Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ...

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ಜಲ ವಿವಾದಕ್ಕೆ ದೀರ್ಘಾವಧಿ ಪರಿಹಾರ ಹುಡುಕಲು ಆಗ್ರಹಿಸಿ ನಡೆಸುತ್ತಿರುವ ತಮಿಳುನಾಡು ಬಂದ್ ಗೆ ಮಿಶ್ರ...

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯರಾಜ್ಯಗಳಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ...

ಕಾವೇರಿ ಗಲಭೆ: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ

ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್‌ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ. ಕಾವೇರಿ ಗಲಭೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕ್ಷುಬ್ದ ವಾತಾವರಣ...

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...

ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ,...

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ. ಕೆಆರ್ ಎಸ್ ನಿಂದ ನಿನ್ನೆ ರಾತ್ರಿ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದಿದ್ದು, ಕಬಿನಿ ಜಲಾಶಯದಿಂದ...

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ...

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ...

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಸಧ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited