Untitled Document
Sign Up | Login    
Dynamic website and Portals
  

Related News

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಗಾಂಧಿ ಸ್ಮಾರರಕಕ್ಕೆ ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪ ನಮನ

ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ...

ಜಿಎಸ್ ಟಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ. ಈಗಾಗಲೇ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ ಮಹತ್ವದ ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಲಾಗಿತ್ತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಐತಿಹಾಸಿಕ...

ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ: ರಾಷ್ಟ್ರಪತಿ

ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಭವನದ ಬಳಿ ಇರುವ ಡಾ.ರಾಜೇಂದ್ರ ಪ್ರಸಾದ್ ಸರ್ವೋದಯ ವಿದ್ಯಾಲಯದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ. ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...

ಶಿಕ್ಷಕರ ದಿನದಂದು ಮಕ್ಕಳಿಗೆ ಪಾಠ ಹೇಳಿಕೊಡಲಿರುವ ರಾಷ್ಟ್ರಪತಿ ಪ್ರಣಬ್

ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ. ರಾಷ್ಟ್ರಪತಿಯವರಿಂದ ಪಾಠ ಹೇಳಿಸುವ ಈ ಯೋಜನೆ ಆರಂಭವಾದದ್ದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್...

ಪ್ರವಾಸಿ ಭಾರತೀಯ ದಿವಸ್: ರಾಷ್ಟ್ರಪತಿ, ಪ್ರಧಾನಿ ಮೋದಿ ಆಗಮನ

ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಸಹಯೋಗದಲ್ಲಿ 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್‌ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜನವರಿ 7ರಿಂದ 9ರವರೆಗೆ ತುಮಕೂರು ರಸ್ತೆಯಲ್ಲಿರುವ...

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: ಪ್ರಧಾನಿ, ರಾಷ್ಟ್ರಪತಿ ಖಂಡನೆ

ಫ್ರಾನ್ಸ್​ನ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಬಲವಾಗಿ ಖಂಡಿಸಿದ್ದಾರೆ, ಫ್ರೆಂಚ್ ಸಹೋದರ-ಸಹೋದರಿಯರ ಜತೆಗೆ ಭಾರತವಿದೆ ಎಂಬ ಭರವಸೆ ನೀಡಿದ್ದಾರೆ. ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆ ಬ್ಯಾಸ್ಟೀಲ್ ಡೇ ಆಚರಣೆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಯಿಂದ 80ಕ್ಕೂ ಅಧಿಕ...

ಭಾರತ-ಚೀನಾ ವಿವಾದಗಳನ್ನು ಕೌಶಲ ಹಾಗೂ ವಿವೇಚನೆಯಿಂದ ಬಗೆಹರಿಸಿಕೊಳ್ಳಬೇಕು: ಪ್ರಣಬ್ ಮುಖರ್ಜಿ

ಭಾರತ-ಚೀನಾ ನಡುವಿನ ಬಾಂಧವ್ಯ ವೃದ್ಧಿಗಾಗಿ 8 ಸೂತ್ರಗಳನ್ನು ಪಟ್ಟಿ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಭಯ ದೇಶಗಳ ಗಡಿ ವಿವಾದ ಸೇರಿದಂತೆ ಹಲವು ಸವಾಲುಗಳನ್ನು ರಾಜಕೀಯ ಕೌಶಲ ಹಾಗೂ ವಿವೇಚನೆಯಿಂದ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಬೀಜಿಂಗ್ ನ ಪೆಕಿಂಗ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ...

ನೀಟ್ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆ ಹೊರಡಿಸುವ ಅಗತ್ಯತೆ ಬಗ್ಗೆ ವಿವರಿಸಲು ಕೇಂದ್ರ ಆರೋಗ್ಯ...

ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪದ್ಮ ಪ್ರಶಸ್ತಿ ಪ್ರದಾನ

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ವಿಜೇತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿಯವರು 5 ಪದ್ಮ ವಿಭೂಷಣ, 8 ಪದ್ಮ ಭೂಷಣ್ ಮತ್ತು 43 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪದ್ಮ ವಿಭೂಷಣಃ *...

ನಿಜವಾದ ಕಲ್ಮಶ ಇರುವುದು ದಾರಿಗಳಲ್ಲಿ ಅಲ್ಲ ನಮ್ಮ ಮನಸ್ಸಿನಲ್ಲಿಃ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಅಸಹಿಷ್ಣುತೆಯ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿರುವ ಮಧ್ಯೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಭೇದ ಆಲೋಚನೆಗಳಿಂದ ಭಾರತದ ಶುದ್ಧೀಕರಣ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ನಿಜವಾದ ಕಲ್ಮಶ ಇರುವುದು ದಾರಿಗಳಲ್ಲಿ ಅಲ್ಲ ನಮ್ಮ ಮನಸ್ಸಿನಲ್ಲಿ ಎಂದು ಹೇಳಿದ್ದಾರೆ. ಅಹಮದಾಬದ್ ನ ಮಹಾತ್ಮಾ ಗಾಂಧಿ...

ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ಭೇಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಯಾಣ

ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ದೇಶಗಳಿಗೆ ಆರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ನವದೆಹಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖಂಡರಾಗಿದ್ದಾರೆ. ಪಯಣಕ್ಕೆ ಮುನ್ನ ಔಪಚಾರಿಕ...

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪತ್ನಿ ಸುವ್ರಾ ಮುಖರ್ಜಿ ನಿಧನ

ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ಮುಖರ್ಜಿ ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದ ಸುವ್ರಾ ಮುಖರ್ಜಿ ಅವರನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿತ್ತು. ತುಂಬಾ ದುಃಖದಿಂದ ಈ ಮಾಹಿತಿ...

ಬೆಂಗಳೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮನ : ಎರಡು ದಿನ ನಿಷೇಧಾಜ್ಞೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ರಾತ್ರಿ 12...

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ...

ಭೂ ಸ್ವಾಧೀನ ವಿಧೇಯಕಕ್ಕೆ ಮೂರನೇ ಬಾರಿ ರಾಷ್ಚ್ರಪತಿ ಅಂಕಿತ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ...

ಬೋಫೋರ್ಸ್ ಹಗರಣ ಎಂದು ಕೋರ್ಟ್ ನಲ್ಲಿ ಸಾಬೀತಾಗಿಲ್ಲ: ಪ್ರಣಬ್ ಮುಖರ್ಜಿ

ಭಾರತದ ಯಾವುದೇ ನ್ಯಾಯಾಲಯದಲ್ಲಿ ಬೊಫೋರ್ಸ್‌ ಪ್ರಕರಣ ಈ ತನಕವೂ ಒಂದು ಹಗರಣವೆಂದು ಸಾಬೀತಾಗಿಲ್ಲ; ಬೊಫೋರ್ಸ್‌ ಹಗರಣವು ಕೇವಲ ಮಾಧ್ಯಮ ವಿಚಾರಣೆಯ ಫ‌ಲಶ್ರುತಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವೀಡನ್‌ ಪತ್ರಿಕೆ ಡೇಜನ್ಸ್‌ ನ್ಹೆಟರ್‌ ಗೆ ನೀಡಿದ ಸಂದರ್ಶನದಲ್ಲಿ, ರಾಷ್ಟ್ರಪತಿ ಮುಖರ್ಜಿ ಅವರಿಗೆ...

ಮುಖ್ಯಕಾರ್ಯದರ್ಶಿ ನೇಮಕ ವಿವಾದ: ರಾಷ್ಟ್ರಪತಿ ಭೇಟಿಯಾದ ಕೇಜ್ರಿವಾಲ್

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...

ಪ್ರಧಾನಿ ಮೋದಿ ಒಡನಾಟದ ಸವಿನೆನಪುಗಳನ್ನು ಮೆಲಕು ಹಾಕಿದ ಒಬಾಮ

ಕಳೆದ ಜನವರಿಯಲ್ಲಿ ತಾವು ಭಾರತಕ್ಕೆ ಭೇಟಿ ನೀಡಿದ್ದು, ಆ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಗೆಳೆತನದ ಒಡನಾಟಗಳ ಸವಿನೆನಪುಗಳನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತೊಮ್ಮೆ ಮೆಲುಕು ಹಾಕಿ ಸಂತಸಪಟ್ಟರು. ಭಾರತದ ನೂತನ ರಾಯಭಾರಿಯಾಗಿರುವ ಅರುಣ್ ಸಿಂಗ್ ಅವರು ಒಬಾಮಾ ಅವರ...

ಭಯೋತ್ಪಾದನೆ ವಿರುದ್ಧ ಜಂಟಿ ಹೋರಾಟಕ್ಕೆ ಅಫ್ಘಾನಿಸ್ಥಾನ-ಭಾರತ ನಿರ್ಧಾರ

'ಅಫ್ಘಾನಿಸ್ಥಾನ' ಅಧ್ಯಕ್ಷ ಅಶ್ರಫ್ ಘನಿ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರೊಂದಿಗೆ ಅಪ್ಘಾನಿಸ್ಥಾನ ಅಧ್ಯಕ್ಷರು ಮಹತ್ವದ ...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಮಟ್ಟದ ಐಕಾನ್: ರಾಜನಾಥ್ ಸಿಂಗ್

ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ. ನಮ್ಮ...

ಮಾ.27ರಂದು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ...

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸರ್ಕಾರದ ಮೂಲಭೂತ ಆದ್ಯತೆ: ರಾಷ್ಟ್ರಪತಿ

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....

ಪಕ್ಷದ ಭವಿಷ್ಯದ ಬಗ್ಗೆ ಅವಲೋಕನ: ಒಂದು ವಾರ ರಜೆ ಕೇಳಿದ ರಾಹುಲ್ ಗಾಂಧಿ

ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...

ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ: ಚೀನಾದಿಂದ ತೀವ್ರ ಆಕ್ಷೇಪ

'ಚೀನಾ' ಪ್ರವಾಸ ಕೈಗೊಳ್ಳುವ ಕೆಲವೇ ದಿನಗಳ ಮುನ್ನ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದು ಚೀನಾ ಆಕ್ರೋಶಕ್ಕೆ ಕಾರಣವಾಗಿದೆ. ಅರುಣಾಚಲ ಪ್ರದೇಶವನ್ನು ಚೀನಾ ದಕ್ಷಿಣ ಟಿಬೆಟ್ ಎಂದೇ ಹೇಳುತ್ತಿದ್ದು, ಅರುಣಾಚಲದಿಂದ ದೆಹಲಿಗೆ ರೈಲ್ವೇ ಸಂಪರ್ಕ ಉದ್ಘಾಟನೆ ಮಾಡಿದ ಕೇಂದ್ರ...

ಕೇಜ್ರಿವಾಲ್ ರ ಕೆಮ್ಮಿಗೆ ಬೆಂಗಳೂರಿನ ಡಾಕ್ಟರ್ ಬಳಿ ಚಿಕಿತ್ಸೆ ಪಡೆಯಲು ಮೋದಿ ಸಲಹೆ

ಕಳೆದ ಕೆಲವು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿಯ ನೂತನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆಂಗಳೂರು ಮೂಲದ ವೈದ್ಯರಿಂದ ಚಿಕಿತ್ಸೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಅಟ್ ಹೋಮ್ ಕಾರ್ಯಕ್ರಮದಲ್ಲಿ ದೆಹಲಿ ಪೊಲೀಸ್ ಆಯುಕ್ತ...

ಜೆಡಿಯುನಲ್ಲಿ ಒಡಕುಂಟುಮಾಡಲು ಬಿಜೆಪಿ ಯತ್ನ: ನಿತೀಶ್ ಕುಮಾರ್

ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130...

ದೆಹಲಿಯಲ್ಲಿ ಹವಾಮಾನ ವೈಪರಿತ್ಯ:ವಾಯುಪಡೆಯ ಪ್ರದರ್ಶನ ಸ್ಥಗಿತ ಸಾಧ್ಯತೆ

'ದೆಹಲಿ'ಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು ಈಬಾರಿಯ ಗಣರಾಜ್ಯೋತ್ಸವದ ಅತಿಥಿಯಾಗಿದ್ದು, ಎಂದಿನ ಗಣರಾಜ್ಯೋತ್ಸವ ದಿನಾಚರಣೆಗಿಂತಲೂ ಈ ಬಾರಿಯದ್ದು ವಿಶೇಷವಾಗಿದೆ. ಬೆಳಿಗ್ಗೆ...

ಸಂಸತ್ ಕಲಾಪ ವ್ಯರ್ಥಮಾಡಬೇಡಿ ವಿಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ

ಅನಾವಶ್ಯಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪವನ್ನು ವ್ಯರ್ಥ ಮಾಡದಿರುವಂತೆ ವಿರೋಧ ಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ. ಐಐಟಿ, ಎನ್.ಐ.ಟಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕಳೆದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ಕೋಲಾಹಲದಿಂದ ಸಂಸತ್ ಅಧಿವೇಶನ ವ್ಯರ್ಥವಾಗಿದ್ದರ...

ಎಸ್.ಎಲ್ ಭೈರಪ್ಪ, ರವಿಶಂಕರ್ ಗುರೂಜಿಗೆ ಪದ್ಮವಿಭೂಷಣ ಪ್ರಶಸ್ತಿ?

'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ. ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ...

ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಒಪ್ಪಿಗೆ

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ನೂತನ ವ್ಯವಸ್ಥೆ ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ. ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದಕ್ಕೆ ಸಮ್ಮತಿ ದೊರೆತಿದ್ದು, ಕೊಲೀಜಿಯಂ ಬದಲಾಗಿ ಇನ್ನು ಮುಂದೆ ಸರ್ಕಾರ ನೇಮಿಸಿದ...

ತುರ್ತು ಸ್ಥಿತಿ ಹೇರಲು ಸಾಧ್ಯವೆಂದು ಇಂದಿರಾ ಗಾಂಧಿಗೇ ಗೊತ್ತಿರಲಿಲ್ಲವಂತೆ

1975ರಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಾಕಷ್ಟು ಅಪಖ್ಯಾತಿ ಪಡೆದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ, ಸಂವಿಧಾನದ ಯಾವ ಪರಿಚ್ಛೇದದ ಆಧಾರದಲ್ಲಿ ತುರ್ತುಸ್ಥಿತಿ ಹೇರಲಾಗುತ್ತದೆ? ಇಂಥ ಒಂದು ಅವಕಾಶ ಸಂವಿಧಾನದಲ್ಲಿದೆ ಎಂಬುದೇ ಗೊತ್ತಿರಲಿಲ್ಲವಂತೆ! ಇಂಥ ಅನೇಕ ಕುತೂಹಲಕರ ಸಂಗತಿಗಳನ್ನು ಒಂದು...

ಮೊಬೈಲ್ ಒನ್‌ ಸೇವೆಗೆ ರಾಷ್ಟ್ರಪತಿ ಚಾಲನೆ

ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್‌' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ. ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ...

ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕು: ರಾಷ್ಟ್ರಪತಿ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್‌ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...

ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್‌ ವೆಲ್ತ್ ಸೈನ್ಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ...

ಶತೃಗಳ ದಾಳಿ ತಡೆಗಟ್ಟಲು ಬಲಪ್ರಯೋಗ ಮಾಡುವುದು ಭಾರತಕ್ಕೆ ಅನಿವಾರ್ಯ: ರಾಷ್ಟ್ರಪತಿ

ಪ್ರಬಲ ರಕ್ಷಣೆ, ಪರಿಣಾಮಕಾರಿಯಾಗಿ ಶತೃಗಳ ದಾಳಿಯನ್ನು ತಡೆಗಟ್ಟುವುದು ಭಾರತಕ್ಕೆ ಅನಿವಾರ್ಯವಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ನ.21ರಂದು ತೇಜ್ ಪುರದ ವಾಯು ಪಡೆ ನೆಲೆಗೆ ಭೇಟಿ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ದೇಶದ ಬೆಳವಣಿಗೆ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ...

ಪ್ರಧಾನಿ ಮೋದಿಯಿಂದ ರಾಷ್ಟ್ರಪತಿ ಭೇಟಿ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ್ದಾರೆ ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ, ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನ.9ರಂದು ಕೇಂದ್ರ ಸಚಿವ ಸಂಪುಟ...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಹೆಚ್.ಎಲ್.ದತ್ತು ಪ್ರಮಾಣ ವಚನ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ಹೆಚ್.ಎಲ್.ದತ್ತು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಭಾರತದ 42ನೇ ಮುಖ್ಯ ನ್ಯಾಯಾಧೀಶರು ಅಧಿಕಾರ ವಹಿಸಿಕೊಂಡಂತಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಜ್ನಾವಿಧಿ ಭೋಧಿಸಿದರು. ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ಸೆ.27ರಂದು...

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು: ರಾಷ್ಟ್ರಪತಿಗೆ ಪತ್ರ

ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...

ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗೆ ಆಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದು, ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನಿಡಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಇ-ಆಡಳಿತ ಜಾರಿಗೆ ತರುವ ಮೂಲಕ ಕಾಗದ ಮುಕ್ತ ಆಡಳಿತಕ್ಕೆ ಸರ್ಕಾರ ಮುಂದಾಗಿದ್ದು...

ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ: ರಾಜ್ಯಕ್ಕೆ ಗುಜರಾತ್ ಸಭಾಧ್ಯಕ್ಷ ರಾಜ್ಯಪಾಲ?

ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...

ರಾಜ್ಯಪಾಲರ ನೇಮಕ: ವಜುಭಾಯ್ ವಾಲ ರಾಜ್ಯದ ನೂತನ ರಾಜ್ಯಪಾಲ

ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....

ಕೇರಳ ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ

'ಕೇರಳ' ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಶೀಲಾ ದೀಕ್ಷಿತ್ ಆ.26ರಂದು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ನೀಡುವುದಕ್ಕೆ ಯಾವುದೇ ಒತ್ತಡ ಇರಲಿಲ್ಲ, ನಿನ್ನೆಯೇ ರಾಜೀನಾಮೆ ನೀಡಿದ್ದೇನೆ, ರಾಜೀನಾಮೆ ಅಂಗೀಕಾರವಾದ ಬಳಿಕ ಪ್ರತಿಕ್ರಿಯಿಸುತ್ತೇನೆ. ಈಗ ಯಾವ ವಿಷಯದ...

ಅಸಹನೆ, ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ: ಪ್ರಣಬ್ ಮುಖರ್ಜಿ

ಅಸಹನೆಯ ಮತ್ತು ಹಿಂಸೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆ.14ರ ಸಂಜೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಣಬ್ ಮುಖರ್ಜಿ, ದೇಶದ ಉಳಿವಿಗಾಗಿ ಉಗ್ರಗಾಮಿತ್ವವನ್ನು ಮಟ್ಟ ಹಾಕಬೇಕಿದೆ ಎಂದು ಕರೆ ನೀಡಿದ್ದಾರೆ. ಅಸ್ಥಿತ್ವದಲ್ಲಿರುವ ಭೂಪಟವನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited