೆಗಳನ್ನು ರಾಜ್ಯ...

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯಗೊಳಿಸಬೇಕು: ರಾಜ್‌ನಾಥ್ ಸಿಂಗ್

ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ (ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ-ಭೌಗೋಳಿಕ ಸ್ಥಾನ ನಿರ್ದೇಶಕ) ವ್ಯವಸ್ಥೆ ಅಳವಡಿಕೆ ಕಡ್ಡಾಯಗೊಳಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ತಿಳಿಸಿದ್ದಾರೆ. ದೆಹಲಿಯ ಉಬರ್ ಕ್ಯಾಬ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವಾ ಸಂಪರ್ಕ ವಾಹನಗಳ ನಿಯಮ ನಿಬಂಧನೆಗಳನ್ನು...

ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ: ನಿತಿನ್ ಗಡ್ಕರಿ

ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಖಾಸಗಿ ಕ್ಯಾಬ್ ಸಂಸ್ಥೆ ಯೂಬರ್‌ನ ಪರವಾನಗಿ ರದ್ದು ಮಾಡಿರುವ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯಿಸಿದ್ದು, ಕ್ಯಾಬ್ ಸೇವೆ ನಿಷೇಧಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮದವರೊಂಗಿಗೆ ಮಾತನಾಡಿದ ಗಡ್ಕರಿ,...

ಬದೌನ್ ಸಹೋದರಿಯರದ್ದು ಕೊಲೆಯಲ್ಲ, ಆತ್ಮಹತ್ಯೆ: ಸಿಬಿಐ ವರದಿ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ. ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ಕಾನೂನು ಸುವ್ಯವಸ್ಥೆ ಸಮಸ್ಯೆ ಜಟಿಲವಾದರೆ ಸರ್ಕಾರದ ವಿರುದ್ಧ ಸೂಕ್ತ ಕ್ರಮ: ರಾಜ್ಯಪಾಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ. ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...

ಐವಾನ್ ಡಿಸೋಜಾ ವಿರುದ್ಧ ಶಿಸ್ತುಕ್ರಮ: ಪರಮೇಶ್ವರ್

ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ತಿರುಗೇಟು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿಯಿಂದ ಡಿಸೋಜಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ. ಐವಾನ್ ಡಿಸೋಜಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿಸೋಜಾಗೆ ಕೆಪಿಸಿಸಿಯಿಂದ ನೊಟಿಸ್ ಜಾರಿ ಮಾಡಲಾ್ಗುವುದು...

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ನಾಯಕನಿಂದ ವಿವಾದಾತ್ಮಕ ಹೇಳಿಕೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಕೆ.ಎಸ್ ಈಶ್ವರಪ್ಪ

'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....

ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...

ಅತ್ಯಾಚಾರ ಪ್ರಕರಣ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ವಿಫಲವಾಗಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಗಸೂಚಿ ಅಳವಡಿಸುವ ಕುರಿತು ನ.7ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು...

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ನಂದಿತಾ ಸಾವು ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ: ಕಿಮ್ಮನೆ ರತ್ನಾಕರ ಆಣೆ,ಪ್ರಮಾಣ

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ವಾರದೊಳಗೆ ಪ್ರಯಾಣ ದರ ಇಳಿಕೆಯಾಗದಿದ್ದರೆ ಬಸ್ ಸಂಚರಿಸಲು ಬಿಡುವುದಿಲ್ಲ: ಬಿಜೆಪಿ

ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...

ತೀರ್ಥಹಳ್ಳಿ ಅತ್ಯಾಚಾರ ಪ್ರಕರಣ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಲಿ: ಶೋಭಾ ಕರಂದ್ಲಾಜೆ

ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸಿ.ಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ನ.5ರಂದು ಮಲ್ಲೇಶ್ವಂ ಬಿಜೆಪಿ ಕಚೇರಿಯಿಂದ ಸಿ.ಎಂ ನಿವಾಸದ ವರೆಗೆ ತೆರಳಿದ ಕಾರ್ಯಕರ್ತರು...

ಅತ್ಯಾಚಾರಿಗಳನ್ನು ರಕ್ಷಿಸುತ್ತಿರುವ ಸರ್ಕಾರ 420 ಕೆಲಸ ಮಾಡುತ್ತಿದೆ: ಶೋಭಾ ಕರಂದ್ಲಾಜೆ

'ತೀರ್ಥಹಳ್ಳಿ'ಯ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುವ ಮೂಲಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ 420 ಕೆಲಸ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ನ.4ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಶಾಲೆಗೆ ಹೋಗುವ...

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...

ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆಗೆ ಶಿಫಾರಸ್ಸು: ಸಚಿವೆ ಉಮಾಶ್ರೀ ಭರವಸೆ

ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಶಿಫಾರಸ್ಸು ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ಸರ್ಕಾರ ಯಾವುದೇ...

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಸಿದ್ದರಾಮಯ್ಯ

ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು...

ಶಾಲೆಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ: ಜಾರ್ಜ್

ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ, ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇಂಬ್ರಿಡ್ಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ...

ಉದ್ದೇಶಿತ ಗಲಭೆಗಳನ್ನು ತಡೆದಿದ್ದಕ್ಕೆ ಸರ್ಕಾರದ ಮೇಲೆ ಬಿಜೆಪಿಗೆ ಅಸಹನೆ: ಕೆ.ಜೆ ಜಾರ್ಜ್

ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು...

ನಗರದ ಮತ್ತೊಂದು ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...

ಪುರುಷತ್ವ ಪರೀಕ್ಷೆ : ನಿತ್ಯಾನಂದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪುರುಷತ್ವ ಪರೀಕ್ಷೆ ನಡೆಸುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಅರ್ಜಿ...

ಕೇಂದ್ರ ಸಚಿವ ಡಿ.ವಿ.ಎಸ್ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...

ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ, ರಾಜ್ಯ ಸರ್ಕಾರ ಅತ್ಯಾಚಾರಿಗಳ ಮೇಲೆ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರೂ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ. ಬಿಹಾರದ ಯುವತಿ ಮೇಲೆ ಬೆಂಗಳೂರಿನಲ್ಲಿ ಅತ್ಯಾಚಾರ ನಡೆಸಲಾಗಿದ್ದು ತಾವರೆಕೆರೆ ಪೊಲೀಸ್...

ಬೆಂಗಳೂರು ಗ್ಯಾಂಗ್ ರೇಪ್: ಪ್ರಭಾವಿಗಳ ಮಕ್ಕಳ ವಿರುದ್ಧ ಕೇಸ್ ದಾಖಲು

'ಬೆಂಗಳೂರು' ನಗರದ ಹೊರವಲಯದಲ್ಲಿ ನಡೆದಿರುವ ಬಿಹಾರ ಮೂಲದ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ರಾಮನಗರ ಎಸ್.ಪಿ ಅನುಪಮ್ ಅಗರ್ವಾಲ್ ಪ್ರತಿಕ್ರಿಯಿಸಿದ್ದು, ಆರೋಪಿಗಳ ವಿರುದ್ಧ ಸಿ.ಆರ್.ಪಿ.ಸಿ ಸೆಕ್ಷನ್ 376(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣ ದಾಖಲಾಗಿರುವ ತಾವರೆಕೆರೆ ಪೊಲೀಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited