Untitled Document
Sign Up | Login    
Dynamic website and Portals
  

Related News

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ...

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...

ಬಿಜೆಪಿ ಕಾರ್ಯಕರ್ತರಿಗೆ ಸಪ್ತಸೂತ್ರಗಳನ್ನು ಬೋಧಿಸಿದ ಪ್ರಧಾನಿ ಮೋದಿ

ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಸಪ್ತಸೂತ್ರಗಳನ್ನು ಬೋಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಕ್ತಾಯಗೊಂಡ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಸೂತ್ರಗಳ ಮೋದಿ ಬೋಧಿಸಿದ್ದಾರೆ. ಸೇವಾ ಭಾವನೆ, ಸಂತುಲನ, ಸಂಯಮ, ಸಮನ್ವಯ, ಸಕಾರಾತ್ಮಕತೆ, ಸದ್ಭಾವನೆ ಮತ್ತು ಸಂವಾದ.. ಇವು ಸಪ್ತಸೂತ್ರಗಳಾಗಿದ್ದು. ಇದು ರ್ಯಕರ್ತರ ಗುಣ-ನಡತೆ,...

ಅಲಹಾಬಾದ್​ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಉತ್ತರ ಪ್ರದೇಶ ವಿಧಾನಸಭೆಯ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿ ಇಂದಿನಿಂದ ತನ್ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಅಲಹಾಬಾದ್ ನಲ್ಲಿ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೂ ಭಾಗವಹಿಸುವ ಈ ಸಭೆಯಲ್ಲಿ ಉತ್ತರಪ್ರದೇಶ...

ಉತ್ತರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ

2017ರಲ್ಲಿ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಅಲಹಾಬಾದ್ ನಲ್ಲಿ ಆರಂಭಗೋಂಡಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರು, ಬಿಜೆಪಿ...

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶುಕ್ರವಾರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬರ ಅಧ್ಯಯನ ನಡೆಸುವ ಸಂಬಂಧ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಆರೇಳು ತಂಡಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಈ ಸಭೆಯಲ್ಲಿ ಅಂತಿಮಗೊಳ್ಳಲಿದೆ. ಇದರೊಂದಿಗೆ...

ಮೇ.6ಕ್ಕೆ ಕಾಂಗ್ರೆಸ್ ಸಭೆ: ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಸಾಧ್ಯತೆ

'ರಾಹುಲ್ ಗಾಂಧಿ' ಅವರಿಗೆ ಕಾಂಗ್ರೆಸ್ ನಲ್ಲಿ ಅತ್ಯುನ್ನತ ಹುದ್ದೆ ನೀಡುವ ವಿಷಯ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಲು ಮೇ.6ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ. ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲೇ ಕಾಂಗ್ರೆಸ್...

ಆಪ್‌ ಬಂಡಾಯ ನಾಯಕರಿಂದ ಸ್ವರಾಜ್ ಸಂವಾದ ಸಭೆ

ಆಮ್‌ ಆದ್ಮಿ ಪಕ್ಷದ ಪ್ರಮುಖ ಹುದ್ದೆಗಳಿಂದ ವಜಾಗೊಂಡಿರುವ ಬಂಡುಕೋರ ನಾಯಕರಾದ ಪ್ರಶಾಂತ್‌ ಭೂಷಣ್‌ ಹಾಗೂ ಯೋಗೇಂದ್ರ ಯಾದವ್‌ ಅವರು ಸ್ವರಾಜ್‌ ಸಂವಾದ' ಹೆಸರಲ್ಲಿ ಸಮಾನ ಮನಸ್ಕರ ಸಭೆ ಕರೆದಿದ್ದಾರೆ. ಇದರ ಬೆನ್ನಲ್ಲೇ, ಈ ಸಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ...

ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸದಸ್ಯರಿಗೆ ಕಾಂಗ್ರೆಸ್ ತಾಕೀತು

ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ. ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟ ಹೇಳಿಕೆ ವಿಚಾರ: ಅಮಿತ್ ಶಾ ಗರಂ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ. ಪ್ರಭಾಕರ್ ಕೋರೆಗೆ ನೋಟಿಸ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಬಿಜೆಪಿಯಲ್ಲಿ ಹೆಚ್ಚಿನ ಸ್ಥಾನಮಾನ ಬಯಸಿಲ್ಲ: ಯಡಿಯೂರಪ್ಪ

ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ...

ಕೇಂದ್ರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ: ರಾಜನಾಥ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...

ಭೂ ಸ್ವಾಧೀನ ಕಾಯ್ದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...

ಸಂಜೆ 5 ಗಂಟೆಗೆ ಬಸವನಗುಡಿ ಮೈದಾನದಲ್ಲಿ ಪ್ರಧಾನಿ ಮೋದಿ ಭಾಷಣ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಏ.3ರ ಸಂಜೆ 5 ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯಾದ ಬಳಿಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ಪಕ್ಷ ಬಲವರ್ಧನೆ, ಕಾರ್ಯತಂತ್ರಗಳ ಚರ್ಚೆ

ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರದಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯಲ್ಲಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಿದ ನಂತರ ಎದುರಿಸಿದ ಸೋಲು-ಗೆಲುವುಗಳ ಆತ್ಮಾವಲೋಕನ ಸೇರಿದಂತೆ ಸರ್ಕಾರ ಮತ್ತು ಪಕ್ಷ ಮುಂದೆ ಅನುಸರಿಸಬೇಕಾದ ಹೆಜ್ಜೆಯ ಬಗ್ಗೆ ಕಾರ್ಯತಂತ್ರ ರೂಪಿಸುವ ಸಂಬಂಧ...

ಆಪ್ ರಾಷ್ಟ್ರೀಯ ಕಾರ್ಯಕಾರಿಣಿಯ ಏಕೈಕ ಮಹಿಳಾ ಸದಸ್ಯೆ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಉಂಟಾಗಿರುವ ಆಂತರಿಕ ಭಿನ್ನಮತದಿಂದ ಬೇಸತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಕ್ರಿಸ್ಟಿನಾ ಸ್ಯಾಮಿ ರಾಜೀನಾಮೆ ನೀಡಿದ್ದಾರೆ. ಕ್ರಿಸ್ಟಿನಾ ಸ್ಯಾಮಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಉಳಿದಿದ್ದ ಏಕೈಕ ಮಹಿಳಾ ಸದಸ್ಯೆಯಾಗಿದ್ದರು. ಕ್ರಿಸ್ಟಿನಾ ಸ್ಯಾಮಿ, ಯೋಗೇಂದ್ರ ಯಾದವ್ ಹಾಗೂ...

ಬಿಜೆಪಿ ಪದಾಧಿಕಾರಿಗಳ ಸಭೆಗೆ ಚಾಲನೆ

ಏ.3ರಿಂದ ಆರಂಭವಾಗಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆರಂಭವಾಗಿರುವ ಸಭೆಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದರು. ಉತ್ತರ ಭಾರತದಲ್ಲಿ ಪ್ರಭಲವಾಗಿರು ಬಿಜೆಪಿ ದಕ್ಷಿಣ ಭಾರತದಲ್ಲಿಯೂ ತನ್ನ ಅಜೆಂಡಾ...

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

'ಬಿಜೆಪಿ' ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಏ.2ರಂದು ಮಧ್ಯಾಹ್ನ 3:30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಪಕ್ಷ ಹಾಗೂ ಕೇಂದ್ರ ಸರ್ಕಾರದ...

ಪ್ರಧಾನಿ ಮೋದಿ ಆಗಮ ಹಿನ್ನಲೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...

ಬಿಜೆಪಿ ಕಾರ್ಯಕಾರಿಣಿ ಹಿನ್ನಲೆ: ಪ್ರಧಾನಿ ಮೋದಿ ಆಗಮನ-ಬಿಗಿ ಭದ್ರತೆ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಏ.2ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಐದು ದಿನ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ಪ್ರಧಾನಿ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ವಿಶೇಷ ಭದ್ರತೆಗಾಗಿ ಸುಮಾರು 1,500 ಪೊಲೀಸರನ್ನು...

ಅನಧಿಕೃತ ಫ್ಲಕ್ಸ್, ಬ್ಯಾನರ್ ತೆರವಿಗೆ ಪೊಲೀಸ್‌ ಆಯುಕ್ತರಿಗೆ ಸುಭಾಷ್‌ ಅಡಿ ಪತ್ರ

ನಗರದಲ್ಲಿ ಏಪ್ರಿಲ್‌ 2ರಿಂದ ಮೂರು ದಿನ ನಡೆಯುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ಬಳಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಉಪಲೋಕಾಯಕ್ತ ಸುಭಾಷ್‌ ಬಿ.ಅಡಿ ನಗರ ಪೊಲೀಸ್‌ ಆಯುಕ್ತ ಎಂ.ಎನ್‌....

ಬಂಡಾಯ ನಾಯಕರ ವಿರುದ್ಧ ಆಪ್ ಕ್ರಮ

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...

ಬಿಜೆಪಿ ಕಾರ್ಯಕಾರಿಣಿಯಿಂದ 70 ಜನ ಔಟ್‌

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್‌ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ. 178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಪ್ರಕಟಿಸಿದ್ದಾರೆ. ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ಎ.ಎ.ಪಿ ಸೋಲಿಗೆ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ತಂತ್ರ ರೂಪಿಸಿದ್ದರು

'ಆಮ್ ಆದ್ಮಿ ಪಕ್ಷ'ದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತಷ್ಟು ತೀವ್ರಗೊಂಡಿದ್ದು, ಪಕ್ಷದ ಮೂವರು ನಾಯಕರ ಜಾತಕ ಬಯಲಾಗಿದೆ. ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧ ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್, ಶಾಂತಿ ಭೂಷಣ್ ಅವರು ಕೆಲಸ ಮಾಡಿದ್ದರು ಎಂದು ಎಎಪಿಯ...

ಯೋಗೇಂದ್ರ ಯಾದವ್; ಪ್ರಶಾಂತ್ ಭೂಷಣ್ ಬಂಡಾಯ ಶಮನ

ಅರವಿಂದ್ ಕೇಜ್ರಿವಾಲ್‌ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕಾರಣಕ್ಕೆ ತಮ್ಮನ್ನು ಆಮ್‌ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಳಿಸ ಬಹುದು ಎಂಬ ವರದಿಗಳ ಬೆನ್ನಲ್ಲೇ ಹಿರಿಯ ಮುಖಂಡರಾದ ಯೋಗೇಂದ್ರ ಯಾದವ್‌ ಹಾಗೂ ಪ್ರಶಾಂತ್‌ ಭೂಷಣ್‌ ಮೆತ್ತಗಾಗಿದ್ದಾರೆ. ಈ ನಡುವೆ ಇಬ್ಬರೂ ಭಿನ್ನಮತೀಯ ನಾಯಕರು...

ಅರವಿಂದ್ ಕೇಜ್ರಿವಾಲ್‌ ಆಪ್‌ ನ ಭರವಸೆಯ ಪ್ರತೀಕ: ಯೋಗೇಂದ್ರ ಯಾದವ್‌

ಆಮ್‌ ಆದ್ಮಿ ಪಕ್ಷದ ನಾಯಕರೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಅದಕ್ಕೆ ತೇಪೆ ಹಾಕುವ ಪ್ರಯತ್ನಗಳೂ ನಡೆಯುತ್ತಿವೆ. ಈ ನಡುವೆ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್‌ ಅವರು ಅರವಿಂದ್ ಕೇಜ್ರಿವಾಲ್ ಆಪ್‌ನ ಭರವಸೆಯ ಪ್ರತೀಕವಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಬಗೆಯ ಭಿನ್ನಮತದ ಅಗ್ನಿ...

ಆಮ್ ಆದ್ಮಿ ಪಕ್ಷದ ಸಂಚಾಲಕ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ...

ಆಪ್‌ ನಲ್ಲಿ ಭಿನ್ನಮತ: ಮಾರ್ಚ್‌ 4 ರಂದು ಕಾರ್ಯಕಾರಿಣಿ ಸಭೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ಆಮ್‌ ಆದ್ಮಿ ಪಕ್ಷದಲ್ಲಿ ಇದೀಗ ತೀವ್ರ ಭಿನ್ನಮತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್‌ 4 ರಂದು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿದೆ. ಆಪ್‌ ವಕ್ತಾರ ಸಂಜಯ್‌ ಸಿಂಗ್‌ ಸುದ್ದಿಗೋಷ್ಠಿ ನಡೆಸಿ...

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ...

ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದಿರುವುದೇ ಸೋಲಿಗೆ ಕಾರಣ: ರಾಹುಲ್ ಗಾಂಧಿ

ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ....

ರಾಹುಲ್‌ ಗಾಂಧಿಗೆ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಸಾಧ್ಯತೆ

ಜ.16ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ಹಾಲಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪಕ್ಷದ ಮುಂದಿನ ಅಧ್ಯಕ್ಷರನ್ನಾಗಿ ಮಾಡುವ ಸಂಭಾವ್ಯತೆಯು ಚರ್ಚೆಗೆ ಬರಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಗಾಂಧಿ ಕುಟುಂಬದ ಯುವ ತಾರೆಯಾಗಿರುವ ರಾಹುಲ್‌ ಗಾಂಧಿ ಅವರು ಪಕ್ಷದ ಮುಂದಿನ ಅಧ್ಯಕ್ಷರಾಗಬೇಕೆಂಬುದು...

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ರದ್ದು

ಬೆಂಗಳೂರಿನಲ್ಲಿ ಜ.19ರಂದು ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ರದ್ದುಗೊಂಡಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆದಿರುವ ಕಾರಣ ಸಭೆಯನ್ನು ರದ್ದುಗೊಳಿಸಲಾಗಿದೆ. ಜ.19,20ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ...

ಜ.19ರಿಂದ ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ದಕ್ಷಿಣ ಭಾರತದಲ್ಲಿ ತನ್ನ ಸಾಮ್ರಾಜ್ಯ ವಿಸ್ತರಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಜ.19 ರಿಂದ 21ರ ವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ತೀರ್ಮಾನಿಸಿದೆ. ಹಿಂದೆ ಕೇಂದ್ರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದ ಅನಂತರ ಮತ್ತು ಕರ್ನಾಟಕದಲ್ಲಿ ಬಿಜೆಪಿ...

ಜ.3ರಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ. ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...

ಕೇರಳಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ. ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...

ಯು.ಪಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಭೆಯಲ್ಲಿ ಲವ್ ಜಿಹಾದ್ ತಡೆ ಪ್ರಮುಖ ಅಂಶ

'ಉತ್ತರ ಪ್ರದೇಶ'ದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಹಾಗೂ ಮತಾಂತರದ ವಿಷಯಗಳನ್ನು ಪ್ರಮುಖವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಲವ್ ಜಿಹಾದ್, ಮತಾಂತರ ಪ್ರಕರಣಗಳಿಗೆ ಕಡಿವಾಣ ಹಾಕುವ ಬಗ್ಗೆ ಮಥುರಾದಲ್ಲಿ ನಡೆಯಲಿರುವ ಬಿಜೆಪಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited