Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...

ಕಾವೇರಿ ಜಲ ವಿವಾದ: ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ನೀರು ಬಿಡಲು ಸುಪ್ರೀಂ ಆದೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ನ್ಯಾ.ದೀಪಕ್ ಮಿಶ್ರ ಮತ್ತು...

ಸಿಂಧೂ ನದಿ ಒಪ್ಪಂದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ. ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 18...

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ...

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ಜಲ ವಿವಾದಕ್ಕೆ ದೀರ್ಘಾವಧಿ ಪರಿಹಾರ ಹುಡುಕಲು ಆಗ್ರಹಿಸಿ ನಡೆಸುತ್ತಿರುವ ತಮಿಳುನಾಡು ಬಂದ್ ಗೆ ಮಿಶ್ರ...

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯರಾಜ್ಯಗಳಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ...

ಕಾವೇರಿ ಗಲಭೆ: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ

ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್‌ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ. ಕಾವೇರಿ ಗಲಭೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕ್ಷುಬ್ದ ವಾತಾವರಣ...

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...

ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ,...

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...

ಕಾವೇರಿ ವಿವಾದ ಪ್ರತಿಭಟನೆ: ಅಹಿತಕರ ಘಟನೆ ತಪ್ಪಿಸಲು ಲಘು ಲಾಠಿ ಪ್ರಹಾರ- ಪರಮೇಶ್ವರ್

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಕೆಆರ್‍ಎಸ್ ಡ್ಯಾಮ್ ಗೇಟ್‍ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಆಗಬಹುದಾದ ಅನಾಹುತನವನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ಪ್ರತಿಭಟನೆಗೆ ಮಣಿದ ಸರ್ಕಾರ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಬೇಕು ಎಂಬ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಳಿಗ್ಗೆ 9 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾರಂಭಿಸಿದೆ. ಅಣೆಕಟ್ಟೆಯ ಎಲ್ಲ ನಾಲೆಗಳಿಗೆ 4 ಸಾವಿರ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ 12 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ....

ನಾಳೆ ಕರ್ನಾಟಕ ಬಂದ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಲಭ್ಯತೆ ಬಿಟ್ಟರೆ ಇತರೆ ಸೇವೆಗಳು ಹಾಗೂ ಸಾರಿಗೆ ಸಂಪರ್ಕ ಬಹುತೇಕ ಸ್ತಬ್ಧಗೊಳ್ಳಲಿದೆ....

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ. ಕೆಆರ್ ಎಸ್ ನಿಂದ ನಿನ್ನೆ ರಾತ್ರಿ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದಿದ್ದು, ಕಬಿನಿ ಜಲಾಶಯದಿಂದ...

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಮಂಡ್ಯದಲ್ಲಿ ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ. ಸುಪ್ರೀಂ ತೀರ್ಪು ವಿರೋಧಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ...

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ...

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಸಧ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...

ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕರ್ನಾಟಕದಲ್ಲಿ ಎಂದಿನಂತೆ ನೈಋತ್ಯ ಮುಂಗಾರು ಇದೆ ಎಂಬ ಸಾಮಾನ್ಯ ಗ್ರಹಿಕೆಯನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಾಸ್ತವ ಚಿತ್ರಣವನ್ನು ಪರಿಚಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಸಾಲಿನ ಜೂನ್ 1 ರಿಂದ ಆಗಸ್ಟ್ 15 ರ ವರೆಗಿನ...

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಭಾರತ-ತಾಂಜಾನಿಯಾ ಮಹತ್ವದ ಒಪ್ಪಂದಗಳಿಗೆ ಸಹಿ

ತಾಂಜಾನಿಯಾದ ಝುಂಝಿಬಾರ್​ನಲ್ಲಿ ನೀರು ಸರಬರಾಜು ವ್ಯವಸ್ಥೆಗೆ 920 ಲಕ್ಷ ಡಾಲರ್ ನೆರವು ನೀಡಿಕೆ ಸೇರಿದಂತೆ ವಿವಿಧ ರಂಗಗಳಲ್ಲಿ ಪರಸ್ಪರ ಸಹಕರಿಸುವ ಐದು ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ತಾಂಜಾನಿಯಾ ಸಹಿಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ತಾಂಜಾನಿಯ ಅಧ್ಯಕ್ಷ ಜಾನ್ ಮಗುಫುಲಿ ಮಾತುಕತೆ...

ಮನ್ ಕೀ ಬಾತ್: ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ

ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ನೀರನ್ನು ವ್ಯರ್ಥ ಮಾಡದೆ, ನೀರನ್ನು...

ರಾಘವೇಶ್ವರ ಶ್ರೀ ಮಾರ್ಗದರ್ಶನದಲ್ಲಿ ಗೋಕರ್ಣದಲ್ಲಿ 'ಜೀವ ಜಲ' ಉಚಿತ ನೀರು ವಿತರಣಾ ಯೋಜನೆ ಆರಂಭ

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...

ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು

ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ಆಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ. ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದ್ದು, ಕೆರೆ ದಂಡೆಯಲ್ಲಿ ಲಕ್ಷಾಂತರ ಮೀನುಗಳು ತೇಲುತ್ತಿವೆ. ಇದರಿಂದಾಗಿ ಕೆರೆ ಸುತ್ತಮುತ್ತ ದುರ್ನಾತ ಬೀರುತ್ತಿದೆ. ಹತ್ತಾರು ಎಕರೆ ಪ್ರದೇಶದಲ್ಲಿ...

ರಾಜ್ಯಾದ್ಯಂತ ವ್ಯಾಪಕ ಮಳೆಃ ಬರದಿಂದ ಕಂಗಾಲಾದ ಜನರಲ್ಲಿ ಮೂಡಿದ ಆಶಾಭಾವನೆ

ಕಳೆದ 40 ವರ್ಷಗಳಲ್ಲೇ ಭೀಕರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಮತ್ತೆ ಮಳೆರಾಯನ ಆಗಮನವಾಗಿದ್ದು, ಬರದಿಂದ ಬಳಲಿ ಕಂಗಾಲಾಗಿದ್ದ ಜನತೆಯಲ್ಲಿ ಆಶಾಭಾವನೆ ಮೂಡಿದೆ. ರಾಜ್ಯಾದ್ಯಂತ ಬಹುತೇಕ ಭಾಗಗಳಲ್ಲಿ ಶನಿವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಸಂತಸ ಮೂಡಿಸಿದೆ. ಮಹಾರಾಷ್ಟ್ರದಿಂದ ಲಕ್ಷದ್ವೀಪದವರೆಗೆ ವಾಯುಭಾರ ಕುಸಿತದಿಂದ ಎಲ್ಲೆಡೆ ಮಳೆಯಾಗುತ್ತಿದೆ. ಈ...

ರಾಜ್ಯದಲ್ಲಿ ಬರಗಾಲ: ಬರ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ

ಹಲವು ವರ್ಷಗಳ ನಂತರ ಕರ್ನಾಟಕ ರಾಜ್ಯ ತೀವ್ರ ಬರಗಾಲದ ಪರಿಸ್ಥಿಯನ್ನು ಎದುರಿಸುತ್ತಿದೆ. 1986ರಲ್ಲಿ ದಾರುಣ ಕ್ಷಾಮವನ್ನು ಕಂಡ ರಾಜ್ಯ ಈ ವರ್ಷ ಮತ್ತೆ ಜಲಕ್ಷಾಮದಿಂದ ಬರವನ್ನು ಬರಮಾಡಿಕೊಂಡಿದೆ. ಗುರುವಾರ 9 ತಾಲೂಕುಗಳನ್ನು ರಾಜ್ಯ ಸರಕಾರ ಬರಗಾಲ ಪೀಡಿತ ಪ್ರದೇಶ ಪಟ್ಟಿಗೆ ಸೇರಿಸಿದೆ....

ಲಂಚ ಹಗರಣ: ಗೋವಾದ ಮಾಜಿ ಕಾಂಗ್ರೆಸ್ ಸಚಿವ ಚರ್ಚಿಲ್ ಅಲೆಮಾವೋ ಬಂಧನ

ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...

ಎರಡು ದಿನ ನಗರದ ಬಹುತೇಕ ಕಡೆ ನೀರಿಲ್ಲ

ನಗರಕ್ಕೆ ಕುಡಿಯುವ ನೀರು ಪೂರೈಸುವ ಕಾವೇರಿ 1,2 ಹಾಗೂ 3ನೇ ಹಂತದ ಯೋಜನೆಗಳ ನಿರ್ವಹಣೆಗಾಗಿ ಜಲಮಂಡಳಿಯು ನೀರಿನ ಪೂರೈಕೆ ಸ್ಥಗಿತಗೊಳಿಸಲಿದ್ದು, ಪರಿಣಾಮ ಏಪ್ರಿಲ್‌ 9 ಹಾಗೂ 10ರಂದು ನಗರದ ಬಹುತೇಕ ಕಡೆಗಳಲ್ಲಿ ನೀರು ಪೂರೈಕೆ ಇರುವುದಿಲ್ಲ. ಏಪ್ರಿಲ್‌ 9ರಂದು ಜಲಮಂಡಳಿ ಕಾವೇರಿ ವಿಭಾಗದಿಂದ...

ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಹೆಚ್.ಡಿ.ಕೆ ಆಗ್ರಹ

ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...

ಕುಡಿಯುವ ನೀರಿನ ಸಮಸ್ಯೆ: ಮಾ.28ಕ್ಕೆ ಕ್ಷೇತ್ರವಾರು ಸಭೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ದೆಹಲಿ: ಉಚಿತ ನೀರು ಮೀರಿ ಬಳಸುವವರಿಗೆ ಶೇ.10 ಶುಲ್ಕ ಹೇರಿಕೆ

ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರ ತಿಂಗಳಿಗೆ 20,000 ಲೀಟರ್ ಉಚಿತ ನೀರಿನ ಪ್ರಮಾಣವನ್ನು ಮೀರಿ ನೀರನ್ನು ಬಳಸುವ ಮನೆಗಳಿಗೆ ಶೇ.10ರಷ್ಟು ಶುಲ್ಕವನ್ನು ಏರಿಸಿದೆ. ದೆಹಲಿಗರಿಗೆ ಚುನಾವಣಾ ಭರವಸೆಯ ಪ್ರಕಾರ ಉಚಿತ ನೀರಿನ ಯೋಜನೆಯನ್ನು ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಉಪ ಮುಖ್ಯಮಂತ್ರಿ...

ದೆಹಲಿ ಜನತೆಗೆ ಆಪ್ ಸರ್ಕಾರದ ಭಾರೀ ಕೊಡುಗೆ: ವಿದ್ಯುತ್‌ ಶುಲ್ಕ ಕಡಿತ, ನೀರು ಉಚಿತ

ಅರವಿಂದ್ ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿದ್ಯುತ್‌ ಶುಲ್ಕ ಕಡಿತ ಹಾಗೂ ಉಚಿತ ಕುಡಿಯುವ ನೀರು ಪೂರೈಕೆ ಸಂಬಂಧ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ. 400 ಯೂನಿಟ್‌ ವರೆಗೆ ಬಳಸಲಾಗುವ ವಿದ್ಯುತ್ತಿಗೆ ಇನ್ನು ಮುಂದೆ ದೆಹಲಿ ಜನರು ಸದ್ಯ...

ಅಕ್ರಮ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಲು ನಗರಾಭಿವೃದ್ಧಿ ಸಚಿವರ ಸೂಚನೆ

ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್‌ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ...

ಕುಡಿಯುವ ನೀರಿನ ದುರ್ಬಳಕೆ ತಡೆಯಲು ಮೀಟರ್ ಅಳವಡಿಕೆ: ಹೆಚ್.ಕೆ.ಪಾಟೀಲ್

ಕುಡಿಯುವ ನೀರಿನ ದುರ್ಬಳಕೆಯನ್ನು ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಂಚಾಯತ್‌ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯ ಮೃತ್ಯಂಜಯ ಜಿನಗಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮನೆ ಸಂಪರ್ಕ...

ಎರಡು ತಿಂಗಳಲ್ಲಿ ನೀರಿನ ದರ ಪರಿಷ್ಕರಣೆ: ಪರಿಶೀಲನೆಗೆ ಸಮಿತಿ ರಚನೆ

ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...

ಕೃಷ್ಣಾನದಿ ನೀರು ಹಂಚಿಕೆ ವಿಚಾರ: ಚಂದ್ರಬಾಬು ನಾಯ್ಡುರಿಂದ ಸಿದ್ದರಾಮಯ್ಯ ಭೇಟಿ

ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...

ಮಳೆ ಹಾನಿಯಿಂದ ಬಿದ್ದ ಮನೆಗಳಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited