Untitled Document
Sign Up | Login    
Dynamic website and Portals
  

Related News

ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣಾ ಮತ ಎಣಿಕೆಃ ಕಾಂಗ್ರೆಸ್ ಮುನ್ನಡೆ

ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಯ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. 30 ಜಿಲ್ಲಾ ಪಂಚಾಯತಿಗಳ ಪೈಕಿ ಕಾಂಗ್ರೆಸ್ 11ರಲ್ಲಿ ಜಯದ ಹಾದಿಯಲ್ಲಿದ್ದರೆ,...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ಎರಡನೇ ಹಂತದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಃ ಕೆಲವೆಡೆ ಘರ್ಷಣೆ

ಎರಡನೇ ಹಂತದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಶನಿವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು ಗ್ರಾಮದಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರೆ, ಕೆಲವೆಡೆ ಘರ್ಷಣೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯ 5...

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟ

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ. ಬೀದರ್‌, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ವೆಚ್ಚ ನಿಗದಿ

ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 2ನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. 2 ಹಂತಗಳಲ್ಲಿ ಚುನಾವಣಾ ನಡೆಯಲಿದೆ. ಸೋಮವಾರ...

ಬಿ.ಎಸ್.ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ...

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಯಲ್ಲಿ ಕಾಂಗ್ರೆಸ್‌ ಗೆ ಜಯ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ...

ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬ

ಗ್ರಾಮಪಂಚಾಯ್ತಿ ಚುನಾವಣೆ ನಂತರವಾದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುತ್ತದೆ ಎಂದು ಕಾಯುತ್ತಿದ್ದ ಕಾಂಗ್ರೆಸ್‌ ನ ಹಿರಿಯ ಶಾಸಕರಿಗೆ ಮತ್ತೂಮ್ಮೆ ಹಿನ್ನಡೆಯಾಗಿದೆ. ಹೈಕಮಾಂಡ್‌ ತಾಕೀತು ಮಾಡದಿದ್ದರೆ ಈ ಬಾರಿಯೂ ಸಂಪುಟ ವಿಸ್ತರಣೆ/ಪುನಾರಚನೆ ಮುಂದಕ್ಕೆ ಹೋಗಲಿದೆ. ಬಿಬಿಎಂಪಿ ಚುನಾವಣೆ ನೆಪದಲ್ಲಿ ಈ...

ಗ್ರಾಮ ಪಂಚಾಯ್ತಿ ಚುನಾವಣೆ: 2ನೇ ಹಂತದಲ್ಲೂ ಶೇ.80ರಷ್ಟು ಮತದಾನ

ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ. ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...

ಗ್ರಾಮ ಪಂಚಾಯ್ತಿ ಚುನಾವಣೆ: 2ನೇ ಹಂತದ ಮತದಾನ ಆರಂಭ

ಗ್ರಾಮ ಪಂಚಾಯ್ತಿ ಚುನಾವಣೆಯ ಎರಡನೇ ಹಂತದ ಮತದಾನ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುತ್ತದೆ. ಪಂಚಾಯ್ತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸಿದ ಬಳಿಕ ನಡೆಯುತ್ತಿರುವ ಪ್ರಥಮ...

ಗ್ರಾಮ ಪಂಚಾಯಿತಿ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದೆ. 15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾನ ಸಂಜೆ 5ಗೆ ಮುಕ್ತಾಯವಾಗಲಿದೆ. ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 48621 ಅಭ್ಯರ್ಥಿಗಳಿದ್ದು,...

ಗ್ರಾಮ ಪಂಚಾಯ್ತಿ ಚುನಾವಣೆ: ಮೇ 29ರಂದು ಮೊದಲ ಹಂತದ ಮತದಾನ

ಗ್ರಾಮ ಪಂಚಾಯ್ತಿಯ ಮೊದಲ ಹಂತದ ಚುನಾವಣೆಯ ಮತದಾನ ಮೇ 29ರಂದು ರಾಜ್ಯದ 15 ಜಿಲ್ಲೆಗಳಲ್ಲಿ ನಡೆಯಲಿದೆ. ಕಡೆಗಳಿಗೆಯ ಬಿರುಸಿನ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ತೊಡಗಿದ್ದಾರೆ. ಪ್ರಚಾರದ ಭರಾಟೆ ನಿರ್ಣಾಯಕ ಘಟ್ಟ ತಲುಪಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ನಾನಾ...

ಗ್ರಾಮ ಪಂಚಾಯಿತಿ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಿದ್ಧಗೊಂಡಿದ್ದು, ಮೇ 29ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲಾಧಿಕಾರಿಗಳು ಸೋಮವಾರ ಅಧಿಸೂಚನೆ ಹೊರಡಿಸಲಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಮೇ 29ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು...

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸರ್ಕಾರಕ್ಕೆ ಹಿನ್ನಡೆ ಖಚಿತ: ಜಗದೀಶ್ ಶೆಟ್ಟರ್

'ಗ್ರಾಮ ಪಂಚಾಯ್ತಿ' ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತಿರುವ ಜನತೆ, ಈಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾವಣೆ ಮಾಡಲಿದ್ದಾರೆ, ಈ ಮೂಲಕ...

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯಕ್ಕೆ ಸುಪ್ರೀಂ ಸೂಚನೆ

'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...

ಗ್ರಾಮ ಪಂಚಾಯತ್ ಚುನಾವಣೆ 2 ದಿನದಲ್ಲಿ ಘೋಷಣೆ ಸಾಧ್ಯತೆ

ಗ್ರಾಮ ಪಂಚಾಯಿತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ. ಬಹುತೇಕ ಮೇ 26 ಅಥವಾ 27 ಇಲ್ಲವೇ ಜೂನ್‌ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು...

ಗ್ರಾಮ ಪಂಚಾಯ್ತಿ ಚುನಾವಣಾ ದಿನಾಂಕ ಘೋಷಣೆ

'ಗ್ರಾಮ ಪಂಚಾಯ್ತಿ ಚುನಾವಣೆ'ಗೆ ದಿನಾಂಕ ನಿಗದಿಯಾಗಿದ್ದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ.5ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ, ರಾಜ್ಯದ ಒಟ್ಟು 5844 ಗ್ರಾಮ ಪಂಚಾಯ್ತಿಗಳಿಗೆ ಮೇ 29 ಮತ್ತು ಜೂನ್ 2ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ...

ಗ್ರಾಮ ಪಂಚಾಯತ್ ಚುನಾವಣೆ: ಸಿಎಂ ವಿದೇಶ ಪ್ರವಾಸ ರದ್ದು

ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ನಿಗದಿಯಾಗಿದ್ದ ಫ್ರಾನ್ಸ್, ಸ್ವೀಡನ್, ಜರ್ಮನ್ ಪ್ರವಾಸಕ್ಕೆ ತೆರಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ, ಇತರೆ ಕಾರ್ಯಕ್ರಮಗಳ ಒತ್ತಡದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸಕ್ಕೆ ತೆರಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಸಲುವಾಗಿ...

ಗ್ರಾಮ ಪಂಚಾಯತ್ ಚುನಾವಣೆ: ಪುರುಷರು, ಮಹಿಳೆಯರಿಗೆ ಸಮಾನ ಅವಕಾಶ- ಸಿಎಂ

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...

ಮತದಾನ ಕಡ್ಡಾಯ ಮಸೂದೆಗೆ ರಾಜ್ಯಪಾಲರ ಅಂಕಿತ

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್‌ ರಾಜ್‌ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ. ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ...

ಸರ್ಪಂಚ್ ಪತಿ ಪದ್ಧತಿ ಕೊನೆಯಾಗಬೇಕಿದೆ: ಪ್ರಧಾನಿ ನರೇಂದ್ರ ಮೋದಿ

'ಸರ್ಪಂಚ್-ಪತಿ' ಪದ್ಧತಿಗಳು ಕೊನೆಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಗ್ರಾಮೀಣ ಭಾಗದಲ್ಲಿ ಬಡತನ ನಿರ್ಮೂಲನೆಯಾಗಬೇಕಾದರೆ ಚುನಾವಣೆಯ ಮೂಲಕ ಆಯ್ಕೆಯಾಗಿರುವ ಗ್ರಾಮಪಂಚಾಯ್ತಿಗಳ ಸದಸ್ಯರೇ ಆಡಳಿತ ನಡೆಸಬೇಕಿದೆ....

ಸಂಪುಟ ವಿಸ್ತರಣೆಗೆ ಇನ್ನಷ್ಟು ಕಾಲಾವಕಾಶ: ಹೈಕಮಾಂಡ್ ಜತೆ ಸಿಎಂ ಚರ್ಚೆ

ಗ್ರಾಮ ಪಂಚಾಯತ್‌ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಮಾಡುವುದು ಬೇಡ ಎಂಬ ಅಭಿಪ್ರಾಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‌ ಗೂ ಈ ವಿಚಾರ ಮನವರಿಕೆ ಮಾಡಿಕೊಟ್ಟು ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವೊಲಿಸುವ...

ಪಂಚಾಯ್ತಿ ಚುನಾವಣೆಗೆ ಮತದಾನ ಕಡ್ಡಾಯ ಸಾಧ್ಯತೆ: ಮಸೂದೆ ಮಂಡನೆ

ಪಂಚಾಯತ್‌ ವ್ಯವಸ್ಥೆಯ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ. ಅಲ್ಲದೆ, ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ...

ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್ ರಚನೆ: ಸಂಪುಟ ಸಮ್ಮತಿ

ನಂಜಯ್ಯನಮಠ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್‍ಗಳ ರಚನೆಗೆ ರಾಜ್ಯ ಸಚಿವ ಸಂಪುಟ ಸಮ್ಮಿತಿ ನೀಡಿದೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ ಪಶುಸಂಗೋಪನೆ ಮತ್ತು ಮುಜರಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ಶುಕ್ರವಾರ ಪತ್ರಿಕಾ...

ಸಾಂಪ್ರದಾಯಿಕ ನ್ಯಾಯಾಲಯಗಳು ಅಸಾಂವಿಧಾನಿಕ: ಕಾನೂನು ಸಚಿವ ಸದಾನಂದ ಗೌಡ

ಖಾಪ್ ಪಂಚಾಯತ್ ಗಳೂ ಸೇರಿದಂತೆ ಯಾವುದೇ ಸಾಂಪ್ರದಾಯಿಕ ನ್ಯಾಯಾಲಯಗಳು ಅಸಾಂವಿಧಾನಿಕ ಎಂದು ಕೇಂದ್ರ ಕಾನುನು ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಸಂಸತ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದ ಗೌಡ, ಸಾಂಪ್ರದಾಯಿಕ ನ್ಯಾಯಾಲಯಗಳು ದೇಶದ ಕಾನೂನಿಗೆ ವಿರುದ್ಧವಾಗಿದ್ದು ಇಂತಹ ನ್ಯಾಯಾಲಯಗಳ...

ಜೀನ್ಸ್,ಮೊಬೈಲ್ ಆಯ್ತು, ಈಗ ಸಾಮಾಜಿಕ ಜಾಲತಾಣ ಬಳಕೆಗೂ ಉತ್ತರ ಪ್ರದೇಶ ಪಂಚಾಯತ್ ಕೊಕ್ಕೆ

ಹುಡುಗಿಯರು ಜೀನ್ಸ್ ಹಾಗೂ ಮೊಬೈಲ್ ಬಳಸುವುದಕ್ಕೆ ನಿಷೇಧ ಹೇರಿದ್ದ ಜಾಟ್ ಜನಾಂಗದ ಖಾಪ್ ಪಂಚಾಯಿತಿ, ಈಗ ಸಾಮಾಜಿಕ ಜಾಲತಾಣಗಳಿಂದಲೂ ದೂರವಿರುವಂತೆ ಮಹಿಳೆಯರು/ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದೆ. ಮುಜಾಫರ್ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಜಾಟ್ ಸಮುದಾಯದವರು ತಮ್ಮ ಹೆಣ್ಣುಮಕ್ಕಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳನ್ನು ತಡೆಗಟ್ಟಲು...

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ವರದಿ ಸಲ್ಲಿಕೆ

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...

ಗ್ರಾಮೀಣಾಭಿವೃದ್ಧಿ ಇಲಾಖೆಯ 2485 ದಿನಗೂಲಿ ನೌಕರರು ಖಾಯಂ: ಎಚ್.ಕೆ. ಪಾಟೀಲ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...

439 ಹೊಸ ಗ್ರಾ.ಪಂ.ಗಳ ರಚನೆ: ಪುನರ್‌ ವಿಂಗಡಣಾ ಸಮಿತಿ ವರದಿ

ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....

440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಶಿಫಾರಸು

ಗ್ರಾಮ ಪಂಚಾಯತಿಗಳ ಪುನರ್ವಿಂಗಡಣಾ ಸಮಿತಿ ವರದಿ ಸಿದ್ಧಗೊಂಡಿದ್ದು, 440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ. ಎಸ್.ಐ.ನಂಜಯ್ಯಮಠ ಅವರ ನೇತೃತ್ವದ ಸಮಿತಿ ವರದಿ ಸಿದ್ಧಪಡಿಸಿದು, ಅ.28ರ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ...

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧ

ಜೆಡಿಎಸ್ ಕೋರ್ ಕಮಿಟಿ ಪಟ್ಟಿ ಬಹುತೇಕ ಸಿದ್ಧಗೊಂಡಿದ್ದು, 11-13 ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅ.15ರ ವೇಳೆಗೆ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಮಾಜಿ ಸಚಿವ ಎಂ.ಸಿ.ನಾಣಯ್ಯ, ಬಸವರಾಜ್ ಹೊರಟ್ಟಿ, ಚೆಲುವರಾಯಸ್ವಾಮಿ, ಬಂಡೆಪ್ಪ ಕಾಶಂಪುರ, ಲೀಲಾದೇವಿ ಆರ್.ಪ್ರಸಾದ್, ಶಾಸಕರಾದ ವೈ.ಎಸ್.ವಿ.ದತ್ತಾ, ಡಿ.ನಾಗರಾಜಯ್ಯ, ರಾಜ್ಯಸಭಾ...

ಗಾಂಧಿ ಜಯಂತಿಯಂದು ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...

ತಾಲೂಕು ಪಂಚಾಯತ್ ಗೆ ಚುನಾವಣೆ ಬೇಡ: ಸಿದ್ದರಾಮಯ್ಯ

ತಾಲೂಕು ಪಂಚಾಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪಂಚಾಯತ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದರೆ ಸಾಕು. ತಾಲೂಕು ಪಂಚಯತ್ ಗೆ ಚುನಾವಣೆ ನಡೆಸುವ...

ಲವ್ ಜಿಹಾದ್ ಪ್ರತಿಭಟಿಸಲು ಯು.ಪಿ ಮಹಾಪಂಚಾಯತ್ ಗೆ ಸಂಗೀತ್ ಸೋಮ್ ಕರೆ

'ಉತ್ತರ ಪ್ರದೇಶ'ದಲ್ಲಿ ಲೋಕಸಭಾ, ವಿಧಾನಸಭಾ ಉಪಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಲವ್ ಜಿಹಾದ್ ವಿಷಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಕಾಂಗ್ರೆಸ್, ಎಸ್.ಪಿ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಪ್ರದೇಶ ಶಾಸಕ ಸಂಗೀತ್ ಸೋಮ್ ತಾನು ಪ್ರತಿನಿಧಿಸುತ್ತಿರುವ ಮೀರತ್ ವಿಧಾನಸಭಾ ಕ್ಷೇತ್ರದಲ್ಲಿ ಲವ್...

ವಸತಿ ಯೋಜನೆಗಳ ಸಾಲ ಮನ್ನಾ: ಸಂಪುಟ ಸಭೆಯಲ್ಲಿ ನಿರ್ಧಾರ

ಆಶ್ರಯ ಮನೆ ವಸತಿ ಯೋಜನೆಯ ಸಾಲ ಮನ್ನಾ ಮಾಡಿ ರಾಜ್ಯ ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿವಿಧ ವಸತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited