Untitled Document
Sign Up | Login    
Dynamic website and Portals
  

Related News

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಧೋನಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಪತ್ರಿಕೆಯ ಮುಖಪುಟದಲ್ಲಿ ವಿಷ್ಣುವಿನ ಹಾಗೆ ಕಾಣಿಸಿಕೊಂಡ ಕುರಿತು ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಆಂಧ್ರಪ್ರದೇಶದ ಅನಂತಪುರಂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಫೆಬ್ರುವರಿ 25ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿದೆ 2013ರ ಏಪ್ರಿಲ್...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಶನಿವಾರ ನ್ಯಾಯಾಲಯಕ್ಕೆ ಹಾಜರಾಗಲಿರುವ ಸೋನಿಯಾ, ರಾಹುಲ್‌ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳು ಶನಿವಾರ ಪಟಿಯಾಲ ಹೌಸ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಒಂದು ವೇಳೆ, ನ್ಯಾಯಾಲಯವೇನಾದರೂ ಬಂಧನಕ್ಕೆ ಆದೇಶಿಸಿದರೆ ಸೋನಿಯಾ, ರಾಹುಲ್‌...

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಶನಿವಾರ ಪಟಿಯಾಲಾ ನ್ಯಾಯಾಲಯಕ್ಕೆ ಹಾಜರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನ್ಯಾಯಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದೆ. ಶ್ಯೂರಿಟಿ ಮತ್ತು ತಲಾ 50 ಸಾವಿರ ಬಾಂಡ್ ಆಧಾರದ ಮೇಲೆ...

ಲಲಿತ್ ಮೋದಿಗೆ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ. ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ...

ಆಪ್ ನಿಂದ ಜಿತೇಂದ್ರ ತೋಮರ್ ಉಚ್ಛಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ ಅಸಮಾಧಾನ ಉಂಟುಮಾಡಿದೆ. ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ಅವರನ್ನು ಪಕ್ಷದಿಂದ...

ಜಿತೇಂದ್ರ ಸಿಂಗ್ ತೋಮರ್ ಜಾಮೀನು ಅರ್ಜಿ ವಜಾ

ನಕಲಿ ಕಾನೂನು ಪದವಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ. ಜೀತೆಂದ್ರ ಸಿಂಗ್ ತೋಮರ್ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು...

ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಆರಂಭ

ಹಿಟ್ ಅಂಡ್ ರನ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ನಟ ಸಲ್ಮಾನ್ ಖಾನ್ ಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅರ್ಜಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಭಯ್ ತಿಪ್ಸೆ...

ಸಲ್ಮಾನ್ ಖಾನ್ ಗೆ ಬಾಂಬೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್, ಸಲ್ಮಾನ್ ಗೆ ಷರತ್ತುಬದ್ಧ ಜಾಮೀನು ನೀಡಿದೆ. ಮೇ 6 ರ ಬುಧವಾರ ಮುಂಬೈ ಸೆಷೆನ್ಸ್ ಕೋರ್ಟ್ ಸಲ್ಮಾನ್‌ ಖಾನ್ ಗೆ 5...

ಸಲ್ಮಾನ್ ಖಾನ್ ಗೆ ಮತ್ತೊಂದು ಸಂಕಷ್ಟ ಜಾಮೀನು ರದ್ದು ಮಾಡುವಂತೆ ಸುಪ್ರೀಂಗೆ ಅರ್ಜಿ

​ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ 5 ವರ್ಷ ಜೈಲುಶಿಕ್ಷೆ, 25 ಸಾವಿರ ದಂಡ ವಿಧಿಸಿತ್ತು. ಸಂಜೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 2 ದಿನಗಳ ಮಧ್ಯಂತರ ಜಾಮೀನು ನೀಡಿರುವುದನ್ನು...

ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...

ಇಂಜಿನಿಯರ್ ಮೇಲೆ ಹಲ್ಲೆ ಪ್ರಕರಣ: ಆಪ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

'ಆಮ್ ಆದ್ಮಿ ಪಕ್ಷ'ಕ್ಕೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಆಪ್ ಶಾಸಕ ಜರ್ನೈಲ್ ಸಿಂಗ್ ನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಆಪ್ ಶಾಸಕನ ವಿರುದ್ಧ ದಕ್ಷಿಣ ದೆಹಲಿಯ ನಗರ ಪಾಲಿಕೆ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ ಗಂಭೀರ ಆರೋಪ ದಾಖಲಾಗಿದೆ. ಈ...

ಜನಾರ್ದನ ರೆಡ್ಡಿ ಮತ್ತೆ ಬಂಧನ ಸಾಧ್ಯತೆ

ಈಗಾಗಲೇ ಮೂರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ. ಈ ಹಿಂದೆ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟು ಹಲ ವರ್ಷ ಜೈಲಿನಲ್ಲಿದ್ದ ರೆಡ್ಡಿ...

ಕಾರು ಕಳ್ಳರೊಂದಿಗೆ ಸಂಪರ್ಕ: ಅಸ್ಸಾಂ ಕಾಂಗ್ರೆಸ್ ಶಾಸಕಿ ಬಂಧನ

'ಕಾರು ಕಳ್ಳ' ಅನಿಲ್ ಚೌಹಾಣ್ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ, ಅಸ್ಸಾಂನ ಕಾಂಗ್ರೆಸ್ ಶಾಸಕಿ ರುಮಿನಾಥ್ ಅವರನ್ನು ಬಂಧಿಸಲಾಗಿದೆ. ಅಶೋಕ್ ಚೌಹಾಣ್, ದೆಹಲಿ ಹಾಗೂ ಮುಂಬೈಗಳಲ್ಲಿ ನಡೆಯುತ್ತಿರುವ ಕಳ್ಳತನ ದಂಧೆಯ ಮುಖ್ಯಸ್ಥನಾಗಿದ್ದಾನೆ. ಈತನೊಂದಿಗೆ ಸಂಪರ್ಕ ಹೊಂದಿರುವ ಶಾಸಕಿ ರುಮಿನಾಥ್ ಅವರನ್ನು ಏ.14ರಂದು...

ಫರ್ವೇಜ್ ಮುಷರಫ್ ವಿರುದ್ಧ ಬಂಧವ ವಾರೆಂಟ್ ಜಾರಿ

ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಪ್ರಕರಣ...

ಸುಬ್ರತೋ ರಾಯ್ ಬೇಲ್ ಭದ್ರತೆಗೆ 3 ತಿಂಗಳ ಗಡುವು

ಷೇರುದಾರರಿಗೆ ವಂಚಿಸಿದ ಆರೋಪದಡಿ ಬಂಧನಕ್ಕೀಡಾಗಿರುವ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರ ಜಾಮೀನು ಮಂಜೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ 'ಜಾಮೀನು ಭದ್ರತಾ ಠೇವಣಿ' ಶೇಖರಿಸುವ ಮಾರ್ಗೋಪಾಯ ರಚನೆಗೆ 3 ತಿಂಗಳ ಕಾಲಾವಕಾಶ ನೀಡಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್...

ತೀಸ್ತಾ ಸೆತಲ್ವಾಡ್ ಬಂಧನದ ವಿರುದ್ಧ ಮಧ್ಯಂತರ ತಡೆ ವಿಸ್ತರಣೆ

ವಸ್ತುಸಂಗ್ರಹಾಲಯವೊಂದರ ನಿಧಿಯ ದುರ್ಬಳಿಕೆ ಆರೋಪದಲ್ಲಿ ಬಂಧನ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮತ್ತೊಂದು ನ್ಯಾಯಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ. ಇದೇ ವೇಳೆಯಲ್ಲಿ ಕೋರ್ಟ್ ತೀಸ್ತಾ ಮತ್ತು ಅವರ ಪತಿಯ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು...

ಉಗ್ರ ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ

'ಮುಂಬೈ ದಾಳಿ'ಯ ಮಾಸ್ಟರ್ ಮೈಂಡ್ ಉಗ್ರ ಝಾಕಿ-ಉರ್ ರೆಹಮಾನ್ ಲಖ್ವಿಯನ್ನು ಬಿಡುಗಡೆ ಮಾಡಿ, ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಪಾಕಿಸ್ತಾನದ ಮಾಧ್ಯಮಗಳು ಈ ಬಗ್ಗೆ ಸುದ್ದಿ ಪ್ರಸಾರ ಮಾಡುತ್ತಿದ್ದು, ತಕ್ಷಣವೇ ಲಖ್ವಿಯನ್ನು ಬಿಡುಗಡೆ ಮಾಡುವಂತೆ ಇಸ್ಲಾಮಾಬಾದ್ ನ ಮುಖ್ಯ ನ್ಯಾಯಮೂರ್ತಿ...

ಕಾಶ್ಮೀರ ವಿವಾದದ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ: ಕೇಂದ್ರಕ್ಕೆ ಮಸ್ರತ್ ಆಲಂ ಸವಾಲು

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ, ಸರ್ಕಾರಕ್ಕೆ ಸವಾಲು ಹಾಕಿದ್ದು, ಕೇಂದ್ರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳಿಗೆ ತಲೆನೋವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ತನ್ನನ್ನು ನಿಜವಾದ ಪ್ರತ್ಯೇಕತಾವಾದಿ ನಾಯಕ ಎಂದು ಹೇಳಿಕೊಂಡಿರುವ ಮಸ್ರತ್ ಆಲಂ, ಜನಾಭಿಪ್ರಾಯ ಸಂಗ್ರಹಣೆ ಮೂಲಕ ತನ್ನ...

ನಿಧಿ ದುರುಪಯೋಗ: ಆರೋಪಿ ತೀಸ್ತಾ ಸೆಟಲ್ವಾಡ್ ರನ್ನು ಬಂಧಿಸದಂತೆ ಸುಪ್ರೀಂ ಆದೇಶ

'ಗುಜರಾತ್' ಗಲಭೆ ಸಂತ್ರಸ್ತರ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಸೆಟಲ್ವಾಡ್, ಆಕೆಯ ಪತಿ ಜಾವೇದ್ ಆನಂದ್ ಸೇರಿದಂತೆ ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್...

ಮಾಜಿ ಐಜಿಪಿ ವಂಜಾರಾಗೆ ಜಾಮೀನು: ಬಿಡುಗಡೆ

ಸೊಹ್ರಾಬುದ್ದೀನ್‌ ಮತ್ತು ಇಶ್ರತ್‌ ಜಹಾನ್ ಎನ್‌ ಕೌಂಟರ್ ಪ್ರಕರಣದಲ್ಲಿ 8 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ ಗುಜರಾತ್‌ನ ಮಾಜಿ ಐಜಿಪಿ ಡಿ.ಜಿ.ವಂಜಾರಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸಾಬರ್ಮತಿ ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಬಾಹ್ಯ ರಾಜಕೀಯ ದುರುದ್ದೇಶಗಳಿಂದ ಗುಜರಾತ್‌ ಪೊಲೀಸರನ್ನು ಟಾರ್ಗೆಟ್‌...

ನಿಧಿ ದುರುಪಯೋಗ ಆರೋಪಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಸೆಟಲ್ವಾಡ್ ಗೆ ಸುಪ್ರೀಂ ಎಚ್ಚರಿಕೆ

ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ. ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...

ನಿಧಿ ದುರುಪಯೋಗ ಪ್ರಕರಣ: ತೀಸ್ತಾ ಸೆಟಲ್ವಾಡ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...

ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...

ಜನಾರ್ದನ ರೆಡ್ಡಿ ಬಿಡುಗಡೆ ಹಿನ್ನೆಲೆ: ಜೈಲಿನ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ನೆ

'ಒಎಂಸಿ' ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜೈಲಿನಿಂದ ಜ.22ರಂದು ಬಿಡುಗಡೆಯಾಗಲಿದ್ದಾರೆ. ರೆಡ್ದಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಜನಾರ್ದನ ರೆಡ್ಡಿ ಅವರ ಜಮೀನು ಪ್ರತಿ ದೊರೆತಿದ್ದು ಅವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ....

ಸುಪ್ರೀಂ ಕೋರ್ಟ್ ನಿಂದ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

'ಓಬಳಾಪುರಂ ಮೈನಿಂಗ್ ಕಂಪನಿ'ಯ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ದೊರೆತಿದೆ. ಜ.20ರಂದು ಸುಪ್ರೀಂ ಕೋರ್ಟ್ ನಲ್ಲಿ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. 10 ಲಕ್ಷ ರೂಪಾಯಿ ಮೌಲ್ಯದ 2...

ಜನಾರ್ಧನ ರೆಡ್ಡಿಗೆ ಸಿಗಲಿದೆಯೇ ಬಿಡುಗಡೆ ಭಾಗ್ಯ?

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ. ಜನಾರ್ಧನ ರೆಡ್ಡಿ ವಿರುದ್ಧ...

ವಿಚಾರಣೆಗೆ ಬಾರದ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ...

ಉಗ್ರ ಲಖ್ವಿ ಬಂಧನ ವಜಾಗೊಳಿಸಿದ ಪಾಕ್ ಹೈಕೋರ್ಟ್

26/11ರ ಮುಂಬೈ ದಾಳಿಯ ರೂವಾರಿ ಝಕೀಉರ್ ರೆಹಮಾನ್ ಲಖ್ವಿಯನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ಬಂಧಮುಕ್ತಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟಿನ ನ್ಯಾಯಾಧೀಶ ಕೌಸರ್‌ ಅಬ್ಬಾಸ್‌ ಝೈದಿ ಡಿಸೆಂಬರ್‌ 18ರಂದು ಈತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದರು. ಆದರೆ ಭಾರತ ಮತ್ತು ಅಂತಾರಾಷ್ಟ್ರೀಯ ಸಮುದಾಯದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ...

ಮುಂಬೈ ದಾಳಿ ಉಗ್ರನಿಗೆ ಜಾಮೀನು ನೀಡಿರುವುದಕ್ಕೆ ಭಾರತ ಸರ್ಕಾರದಿಂದ ಆಕ್ಷೇಪ

'ಮುಂಬೈ ದಾಳಿ'ಯ ಆರೋಪಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಜಾಕೀರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನ ಕೋರ್ಟ್ ಜಾಮೀನು ಮಂಜೂರು ಮಾಡಿರುವುದಕ್ಕೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಉಗ್ರ ಲಖ್ವಿಯನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಿರುವುದರಿಂದ ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಹೋರಾಡುವುದಾಗಿ ನೀಡಿದ್ದ ಹೇಳಿಕೆ...

ಮುಂಬೈ ದಾಳಿ: ಉಗ್ರ ಜಾಕೀರ್ ರೆಹಮಾನ್ ಲಖ್ವಿಗೆ ಪಾಕ್ ಕೋರ್ಟ್ ನಿಂದ ಜಾಮೀನು

ಒಂದೆಡೆ ಮುಂಬೈ ದಾಳಿ ರುವಾರಿಗಳಾದ ಪಾಕ್ ಉಗ್ರರನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಭಾರತ ಸರ್ಕಾರ ಒತ್ತಾಯಿಸುತ್ತಿದ್ದರೆ ಮತ್ತೊಂದೆಡೆ ಅದೇ ಪ್ರಕರಣದ ಆರೋಪಿಗಳು ಪಾಕಿಸ್ತಾನದ ಕೋರ್ಟ್ ನಿಂದ ಜಾಮೀನು ಪಡೆಯುತ್ತಿದ್ದಾರೆ! ಡಿ18ರಂದು ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್, ಮುಂಬೈ ದಾಳಿಯ ರುವಾರಿಗಳಲ್ಲೊಬ್ಬನಾದ ಲಷ್ಕರ್...

ಜನಾರ್ದನ ರೆಡ್ಡಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಮಂಜೂರು

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...

ನನ್ನ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ: ಜಯಲಲಿತಾ

ನನ್ನ ಸಾರ್ವಜನಿಕ ಜೀವನ ಬೆಂಕಿಯ ಕಡಲಲ್ಲಿ ಈಜಿದಂತೆ, ಆದರೂ ಎಂದಿಗೂ ನಾನು ಅಳುಕುವುದಿಲ್ಲ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ. 66.65ಕೋಟಿ ರೂ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಒಂದು ದಿನದ ಬಳಿಕ...

ಜೈಲಿನಿಂದ ಬಿಡುಗಡೆಗೊಂಡ ಜಯಲಲಿತಾ

ಕಳೆದ 21 ದಿನಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಬಿಡುಗಡೆಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮಧ್ಯಾಹ್ನ 3:15ರ ವೇಳೆ ಜಯಲಲಿತಾ ಹಾಗೂ ಅವರ ದತ್ತು ಪುತ್ರ ಸುಧಾಕರನ್,...

ಜಯಲಲಿತಾ ಬಿಡುಗಡೆ ಹಿನ್ನಲೆ: ಜೈಲಿನ ಸುತ್ತ ನಿಷೇಧಾಜ್ನೆ ಜಾರಿ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...

ಜಯಲಲಿತಾಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಕೋರ್ಟ್ ಅ.17ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೈಲು ಶಿಕ್ಷೆ ಅಮಾನತು ಹಾಗೂ ಜಾಮೀನು ನೀಡಬೇಕೆಂದು...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ.17ಕ್ಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...

ಓಂ ಪ್ರಕಾಶ್ ಚೌಟಾಲಾ ಶರಣಾಗತಿ

ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ. ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ: ಪೊಲೀಸ್ ಬಿಗಿ ಬಂದೋಬಸ್ತ್

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...

ತಮಿಳುನಾಡಿನಲ್ಲಿ ಕನ್ನಡಿಗರಿಗೆ ಎಐಡಿಎಂಕೆ ಕಾರ್ಯಕರ್ತರಿಂದ ಬೆದರಿಕೆ

ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...

ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ. ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಶೇಷ ಪೀಠ, ಅ.6ಕ್ಕೆ ವಿಚಾರಣೆ ಮುಂದೂಡಿ ಆದೇಶ ನೀಡಿದೆ. ಹೀಗಾಗಿ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. ರಜಾಕಾಲದ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದ್ದು, 28 ಅರ್ಜಿಗಳ ವಿಚಾರಣೆಯಾದ ಬಳಿಕ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರೀಯ ವಕೀಲ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಅ.6ಕ್ಕೆ ಮುಂದೂಡಲಾಗಿದೆ. ತಮ್ಮ ವಿರುದ್ಧದ ಶಿಕ್ಷೆ ರದ್ದು ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಜಯಲಲಿತಾ ಸೆ.29ರಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ...

ನಾಳೆಯೇ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ. ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...

ವಂಚನೆ ಪ್ರಕರಣಃ ಕಾರ್ತಿಕ್ ಗೌಡಗೆ ಷರತ್ತು ಬದ್ಧ ಜಾಮೀನು

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...

ವಂಚನೆ ಪ್ರಕರಣ: ಕಾರ್ತಿಕ್ ಗೌಡ ಜಾಮೀನು ಅರ್ಜಿ ವಿಚಾರಣೆ ಅಂತ್ಯ

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ. ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...

ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಜಾಮೀನು

'ಭೂಕಬಳಿಕೆ' ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಮಧುರೈ ಹೈಕೋರ್ಟ್ ಸೆ.2ರಂದು ಜಾಮೀನು ನೀಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಎಂ.ಕೆ ಅಳಗಿರಿ ದೇವಸ್ಥಾನಕ್ಕೆ ಸೇರಬೇಕಾಗಿದ್ದ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಾಲೇಜು ನಿರ್ಮಾಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು....

ವಂಚನೆ ಆರೋಪ: ನಿರೀಕ್ಷಣಾ ಜಾಮೀನು ಸಲ್ಲಿಸಿದ ಕಾರ್ತಿಕ್ ಗೌಡ

'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು...

ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಫೋಟ ಪ್ರಕರಣ: ಅಸೀಮಾನಂದಗೆ ಜಾಮೀನು

2007ರಲ್ಲಿ ನಡೆದ ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ ಅಸೀಮಾನಂದಗೆ ಆ.28ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೈಲು ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಆಸೀಮಾನಂದ ಹಾಗೂ...

ಅಬ್ದುಲ್ ನಾಸೀರ್ ಮದನಿ ಜಾಮೀನು ಅವಧಿ ಮತ್ತೊಮ್ಮೆ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ...

2ಜಿ ಹಗರಣ: ದಯಾಳು ಅಮ್ಮಾಳ್ ಗೆ ಜಾಮೀನು

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಧಿಸಿದಂತೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ ಸೈನಿ, ಅನಾರೋಗ್ಯ ಹಿನ್ನಲೆಯಲ್ಲಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. 5 ಲಕ್ಷ...

2ಜಿ ಹಗರಣ: ಎ.ರಾಜಾ, ಕನಿಮೋಳಿಗೆ ಜಾಮೀನು

'2 ಜಿ ಹಗರಣ'ದಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಎ.ರಾಜಾ, ಕನಿಮೋಳಿಗೆ ಆ.20ರಂದು ಸಿ.ಬಿ.ಐ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸ್ವಾನ್ ಟೆಲಿಕಾಂ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶಾಹಿದ್ ಉಸ್ಮಾನ್ ಬಲ್ವಾ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಇದೇ...

ಮದನಿ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. 2008ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸಿರುದ್ದೀನ್ ಮದನಿಗೆ ಅನಾರೋಗ್ಯ ನಿಮಿತ್ತ ಸುಪ್ರೀಂ ಕೋರ್ಟ್ ಜು.11ರಂದು ಷರತ್ತುಬದ್ಧ ಜಾಮೀನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited