Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ ಪ್ರತಿಭಟನೆ: ಅಹಿತಕರ ಘಟನೆ ತಪ್ಪಿಸಲು ಲಘು ಲಾಠಿ ಪ್ರಹಾರ- ಪರಮೇಶ್ವರ್

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಕೆಆರ್‍ಎಸ್ ಡ್ಯಾಮ್ ಗೇಟ್‍ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಆಗಬಹುದಾದ ಅನಾಹುತನವನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು...

ವಿಧಾನ ಪರಿಷತ್ ಸಭಾನಾಯಕರಾಗಿ ಡಾ.ಜಿ.ಪರಮೇಶ್ವರ್ ಮತ್ತು ಮುಖ್ಯ ಸಚೇತಕರಾಗಿ ಐವಾನ್ ಡಿಸೋಜ ನೇಮಕ

ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ಹಾಗೂ ಸರ್ಕಾರದ ಮುಖ್ಯ ಸಚೇತಕರಾಗಿ ಐವಾನ್ ಡಿಸೋಜ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಧನಾ ಪರಿಷತ್ತಿನ ಸಭಾಧ್ಯಕ್ಷರಾದ ಡಿ.ಹೆಚ್. ಶಂಕರ ಮೂರ್ತಿ ಪ್ರಕಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು ಮೇಲ್ವನೆಯಲ್ಲಿ ಬಹಳ ವಿಚಾರಗಳು...

ಪೊಲೀಸರು ಪ್ರತಿಭಟನೆ ನಡೆಸುತ್ತಿಲ್ಲ: ಜಿ.ಪರಮೇಶ್ವರ್

ಜೂನ್ ೪ರಂದು ಪೊಲೀಸರು ಕೆಲಸಕ್ಕೆ ಗೈರುಹಾಜರಾಗಿ ಪ್ರತಿಭಟನೆ ನಡೆಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ತಮಗೆ ಬಂದಿರುವ ಮಾಹಿತಿ ಪ್ರಕಾರ ಜೂನ್ ೪ರಂದು ಪೊಲೀಸರು...

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಗೆ ಚಾಲನೆ

ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಹಾವೇರಿಗೆ ರಾಹುಲ್ ಭೇಟಿ: ರೈತ ಕುಟುಂಬಕ್ಕೆ ಸಾಂತ್ವನ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೈದೂರಿನ ಮೃತ ರೈತ ಅಶೋಕ್ ಮಡಿವಾಳ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಕೆಪಿಸಿಸಿ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ರಾಹುಲ್ ಗಾಂಧಿ...

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...

ರೈತರ ಆತ್ಮಹತ್ಯೆ : ಹಾವೇರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ

ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಉಸ್ತುವಾರಿ ಚೆಲ್ಲಕುಮಾರ್‌ ಅವರು ಇತರ ರಾಜ್ಯಗಳಂತೆ...

ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ: ಸಿಎಂ, ಪರಮೇಶ್ವರ್ ದೆಹಲಿಗೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಹಾಗೂ ನಿಗಮ ಮಂಡಳಿಗಳಿಗೆ ಬಾಕಿ ಉಳಿದ ಬೆರಳೆಣಿಕೆಯಷ್ಟುಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ. ಮೂಲಗಳ...

ಕೆಪಿಸಿಸಿಗೆ ಶೀಘ್ರದಲ್ಲಿ ಹೊಸ ಅಧ್ಯಕ್ಷರ ನೇಮಕ

ಕಾಂಗ್ರೆಸ್ ನಲ್ಲಿ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದು, ಕೆಲ ತಿಂಗಳಲ್ಲಿ ಕೆಪಿಸಿಸಿ ಪುನಾರಚನೆಯಾಗಲಿದ್ದು, ಹೊಸ ಸಾರಥಿ ನೇಮಕವಾಗಲಿದ್ದಾರೆ. 5 ವರ್ಷದ ಅಧಿಕಾರವಧಿ ಪೂರೈಸಿರುವ ಡಾ.ಜಿ.ಪರಮೇಶ್ವರ್ ಸ್ಥಾನಕ್ಕೆ ನೇಮಕವಾಗಲಿರುವ ಹೊಸ ಅಧ್ಯಕ್ಷರು ಯಾರು ಎಂಬ ಚರ್ಚೆ ಆಡಳಿತ ಪಕ್ಷದಲ್ಲಿ ಮತ್ತೆ ಆರಂಭವಾಗಿದೆ. 2018 ರ ಚುನಾವಣೆಪೂರ್ವದಲ್ಲಿ...

ಒಂದು ವರ್ಷದ ಪ್ರಧಾನಿ ಸಾಧನೆ ಶೂನ್ಯ: ಪರಮೇಶ್ವರ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ 26ಕ್ಕೆ ಮೋದಿ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ...

ಪರಮೇಶ್ವರ್ ಡಿಸಿಎಂ ಆಗದಿದ್ದರೆ ರಾಷ್ಟ್ರದ ಭವಿಷ್ಯ ಮಂಕಾಗುತ್ತದೆ: ರಾಜಶೇಖರನ್

'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ. ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...

ಸಿಎಂ ಸ್ಥಾನಕ್ಕೆ ಅದರದ್ದೇ ಆದ ಘನತೆಯಿದೆ: ಹೆಚ್.ಸಿ.ಮಹದೇವಪ್ಪ

ಮುಖ್ಯಮಂತ್ರಿ ಸ್ಥಾನಕ್ಕೆ ಅದರದೇ ಆದ ಘನತೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಂತೆಯಲ್ಲಿ ಬದನೆಕಾಯಿ ಕೊಂಡಂತಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಫಾಸಿಸ್ಟ್ ಮತ್ತು ಕ್ಯಾಸ್ಟಿಸ್ಟ್‌ ಗಳ ಕುತಂತ್ರದಿಂದ ದಲಿತ...

ಪರಮೇಶ್ವರ್ ಗೆ ಸಿ.ಎಂ ಹುದ್ದೆಗೆ ಒತ್ತಾಯ: ಮಠಾಧೀಶರ ಬೆಂಬಲ

ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದೆಡೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂದು ದಲಿತ ಸಂಘಟನೆಗಳು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂಬ ಕೂಗು ಮಠಾಧೀಶರಿಂದಲೂ ವ್ಯಕ್ತವಾಗಿದೆ. ಬುಧವಾರ ತುಮಕೂರಿನ ತಿಪಟೂರಿನಲ್ಲಿರುವ ಷಡಕ್ಷರಿ ಮಠದ...

ಸರ್ಕಾರದ ವಿರುದ್ಧ ಹೈಕಮಾಂಡ್‌ ಗೆ ಪರಮೇಶ್ವರ್ ದೂರು

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್‌ ಗೆ ದೂರು ನೀಡಿದ್ದಾರೆ. ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...

ನನಗೂ ಸಿಎಂ ಆಗುವ ಅರ್ಹತೆಯಿದೆ: ಪರಮೇಶ್ವರ್

ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ದಲಿತರಿಗೆಸಿ.ಎಂ ಸ್ಥಾನ ನೀಡದ ಕಾಂಗ್ರೆಸ್ ಅಧಿಕಾರದಲ್ಲೇಕಿರಬೇಕು: ವೆಂಕಟೇಶ್ ಸ್ವಾಮಿ

'ದಲಿತ'ರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಷಯ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ದಲಿತರನ್ನು ಮುಖ್ಯಮಂತ್ರಿ ಮಾಡಲು ದಲಿತ ಸಂಘಟನೆಗಳು ಪಣತೊಟ್ಟಿವೆ. ಈ ಬಗ್ಗೆ ಖಾಸಗಿ ಹೊಟೇಲ್ ನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ...

ಯುವಕರು ನನ್ನೊಂದಿಗಿದ್ದಾರೆ, ಜೆಡಿಎಸ್ ನಾಶವಾಗಲು ಬಿಡುವುದಿಲ್ಲ: ಹೆಚ್.ಡಿ ದೇವೇಗೌಡ

'ಜೆಡಿಎಸ್' ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ನನಗಾಗಿ ಪ್ರಾಣಕೊಡುವವರಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. ಫೆ.16ರಂದು ಹೆಣ್ಣೂರಿನಲ್ಲಿರುವ ಜೆಡಿಎಸ್ ತಾತ್ಕಾಲಿಕ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಹೆಚ್.ಡಿ ದೇವೇಗೌಡ, ಪಕ್ಷ ಸಂಘಟನೆಯೇ ತಮ್ಮ ಮೊದಲ ಆದ್ಯತೆ, ಆನಂತರದ...

ನಿಗದಿತ ಅವಧಿಯಲ್ಲಿ ಜೆಡಿಎಸ್ ಕಚೇರಿ ಬಿಟ್ಟುಕೊಡಿ: ಪರಮೇಶ್ವರ್ ಮನವಿ

ನ್ಯಾಯಾಲಯದ ಆದೇಶದಂತೆ ನಿಗದಿತ ಅವಧಿಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಕಚೇರಿಯನ್ನು ಬಿಟ್ಟುಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.31ಕ್ಕೆ ಜೆಡಿಎಸ್ ಕಚೇರಿಯನ್ನು ತೆರವು ಮಾಡಿ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕು ಎಂದು ನ್ಯಾಯಾಲಯದ ಆದೇಶವಿದೆ. ಅದರಂತೆ...

ಕೆಪಿಸಿಸಿಗೆ ಅಪ್ಪಾಜಿ ನಾಡಗೌಡ ಅಧ್ಯಕ್ಷರಾಗುವ ಸಾಧ್ಯತೆ

ಕೆಲದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್‌ನ ಆಂತರಿಕ ವಲಯದಲ್ಲಿ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರನ್ನು ಕರೆ ತರುವ ಪ್ರಯತ್ನ ಆರಂಭವಾಗಿದೆ. ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಫೆಬ್ರವರಿ ಆರಂಭದಲ್ಲಿ ಪ್ರದೇಶ ಕಾಂಗ್ರೆಸ್‌ಗೆ...

ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪ್ರಕಟ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...

ನಿಗಮ ಮಂಡಳಿ ಪಟ್ಟಿಯನ್ನು ಸೋನಿಯಾ ಗಾಂಧಿಗೆ ಸಲ್ಲಿಸುವಂತೆ ದಿಗ್ವಿಜಯ್ ತಾಕೀತು

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ. ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...

ಐವಾನ್ ಡಿಸೋಜಾ ವಿರುದ್ಧ ಶಿಸ್ತುಕ್ರಮ: ಪರಮೇಶ್ವರ್

ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ತಿರುಗೇಟು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿಯಿಂದ ಡಿಸೋಜಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ. ಐವಾನ್ ಡಿಸೋಜಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿಸೋಜಾಗೆ ಕೆಪಿಸಿಸಿಯಿಂದ ನೊಟಿಸ್ ಜಾರಿ ಮಾಡಲಾ್ಗುವುದು...

ಪಕ್ಷ ಸಂಘಟನೆಗಾಗಿ ರಾಹುಲ್ ಸಭೆ: ಸಿಎಂ, ಪರಮೇಶ್ವರ್ ದೆಹಲಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ರಾಹುಲ್ ಗಾಂಧಿ ನಮ್ಮ ಮುಂದಿನ ಪ್ರಧಾನಿ: ಸಚಿವ ಆಂಜನೇಯ ಭವಿಷ್ಯ

ದೇಶದ ಜನ ನರೇಂದ್ರ ಮೋದಿ ಅವರ ಭ್ರಮೆಯಲ್ಲಿ ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಆದರೆ ಮೋದಿ ನಿಜಸ್ವರೂಪ ಬಯಲಾಗಲಿದ್ದು ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿಯೇ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ...

ವರಿಷ್ಠರ ವಿರುದ್ಧ ಹೇಳಿಕೆ ನೀಡದಂತೆ ಪರಮೇಶ್ವರ್ ಸೂಚನೆ

ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ...

ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...

ನಿಗಮ ಮಂಡಳಿ ನೇಮಕಕ್ಕೆ ದಿಗ್ವಿಜಯ್ ಸಿಂಗ್ ಗಡುವು

ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು. ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ಪರಮೇಶ್ವರ್ ಗೆ ಸಂಪುಟದಲ್ಲಿ ಸ್ಥಾನ: ದಿಗ್ವಿಜಯ್ ಸಿಂಗ್

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿಲ್ಲ: ಡಾ.ಪರಮೇಶ್ವರ್

ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮ

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...

ನಿಗಮ ಮಂಡಳಿ ನೇಮಕಾತಿ: 10ದಿನಗಳಲ್ಲಿ ಫಲಿತಾಂಶ ಸಾಧ್ಯತೆ

ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...

ನಿಗಮ ಮಂಡಳಿ ನೇಮಕಾತಿ ವಿಚಾರ: ಕಾರ್ಯಕಾರಿ ಸಭೆ ಆರಂಭ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ

ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ...

ನಿಗಮ ಮಂಡಳಿ ನೇಮಕಾತಿ ವಿಚಾರ: ಮಾತುಕತೆ ವಿಫಲ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ. ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು. ನಿಗಮ ಮಂಡಳಿಗಳಿಗೆ ಮೊದಲ...

ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...

ಸಂಪುಟ ವಿಸ್ತರಣೆಗೆ ಆಸಕ್ತಿಯಿದೆ: ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆಗೆ ತಮಗೆ ಆಸಕ್ತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತಣೆ ಕುರಿತು ತಮಗೆ ಆಸಕ್ತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟ ಪುನರಚನೆ ಬಗ್ಗೆ ಅಭಿಪ್ರಾಯಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ...

ಸಂಪುಟದಲ್ಲಿ ಸ್ಥಾನ ನೀಡುವ ವಿಶ್ವಾಸವಿದೆ: ಕೋಳಿವಾಡ

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸಂಪುಟ...

ಡಿಸಿಎಂ ಹುದ್ದೆ ಸೃಷ್ಠಿಸಲ್ಲ 'ಪರಮೇಶ್ವರ'!

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವನ್ನಾದರೂ ನೀಡಿ: ಪರಮೇಶ್ವರ್

ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ: ಸಿದ್ದರಾಮಯ್ಯ

'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಸಚಿವ ಸ್ಥಾನಕ್ಕಾಗಿ ಜಾತಿ ಲಾಬಿ ಆರಂಭ

ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ. ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕೆ ಮಾತ್ರ ಸೀಮಿತ: ಪರಮೇಶ್ವರ್

ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕಷ್ಟೇ ಸೀಮಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆ.21ರಂದು ನಡೆಯಲಿರುವ ಮೂರುಕ್ಷೇತ್ರಗಳ ಉಪಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕಾರಿಪುರದಲ್ಲಿ ಜೆಡಿಎಸ್, ಬಿಜೆಪಿಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited