Untitled Document
Sign Up | Login    
Dynamic website and Portals
  

Related News

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ

ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. ಮಹಿಳಾ ಪರ ಸಂಘಟನೆಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಪ್ರಮುಖ ಆರು ಪ್ರಶ್ನೆಗಳೊಂದಿಗೆ ಅರ್ಜಿಯನ್ನು ಸಾಂವಿಧಾನಿಕ...

ಐ ತೀರ್ಪಿನ ಮೇಲೆ ಗಮನವಿಟ್ಟು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ. ಕರ್ನಾಟಕ ಸಲ್ಲಿಸಿರುವ ಅರ್ಜಿಯ ಮರುವಿಚಾರಣೆ ಇದೇ ಅಕ್ಟೋಬರ್ 18ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯದ ಅರ್ಜಿ ವಿಚಾರಣೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆ ನಡೆಯಲಿದ್ದು, ರಾಜ್ಯ ಸರ್ಕಾರ ನೀಡಿದ ಕಾರಣಗಳನ್ನು ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಕೈಗೊಂಡ ನಿರ್ಣಯಗಳನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು...

ಸುಪ್ರೀಂ ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಬಿಗಿ ಭದ್ರತೆ

ಕಾವೇರಿ ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಮುಂಜಾಗೃತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಿಟಿ ರೈಲ್ವೆ...

ಮಥುರಾ ಗಲಭೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ

29 ಮಂದಿ ಸಾವಿಗೆ ಕಾರಣವಾದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ. ಘೊಷ್ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಸಿಬಿಐ ತನಿಖೆ ಕೋರಿದ...

ಒಂದು ವಾರದಲ್ಲಿ ಪಾಸ್ ಪೋರ್ಟ್

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯುವ ವಿಧಾನವನ್ನು ಇನ್ನಷ್ಟು ಸುಲಭವಾಗಿಸಿದೆ. ಅರ್ಜಿಯ ಜೊತೆ ಆಧಾರ್‌, ಮತದಾರನ ಗುರುತಿನ ಚೀಟಿ ಮತ್ತು ಪಾನ್‌ಕಾರ್ಡ್‌ ಜೊತೆ ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಕೇಸುಗಳು ಬಾಕಿ ಇಲ್ಲ ಎಂಬ ಅಫಿಡವಿಟ್‌ ಹೇಳಿಕೆ ನೀಡಿದರೆ ಒಂದು ವಾರದಲ್ಲಿ...

2016-17ನೇ ಸಾಲಿನ ಸಿಇಟಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 2016-17ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ http://kea.kar.nic.in/ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆನ್‌ಲೈನ್‌ ಅರ್ಜಿ ಭರ್ತಿ ವೇಳೆ ಗೊಂದಲವಾಗದಂತೆ...

ಮರಣದಂಡನೆ ಶಿಕ್ಷೆಯಿಂದ ಬಚಾವ್ ಆದ ರಾಜೀವ್ ಗಾಂಧಿ ಹಂತಕರು

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮೂವರಿಗೂ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದೆ. ಜು. ೨೧ ರಂದು ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ಕರುಣೆಯ...

ಲಲಿತ್ ಮೋದಿ ವಲಸೆ ಅರ್ಜಿಗೆ ಸಹಿ ಹಾಕಿದ್ದನ್ನು ಒಪ್ಪಿಕೊಂಡ ರಾಜಸ್ಥಾನ ಸಿಎಂ

ಐಪಿಎಲ್‌ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್‌ ಮೋದಿ ವಲಸೆ ಅರ್ಜಿಗೆ ಸಹಿ ಮಾಡಿದ್ದ ದಾಖಲೆಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದ ಮಾರನೆಯ ದಿನವೇ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ’ಆ ಸಹಿ ನನ್ನದೇ' ಎಂದು ಪಕ್ಷದ ನಾಯಕತ್ವದ ಮುಂದೆ ಒಪ್ಪಿಕೊಂಡಿದ್ದಾರೆ....

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...

ಆಪ್ ನಿಂದ ಜಿತೇಂದ್ರ ತೋಮರ್ ಉಚ್ಛಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ ಅಸಮಾಧಾನ ಉಂಟುಮಾಡಿದೆ. ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ಅವರನ್ನು ಪಕ್ಷದಿಂದ...

ಜಿತೇಂದ್ರ ಸಿಂಗ್ ತೋಮರ್ ಜಾಮೀನು ಅರ್ಜಿ ವಜಾ

ನಕಲಿ ಕಾನೂನು ಪದವಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ. ಜೀತೆಂದ್ರ ಸಿಂಗ್ ತೋಮರ್ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು...

ಒಬಾಮಾ ಭಾರತ ಭೇಟಿ ವಿಚಾರ: ಖರ್ಚು-ವೆಚ್ಚದ ವಿವರ ನೀಡಲು ಕೇಂದ್ರ ನಕಾರ

ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...

ಅಕ್ರಮ-ಸಕ್ರಮ ಯೋಜನೆ ಎಲ್ಲರಿಗೂ ಅನ್ವಯ: ಶ್ರೀನಿವಾಸ್‌ ಪ್ರಸಾದ್

ಗ್ರಾಮೀಣ ಪ್ರದೇಶದ ಅಕ್ರಮ-ಸಕ್ರಮ ಯೋಜನೆಗೆ ಅರ್ಜಿಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ಜತೆಗೆ ಎಪಿಎಲ್ ಸೇರಿದಂತೆ ಎಲ್ಲಾ ಬಡವರಿಗೂ ಅಕ್ರಮ-ಸಕ್ರಮ ಯೋಜನೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಶ್ರೀನಿವಾಸ್‌ ಪ್ರಸಾದ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ. ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...

ಮುಂಬೈ ಸರಣಿ ಸ್ಫೋಟ ಪ್ರಕರಣ: ಯಾಕೂಬ್‌ ಮೆಮೋನ್‌ ಗೆ ಗಲ್ಲು ಶಿಕ್ಷೆ

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ತನಗೆ ನೀಡಲಾಗಿರುವ ಮರಣ ದಂಡನೆಯ ಶಿಕ್ಷೆಯನ್ನು ಪುನರ್ ಪರಿಶೀಲಿಸುವಂತೆ ಯಾಕೂಬ್‌ ಅಬ್ದುಲ್‌ ರಝಾಕ್‌ ಮೆಮೋನ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ನಿಟ್ಟಿನಲ್ಲಿ ಮೆಮೋಮ್ ಗೆ ಯಾವುದೇ ಹೊತ್ತಿನಲ್ಲಿ...

ಗೃಹ ಇಲಾಖೆ ಅಧಿಕಾರಿಗಳನ್ನು ದಾರಿ ತಪ್ಪಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್!

'ನಿರ್ಭಯಾ' ಸಾಕ್ಷ್ಯಚಿತ್ರದ ಸಂಬಂಧ ಒಂದೊಂದೇ ಸತ್ಯಗಳು ಹೊರಬೀಳಲಾರಂಭಿಸಿವೆ. ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್ ಅವರ ಹಿನ್ನಲೆಯನ್ನು ಪರಿಶೀಲಿಸದೇ ಗೃಹ ಸಚಿವಾಲಯ ತಿಹಾರ್ ಜೈಲಿಗೆ ತೆರಳಲು ವಿದೇಶಿ ಪತ್ರಕರ್ತೆಗೆ ಅನುಮತಿ ನೀಡಿತ್ತು ಎಂಬ ವಿಷಯ ಬಯಲಾದ ಬೆನ್ನಲ್ಲೇ, ಸಾಕ್ಷ್ಯ ಚಿತ್ರ ನಿರ್ಮಿಸುವ...

ಆದರ್ಶ ಹೌಸಿಂಗ್ ಸೊಸೈಟಿ ಹಗರಣ: ಅಶೋಕ್ ಚೌಹಾಣ್ ಅರ್ಜಿ ವಜಾ

ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್‌ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ. ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...

ರಾಹುಲ್ ಗಾಂಧಿ ಹುಡುಕಿ ಕೊಡಿ: ಅಲಹಾಬಾದ್ ಹೈಕೋರ್ಟ್ ಗೆ ಪಿಐಎಲ್

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆಂಬ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ಸ್ಥಳೀಯ ವಕೀಲರೊಬ್ಬರು ಅಲಹಾಬಾದ್ ಹೈಕೋರ್ಟ್ ನ ಲಖ್ನೋ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯ ಸುರಕ್ಷತೆಯ ದೃಷ್ಟಿಯಲ್ಲಿ ಇದು ಅಗತ್ಯವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ, ಸಂಸದರಾಗಿರುವುದರಿಂದ ಭಾರತ ಸರ್ಕಾರದ...

ಕ್ರಿಮಿನಲ್ ವ್ಯಕ್ತಿಗಳು ಜನಪ್ರತಿನಿಧಿಯಾಗದಂತೆ ನಿರ್ಬಂಧಿಸಲು ಸುಪ್ರೀಂ ಹಿಂದೇಟು

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಗಳು ಮಂತ್ರಿಯಾಗದಂತೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್‌ ಹಿಂದೇಟು ಹಾಕಿದೆ. ಈ ವಿಷಯ ಶಾಸಕಾಂಗದ ಪರಿಧಿಗೆ ಬರುತ್ತದೆ. ಪ್ರಜಾಪ್ರಭುತ್ವ ಉಳಿಸಲು ಯಾವುದು ಉತ್ತಮ ಎಂಬುದನ್ನು ಸಂಸದರೇ ನಿರ್ಧರಿಸಬೇಕು. ದೇಶದಲ್ಲಿ ಹೇಗೆ ಆಡಳಿತ ನಡೆಸಬೇಕು ಎಂಬುದು ಅವರಿಗೆ ಗೊತ್ತಿದೆ. ಯಾವ ರೀತಿಯ...

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ. 100 ಕೋಟಿ ಅನುದಾನಕ್ಕೆ ಮನವಿ

ತಮಿಳುನಾಡಿನಲ್ಲಿ ಕನ್ನಡ ಹೆಚ್ಚು ಮಾತನಾಡುವ ಕೆಲವು ಪ್ರದೇಶಗಳ ಶಾಲೆಗಳನ್ನು ತಮಿಳು ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಕಲಿಯಬೇಕು ಎಂದು ಒತ್ತಡ ಹೇರಿರುವುದು ಗಮನಕ್ಕೆ ಬಂದಿದ್ದು, ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯ ರಿಟ್ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ...

ನಿಧಿ ದುರುಪಯೋಗ ಆರೋಪಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಸೆಟಲ್ವಾಡ್ ಗೆ ಸುಪ್ರೀಂ ಎಚ್ಚರಿಕೆ

ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ. ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...

ನಿಧಿ ದುರುಪಯೋಗ ಪ್ರಕರಣ: ತೀಸ್ತಾ ಸೆಟಲ್ವಾಡ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...

ಸುನಂದಾ ಪುಷ್ಕರ್ ಹತ್ಯೆ ಪ್ರಕರಣ: ಶಶಿತರೂರ್ ಅರ್ಜಿ ವಜಾ

'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುನಂದಾ...

ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸಬಹುದು: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...

ಸುಪ್ರೀಂ ಕೋರ್ಟ್ ನಿಂದ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

'ಓಬಳಾಪುರಂ ಮೈನಿಂಗ್ ಕಂಪನಿ'ಯ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ದೊರೆತಿದೆ. ಜ.20ರಂದು ಸುಪ್ರೀಂ ಕೋರ್ಟ್ ನಲ್ಲಿ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. 10 ಲಕ್ಷ ರೂಪಾಯಿ ಮೌಲ್ಯದ 2...

ಜನಾರ್ಧನ ರೆಡ್ಡಿಗೆ ಸಿಗಲಿದೆಯೇ ಬಿಡುಗಡೆ ಭಾಗ್ಯ?

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ. ಜನಾರ್ಧನ ರೆಡ್ಡಿ ವಿರುದ್ಧ...

ವಿಚಾರಣೆಗೆ ಬಾರದ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

ಬಾಬ್ರಿ ಮಸೀದಿ: ಹೋರಾಟದಿಂದ ಹಿಂದೆ ಸರಿದ ಪ್ರಮುಖ ಅರ್ಜಿದಾರ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್ 6ಕ್ಕೆ ಇಪ್ಪತ್ತೆರಡು ವರ್ಷ. ಈ ನಡುವೆ ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಅರವತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್ ಎದುರು ಪಟ್ಟು ಹಿಡಿದು ಕೂತಿದ್ದ ಮುಖ್ಯ ಅರ್ಜಿದಾರರಲ್ಲಿ ಒಬ್ಬರಾದ ಮೊಹಮದ್ ಹಾಶಿಮ್...

ಕಾರ್ತಿಕ್ ಗೌಡ ವಿವಾಹ ಪ್ರಕರಣ: ಕೌಟುಂಬಿಕ ನ್ಯಾಯಲಯದಿಂದ ಮೈತ್ರಿಯಾ ಅರ್ಜಿ ವಜಾ

'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ: ಪೊಲೀಸ್ ಬಿಗಿ ಬಂದೋಬಸ್ತ್

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಶೇಷ ಪೀಠ, ಅ.6ಕ್ಕೆ ವಿಚಾರಣೆ ಮುಂದೂಡಿ ಆದೇಶ ನೀಡಿದೆ. ಹೀಗಾಗಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. ರಜಾಕಾಲದ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದ್ದು, 28 ಅರ್ಜಿಗಳ ವಿಚಾರಣೆಯಾದ ಬಳಿಕ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರೀಯ ವಕೀಲ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಲಾಗಿದೆ. ತಮ್ಮ ವಿರುದ್ಧದ ಶಿಕ್ಷೆ ರದ್ದು ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಜಯಲಲಿತಾ ಸೆ.29ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ...

ನಾಳೆಯೇ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ. ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ವರ್ಷದಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಹುದ್ದೆ ಭರ್ತಿ: ರವಿಶಂಕರ್ ಪ್ರಸಾದ್

ವರ್ಷದೊಳಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ವರೆಗಿನ ಮಾಹಿತಿ ಪ್ರಕಾರ 4,382 ನ್ಯಾಯಾಂಗ ಅಧಿಕಾರಿಗಳ ಹುದ್ದೆ ಖಾಲಿ ಇದೆ. ಇವುಗಳಲ್ಲಿ...

ಯುಪಿಎಸ್ ಸಿ ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಯುಪಿಎಸ್ ಸಿ ಅಭ್ಯರ್ಥಿಗಳು ಪ್ರಾಥಮಿಕ ಪ್ರವೇಶ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಸಿವಿಲ್ ಸರ್ವಿಸ್ ಯೋಗ್ಯತಾ ಪರೀಕ್ಷೆ(CSAT)ವಿವಾದ ಹಿನ್ನಲೆಯಲ್ಲಿ ಆ.24ರಂದು ನಡೆಯಬೇಕಿದ್ದ ಯುಪಿಎಸ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಅಭ್ಯರ್ಥಿಗಳು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ...

ನ್ಯಾಯಾಂಗ ವ್ಯವಸ್ಥೆ ಗೌರವಿಸುವಂತೆ ನಿತ್ಯಾನಂದನಿಗೆ ಸೂಚನೆ

ರಾಸಲೀಲೆ ಪ್ರಕರಣದ ಆರೋಪಿ ನಿತ್ಯಾನಂದನಿಗೆ ನ್ಯಾಯಾಮ್ಗ ವ್ಯವಸ್ಥೆ ಗೌರವಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಪುರುಷತ್ವ ಪರೀಕ್ಷೆಗೆ ನೀವೇಕೆ ಹೆದರುತ್ತೀರಾ ಎಂದು ನಿತ್ಯಾನಂದನಿಗೆ ಪ್ರಶ್ನಿಸಿರುವ ನ್ಯಾಯಾಲಯ ಪುರುಷತ್ವ ಪರೀಕ್ಷೆ ಮೂಲಕ...

ಕೆಪಿಎಸ್ ಸಿ ಹಗರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾ.ವಘೇಲಾ ಹಿಂದೆ ಸರಿದಿದ್ದಾರೆ. 1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಆದರೆ ಹೈಕೋರ್ಟ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited