Untitled Document
Sign Up | Login    
Dynamic website and Portals
  

Related News

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...

ಪಾಕ್ ಜತೆ ಐದು ಅಜೆಂಡಾ ಕುರಿತು ಚರ್ಚಿಸಲು ಭಾರತ ಸಿದ್ಧವಿದೆ: ವಿಕಾಸ್ ಸ್ವರೂಪ್

ಪಾಕಿಸ್ತಾನದ ಜತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಸುವುದು ಈಗ ಪಾಕಿಸ್ತಾನದ ನಿರ್ಧಾರವನ್ನು ಅವಲಂಬಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್‌.ಜೈಶಂಕರ್‌ ಪಾಕಿಸ್ತಾನಕ್ಕೆ ತಿಳಿಸಿದ್ದಾರೆ ಎಂದು ವಿದೇಶಾಂಗ ವಕ್ತಾರ ವಿಕಾಸ್‌ ಸ್ವರೂಪ್‌ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ, ಜಮ್ಮು ಮತ್ತು ಕಾಶ್ಮೀರದ ಭಾಗಗಳ ಅಕ್ರಮ ಸ್ವಾಧೀನ...

ಕಂಪ್ಯೂಟರ್ ಖರೀದಿ ಹಗರಣ: ದೆಹಲಿ ಸಿಎಂ ಪ್ರಧಾನ ಕಾರ್ಯದರ್ಶಿ ಬಂಧನ

50 ಕೋಟಿ ರೂಪಾಯಿ ಕಂಪ್ಯೂಟರ್ ಖರೀದಿ ಹಗರಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಹಾಗೂ ನಾಲ್ವರನ್ನು ಸಿಬಿಐ ಬಂಧಿಸಿದೆ. ಹಗರಣದ ಪ್ರಮುಖ ರಾಜೇಂದ್ರ ಕುಮಾರ್ ಎಂದು ಸಿಬಿಐ ಮೂಲಗಳು ತಿಳಿಸಿದ್ದು, ಕುಮಾರ್...

ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಿಗದಿ

ಕೊನೆಗೂ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ. ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ...

ಪ್ರಧಾನಿ ಮೋದಿ ಲಾಹೋರ್ ಭೇಟಿಃ ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿ ಭೇಟಿ ನಿಗದಿ

ಭಾರತ-ಪಾಕಿಸ್ತಾನ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಜನವರಿ 15 ಕ್ಕೆ ಇಸ್ಲಮಾಬಾದ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ಘೋಷಣೆಯಾಗಬೇಕಿದೆಯಷ್ಟೆ. ಪ್ರಧಾನಿ ನರೇಂದ್ರ ಮೋದಿ ಅವರ ಆಕಸ್ಮಿಕ ಪಾಕಿಸ್ತಾನದ ಭೇಟಿಯ ನಂತರ ಈ ಸುದ್ದಿ ಬಂದಿದೆ. ಶುಕ್ರವಾರ...

ಮುಖ್ಯಕಾರ್ಯದರ್ಶಿ ನೇಮಕ ವಿವಾದ: ರಾಷ್ಟ್ರಪತಿ ಭೇಟಿಯಾದ ಕೇಜ್ರಿವಾಲ್

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...

ಕೇಜ್ರಿವಾಲ್ ಓರ್ವ ನಕ್ಸಲೈಟ್: ಸುಬ್ರಮಣಿಯನ್ ಸ್ವಾಮಿ

ಶಕುಂತಲಾ ಗಾಮ್ಲಿನ್ ಅವರನ್ನು ದೆಹಲಿ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವ ವಿಚಾರದಲ್ಲಿ ತಗಾದೆ ತೆಗೆದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೇಜ್ರಿವಾಲ್ ಮೂತಃ ಓರ್ವ ನಕ್ಸಲೈಟಾಗಿದ್ದು ಅವರಿಗೆ ಆಡಳಿತ ನಡೆಸುವುದರಲ್ಲಿ ಆಸಕ್ತಿ ಇಲ್ಲವೆಂದು ಸುಬ್ರಮಣಿಯನ್...

ಮುಖ್ಯಕಾರ್ಯದರ್ಶಿ ನೇಮಕ ಅಧಿಕಾರ ಲೆ.ಗವರ್ನರ್ ಗೆ ಇಲ್ಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪರಾಜ್ಯಪಾಲ ನಜೀಬ್ ಜಂಗ್ ನಡುವೆ ಜಂಗೀಕುಸ್ತಿ ತಾರಕಕ್ಕೇರಿರುವ ನಡುವೆಯೇ ಸಂವಿಧಾನದ ಪ್ರಕಾರ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಮಾಜಿ...

ದೆಹಲಿ: ಹಂಗಾಮಿ ಮುಖ್ಯ ಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್ ನೇಮಕ

ದೆಹಲಿಗೆ ಹಂಗಾಮಿ ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ. ಉಭಯ ನಾಯಕರು ಬಹಿರಂಗವಾಗಿಯೇ ಬಲಾಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ದೆಹಲಿಯ ಹಂಗಾಮಿ ಮುಖ್ಯಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್‌ ಅವರನ್ನು ರಾಜ್ಯಪಾಲರು...

ದೆಹಲಿಯಲ್ಲಿ ಆಪ್ ಸರ್ಕಾರ-ಲೆಫ್ಟಿನೆಂಟ್‌ ಗವರ್ನರ್ ನಡುವೆ ತಿಕ್ಕಾಟ

ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರದ ತೀವ್ರ ಆಕ್ಷೇಪದ ನಡುವೆಯೇ, ದೆಹಲಿ ಸರ್ಕಾರದ ಹಂಗಾಮಿ ಮುಖ್ಯ ಕಾರ್ಯದರ್ಶಿಯನ್ನಾಗಿ, ಹಿರಿಯ ಐಎಎಸ್‌ ಅಧಿಕಾರಿ ಶಕುಂತಲಾ ಗಾಮ್ಲಿನ್‌ ಅವರನ್ನು ನೇಮಿಸಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌ ಆದೇಶ ಹೊರಡಿಸಿದ್ದಾರೆ. ನಜೀಬ್‌ ಜಂಗ್‌ ನಡೆಯ ಬಗ್ಗೆ...

ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನ ಸಾಧ್ಯತೆ

ಹಲವಾರು ಕಾರ್ಯಕರ್ತರು ಹಾಗೂ ಮುಖಂಡರ ಬೇಡಿಕೆಗೆ ಕೊನೆಗೂ ಮಣಿಯಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಪ್ರಿಯಾಂಕಾ ಗಾಂಧಿ ಅವರಿಗೆ ಶೀಘ್ರದಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಲು ಕಳೆದ 3 ತಿಂಗಳಿನಿಂದ ಉಪಾಧ್ಯಕ್ಷ ರಾಹುಲ್‌...

ಪ್ರಿಯಾಂಕ ವಾಧ್ರಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ಇಲ್ಲ: ಕಾರ್ಯಾಲಯದ ಸ್ಪಷ್ಟನೆ

'ಪ್ರಿಯಾಂಕ ವಾಧ್ರ' ಅವರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಬಗ್ಗೆ ಪ್ರಿಯಾಂಕ ಕಚೇರಿ ಸ್ಪಷ್ಟನೆ ನೀಡಿದ್ದು ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ. ಪ್ರಿಯಾಂಕಾ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಪ್ರಸ್ತಾವನೆ ಪಕ್ಷದ ಮುಂದಿಲ್ಲ...

ಗೃಹ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎಲ್‌.ಸಿ ಗೋಯಲ್‌ ಅಧಿಕಾರ ಸ್ವೀಕಾರ

‌ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನಿಲ್‌ ಗೋಸ್ವಾಮಿ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಎಲ್‌.ಸಿ ಗೋಯಲ್‌ ಅವರನ್ನು ನೂತನ ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 1979 ರ ತಂಡದ ಐಎಎಸ್‌ ಅಧಿಕಾರಿಯಾಗಿರುವ ಎಲ್‌.ಸಿ ಗೋಯಲ್‌ ಅವರು ಗುರುವಾರ...

ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ರಾಜಕೀಯವಿಲ್ಲ: ಸುಷ್ಮಾ ಸ್ವಾರಾಜ್

ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಜೈ ಶಂಕರ್ ಅವರನ್ನು ನೇಮಕ ಮಾಡುವುದಕ್ಕೂ ಮೊದಲೇ ಸುಜಾತ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೆ. ತಾವು ಹುದ್ದೆಯಿಂದ...

ವಿದೇಶಾಂಗ ಕಾರ್ಯದರ್ಶಿಯಾಗಿ ಎಸ್.ಜೈಶಂಕರ್ ನೇಮಕ

ಅಮೆರಿಕದಲ್ಲಿನ ಭಾರತೀಯ ರಾಯಭಾರಿಯಾಗಿದ್ದ ಎಸ್.ಜೈಶಂಕರ್ ಅವರನ್ನು ವಿದೇಶಾಂಗ ಇಲಾಖೆ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅಧಿಕಾರದ ಅವಧಿ ಮೊಟಕುಗೊಳಿಸಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ತಡರಾತ್ರಿ...

ಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಟಾಲಿನ್‌ ಬೇಡಿಕೆ

ಡಿಎಂಕೆ ಪಕ್ಷಕ್ಕೆ ತನ್ನನ್ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕು, ಇಲ್ಲದಿದ್ದರೆ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಪುತ್ರ, ಪಕ್ಷದ ಖಚಾಂಚಿ ಎಂಕೆ ಸ್ಟಾಲಿನ್ ಬೆದರಿಕೆ ಹಾಕುವ ಮೂಲಕ ಅಪ್ಪ, ಮಗನ ನಡುವಿನ ಜಂಗಿಕುಸ್ತಿ ಹೊರಬಿದ್ದಂತಾಗಿದೆ. ಮೂಲಗಳ ಪ್ರಕಾರ, ಡಿಎಂಕೆ ಪಕ್ಷದ...

ಐವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೇಮಕ ಸಾಧ್ಯತೆ

'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ. ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...

ದೆಹಲಿ ಚುನಾವಣೆಗೂ ಮುನ್ನ ನೂತನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ನೇಮಕ

'ದೆಹಲಿ ವಿಧಾನಸಭೆ'ಗೆ ನಡೆಯಲಿರುವ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪಕ್ಷದ ಕೆಲವು ನಾಯಕರು, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವ ಹಿನ್ನೆಲೆಯಲ್ಲಿ...

ಅಳಿಯನೇ ಪಿ.ಎ: ಸರ್ಕಾರಿ ನಿಯಮ ಉಲ್ಲಂಘಿಸಿದ ಬಿಹಾರ ಸಿ.ಎಂ

'ಬಿಹಾರ' ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ತಮ್ಮ ಅಳಿಯನನ್ನೇ ಖಾಸಗಿ ಸಹಾಯಕರಾಗಿ ನೇಮಿಸಿಕೊಂಡು ವಿವಾದಕ್ಕೆ ಕಾರಣರಾಗಿದ್ದಾರೆ. ಸರ್ಕಾರಿ ನಿಯಮಗಳ ಪ್ರಕಾರ ಕುಟುಂಬ ಸದಸ್ಯರನ್ನು ಸರ್ಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳಬಾರದು. ಆದರೆ ನಿಯಮಗಳನ್ನು ಉಲ್ಲಂಘಿಸಿರುವ ಬಿಹಾರದ ಮುಖ್ಯಮಂತ್ರಿ, ತಮ್ಮ ಅಳಿಯ ದೇವೇಂದ್ರ...

ಬಿಹಾರ ಸಿ.ಎಂ ಜಿತನ್ ರಾಮ್ ಮಾಂಝಿ ರಾಜೀನಾಮೆಗೆ ಬಿಜೆಪಿ ಒತ್ತಾಯ

ಸರ್ಕಾರಿ ನಿಯಮ ಉಲ್ಲಂಘಿಸಿ ಅಳಿಯನನ್ನು ಖಾಸಗಿ ಸಹಾಯಕರಾಗಿ ನೇಮಿಸಿದ್ದ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಬೇಕೆಂದು ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಆಗ್ರಹಿಸಿದ್ದಾರೆ. ಕುಟುಂಬದ ಸದಸ್ಯರನ್ನೇ ನೇಮಿಸಿದ್ದೂ ಅಲ್ಲದೇ ಕುಟುಂಬ ಸದಸ್ಯರನ್ನು ಸಹಾಯಕರಾಗಿ ನೇಮಿಸಿಕೊಳ್ಳಬಾರದೆಂಬ ವಿಷಯ...

ವಿತ್ತ ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ವರ್ಗಾವಣೆಗೊಳಿಸಿ ಕೇಂದ್ರ ಸರ್ಕಾರದ ಆದೇಶ

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವಾಲಯದ ವಿತ್ತ ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಅವರನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಮೆಹ್ ರಿಷಿ ಅವರನ್ನು ನಿಯೋಜಿಸಲಾಗಿದೆ. ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಅರವಿಂದ್...

ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ನೇಮಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಸಮನ್ವಯಕಾರರಾಗಿದ್ದ ಸುರೇಶ್ ಸೋನಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿರುವುದರಿಂದ ನೂತನ ಸಮನ್ವಯಕಾರ(ಕಾರ್ಯದರ್ಶಿ)ಯನ್ನು ನೇಮಕ ಮಾಡಲಾಗಿದೆ. ಲಖನೌದಲ್ಲಿ...

ಬಿಜೆಪಿ ಚುನಾವಣಾ ಸಮಿತಿ ಕಾರ್ಯದರ್ಶಿಯಾಗಿ ಜೆ.ಪಿ.ನಡ್ಡಾ ನೇಮಕ

ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...

ಬಿಜೆಪಿ ನೂತನ ಸಂಘಟನಾ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಕಸರತ್ತು

ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಸ್.ಸಂತೋಷ್ ಅವರು ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ತೆರವಾದ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿದೆ. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ನಮೋ ಬ್ರಿಗೇಡ್ ನ ಮುಖಂಡ ಪ್ರದೀಪ್, ರಾಷ್ಟ್ರೀಯ ವಿದ್ಯಾರ್ಥಿ ಪರಿಷತ್...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...

ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ಲಿಂಬಾವಳಿ ನೇಮಕ ಸಾಧ್ಯತೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಾಜಿ ಸಚಿವ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರನ್ನು ನೇಮಕ ಮಾಡುವ ಸಾಧ್ಯೆಯಿದೆ. ರಾಷ್ಟ್ರೀಯ ಘಟಕದ ಪುನಾರಚನೆಗೆ ಬಿಜೆಪಿ ಮುಂದಾಗಿದ್ದು, ಕರ್ನಾಟಕದ ಮುಖಂಡರಿಗೆ ಹುದ್ದೆ ನೀಡಲು ನಿರ್ಧರಿಸಿದೆ. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ...

ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆ ವದಂತಿ: ಪ್ರಿಯಾಂಕಾ ಗಾಂಧಿ

ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ ಮಾಡಿದ ಯು.ಎಸ್ ರಕ್ಷಣಾ ಕಾರ್ಯದರ್ಶಿ

'ಅಮೆರಿಕಾ' ರಕ್ಷಣಾ ಕಾರ್ಯದರ್ಶಿ ಚಕ್ ಹಗೆಲ್ ಭಾರತಕ್ಕೆ ಆಗಮಿಸಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಆ.8ರಂದು ಭೇಟಿ ಮಾಡಿದ್ದಾರೆ. ಉಭಯ ದೇಶಗಳ ಮಿಲಿಟರಿ ಸಂಬಂಧಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡಿಸಿದ್ದಾರೆ. ಹಗೆಲ್ ಅವರು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited