Untitled Document
Sign Up | Login    
Dynamic website and Portals
  

Related News

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋರ್ಟ್: ಗೋಮಾಂಸ ಆಮದು, ದಾಸ್ತಾನು ಅಕ್ರಮವಲ್ಲ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಮಹಾರಾಷ್ಟ್ರದ ಹೊರಗಿನಿಂದ ಗೋಮಾಂಸವನ್ನು ತಂದು ಮಾರಾಟಮಾಡುವುದು ಮತ್ತು ತಿನ್ನುವುದು ಅಕ್ರಮವಲ್ಲ ಎಂದು ತೀರ್ಪು ನೀಡಿದೆ. ಮಹಾರಾಷ್ಟ್ರದಲ್ಲಿ ಹೇರಲಾಗಿರುವ ಗೋಮಾಂಸ ಮೇಲಿನ ನಿಷೇಧಕ್ಕಿರುವ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ...

ಭೂಮಿ ಭೋಗ್ಯ ಕಾನೂನಿನಲ್ಲಿ ಮಹತ್ತರ ಬದಲಾವಣೆಃ ಕೇಂದ್ರ ಸರ್ಕಾರದ ನಿರ್ಧಾರ

ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...

ಸದನದಲ್ಲಿ ವಾಚ್ ಗದ್ದಲ

ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್‌ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...

ಸಂಸತ್ತಿನಲ್ಲಿ ಬಾಲಾಪರಾಧಿ ಕಾಯ್ದೆ ಅಂಗೀಕಾರ

ಮಂಗಳವಾರ ರಾಜ್ಯಸಭೆಯಲ್ಲಿ ಬಾಲಾಪರಾಧಿ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ ಈಗ ರಾಜ್ಯಸಭೆಯಲ್ಲೂ ಅಂಗೀಕಾರ ದೊರೆಕಿದೆ. ಈ ಸಂದರ್ಭದಲ್ಲಿ ಕಲಾಪದಲ್ಲಿ ಉಪಸ್ಥಿತರಿದ್ದ ನಿರ್ಭಯಾ ಪೋಷಕರು ಸಂತಸ ವ್ಯಕ್ತಪಡಿಸಿದರು. ಈ ಕಾಯ್ದೆಯ ಪ್ರಕಾರ, ಘೋರ ಅಪರಾಧ ಮಾಡಿದ 16-18 ವರ್ಷ...

ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ

ಬೆಂಗಳೂರು ನಗರದ ನಾಗರಿಕರು ಇನ್ನು ಮುಂದೆ ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಸ್ಕರಣೆಯಾಗುವ (ಹಸಿ) ತ್ಯಾಜ್ಯ ಮತ್ತು ಸಂಸ್ಕರಣೆಯಾಗದ (ಒಣ) ತ್ಯಾಜ್ಯವಾಗಿ ವಿಂಗಡಣೆ ಮಾಡಲು ಎರಡು ಕಸದ ಡಬ್ಬಿ ಮತ್ತು ಒಂದು ಬ್ಯಾಗ್‌ ಎಂಬ ನೂತನ ವಿಧಾನ ಅಳವಡಿಸಿಕೊಳ್ಳುವುದನ್ನು ಹೈಕೋರ್ಟ್‌ ಕಡ್ಡಾಯಗೊಳಿಸಿ...

ಕಾಂಗ್ರೆಸ್ ವಿರೋಧದ ನಡುವೆ ಸರಕು ಮತ್ತು ಸೇವಾ ತೆರಿಗೆ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...

ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ: ಪ್ರಧಾನಿ ಮೋದಿ

'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...

ಆಯ್ಕೆ ಸಮಿತಿಯಿಂದ ವಿ.ಸೋಮಣ್ಣ ಹೊರಕ್ಕೆ

ಬಿಬಿಎಂಪಿ ವಿಭಜನೆ ಕುರಿತ ನಗರಪಾಲಿಕೆಗಳ ತಿದ್ದುಪಡಿ ಕಾಯ್ದೆಯ ಪರಿಶೀಲನೆಗಾಗಿ ರಚಿಸಿರುವ ವಿಧಾನಪರಿಷತ್ತಿನ ಸೆಲೆಕ್ಟ್ ಕಮಿಟಿಯಿಂದ ಬಿಜೆಪಿಯ ಸದಸ್ಯ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಹೊರಬಂದಿದ್ದಾರೆ. ಪಕ್ಷದ ನಾಯಕರ ಇತ್ತೀಚಿನ ಕೆಲವು ಧೋರಣೆಗಳಿಂದ ಬೇಸತ್ತು ಸೋಮಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದ...

ಮೋದಿ ಸರ್ಕಾರ ಆರ್.ಟಿ.ಐ.ಯನ್ನು ದುರ್ಬಲಗೊಳಿಸುತ್ತಿದೆ: ಸೋನಿಯಾ ಗಾಂಧಿ

ಕೇಂದ್ರ ಎನ್‌.ಡಿ.ಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್‌.ಟಿ.ಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ...

ಒಬಾಮಾ ಭಾರತ ಭೇಟಿ ವಿಚಾರ: ಖರ್ಚು-ವೆಚ್ಚದ ವಿವರ ನೀಡಲು ಕೇಂದ್ರ ನಕಾರ

ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...

ಅಮರನಾಥ ಯಾತ್ರೆಯನ್ನು ಒಂದು ತಿಂಗಳಿಗೆ ಮೊಟಕುಗೊಳಿಸಲು ಪ್ರತ್ಯೇಕತಾವಾದಿ ಗಿಲಾನಿ ಬೇಡಿಕೆ

ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಧ್ವಜ ಹಾರಾಡಿದೆ. ಮೇ.1ರಂದು ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಶಾ ಗಿಲಾನಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಬಾವುಟ ಪ್ರದರ್ಶಿಸಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್ ಅಲಿ ಶಾ ಗಿಲಾನಿ, ಕಾಶ್ಮೀರದಲ್ಲಿ ನಡೆಯುವ ಪ್ರಸಿದ್ಧ...

ರೈತರ ಸಮಸ್ಯೆ ಬಗ್ಗೆ ಸಂಸತ್ ನಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ಪಂಜಾಬ್ ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.29ರಂದು ಸಂಸತ್ ನಲ್ಲಿ ರೈತರ ಸಮಸ್ಯೆಗಳ ಕುರಿತು ಭಾಷಣ ಮಾಡುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ರೈತರ ಸಮಸ್ಯೆಗಳ ಕುರಿತು ಮಾತನಾಡಲು ಅನುಮತಿ ನೀಡಬೇಕೆಂದು ರಾಹುಲ್...

ರೈತ ನೇಣು ಬಿಗಿದುಕೊಳ್ಳಲು ಆಪ್ ಕಾರ್ಯಕರ್ತರ ಪ್ರಚೋದನೆ: ದೆಹಲಿ ಪೊಲೀಸರ ವರದಿ

ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...

9,000 ಎನ್.ಜಿ.ಒಗಳ ಪರವಾನಗಿ ರದ್ದು

ವಾರ್ಷಿಕ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸದ ಎನ್.ಜಿ.ಒ ಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು 9,000 ಎನ್.ಜಿ.ಒ ಗಳ ಪರವಾನಗಿ ರದ್ದುಗೊಂಡಿದೆ. ತೆರಿಗೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ಷಿಕ ಆದಾಯದ ಬಗ್ಗೆ ಮಾಹಿತಿಯನ್ನು ನೀಡದೇ...

ಭೂಸ್ವಾಧೀನ ಮಸೂದೆಗೆ ವಿರೋಧ: ಏ.30ರಿಂದ ರಾಹುಲ್ ಗಾಂಧಿಯಿಂದ ಪಾದಯಾತ್ರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ...

ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣ: ಕ್ಷಮೆ ಯಾಚಿಸಿದ ಕೇಜ್ರಿವಾಲ್

ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ. ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು...

ಟಿ.ವಿ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ಆಪ್ ಮುಖಂಡ ಅಶುತೋಷ್

ಆಪ್ ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಟಿ.ವಿ ಚಾನಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮತ್ತೊಂದು ನಾಟಕೀಯ ಬೆಳವಣಿಗೆ ನಡೆದಿದೆ. ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಖಾಸಗಿ ಚಾನೆಲ್ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ...

ಭೂಸ್ವಾಧೀನ ಕಾಯ್ದೆಗೆ ಬೆಂಬಲವಿಲ್ಲ: ಮಮತಾ ಬ್ಯಾನರ್ಜಿ ಪುನರುಚ್ಚಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಯ್ದೆಗೆ ಬೆಂಬಲ ನೀಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಭೂಸ್ವಾಧೀನ ಕಾಯ್ದೆ ಸಂಬಂಧ ನಮ್ಮ ನಿಲುವನ್ನು ಸಂಸತ್ ನಲ್ಲಿಯೇ ಸ್ಪಷ್ಟಪಡಿಸಿದ್ದೇವೆ,...

ಮಸರತ್ ಆಲಂ ವಿರುದ್ಧ ಸಾರ್ವಜನಿಕ ಸುರಕ್ಷತೆ ಕಾಯ್ದೆ ಜಾರಿ: ಕನಿಷ್ಠ 2 ವರ್ಷ ಜೈಲು

'ಕಾಶ್ಮೀರ' ಪ್ರತ್ಯೇಕತವಾದಿ ಮಸರತ್ ಆಲಂ ವಿರುದ್ಧ ಏ.23ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆಯನ್ನು ಹೇರಲಾಗಿದೆ. ಭಾರತದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಧ್ರೋಹದ ಆರೋಪದಡಿ ಮಸರತ್ ಆಲಂ ನನ್ನು ಕಳೆದ ವಾರ ಬಂಧಿಸಲಾಗಿತ್ತು. ಇದೀಗ ಸಾರ್ವಜನಿಕ ಸುರಕ್ಷತೆಯ ಕಾಯ್ದೆ ಹೇರಲಾಗಿರುವುದರಿಂದ ಮಸರತ್...

ರ್ಯಾಲಿಯಲ್ಲಿ ಮೃತ ರೈತನ ಕುಟುಂಬಕ್ಕೆ ಆಪ್ ನಿಂದ ಪರಿಹಾರ

'ಆಮ್ ಆದ್ಮಿ ಪಕ್ಷ' ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೃತಪಟ್ಟ ರಾಜಸ್ಥಾನದ ಮೂಲದ ರೈತನ ಕುಟುಂಬಕ್ಕೆ ಆಮ್ ಆದ್ಮಿ ಪಕ್ಷ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಏ.22ರಂದು ನವದೆಹಲಿಯ ಜಂತರ್...

ಆಮ್ ಆದ್ಮಿ ಪ್ರತಿಭಟನಾ ರ್ಯಾಲಿಯಲ್ಲಿ ರೈತನ ಸಾವು

'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ. ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...

ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಸೂಟು ಬೂಟಿನ ಸರ್ಕಾರ ಎಂದು ಲೇವಡಿ ಮಾಡಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟಾಂಗ್ ನೀಡಿದ್ದು ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ...

ಲೋಕಸಭೆಯಲ್ಲಿ ಮತ್ತೆ ಭೂಸ್ವಾಧೀನ ಮಸೂದೆ

ಸಂಸತ್ತಿನ ಬಜೆಟ್‌ ಅಧಿವೇಶನದ ಮುಂದುವರಿದ ಭಾಗ ಲೋಕಸಭೆಯಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಏ.3ರಂದು ರಾಷ್ಟ್ರಪತಿ ಹೊರಡಿಸಿರುವ ಸುಗ್ರೀವಾಜ್ನೆಯನ್ನು ಶಾಸನವಾಗಿ ಪರಿವರ್ತಿಸಲು ಸದನದಲ್ಲಿ ಮಸೂದೆ ಮಂಡನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಿದ್ದ ವಿಧೇಯಕಕ್ಕೆ ಲೋಕಸಭೆಯ ಮೊದಲಾರ್ಧದ ಅಧಿವೇಶನದಲ್ಲಿ ಒಪ್ಪಿಗೆ...

ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ರೈತರು ಒಂದಾಗಿದ್ದೇವೆ: ಸೋನಿಯಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತ ಮತ್ತು ಬಡವರ ವಿರೋಧಿ ಸರ್ಕಾರವಾಗಿದ್ದು ಇದು ಕೇವಲ ಉದ್ಯಮಿಗಳ ಪರವಾದ ಸರ್ಕಾರವಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌...

ಭೂಸ್ವಾಧೀನ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಕಿಸಾನ್ ರ್ಯಾಲಿ

ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್‌ ಕಿಸಾನ್‌ ರ್ಯಾಲಿ ಆಯೋಜಿಸಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...

ಕೇಂದ್ರದ ವಿರುದ್ಧ ಕಾಂಗ್ರೆಸ್‌ ನಿಂದ ಜಮೀನ್‌ ವಾಪಸಿ ವೆಬ್‌ ಸೈಟ್‌ ಅನಾವರಣ

​ ಸತತ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್‌, ಇದೀಗ ವಿವಾದಿತ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜಕೀಯ ಅಸ್ತ್ರವನ್ನಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾಗಿದೆ. www.zameenwapasi.com ಎಂಬ ವೆಬ್‌ ಸೈಟ್‌ ಗೆ ಕಾಂಗ್ರೆಸ್‌ ಚಾಲನೆ ನೀಡಿದೆ. ದೆಹಲಿಯಲ್ಲಿ ನಡೆಯಲಿರುವ ಬೃಹತ್‌...

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ: ರಾಹುಲ್ ಗಾಂಧಿ

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ. ಆದರೆ ಇಂದು ದೇಶದ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆತಂಕದಿಂದ ದಿನಕಳೆಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೃಹತ್...

ಕೇಂದ್ರ ಸರ್ಕಾರ ರೈತ ಪರವಾಗಿದೆ, ಜನರಿಗೆ ತಪ್ಪು ಮಾಹಿತಿಯನ್ನು ನೀಡಬೇಡಿ: ಪ್ರಧಾನಿ

ಭೂಸ್ವಾಧೀನ ಕಾಯ್ದೆ ವಿರೋಧಿಸಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರ್ಕಾರ ಯಾವಾಗಲೂ ಬಡವರಿಗಾಗಿ ಕೆಲಸ ಮಾಡಲಿದೆ. ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತಂತೆ ತಪ್ಪು...

ಏ.18ರಂದು ಭೂಸ್ವಾಧೀನ ಕಾಯ್ದೆ ಬಗ್ಗೆ ರೈತರೊಂದಿಗೆ ರಾಹುಲ್ ಗಾಂಧಿ ಚರ್ಚೆ

ದೀರ್ಘಾವಧಿ ರಜೆ ಮುಕ್ತಾಯಗೊಳಿಸಿ ಭಾರತಕ್ಕೆ ವಾಪಸ್ಸಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭೂಸ್ವಾಧೀನ ಕಾಯ್ದೆ ಕುರಿತು ಏ.18ರಂದು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಏ.19ರಂದು ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಕಿಸಾನ್ ರ್ಯಾಲಿ ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ....

ಮತಾಂತರ ನಿಷೇಧ ಕಾಯ್ದೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯ: ಕಾನೂನು ಸಚಿವಾಲಯ

ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...

ಭೂಸ್ವಾಧೀನ ಕಾಯ್ದೆ: ಪ್ರತಿಪಕ್ಷಗಳ ರ್ಯಾಲಿಗೆ ಪರ್ಯಾಯವಾಗಿ ಬಿಜೆಪಿಯಿಂದ ಕಿಸಾನ್ ರ್ಯಾಲಿ

'ಭೂಸ್ವಾಧೀನ ಕಾಯ್ದೆ'ಯನ್ನು ವಿರೋಧಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಕೂಡ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.19ರಂದು ಕಾಂಗ್ರೆಸ್ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿ, ಎನ್.ಡಿ.ಎ ಸರ್ಕಾರ ಜಾರಿಗೆ ತಂದಿರುವ...

ಅರುಣಾಚಲಪ್ರದೇಶದ ಬಗೆಗಿರುವ ವಿವಾದವನ್ನು ತಳ್ಳಿಹಾಕಲು ಸಾಧ್ಯವಿಲ್ಲ: ಚೀನಾ

'ಅರುಣಾಚಲಪ್ರದೇಶ' ತನ್ನದೇ ಭಾಗ ಎಂದು ವಾದಿಸುತ್ತಿದ್ದ ಚೀನಾ ಇದೀಗ ತನ್ನ ವರಸೆಯನ್ನು ಬದಲಿಸಿದ್ದು ಅರುಣಾಚಲ ಪ್ರದೇಶದ ವಿಚಾರವಾಗಿ ಭಾರತದೊಂದಿಗೆ ವಿವಾದ ಇರುವುದು ನಿರಾಕರಿಸಲಾಗದ ವಾಸ್ತವ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯವನ್ನೇ ಪುನರುಚ್ಚರಿಸಿರುವ ಚೀನಾ, ಅರುಣಾಚಲ ಪ್ರದೇಶದ ವಿವಾದವನ್ನು...

ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ದೇಶದ ದಾರಿ ತಪ್ಪಿಸುತ್ತಿದೆ: ನಿತಿನ್ ಗಡ್ಕರಿ

'ಭೂಸ್ವಾಧೀನ ಕಾಯ್ದೆ' ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರೋಪಿಸಿದ್ದಾರೆ. ಎನ್.ಡಿ.ಎ ಸರ್ಕಾರದ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿತ್ತಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ನೀತಿಗಳಿಂದ ನಿರುದ್ಯೋಗ, ರೈತರ ಆತ್ಮಹತ್ಯೆಗಳು...

ಭೂಸ್ವಾಧೀನ ಕಾಯ್ದೆ ಬಗ್ಗೆ ಚರ್ಚೆಗೆ ಸೋನಿಯಾ ಗಾಂಧಿ ನಕಾರ

'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...

ಭೂಸ್ವಾಧೀನ ಮಸೂದೆ ಬಗ್ಗೆ ಮೋದಿ ಜೊತೆಗೆ ಬಹಿರಂಗ ಚರ್ಚೆಗೆ ಸಿದ್ಧ: ಅಣ್ಣಾ ಹಜಾರೆ

'ಭೂಸ್ವಾಧೀನ ಕಾಯ್ದೆ'ವಿರುದ್ಧ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಕಾಯ್ದೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇತ್ತೀಚೆಗಷ್ಟೇ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದ ನಿತಿನ್ ಗಡ್ಕರಿ ಅವರಿಗೆ ಪ್ರತಿಕ್ರಿಯೆ ನೀಡಿರುವ ಅಣ್ಣಾ...

ಆಫ್ಸ್ಪಾ ಹಂತ ಹಂತವಾಗಿ ವಾಪಸ್‌: ಮುಫ್ತಿ ಮೊಹಮ್ಮದ್‌ ಸಯೀದ್‌

ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಆಫ್ಸ್ಪಾ) ಹಿಂತೆಗೆತಕ್ಕೆ ಮಿತ್ರಪಕ್ಷ ಬಿಜೆಪಿಯ ಪ್ರಬಲ ವಿರೋಧವಿದ್ದರೂ, ಹಂತಹಂತವಾಗಿ ಆಫ್ಸ್ಪಾ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಹೇಳಿಕೆ ನೀಡಿದ್ದಾರೆ. ಇದರಿಂದ ಪಿಡಿಪಿ ಹಾಗೂ ಬಿಜೆಪಿ ನಡುವೆ ಕಾಶ್ಮೀರದಲ್ಲಿ ಮತ್ತೂಂದು ಸುತ್ತಿನ ತಿಕ್ಕಾಟ ನಡೆಯುವ...

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ರದ್ದು: ಸುಪ್ರೀಂ ತೀರ್ಪು

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ತರ ತೀರ್ಪು ನೀಡಿದೆ. ನ್ಯಾಯಾಧೀಶರಾದ ಜೆ.ಚೆಲಮೇಶ್ವರ್ ಮತ್ತು ರೋಹಿಂಗ್ಟನ್ ನಾರಿಮನ್‌ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ)ನ್ನು ರದ್ದು ಪಡಿಸಿ ಆದೇಶ ಹೊರಡಿಸಿದೆ. ಸೆಕ್ಷನ್ 66 ಎ...

ಭೂಸ್ವಾಧೀನ ಕಾಯ್ದೆ ವಿರುದ್ಧ ಸೋನಿಯಾ ಗಾಂಧಿ ಕಿಸಾನ್‌ ಜಾಥಾ

ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್‌, ಏಪ್ರಿಲ್‌ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್‌ ಕಿಸಾನ್‌ ಜಾಥಾ ಆಯೋಜಿಸಲು ನಿರ್ಧರಿಸಿದೆ. ಸೋನಿಯಾ ಗಾಂಧಿ ಈ ಜಾಥಾದಲ್ಲಿ...

ಎ.ಎಫ್.ಎಸ್.ಪಿ.ಎ ಕಾಯ್ದೆ ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆ(AFSPA)ಯನ್ನು ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಕಳೆದ 2 ದಿನಗಳ ಹಿಂದೆ ಉಗ್ರರು ಪೊಲೀಸ್ ಠಾಣೆ ಮೇಲೆ ದಾಳಿ...

ಮತಾಂತರ, ಅದರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿ: ರಾಜನಾಥ್ ಸಿಂಗ್

ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...

ವಂಚನೆ ಹಾಗೂ ಜಾತಿ ನಿಂದನೆ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ವಿರುದ್ಧ ಕೇಸ್

ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಪೊಲೀಸರು, ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ರಾಮ್ ಜಿ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ರೈತರು ನಿಮ್ಮ ಸೊಕ್ಕನ್ನು ಮುರಿಯಲಿದ್ದಾರೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...

ಮಸೂದೆಗಳಿಗೆ ಅಂಗೀಕಾರ ಪಡೆಯುವ ಹಿನ್ನೆಲೆ: ಸಂಸತ್ ಅಧಿವೇಶನ ವಿಸ್ತರಣೆಯಾಗುವ ಸಾಧ್ಯತೆ

ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...

ಭೂಸ್ವಾಧೀನ ಕಾಯ್ದೆ ವಿರುದ್ಧ ನಿತೀಶ್‌ ಕುಮಾರ್ ಉಪವಾಸ ಧರಣಿ

ಕೇಂದ್ರ ಎನ್‌.ಡಿ.ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಮಸೂದೆ ವಿರೋಧಿಸಿ ಸಂಯುಕ್ತ ಜನತಾದಳ (ಜೆಡಿಯು) ಕಾರ್ಯಕರ್ತರು ಬಿಹಾರದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಒಂದು ದಿನ ಉಪವಾಸ ಧರಣಿ ನಡೆಸಿದ್ದಾರೆ. ಜೆಡಿಯುದ ಎಲ್ಲ ಶಾಸಕರು, ಕಾರ್ಯಕರ್ತರು, ಸಂಸದರು ಕೂಡ 12...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ವಿವಾದಿತ ಭೂಸ್ವಾಧೀನ ವಿಧೇಯಕಕ್ಕೆ ಇಂದು ಮತದಾನ

ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...

ಜಾನುವಾರು ಹತ್ಯೆ ತಡೆಗಟ್ಟಲು ಹೊಸ ಕಾನೂನು ಬೇಕಿಲ್ಲ: ಟಿ.ಬಿ ಜಯಚಂದ್ರ

'ಜಾನುವಾರುಗಳ ಹತ್ಯೆ'ಯನ್ನು ತಡೆಗಟ್ಟಲು ಹೊಸ ಕಾನೂನು ರಚನೆ ಅಗತ್ಯ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...

ಉಗ್ರ ಅಬ್ದುಲ್ ಕರೀಮ್ ತುಂಡಾ ವಿರುದ್ಧ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ವಜಾ

'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...

ಅಭಿವೃದ್ಧಿ ಯೋಜನೆಗಳಿಗೆ ಒಣಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಸೂಕ್ತ: ಬಿ.ಎಸ್.ವೈ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆಗೆ ಆಗತ್ಯವಿದ್ದಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಅಭಿವೃದ್ಧಿ ಕೆಲಸಗಳಿಗೆ ಫಲವತ್ತಾದ ಭೂಮಿಗಿಂತಲೂ ಒಣಭೂಮಿಯನ್ನು ಪಡೆಯಬೇಕು, ಅಭಿವೃದ್ಧಿಯೂ ಸಾಧ್ಯವಾಗಬೇಕು ಅಂತೆಯೇ ರೈತರಿಗೂ ಅನ್ಯಾಯವಾಗಬಾರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಭೂಮಿ...

ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ

ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್‌ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...

ಭೂಸ್ವಾಧೀನ ಮಸೂದೆ ವಿಚಾರ: ಕೇಂದ್ರ ಸರ್ಕಾರಕ್ಕೆ ರಾಮ್‌ ದೇವ್‌ ಸಲಹೆ

ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್‌ ದೇವ್‌ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಬೀದರ್ ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ ರಾಮ್‌ ದೇವ್‌, ಸುದ್ದಿಗಾರರೊಂದಿಗೆ ಮಾತನಾಡಿ ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವಾಗದಂತೆ...

ಭೂಸ್ವಾಧೀನ ಕಾಯ್ದೆ: ಸುಗ್ರೀವಾಜ್ನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ-ಪ್ರಧಾನಿ

ಕೇಂದ್ರ ಭೂಸ್ವಾಧೀನ ಕಯ್ದೆ ಸುಗ್ರೀವಾಜ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥನೆಮಾಡಿಕೊಂಡಿದ್ದು, ಸರ್ಕಾರ ಸುಗ್ರೀವಾಜ್ನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ, ಇದೊಂದು ಉತ್ತಮ ಕಾಯ್ದೆಯಾಗಿದೆ....

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ: ಅರುಣ್ ಜೇಟ್ಲಿ

ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು. ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್...

ಭೂಸ್ವಾಧೀನ ವಿರೋಧಿ ಆಂದೋಲನ: ಅಣ್ಣಾ ಹಜಾರಗೆ ಕೇಜ್ರಿವಾಲ್ ಸಾಥ್

ವಿವಾದಾತ್ಮಕ ಭೂಸ್ವಾಧೀನ ಮಸೂದೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸುತ್ತಿರುವ ಹಿರಿಯ ಸಮಾಜಸೇವಕ, ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಾಥ್ ನೀಡಿದ್ದಾರೆ. ಕೇಜ್ರಿವಾಲ್ ತಮ್ಮ 66 ಶಾಸಕರೊಡಗೂಡಿ ಅಣ್ಣಾ ರಜಾರೆ ನಡೆಸುತ್ತಿರುವ ಆಂದೋಲನವನ್ನು ಸೇರಿಕೊಂಡಿದ್ದಾರೆ....

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಿಡಿಪಿ ಮೈತ್ರಿ ಸರ್ಕಾರ ಖಚಿತಪಡಿಸಿದ ಅಮಿತ್ ಶಾ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ಶೀಘ್ರವೇ ಉತ್ತಮ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಫೆ.23ರಂದು ನವದೆಹಲಿಯಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ...

ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭ

ಸಂಸತ್‌ ನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿಗೆ ವಿಪಕ್ಷಗಳು ಸಜ್ಜಾಗಿವೆ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ 6 ಕಾನೂನುಗಳಿಗೆ ವಿಧೇಯಕದ ರೂಪ ನೀಡುವ ಸವಾಲು ಸಹ ಸರ್ಕಾರದ ಮುಂದಿದೆ. ವಿವಾದಾಸ್ಪದ ಘರ್ ವಾಪಸಿ, ಸಂಘ...

ರಾಷ್ಟ್ರಪತಿ ಭಾಷಣದಲ್ಲಿ ಹೊಸದೇನೂ ಇಲ್ಲ: ಮಾಯಾವತಿ

ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್‌ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ...

ಮತಾಂತರ ನಿಷೇಧ ಕಾಯ್ದೆ ಸಮಾಜದ ಶಾಂತಿಗೆ ಭಂಗ: ದೆಹಲಿಯ ಆರ್ಚ್ ಬಿಷಪ್ ಜಾರ್ಜ್ ಕಾರ್ಡಿನಲ್

ದೇಶಾದ್ಯಂತ ಚರ್ಚೆಗೆ ಗುರಿಯಾಗಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಿರೊ ಮಲಬಾರ್ ಕ್ಯಾಥೊಲಿಕ್ ಚರ್ಚ್ ನ ಮುಖ್ಯಸ್ಥ ಜಾರ್ಜ್ ಕಾರ್ಡಿನಲ್ ಪ್ರತಿಕ್ರಿಯೆ ನೀಡಿದ್ದು, ಮತಾಂತರ ನಿಷೇಧ ಕಾಯ್ದೆ ವಿವಿಧ ಧರ್ಮಗಳ ನಡುವೆ ದ್ವೇಷ ಹರಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಧರ್ಮಗಳ ನಡುವೆ ದ್ವೇಷ...

ಗೋಹತ್ಯೆ ವಿರುದ್ಧ ಗೂಂಡಾ ಕಾಯ್ದೆ ಜಾರಿ

ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುತ್ತಿರುವ ಗೋಹತ್ಯೆ ವಿರುದ್ಧ ಗೂಂಡಾ ಕಾಯ್ದೆಯೊಂದನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ. ಗೋಹತ್ಯೆ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ದಾಖಲು ಮಾಡಲು ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲ ರಾಮ್ ನಾಯ್ಕ್ ಅವರು...

ಸುಗ್ರೀವಾಜ್ಞೆಗೆ ಸಚಿವ ಚೌಧ ಸಿಂಗ್‌ ಅತೃಪ್ತಿ

ಐತಿಹಾಸಿಕ ಭೂಸ್ವಾಧೀನ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್‌ ಸಿಂಗ್‌ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಆತುರಾತುರವಾಗಿ ಸುಗ್ರೀವಾಜ್ಞೆ ಹೊರಡಿಸುತ್ತಿರುವ ಕುರಿತು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ವಿವರ ಬಯಸಿದಾಗ ಇದೇ...

ಏಕರೂಪ ನಾಗರಿಕ ಸಂಹಿತೆ ತನ್ನಿ: ತೊಗಾಡಿಯಾ

ತಮ್ಮ ಮೂರು ಪ್ರಮುಖ ಬೇಡಿಕೆಗಳಾದ - ರಾಮಮಂದಿರ ನಿರ್ಮಾಣ, ಏಕರೂಪ ನಾಗರಿಕ ಸಂಹಿತೆ ಮತ್ತು ಮತಾಂತರ ನಿಷೇಧ ಕಾಯ್ದೆ ಇವುಗಳಿಂದ ಹಿನ್ನಡೆಯುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸಂಸ್ಥೆಯ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಮಠಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದ...

ಘರ್ ವಾಪಸಿ ಮತಾಂತರವಾಗುವುದಿಲ್ಲ: ಪ್ರವೀಣ್ ತೊಗಾಡಿಯಾ

ಅನ್ಯಧರ್ಮೀಯರನ್ನು ಮಾತೃಧರ್ಮಕ್ಕೆ ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ವಿ.ಹೆಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ, ದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ನಡೆದ ವಿ.ಹೆಚ್.ಪಿ ಸಭೆ ಬಳಿಕ ಮಾತನಾಡಿದ ತೊಗಾಡಿಯಾ, ನಾವು ಮತಾಂತರವನ್ನು ವಿರೋಧಿಸುತ್ತೇವೆ....

ಮತಾಂತರ ನಿಷೇಧ ಕಾಯ್ದೆ ಜಾರಿಯಾಗುವವರೆಗೂ ಮತಾಂತರ ನಿಲ್ಲುವುದಿಲ್ಲ:ಸುಷ್ಮಾ ಸ್ವರಾಜ್

ಕೇರಳದಲ್ಲಿ 58 ಕ್ರೈಸ್ತ ಧರ್ಮದವರು ಹಿಂದೂ ಧರ್ಮಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಮತಾಂತರದ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಮರುಮತಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವವರೆಗೂ ಮತಾಂತರಗಳು...

ಡಿ.25ರಂದು ಉತ್ತಮ ಆಡಳಿತ ದಿನಾಚರಣೆಗೆ ಬೆಂಗಳೂರಿನ ಅರ್ಚ್ ಬಿಷಪ್ ವಿರೋಧ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಗಳೂರಿನ ಅರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಕಳಿಸಿರುವ ಕ್ರಿಸ್ ಮಸ್ ಶುಭಾಷಯ ಪತ್ರದಲ್ಲಿ, ಕೇಂದ್ರ...

ಮಠಗಳನ್ನು ನಿಯಂತ್ರಿಸುವ ಮಸೂದೆಗೆ ಸಿ.ಎಂ, ಸಚಿವರಿಂದಲೇ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...

ಹಿಂದೊಮ್ಮೆ ಇಡಿ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲಾ ಹಿಂದೂಗಳೇ: ಪ್ರವೀಣ್ ತೊಗಾಡಿಯಾ

ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...

ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ: ಟಿ.ಬಿ ಜಯಚಂದ್ರ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ಉಂಟಾಗಿರುವ ಬಗ್ಗೆ ಕಾನೂನು ಸಚಿವ ಟಿ.ಬಿ ಜಯಚಂದ್ರ ಪ್ರತಿಕ್ರಿಯಿಸಿದ್ದು ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ ಎಂದು ಹೇಳಿದ್ದಾರೆ. ಸರ್ಕಾರ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರುವ...

ಮತಾಂತರ ನಿಷೇಧ ಕಾಯ್ದೆಗೆ ಸೆಕ್ಯುಲರ್ ಪಕ್ಷಗಳು ಬೆಂಬಲಿಸಲಿ: ಅಮಿತ್ ಶಾ

ಒತ್ತಾಯ ಪೂರ್ವಕ ಮತಾಂತರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಬಲವಂತದ ಮತಾಂತರಕ್ಕೆ ಬಿಜೆಪಿಯ ವಿರೋಧವಿದ್ದು, ನಿಜವಾದ ಜಾತ್ಯಾತೀತತೆಯನ್ನು ಪ್ರತಿಪಾದಿಸುವ ಭಾರತದ ಎಲ್ಲಾ ಪಕ್ಷಗಳು ಮತಾಂತರ ನಿಷೇಧ ಕಾಯ್ದೆಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ. ...

ಗೋವಾ ಮತಾಂತರ ಮುಕ್ತ ರಾಜ್ಯ: ಡಿ.ಸಿ.ಎಂ ಫ್ರಾನ್ಸಿಸ್ ಡಿಸೋಜ

'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ. ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...

ಘರ್ ವಾಪಸಿ ಶಾಂತಿಗೆ ಮಾರಕ, ಮತಾಂತರ ನಿಷೇಧ ಕಾಯ್ದೆ ಮಾತ್ರ ಬೇಡ: ದೆಹಲಿ ಬಿಷಪ್

'ಆರ್.ಎಸ್.ಎಸ್' ನ ಘರ್ ವಾಪಸಿ ಬಗ್ಗೆ ದೆಹಲಿಯ ಪ್ರಧಾನ ಬಿಷಪ್ ಪ್ರತಿಕ್ರಿಯಿಸಿದ್ದು ಉತ್ತರ ಪ್ರದೇಶದಲ್ಲಿ ನಡೆದಿರುವ ಮಾತೃಧರ್ಮಕ್ಕೆ ವಾಪಸ್ಸಾಗುವ ಕಾರ್ಯಕ್ರಮ ಶಾಂತಿ, ಸೌಹಾರ್ದತೆಗೆ ಮಾರಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಮತಾಂತರ ನಿಷೇಧ ಕಾಯ್ದೆಗೆ ಕ್ರಿಶ್ಚಿಯನ್ ಸಮುದಾಯ ವಿರುದ್ಧವಾಗಿದೆ ಎಂದು ಬಿಷಪ್ ತಿಳಿಸಿದ್ದಾರೆ....

ಎರಡು ತಿಂಗಳಲ್ಲಿ ನೀರಿನ ದರ ಪರಿಷ್ಕರಣೆ: ಪರಿಶೀಲನೆಗೆ ಸಮಿತಿ ರಚನೆ

ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...

ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸರಿಯಲ್ಲ: ಸಂತೋಷ್ ಹೆಗ್ಡೆ

ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ...

ಮೂಢನಂಬಿಕೆ ಕಾಯ್ದೆ : ಉಪವಾಸ ಅಂತ್ಯಗೊಳಿಸಲಿರುವ ಪ್ರಗತಿ ಪರ ಮಠಾಧೀಶರು

'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರಗತಿಪರ ಮಠಾಧೀಶರು ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮಠಾಧೀಶರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಡುವ ನಿರ್ಧಾರ...

ಮೂಢನಂಬಿಕೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಮಠಾಧೀಶರ ಉಪವಾಸ ಸತ್ಯಾಗ್ರಹ

'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಮತ್ತೊಮ್ಮೆ ಸುದ್ದಿಯಲ್ಲಿದ್ದು, ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರಗತಿಪರ ಸ್ವಾಮೀಜಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಮಠಾಧೀಶರು, ರಾಜ್ಯ ಸರ್ಕಾರ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ. ನಿಡುಮಾಮಿಡಿ...

ದೀಪಾವಳಿಯಲ್ಲಿ ಲೋಡ್ ಶೆಡ್ಡಿಂಗ್,ಬೆಳಕಿನಿಂದ ಕತ್ತಲೆಡೆಗೆ - ಬೆಸ್ಕಾಂ ಟ್ಯಾಗ್ ಲೈನ್

ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...

ನಗರದ ಮತ್ತೊಂದು ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...

ಸರ್ಕಾರ ನೀಡಿದ ಭೂಮಿ ಬಳಸಿಕೊಳ್ಳದಿದ್ದರೆ ವಾಪಸ್

ಕೈಗಾರಿಕೆಗಳು ಹಾಗೂ ಮಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ನೀಡಲಾಗಿರುವ ಭೂಮಿಯನ್ನು ನಿಗದಿತ ಸಮಯದಲ್ಲಿ ಬಳಸಿಕೊಳ್ಳದಿದ್ದರೆ ಅವುಗಳನ್ನು ವಾಪಸ್ ಪಡೆಯಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಜಮೀನನ್ನು ನಿರ್ದಿಷ್ಟ ಸಮಯದಲ್ಲಿ ಬಳಸಿಕೊಳ್ಳದಿದ್ದಲ್ಲಿ ಅಂತಹ ಭೂಮಿ ಹಿಂಪಡೆಯಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು...

ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧಾರ: ಟಿ.ಬಿ.ಜಯಚಂದ್ರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್

ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...

ಹಿಂದೂ ವಿವಾಹ ಕಾಯ್ದೆ ಬದಲಾಗಬೇಕು: ಸ್ವರೂಪಾನಂದ ಸರಸ್ವತಿ ಸ್ವಾಮೀಜಿ

'ಹಿಂದೂ ವಿವಾಹ ಕಾಯ್ದೆ'ಯಲ್ಲಿ ಬದಲಾವಣೆ ಮಾಡಬೇಕು ಎಂದು ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಮಕ್ಕಳಿಲ್ಲದ ಹಿಂದೂಗಳು ಎರಡನೇ ವಿವಾಹವಾಗಲು ಅನುಮತಿ ನೀಡಬೇಕೆಂದು ಹೇಳಿದ್ದಾರೆ. ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಸ್ವರೂಪಾನಂದ...

ಹಿಂದೂ ದೇವತೆಗಳನ್ನು ಐ.ಎಸ್.ಐ.ಎಸ್ ಉಗ್ರರಿಗೆ ಹೋಲಿಸಿದ ತೀಸ್ತಾ ಸೆಟಲ್ವಾಡ್

ಸದಾ ಒಂದಿಲ್ಲೊಂದು ವಿವಾದ ಸೃಷ್ಟಿಸಿ ಪ್ರಚಾರ ಗಿಟ್ಟಿಸಿಕೊೞೂವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತೊಮ್ಮೆ ವಿವಾದ ಸೃಷ್ಠಿಸಿದ್ದಾರೆ. ಟ್ವಿಟರ್ ನಲ್ಲಿ ಐ.ಎಸ್.ಐ.ಎಸ್ ಉಗ್ರರನ್ನು ಹಿಂದೂ ದೇವತೆಗಳಿಗೆ ಹೋಲಿಸುವ ಮೂಲಕ ಸೆಟಲ್ವಾಡ್ ತೀವ್ರ ವಿವಾದಕ್ಕೆ ಕಾರಣವಾಗಿದ್ದಾರೆ. ಅಮೆರಿಕಾ ಪತ್ರಕರ್ತನೋರ್ವನ ಶಿರಚ್ಛೇಧನ ಮಾಡುವುದಕ್ಕೂ ಮುನ್ನ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited