Untitled Document
Sign Up | Login    
Dynamic website and Portals
  

Related News

ಸಧ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...

ಕಾಶ್ಮೀರ ವಿಚಾರ: ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು: ಪ್ರಧಾನಿ ಮೋದಿ

ಸಂವಿಧಾನದ ಚೌಕಟ್ಟಿನಲ್ಲಿ ಮಾತುಕತೆ ನಡೆಸುವ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಕಾಶ್ಮೀರದಲ್ಲಿನ...

ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...

ರಾಜ್ಯದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಬಳಿಗೆ ನಿಯೋಗ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ...

ವಾರಣಾಸಿಯಲ್ಲಿ 90 ನಿಮಿಷದಲ್ಲಿ 40 ನಿಯೋಗಗಳನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂಬತ್ತು ತಿಂಗಳ ನಂತರದ ಭೇಟಿ ಇದಾಗಿದೆ. ಕಳೆದ ಎರಡು ಭೇಟಿ, ಭಾರಿ ಮಳೆಯ ಕಾರಣದಿಂದ ರದ್ದಾಗಿತ್ತು. ಶುಕ್ರವಾರ ಮಧ್ಯಾಹ್ನ, ಪ್ರಧಾನಿ ಮೋದಿ ಅವರು 90 ನಿಮಿಷಗಳಲ್ಲಿ...

ರೈತರ ಬಾಕಿ ಹಣ ಪಾವತಿ: ಖಜಾನೆಯೇನೂ ಅಕ್ಷಯ ಪಾತ್ರೆಯಲ್ಲ- ಸಿಎಂ

ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...

ಮಧ್ಯರಾತ್ರಿ ಬಾಗಿಲು ತಟ್ಟಿದರೂ ಸಮಸ್ಯೆ ಆಲಿಸಲು ಸಿದ್ಧ: ಪ್ರಧಾನಿ ಮೋದಿ ಭರವಸೆ

ಯಾವುದೇ ಸಮಸ್ಯೆ ಇರಲಿ, ಮಧ್ಯರಾತ್ರಿ ಬಂದು ನನ್ನ ಮನೆ ಬಾಗಿಲು ತಟ್ಟಿ, ನಾನು ನಿಮ್ಮ ಅಹವಾಲು ಸ್ವೀಕರಿಸಲು ಸದಾ ಸಿದ್ಧನಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮ್ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್...

ಮೇಕೆದಾಟು ಯೋಜನೆ: ಸರ್ವಪಕ್ಷ ನಿಯೋಗದಿಂದ ಪ್ರಧಾನಿ ಭೇಟಿ

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ವ ಪಕ್ಷ ನಿಯೋಗ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದೆ. ಮಧ್ಯಾಹ್ನ ಸಂಸತ್‌ ಭವನದಲ್ಲಿ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ನಿಯೋಗ...

ರೈತರ ನಿಯೋಗ ಭೇಟಿ ಮಾಡಿದ ರಾಹುಲ್ ಗಾಂಧಿ

56ದಿನಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿವಧ ರಾಜ್ಯಗಳ ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದ್ದಾರೆ. ಏ.19ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೂ...

ಪ್ರಧಾನಿಯನ್ನು ಭೇಟಿ ಮಾಡಿದ ಮುಸ್ಲಿಮ್ ನಾಯಕರ ನಿಯೋಗ: ಭಯೋತ್ಪಾದನೆ ಬಗ್ಗೆ ಚರ್ಚೆ

'ಮುಸ್ಲಿಮ್ ಸಮುದಾಯ'ದ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಭಯೋತ್ಪಾದನೆ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ತೀವ್ರಗಾಮಿತನದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಭಯೋತ್ಪಾದನೆ ಹಾಗೂ ಯುವಕರಲ್ಲಿ ಕಂಡುಬರುತ್ತಿರುವ ಭಯೋತ್ಪಾದಕ ಪ್ರವೃತ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಸ್ಲಿಮ್ ಸಮುದಾಯದ ನಾಯಕರ...

ಧನ ವಿನಿಯೋಗ ವಿಧೇಯಕ ಅಂಗೀಕಾರ

ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು. ಇದಕ್ಕೂ ಮುನ್ನ...

ರವಿ ಸಾವು ಪ್ರಕರಣ: ಸರ್ಕಾರದ ವಿರುದ್ಧ ತೀವ್ರಗೊಂಡ ವಿಪಕ್ಷಗಳ ಪ್ರತಿಭಟನೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ. ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ. ಡಿ.ಕೆ...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ದೆಹಲಿಯ ಮೋತಿ ಭಾಗ್ ಮೆಟ್ರೋ ನಿಲ್ದಾಣಕ್ಕೆ ಸರ್.ಎಂವಿ ಹೆಸರು ಮರು ನಾಮಕರಣ

'ದೆಹಲಿ'ಯ ಕೆಲವು ಮೆಟ್ರೊ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಸಂಬಂಧ ರಚಿಸಲಾಗಿದ್ದ ಸಮಿತಿತ ಸಲಹೆಯಂತೆಯೇ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ. ದೆಹಲಿಯಲ್ಲಿರುವ ಮೋತಿ ಬಾಗ್ ಮೆಟ್ರೋ ರೈಲು ನಿಲ್ದಾಣ ಇನ್ನು ಮುಂದೆ ಸರ್.ಎಂ. ವಿಶ್ವೇಶ್ವರಯ್ಯ...

ಮೆಕ್ಕೆ ಜೋಳ ಖರೀದಿ : ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ಒತ್ತಾಯ

ಕನಿಷ್ಠ ಬೆಂಬಲ ಯೋಜನೆಯಡಿ ಮೆಕ್ಕೆ ಜೋಳವನ್ನು ಖರೀದಿಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಕುರಿತಂತೆ ನಿಯಮ...

ಅತಿವೃಷ್ಟಿಯಿಂದ ಹಾನಿ ಹಿನ್ನಲೆ: ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited