Untitled Document
Sign Up | Login    
Dynamic website and Portals
  

Related News

ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ...

ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು

ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ. 2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ...

ಐ ತೀರ್ಪಿನ ಮೇಲೆ ಗಮನವಿಟ್ಟು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ. ಕರ್ನಾಟಕ ಸಲ್ಲಿಸಿರುವ ಅರ್ಜಿಯ ಮರುವಿಚಾರಣೆ ಇದೇ ಅಕ್ಟೋಬರ್ 18ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ...

ಕಾವೇರಿ ಜಲ ವಿವಾದ: ವಿಧಾನಮಂಡಲ ವಿಶೇಷ ಅಧಿವೇಶನ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಐತಿಹಾಸಿಕ ನಿರ್ಣಯವನ್ನು ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳುವ...

ಕಾವೇರಿ ಜಲ ವಿವಾದ: ತುರ್ತು ಸಭೆ ಕರೆದ ಸಿಎಂ

ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಲು ರಾಜ್ಯ ಮಂತ್ರಿ ಪರಿಷತ್ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವಿಸೃತವಾಗಿ ಚರ್ಚಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿ: ಸಿಎಂಗೆ ಗೌಡರ ಸಲಹೆ

ತಮಿಳುನಾಡಿಗೆ ನೀರು ಬಿಡದಿರಲು ದೃಢ ನಿರ್ಧಾರ ತೆಗೆದುಕೊಳ್ಳಿ. ರಾಜ್ಯದಲ್ಲಿ ಮೊದಲು ಕುಡಿಯುವ ನೀರಿಗೆ ಆದ್ಯತೆಕೊಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ನೀಡಿರುವ ತೀರ್ಪು...

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ. ಕೆಆರ್ ಎಸ್ ನಿಂದ ನಿನ್ನೆ ರಾತ್ರಿ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದಿದ್ದು, ಕಬಿನಿ ಜಲಾಶಯದಿಂದ...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಅಬು ಜುಂದಾಲ್ ಸೇರಿದಂತೆ 7 ಜನರಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಔರಂಗಾಬಾದ್​ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 26/11ಮುಂಬೈ ದಾಳಿಯ ಸೂತ್ರಧಾರ ಅಬು ಜುಂದಾಲ್ ಸೇರಿ 7 ಜನರಿಗೆ ಮೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮೋಕಾ ವಿಶೇಷ ನ್ಯಾಯಾಲಯ ಕಳೆದ ಗುರುವಾರ ಅಬು ಜುಂದಾಲ್...

ಮಾಜಿ ಸಿಎಂಗಳು ಸರ್ಕಾರಿ ಬಂಗಲೆ ಖಾಲಿ ಮಾಡಿ: ಸುಪ್ರೀಂ ಸೂಚನೆ

ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಗಳಲ್ಲಿನ ತಮ್ಮ ವಾಸ್ತವ್ಯವನ್ನು ಜೀವನ ಪರ್ಯಂತ ಮುಂದುವರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಸರ್ಕಾರೇತರ (ಎನ್​ಜಿಒ) ಸಂಘಟನೆ ಲೋಕ ಪ್ರಹರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ...

ಇಂದು ಕರ್ನಾಟಕ ಬಂದ್

ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಬಂದ್ ಗೆ ಕನ್ನಡ ಚಿತ್ರೋದ್ಯಮ, ಕೆಎಸ್ಆರ್ಟಿಸಿ, ಬಿಎಂಟಿಸಿ, ಬೆಂಗಳೂರಿನ ಮಾಲ್, ಆಟೋ, ಟ್ಯಾಕ್ಸಿ...

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...

ಕೃಷ್ಣಮೃಗ ಭೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ನಿರ್ದೋಷಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ. ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟ

2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ಸತತ ವಿಚಾರಣೆ ಬಳಿಕ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಜೂನ್ 9ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ

ಗುಜರಾತ್ ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ಶಿಕ್ಷೆ ಪ್ರಮಾಣ ತೀರ್ಪನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಜೂನ್ 9ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ಅಪರಾಧಿಗಳ ಪರ-ವಿರೋಧಿ ವಕೀಲರ ವಾದ ಆಲಿಸಿದ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪಿ.ಬಿ.ದೇಸಾಯಿ, ಆರೋಪಿಗಳಿಗೆ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ನಡೆದ ಹಿಂಸಾಚಾರದ ಬಳಿಕ ನಡೆದ ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸತತ 14 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಪ್ರಕರಣದಲ್ಲಿ...

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ವಜಾ

ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು...

ಕಲ್ಲಿದ್ದಲು ಹಗರಣ: ಮೊದಲ ತೀರ್ಪು ಪ್ರಕಟ

ಯುಪಿಎ-2 ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತೀರ್ಪು ಪ್ರಕಟವಾಗಿದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ವಂಚಿಸಿ ಜಾರ್ಖಂಡ್‌ ನ‌ಲ್ಲಿ ಕಲ್ಲಿದ್ದಲು ಗಣಿ ಮಂಜೂರು ಮಾಡಿಸಿಕೊಂಡ ಪ್ರಕರಣದಲ್ಲಿ ಜಾರ್ಖಂಡ್‌ ಇಸ್ಪಾತ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ...

ಜಯಲಲಿತಾ ಪ್ರಕರಣ: ತೀರ್ಪು ಅಚ್ಚರಿ ತಂದಿದೆ-ಸುಬ್ರಹ್ಮಣ್ಯನ್ ಸ್ವಾಮಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ. ತಮಿಳುನಾಡು ಮಾಜಿ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ತೀರ್ಪು ಇಂದು ಪ್ರಕಟ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್‌ ನಲ್ಲಿ ಪ್ರಕಟವಾಗಲಿದೆ. ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...

ಸಲ್ಮಾನ್ ಖಾನ್ ಹಿಟ್ ಆಂಡ್ ರನ್ ಪ್ರಕರಣ: ಇಂದು ತೀರ್ಪು

ನಟ ಸಲ್ಮಾನ್‌ ಖಾನ್‌ ಆರೋಪಿಯಾಗಿರುವ 2002ರ ಹಿಟ್‌ ಆಂಡ್‌ ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್‌ ನ್ಯಾಯಾಲಯ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌ ದೋಷಿ ಎಂದು ಸಾಬೀತಾದರೆ 10 ವರ್ಷಗಳವರೆಗೂ ಜೈಲು ಶಿಕ್ಷೆಯನ್ನು...

ಹಿಟ್ ಆಂಡ್ ರನ್ ಪ್ರಕರಣ: ಸಲ್ಮಾನ್ ಖಾನ್ ದೋಷಿ

ನಟ ಸಲ್ಮಾನ್‌ ಖಾನ್‌ ವಿರುದ್ಧದ 2002ರ ಹಿಟ್‌ ಆಂಡ್‌ ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್‌ ನ್ಯಾಯಾಲಯ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಿದ್ದು, ಸಲ್ಮಾನ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಸಲ್ಮಾನ್ ಖಾನ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣಕ್ಕೆ...

ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ. ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...

ಬಿಬಿಎಂಪಿ ವಿಭಜನೆಯೋ ಅಥವಾ ಚುನಾವಣೆಯೋ ಇಂದು ನಿರ್ಧಾರ

ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ. ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...

ಸತ್ಯಂ ಕಂಪ್ಯೂಟರ್ಸ್ ಹಗರಣ: ರಾಮಲಿಂಗಾರಾಜು ಸೇರಿ 10 ಮಂದಿಗೆ 7ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್‌.ಎನ್‌ ಚಕ್ರವರ್ತಿ,...

ಮರುಮತಾಂತರ ಆದರೆ ಮೂಲ ಜಾತಿ ಅನ್ವಯ: ಸುಪ್ರೀಂ ಕೋರ್ಟ್‌

ಯಾವುದೋ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿಯು ಮತ್ತೆ ತನ್ನ ಮಾತೃ ಧರ್ಮಕ್ಕೆ ಮರಳಿದಾಗ, ಮೂಲ ಪೂರ್ವಜರು ಯಾವ ಜಾತಿಯವರಾಗಿರುತ್ತಾರೋ ಅದೇ ಜಾತಿಯು ಆತನಿಗೆ ಅನ್ವಯವಾಗುತ್ತದೆ ಎಂಬ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇರಳದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ.ದೀಪಕ್‌ ಮಿಶ್ರ ಮತ್ತು...

ದೆಹಲಿ ಚುನಾವಣಾ ತೀರ್ಪು ದೇಶದ ತೀರ್ಪು: ಆಜಮ್ ಖಾನ್

'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ. ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ: ಸುಪ್ರೀಂ ತೀರ್ಪು ಪ್ರಕಟ

ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ತಾನ ರಾಯಲ್ಸ್‌ನ ಸಹ ಮಾಲೀಕ ರಾಜ್ ಕುಂದ್ರಾ ತಪ್ಪಿತಸ್ಥರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಆರಂಭ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಆರಂಭವಾಗಿದೆ. ಜಯಲಲಿತಾ ಅವರಿಗೆ ಜಾಮೀನು ನೀಡುವಂತೆ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರಿರುವ ಪೀಠದ ಎದುರು ಮೇಲ್ಮನವಿ ವಿಚಾರಣೆ ನಡೆಯುತ್ತಿದ್ದು, ಜಯಲಲಿತಾ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪಿಗೆ ಕ್ಷಣಗಣನೆ

ದೇಶಾದ್ಯಂತ ಕುತೂಹಲ ಕೆರಳಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ ಪ್ರಕಟಿಸಲಿದೆ. 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನು ಬೆಳಿಗ್ಗೆ 11 ಗಂಟೆಗೆ...

ಜಯಲಲಿತಾ ಪ್ರಕರಣದ ತೀರ್ಪು ಹಿನ್ನಲೆ: ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...

ಜಯಲಲಿತಾ ಅಕ್ರಮ ಆಸ್ತಿಗಳಿಕೆ ತೀರ್ಪು ಪ್ರಕಟ: ಆರೋಪ ಸಾಬೀತು

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ತಪ್ಪಿತಸ್ಥೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ,...

ಎಐಎಡಿಎಂಕೆ ಆಕ್ರೋಶ: ಡಿಎಂಕೆ ಸಂಭ್ರಮಾಚರಣೆ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ: ಸುಪ್ರೀಂ ಕೋರ್ಟ್

ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, 1993ರಿಂದ ಈ ವರೆಗಿನ ಎಲ್ಲಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಆರ್.ಎಂ.ಲೋಧಾ ನೇತೃತ್ವದ ತ್ರಿಸದಸ್ಯ ಪೀಠ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited