Untitled Document
Sign Up | Login    
Dynamic website and Portals
  

Related News

ವಿಧಾನಸಭಾ ಉಪಚುನಾವಣೆಃ ಹೆಬ್ಬಾಳ, ದೇವದುರ್ಗದಲ್ಲಿ ಬಿಜೆಪಿ ಜಯಭೇರಿ

ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಇದರಲ್ಲಿ ಹೆಬ್ಬಾಳ, ದೇವದುರ್ಗದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರೆ, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವಿನ ನಗು ಬೀರಿದೆ. ಪಟ್ಟು ಹಿಡಿದು ಮೊಮ್ಮಗ...

ಆರ್ ಕೆ ನಗರ ಉಪಚುನಾವಣೆ: ಮತದಾನ ಆರಂಭ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಣದಲ್ಲಿರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭವಾಗಿದೆ. ಬೂತ್ ಸಂಖ್ಯೆ 1 ಮತ್ತು 83 ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು ಯಾವುದೇ ತೊಂದರೆ ಇಲ್ಲ ವಿದ್ಯುನ್ಮಾನ ಮತಯಂತ್ರಗಳು ಕಾರ್ಯನಿರ್ವಹಿಸಿವೆ. ಆ ಮತಗಟ್ಟೆಗಳಲ್ಲೂ ಕೆಲವು...

ಮಹಾರಾಷ್ಟ್ರದಲ್ಲಿ ಪಾಕ್ ಧ್ವಜ ಹಾರಿಸಲು ಎಐಎಂಐಎಂ ಸಂಚು: ಶಿವಸೇನೆ

'ಕಾಶ್ಮೀರ'ದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದ ಬೆನ್ನಲ್ಲೇ ಓವೈಸಿ ಸಹೋದರರ ವಿರುದ್ಧ ಶಿವಸೇನೆ ಗಂಭೀರ ಆರೋಪ ಮಾಡಿದೆ. ಮಹಾರಾಷ್ಟ್ರದಲ್ಲೂ ಓವೈಸಿ ಸಹೋದರರು, ಪಾಕಿಸ್ತಾನದ ಧ್ವಜಾರೋಹಣ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ. ಶಿವಸೇನೆ ಮುಖವಾಣಿ, ಸಾಮ್ನಾದಲ್ಲಿ ಓವೈಸಿ ಸಹೋದರರ ವಿರುದ್ಧ ವಾಗ್ದಾಳಿ...

ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಸತತ 6ನೇ ಬಾರಿಗೆ ಗೆಲುವು ದಾಖಲಿಸಿದ ಬಿಜೆಪಿ

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ರಾಜೀನಾಮೆಯಿಂದ ತೆರವುಗೊಂಡಿದ್ದ ಪಣಜಿ ಶಾಸಕ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಳೆದ ಫೆಬ್ರವರಿಯ 13ರಂದು ನಡೆದಿದ್ದ ಪಣಜಿ ವಿಧಾನಸಭಾ ಕ್ಷೇತದ ಉಪಚುನಾವಣೆಯ ಫಲಿತಾಂಶ ಸೋಮವಾರ ಹೊರಬಿದ್ದಿದ್ದು ಆಡಳಿತರೂಢ ಬಿಜೆಪಿ ಭರ್ಜರಿ ಜಯ...

ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್‌ ಚುನಾವಣಾ ದಿನಾಂಕ ಪ್ರಕಟ

ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್‌ ರಾಜ್ಯಗಳಲ್ಲಿ 5 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಎಸ್.ಸಂಪತ್, ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದರು. ಉಭಯ ರಾಜ್ಯಗಳಲ್ಲಿ ಇಂದಿನಿಂದಲೇ...

ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....

ಉಪಚುನಾವಣೆ: ಮತ ಎಣಿಕೆ ಆರಂಭ

10 ರಾಜ್ಯಗಳ 33 ವಿಧಾನಸಭೆ ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾದ ಗುಜರಾತ್ ನ ವೋಡೋದರಾ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್...

ಉಪಚುನಾವಣೆ ಫಲಿತಾಂಶ: ಶಿವಸೇನೆಯಿಂದ ಬಿಜೆಪಿಗೆ ನೀತಿ ಪಾಠ

ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ನಲ್ಲಿ ನಡೆದ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಡಿ.ಎ ಮೈತ್ರಿ ಪಕ್ಷ ಶಿವಸೇನೆ,ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಪಾಠ ಕಲಿಯಬೇಕು ಎಂದು ಎಚ್ಚರಿಸಿದೆ. ಮುಂಬೈ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸನಿಹದಲ್ಲೇ...

ಉಪಚುನಾವಣೆ: ಮತದಾನ ಆರಂಭ

ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ನ ವಡೋದರಾ ಸೇರಿದಂತೆ 3 ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸೆ.16ರಂದು ಫಲಿತಾಂಶ ಹೊರಬೀಳಲಿದೆ. ಕಳೆದ...

ಒಂದು ವರ್ಷದ ಬಾಲಕನಿಂದ ಶಾಂತಿ ಭಂಗ: ಯುಪಿ ಪೊಲೀಸರ ಯಡವಟ್ ವರದಿ

ಒಂದು ವರ್ಷದ ಹುಡುಗ ಸಮಾಜದಲ್ಲಿ ಶಾಂತಿ ಭಂಗವನ್ನು ಉಂಟುಮಾಡಲು ಸಾಧ್ಯವೆ? ಉತ್ತರ ಪ್ರದೇಶ ಪೊಲೀಸರನ್ನು ಕೇಳಿ ನೋಡಿ ಹೌದು ಎನ್ನುತ್ತಾರೆ! ಉಸ್ಮಾನ್ ಪುರದ ಬಾಲಕ ನಜೀಂ ಹಾಗೂ ಆತನ ತಂದೆ ಯಾಸೀನ್, ಉಪಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗೆ ನುಗ್ಗಿ ದಾಂಧಲೆ ನಡೆಸುವ ಯತ್ನಿಸುವ...

ಲವ್ ಜಿಹಾದ್ ಪ್ರತಿಭಟಿಸಲು ಯು.ಪಿ ಮಹಾಪಂಚಾಯತ್ ಗೆ ಸಂಗೀತ್ ಸೋಮ್ ಕರೆ

'ಉತ್ತರ ಪ್ರದೇಶ'ದಲ್ಲಿ ಲೋಕಸಭಾ, ವಿಧಾನಸಭಾ ಉಪಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಲವ್ ಜಿಹಾದ್ ವಿಷಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಕಾಂಗ್ರೆಸ್, ಎಸ್.ಪಿ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಪ್ರದೇಶ ಶಾಸಕ ಸಂಗೀತ್ ಸೋಮ್ ತಾನು ಪ್ರತಿನಿಧಿಸುತ್ತಿರುವ ಮೀರತ್ ವಿಧಾನಸಭಾ ಕ್ಷೇತ್ರದಲ್ಲಿ ಲವ್...

ಲವ್ ಜಿಹಾದ್ ಉಪಚುನಾವಣಾ ವಿಷಯವಾಗಲಿದೆ-ಸಂಸದ ಯೋಗಿ ಆದಿತ್ಯನಾಥ್

'ಉತ್ತರ ಪ್ರದೇಶ'ದಲ್ಲಿ ಕಳೆದ ವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ 'ಲವ್ ಜಿಹಾದ್' ವಿಷಯದ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳದೇ ಇದ್ದರೂ ಸಹ, ವಿಧಾನಸಭಾ, ಲೋಕಸಭಾ ಉಪಚುನಾವಣೆಯಲ್ಲಿ ಲವ್ ಜಿಹಾದ್ ಪ್ರಮುಖ ವಿಷಯವಾಗಲಿದೆ ಎಂದು ಬಿಜೆಪಿ ಸಂಸದ ಯೋಗಿ...

ಬಿಜೆಪಿ ಸಂಸದರ ಸಭೆ ಆರಂಭ

ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ. ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ...

ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿಲ್ಲ: ಸದಾನಂದ ಗೌಡ

ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು,...

ಪಕ್ಷದ ನಿರ್ಲಕ್ಷವೇ ಸೋಲಿಗೆ ಕಾರಣ: ಬಿ.ಎಸ್.ಯಡಿಯೂರಪ್ಪ

ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...

ಉಪಚುನಾವಣೆ ಮತ ಎಣಿಕೆ ಆರಂಭ

ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವಿನ ತೀವ್ರ ರಾಜಕೀಯ ಜಿದ್ದಾಜಿದ್ದಿನ ನಡುವೆ ನಡೆದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಶಿಕಾರಿಪುರ, ಬಳ್ಳಾಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಬಳ್ಳಾರಿಯಲ್ಲಿ...

ಉಪಚುನಾವಣೆ: ಬಳ್ಳಾರಿಯಲ್ಲಿ 'ಕೈ' ಹಿಡಿದ ಮತದಾರ

ಗಣಿ ನಾಡು ಬಳ್ಳಾರಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಕೈಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಜಯಭೇರಿಬಾರಿಸಿದ್ದಾರೆ. ರೆಡ್ಡಿ ಸಹೋದರರ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಬಳ್ಳಾರಿಯಲ್ಲಿ ಶ್ರೀರಾಮುಲು ಆಪ್ತ ಓಬಳೇಶ್ ಅವರು ಉಪಚುನಾವಣೆಯಲ್ಲಿ ಗೆಲುವುದು ಖಚಿತ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ. ಕಾಂಗ್ರೆಸ್...

ಉಪಚುನಾವಣೆ: ಬಿಹಾರ ಬಿಜೆಪಿಗೆ ಸವಾಲೊಡ್ಡಿದ ನಿತೀಶ್ ಕುಮಾರ್ ಮೈತ್ರಿಕೂಟ

'ಬಿಹಾರ' ಉಪಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಗೆ ಸೆಡ್ಡುಹೊಡೆದಿರುವ ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಆ.25ರಂದು ಬಿಹಾರದ10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಇನ್ನು...

ಬಿಹಾರದಲ್ಲಿ ನಿತೀಶ್-ಲಾಲೂ ಮೈತ್ರಿಕೂಟಕ್ಕೆ ಮನಸೋತ ಮತದಾರ

ಶತೃವಿನ ಶತೃ ಮಿತ್ರ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದ್ದು ಆರ್.ಜೆ.ಡಿ, ಜೆಡಿಯು, ಕಾಂಗ್ರೆಸ್ ಪಕ್ಷದ ಮೈತ್ರಿಗೆ ಬಿಹಾರದ ಮತದಾರ ಮನಸೋತಿದ್ದಾನೆ. ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಜೆಡಿಯು, ಆರ್.ಜೆ.ಡಿ, ಕಾಂಗ್ರೆಸ್ ಮೈತ್ರಿಕೂಟ 6 ಕ್ಷೇತ್ರಗಳನ್ನು ಪಡೆದಿದೆ....

ಉಪಚುನಾವಣೆ: ಶಿಕಾರಿಪುರದಲ್ಲಿ ಬಿಜೆಪಿಗೆ ಗೆಲುವು

ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆ ತೀವ್ರ ಮುಖಭಂಗವುಂಟಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 71,547 ಮತಗಳ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 65,117ಮತಗಳಿಂದ ಸೋಲನುಭವಿಸಿದ್ದಾರೆ. ಒಟ್ಟು 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ...

ಬಿಜೆಪಿ ಸೋಲಿನ ಹೊಣೆ ಹೊರುವೆ: ಶ್ರೀರಾಮುಲು

ಬಳ್ಳಾರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ಈ ಸೋಲಿನ ಹೊಣೆಯನ್ನು ತಾವೇ ಹೊರುವುದಾಗಿ ಸಂಸದ ಶ್ರೀರಾಮುಲು ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಣಬಲ, ತೋಳ್ಬಲಗಳಿಂದ ಗೆಲುವು ಸಾಧಿಸಿದೆ. ಜನತೆ ನೀಡಿದ ತೀರ್ಪಿಗೆ ತಲೆಬಾಗುವುದಾಗಿ ತಿಳಿಸಿದರು. ಬಳ್ಳಾರಿ ಗ್ರಾಮಾಂತರದಲ್ಲಿ ಜನತೆ ಬದಲಾವಣೆ...

ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ: ಸಿದ್ದರಾಮಯ್ಯ

'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಆ.25ರಂದು ಉಪಚುನಾವಣೆ ಫಲಿತಾಂಶ ಪ್ರಕಟ

ಆ.25ರಂದು ಉಪಚುನಾವಣೆ ಫಲಿತಾಂಶ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...

ಉಪಚುನಾವಣೆ ಮತದಾನ ಆರಂಭ

ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಆರಂಭವಾಗಿದೆ. ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೂರೂ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ...

ಮತಗಟ್ಟೆ ಸ್ಥಾಪನೆಗೆ ಆಗ್ರಹ: ಮತದಾನ ಬಹಿಷ್ಕಾರ

ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ...

ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ: ಡಿ.ಕೆ.ಶಿವಕುಮಾರ್

ಜನರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದ ಜನರು ಬಹುದಿನಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ...

ಬಳ್ಳಾರಿ ಸಂಪತ್ತಿನ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ತೇಜಸ್ವಿನಿ ಗೌಡ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ. ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...

ಜೆಡಿಎಸ್ ನಲ್ಲಿ ಹಣವಿಲ್ಲ: ಹೆಚ್.ಡಿ.ದೇವೇಗೌಡ

ನನಗೆ ರಾಜಕೀಯ ಅನುಭವವಿಲ್ಲ, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಪಕ್ಷದ ಕಛೇರಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದರು. ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ...

ಜೆಡಿಎಸ್ ತೊರೆಯುವುದಿಲ್ಲ; ಪಕ್ಷ ವಿಲೀನವೂ ಇಲ್ಲ: ಹೆಚ್.ಡಿ.ಕೆ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...

ಉಪಚುನಾವಣೆ: ಆರ್.ಜೆ.ಡಿ-ಜೆಡಿಯು 2ನೇ ಸಮಾವೇಶ

20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ. ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ-ಸಿದ್ದರಾಮಯ್ಯ

'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...

ಜೆಡಿಎಸ್ ನಲ್ಲಿ ಗೊಂದಲದ ವಾತಾವರಣವಿದೆ- ಹೆಚ್.ಡಿ ದೇವೇಗೌಡ

'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ. ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕೆ ಮಾತ್ರ ಸೀಮಿತ: ಪರಮೇಶ್ವರ್

ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕಷ್ಟೇ ಸೀಮಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆ.21ರಂದು ನಡೆಯಲಿರುವ ಮೂರುಕ್ಷೇತ್ರಗಳ ಉಪಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕಾರಿಪುರದಲ್ಲಿ ಜೆಡಿಎಸ್, ಬಿಜೆಪಿಯ...

ಕಾಂಗ್ರೆಸ್ ಗೆ ವೋಟ್ ಹಾಕುವಂತೆ ಡಿ.ಕೆ.ಶಿ ಧಮ್ಕಿ: ಶ್ರೀರಾಮುಲು ಆರೋಪ

ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...

ಶಿಕಾರಿಪುರ ಕ್ಷೇತ್ರ ಉಪಚುನಾವಣೆ: ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್

ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ...

ಡಿ.ಕೆ.ಶಿ ಮನೆ ಒಡೆಯುವುದರಲ್ಲಿ ನಿಸ್ಸೀಮರು: ಈಶ್ವರಪ್ಪ

ವಿಧಾನಸಭೆ ಉಪಚುನಾವಣೆ ಭರಾಟೆ ದಿನದಿಂದ ದಿನಕ್ಕೆ ಅಬ್ಬರಪಡೆದುಕೊಳ್ಳುತ್ತಿದ್ದು, ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ ವಿಚಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ಮನೆ...

ಒಡೆದ ಮನೆಯಾಗಿರುವ ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿಗೆ ಆಹಾರ ಸಿಗುತ್ತಿಲ್ಲ:ಶೆಟ್ಟರ್

'ಬಳ್ಳಾರಿ' ಕಾಂಗ್ರೆಸ್ ಒಡೆದ ಮನೆಯಂತಾಗಿದ್ದು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕರು ಊಟ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಆ.12ರಂದು ಬಳ್ಳಾರಿಯಲ್ಲಿರುವ ಬಿಜೆಪಿ ನಾಯಕ ಶೆಟ್ಟರ್, ಸೋಮಶೇಖರ ರೆಡ್ಡಿ ನಿವಾಸಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited