ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಳೆದ 52 ದಿನಗಳಿಂದ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ ಪುಲ್ವಾಮ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಉಗ್ರ ಬುರ್ಹಾನ್ ವನಿ ಹತ್ಯೆ (ಜು.8)ಬಳಿಕ ಕಾಶ್ಮೀರದಲ್ಲಿ ಉಂಟಾಗಿದ್ದ ಹಿಂಸಾಚಾರ, ಗಲಭೆ ಹಿನ್ನಲೆಯಲ್ಲಿ...
ಪ್ರತ್ಯೇಕ ಖಲೀಸ್ತಾನ್ ನಾಯಕ, ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಫೋಸ್ಟರ್ ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ಸಿಖ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಮ್ಮು ಪಠಾಣ್ ಕೋಟ್ ಹೈವೇಯನ್ನು ಬಂದ್ ಮಾಡಿ ಪ್ರತಿಭಟನೆ ಮುಂದುವರಿಸಿದ್ದಾರೆ.
ಜೂ.4ರಂದು ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ನಡೆಸಿದ...
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...
'ಬೆಳಗಾವಿ'ಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಉಂಟಾಗಿದ್ದು ಜಿಲ್ಲೆಯಲ್ಲಿ ಸೆ.11ರಂದು ನಿಷೇಧಾಜ್ನೆ ಜಾರಿ ಮಾಡಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಬಡಿದಾಡಿಕೊಂಡಿದ್ದವು. ಈ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದರು ಇಂದು ಮಧ್ಯರಾತ್ರಿ 12 ಗಂಟೆಯವರೆಗೂ...
ಹೈಟೆಕ್ ಉದ್ಯಾನವನ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಪರೇಟರ್ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲಿಗರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಪಾರ್ಕ್ ಸುತ್ತ ನಿಷೇಧಾಜ್ನೆ ಜಾರಿಗೊಳಿಸಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ.
ನಾಗರಬಾವಿಯಲ್ಲಿನ ಚಂದ್ರಗಿರಿ ಪಾರ್ಕ್ ಉದ್ಘಾಟನಾ ಸಮಾರಂಭವನ್ನು ಆ.31ರಂದು ಕಾರ್ಪರೇಟರ್ ಉಮೇಶ್...