Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಕೂಡಂಕುಳಂ ಮೊದಲ ಘಟಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ, ಜಯಲಲಿತಾ, ಪುಟಿನ್

ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಜಂಟಿಯಾಗಿ ಲೋಕಾರ್ಪಣೆ ಗೊಳಿಸಿದ್ದಾರೆ. ವಾರ್ಷಿಕ 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಿಂದ ತಮಿಳುನಾಡಿನ ಜತೆ...

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ತಮಿಳುನಾಡಿನಲ್ಲಿ ಜಯಲಲಿತಾ ಜಯಭೇರಿ

ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಯಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ, ಕೇರಳದಲ್ಲಿ ಎಡಪಕ್ಷ ಜಯಭೇರಿ ಬಾರಿಸಿದೆ. ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷಾ ಭವಿಷ್ಯ ಸುಳ್ಳಾಗಿದೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ 133 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ...

ಮಮತಾ ಬ್ಯಾನರ್ಜಿ ಹಾಗೂ ಜಯಲಲಿತಾಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಉಭಯ ನಾಯಕಿಯರಿಗೆ ದೂರವಾಣಿ...

ಐತಿಹಾಸಿಕ ಗೆಲುವು ನೀಡಿದ ಜನತೆಗೆ ಧನ್ಯವಾದ: ಜಯಲಲಿತಾ

ಜನತೆಯೊಂದಿಗೆ ಬೆರೆತು ಅವರ ಶ್ರೇಯೋಭಿವೃದ್ಧಿ ಸಾಧಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಎಐಎಡಿಎಂಕೆ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಜಯಲಲಿತಾ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಐತಿಹಾಸಿಕ ವಿಜಯವಾಗಿದೆ. ಈ ಗೆಲುವು ನೀಡಿದ...

ಮಹಾಮಳೆಗೆ ತತ್ತರಿಸಿದ ಚೆನ್ನೈಃ ಜನಜೀವನ ಅಸ್ತವ್ಯಸ್ತ

ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ. ಆದರೆ ಬುಧವಾರ ರಾತ್ರಿ ಚೆಂಬರಂಬಕ್ಕಂ ಕೆರೆಯಿಂದ ಹೆಚ್ಚು ನೀರು ಹೊರಬಂದಿದರಿಂದ ಹೊಸ ಸ್ಥಳಗಳು ಜಲಪ್ರವಾಹದಿಂದ ಸುತ್ತುವರೆದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಬುಧವಾರ ರಾತ್ರಿಯಿಂದ ಮಳೆ ಸುರಿಯದೇ ಇದ್ದರೂ, ಚೆಂಬರಂಬಕ್ಕಂ...

ಕಾವೇರಿ ನೀರು ಬಿಡಿಸಿ ಎಂದು ಪ್ರಧಾನಿ ಮೋದಿಗೆ ಜಯಲಲಿತಾ ಪತ್ರ

ತೀವ್ರ ಮಳೆ ಕೊರತೆಯಿಂದಾಗಿ ಮುಕ್ಕಾಲು ಭಾಗ ಕರ್ನಾಟಕ ಬರಗಾಲ ಎದುರಿಸುತ್ತಿರುವಾಗಲೇ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಾವೇರಿ ನೀರಿನ ವಿಷಯವಾಗಿ ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿಗೆ ಸಿಗಬೇಕಿರುವ ನೀರನ್ನು ಕರ್ನಾಟಕ ಸರ್ಕಾರ ಬೇಕಂತಲೇ ಹರಿಸುತ್ತಿಲ್ಲ. ಆದ್ದರಿಂದ, ಕಾವೇರಿ ನ್ಯಾಯಾಧಿಕರಣದ ಅಂತಿಮ ಐತೀರ್ಪನ್ನು...

ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನಲ್ಲಿ ಮೊದಲ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರ ಒಂದು ದಿನದ ಭೇಟಿಯ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ತ ಮೋದಿ ಅವರು ಕೈಮಗ್ಗ ನೇಕಾರರಿಗೆ...

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ, ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಮತ್ತು ಇತರ ಮೂವರಿಗೆ ನೋಟಿಸ್ ಜಾರಿ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ...

ಆರ್.ಕೆ.ನಗರ ಚುನಾವಣೆ ಮತ ಎಣಿಕೆ: ಜಯಲಲಿತಾಗೆ ಭಾರಿ ಮುನ್ನಡೆ

ತಮಿಳುನಾಡಿನ ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. ಚೆನ್ನೈನ ರಾಣಿ ಮೇರಿ ಕಾಲೇಜ್‌ ನಲ್ಲಿ ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರನೇ ಸುತ್ತಿನ ಮತ ಎಣಿಕೆಯಲ್ಲಿ...

ಆರ್ ಕೆ ನಗರ ಉಪಚುನಾವಣೆ: ಮತದಾನ ಆರಂಭ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಕಣದಲ್ಲಿರುವ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭವಾಗಿದೆ. ಬೂತ್ ಸಂಖ್ಯೆ 1 ಮತ್ತು 83 ಹೊರತಪಡಿಸಿ ಎಲ್ಲ ಮತಗಟ್ಟೆಗಳಲ್ಲು ಯಾವುದೇ ತೊಂದರೆ ಇಲ್ಲ ವಿದ್ಯುನ್ಮಾನ ಮತಯಂತ್ರಗಳು ಕಾರ್ಯನಿರ್ವಹಿಸಿವೆ. ಆ ಮತಗಟ್ಟೆಗಳಲ್ಲೂ ಕೆಲವು...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...

ತಮಿಳುನಾಡು ಉಪ ಚುನಾವಣೆ: ಆರ್.ಕೆ ನಗರದಿಂದ ಜಯಲಲಿತಾ ಸ್ಪರ್ಧೆ

ತಮಿಳುನಾಡು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ, ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ಜಯಲಲಿತಾ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅಧಿೃಕೃತವಾಗಿ ಘೋಷಿಸಲಾಗಿದೆ. ಈ ಕುರಿತು ಎಐಎಡಿಎಂಕೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೂನ್ 27 ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ...

ತಮಿಳುನಾಡು ಜನತೆಗೆ ಜಯಲಲಿತಾರಿಂದ ಭರ್ಜರಿ ಯೋಜನೆಗಳ ಘೋಷಣೆ

ಶನಿವಾರವಷ್ಟೇ 5ನೇ ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಜೆ.ಜಯಲಲಿತಾ, ರಾಜ್ಯದ ಮತದಾರರಿಗೆ ಭರ್ಜರಿ ಯೋಜನೆ ಘೋಷಿಸಿದ್ದಾರೆ. ಈ ಘೋಷಣೆ ಹಿಂದೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಚಿತ್ತ ಇದೆ ಎಂದು ವಿಶ್ಲೇಷಿಸಲಾಗಿದೆ. ಕಚೇರಿಗೆ ಆಗಮಿಸಿ ಅಧಿಕೃತ ಕೆಲಸಗಳಿಗೆ ಚಾಲನೆ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ಬಗ್ಗೆ ನಿರ್ಧರಿಸಿಲ್ಲ-ಸಿಎಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ...

ತಮಿಳುನಾಡು ಸಿಎಂ ಆಗಿ ಇಂದು ಜಯಲಲಿತಾ ಪಟ್ಟಾಭಿಷೇಕ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ. ಜಯಲಲಿತಾ ಅವರು ನಿರೀಕ್ಷೆಯಂತೆ ಬೆಳಗ್ಗೆ 11 ಗಂಟೆಗೆ ಮದ್ರಾಸ್‌ ವಿವಿ ಕ್ಯಾಂಪಸ್‌ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಯಾ ಅವರ ಜೊತೆಗೆ 28 ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ...

ತಮಿಳುನಾಡು ಸಿಎಂ ಆಗಿ ಜಯಲಲಿತಾ ಪ್ರಮಾಣ ವಚನ ಸ್ವೀಕಾರ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರು ನಿರೀಕ್ಷೆಯಂತೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶನಿವಾರ ಬೆಳಗ್ಗೆ 11-20ಕ್ಕೆ ಮದ್ರಾಸ್ ವಿವಿ ಶತಮಾನೋತ್ಸವ ಭವನದಲ್ಲಿ ನಡೆದ ಸಮಾರಂಭದಲ್ಲಿ 5ನೇ ಬಾರಿಗೆ ಮಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣ ವಚನ ಸ್ವೀಕರಿಸಿದರು. ತಮಿಳುನಾಡಿನ ರಾಜ್ಯಪಾಲ ಕೆ.ರೋಸಯ್ಯ ಜಯಲಲಿತಾ ಅವರಿಗೆ ಪ್ರತಿಜ್ನಾವಿಧಿ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...

ಮೇ 23ರಂದು ತಮಿಳುನಾಡು ಸಿಎಂ ಆಗಿ ಜಯಲಲಿತಾ ಅಧಿಕಾರ ಸ್ವೀಕಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡಿರುವ ಜೆ.ಜಯಲಲಿತಾ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸರಸ್ವತಿ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಸಂದರ್ಭದಲ್ಲಿ ಜಯಲಲಿತಾ ಅವರು...

ಜಯಲಲಿತಾ ಮತ್ತೆ ಪಟ್ಟಕ್ಕೇರಲು ಸಿದ್ಧತೆ: ಮೇ 22ಕ್ಕೆ ಶಾಸಕಾಂಗ ಪಕ್ಷದ ಸಭೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ. ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ...

ಜಯಲಲಿತಾ ಖುಲಾಸೆ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ-ಸುಬ್ರಮಣಿಯನ್‌ ಸ್ವಾಮಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ನೀಡಿದ್ದಾರೆ. ಕರ್ನಾಟಕ ಹೈಕೋರ್ಟ್‌ ನ ತೀರ್ಪು ತಪ್ಪು ಗಣಿತದ ದುರಂತ...

ಜಯಲಲಿತಾ ಪ್ರಕರಣ: ತೀರ್ಪು ಅಚ್ಚರಿ ತಂದಿದೆ-ಸುಬ್ರಹ್ಮಣ್ಯನ್ ಸ್ವಾಮಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ. ತಮಿಳುನಾಡು ಮಾಜಿ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ತೀರ್ಪು ಇಂದು ಪ್ರಕಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್‌ ನಲ್ಲಿ ಪ್ರಕಟವಾಗಲಿದೆ. ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...

ಅಕ್ರಮ ಆಸ್ತಿಗಳಿಕೆ ಪ್ರಕರಣ: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿರ್ದೋಷಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100...

ಶೀಘ್ರವೇ ಪನ್ನೀರ್ ಸೆಲ್ವಂ ರಾಜೀನಾಮೆ: ಮೇ 20ರೊಳಗೆ ಜಯಲಲಿತಾ ಪ್ರಮಾಣ ವಚನ ಸಾಧ್ಯತೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...

ಜಯಾಲಲಿತಾ ಪ್ರಕರಣ: ಎಸ್‌.ಪಿ.ಪಿ ಭವಾನಿ ಸಿಂಗ್ ನೇಮಕ ಅಸಿಂಧು-ಸುಪ್ರೀಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌.ಪಿ.ಪಿ) ಭವಾನಿಸಿಂಗ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ಅಸಿಂಧುಗೊಳಿಸಿದೆ. ಎಸ್‌.ಪಿ.ಪಿ ಭವಾನಿಸಿಂಗ್ ನೇಮಕವನ್ನು ಪ್ರಶ್ನಿಸಿ ಡಿಎಂಕೆ ಪ್ರಧಾನ ಕಾರ‌್ಯದರ್ಶಿ ಕೆ ಅನ್ಬುಗನ್...

ಜಯಲಲಿತಾ ಪ್ರತಿವಾದಿಯಾಗಲು ಸುಬ್ರಹ್ಮಣಿಯನ್ ಸ್ವಾಮಿಗೆ ಅನುಮತಿ ನಿರಾಕರಿಸಿದ ಕೋರ್ಟ್

'ತಮಿಳುನಾಡು' ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಡಾ.ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ವಿಶೇಷ...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಜೈಲಿನಿಂದ ಬಿಡುಗಡೆಗೊಂಡ ಜಯಲಲಿತಾ

ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...

ಜಯಲಲಿತಾ ಬಿಡುಗಡೆ ಹಿನ್ನಲೆ: ಜೈಲಿನ ಸುತ್ತ ನಿಷೇಧಾಜ್ನೆ ಜಾರಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಜಯಲಲಿತಾಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ. ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ: ಪೊಲೀಸ್ ಬಿಗಿ ಬಂದೋಬಸ್ತ್

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ. ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾಯಿಸಿ: ದೇವೇಗೌಡ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾವಣೆ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಯಲಲಿತಾ ಪ್ರಕರಣವನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ ಎಂದರು. ನಿತ್ಯ...

ಎಐಎಡಿಎಂಕೆ ಪ್ರತಿಭಟನೆಗೆ ವಿಜಯಕಾಂತ್ ಖಂಡನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಶೇಷ ಪೀಠ, ಅ.6ಕ್ಕೆ ವಿಚಾರಣೆ ಮುಂದೂಡಿ ಆದೇಶ ನೀಡಿದೆ. ಹೀಗಾಗಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. ರಜಾಕಾಲದ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದ್ದು, 28 ಅರ್ಜಿಗಳ ವಿಚಾರಣೆಯಾದ ಬಳಿಕ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರೀಯ ವಕೀಲ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಲಾಗಿದೆ. ತಮ್ಮ ವಿರುದ್ಧದ ಶಿಕ್ಷೆ ರದ್ದು ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಜಯಲಲಿತಾ ಸೆ.29ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ...

ಸುಬ್ರಹ್ಮಣ್ಯನ್ ಸ್ವಾಮಿಗೆ ಮತಿಭ್ರಮಣೆ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನಾಳೆಯೇ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ. ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...

ಜಯಲಲಿತಾಗೆ ಜೈಲು ಶಿಕ್ಷೆ ಹಿನ್ನಲೆ: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು,...

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜಯಲಲಿತಾ ಆಪ್ತ ಹಾಗೂ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರೋಸಯ್ಯ ಪ್ರಮಾಣ ವಚನ ಬೋಧಿಸಿದ್ದು, ಪನ್ನೀರ್ ಸೆಲ್ವಂ ಕಣ್ಣೀರಿಡುತ್ತಾ, ದೇವರ ಹೆಸರಲ್ಲಿ ಪ್ರಮಾಣ ವಚನ...

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರಸೆಲ್ವಂ ಆಯ್ಕೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಉತ್ತರಾಧಿಕಾರಿ ಆಯ್ಕೆ ಹುಡುಕಾಟ ಆರಂಭವಾಗಿದ್ದು, ಪನ್ನೀರಸೆಲ್ವಂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಚಿವರು ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪನ್ನೀರಸೆಲ್ವಂ...

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಆಯ್ಕೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿಯನ್ನಾಗಿ ಪನ್ನೀರ್ ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪಿಗೆ ಕ್ಷಣಗಣನೆ

ದೇಶಾದ್ಯಂತ ಕುತೂಹಲ ಕೆರಳಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ ಪ್ರಕಟಿಸಲಿದೆ. 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನು ಬೆಳಿಗ್ಗೆ 11 ಗಂಟೆಗೆ...

ಜಯಲಲಿತಾ ಪ್ರಕರಣದ ತೀರ್ಪು ಹಿನ್ನಲೆ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...

ಜಯಲಲಿತಾ ಅಕ್ರಮ ಆಸ್ತಿಗಳಿಕೆ ತೀರ್ಪು ಪ್ರಕಟ: ಆರೋಪ ಸಾಬೀತು

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ತಪ್ಪಿತಸ್ಥೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ,...

ಎಐಎಡಿಎಂಕೆ ಆಕ್ರೋಶ: ಡಿಎಂಕೆ ಸಂಭ್ರಮಾಚರಣೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited