Untitled Document
Sign Up | Login    
Dynamic website and Portals
  

Related News

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಎಬಿವಿಪಿ ಕಾರ್ಯಕರ್ತರು ಕೆ ಎಸ್ ಒಯು ಮುಚ್ಚದಂತೆ ಅಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...

ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್

ಪೆಟ್ರೋಲ್‌ ಬಂಕ್‌ ಮಾಲೀಕರ ಕಮಿಷನ್‌ ಮೊತ್ತವನ್ನು ಪರಿಷ್ಕರಿಸುವ ಕುರಿತ ನ್ಯಾಯಮೂರ್ತಿ ಅಪೂರ್ವಚಂದ್ರ ಸಮಿತಿಯ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ತೈಲ ಮಾರಾಟಗಾರರು ಇದೇ 13ರಂದು ಪೆಟ್ರೋಲ್‌ ಬಂಕ್‌ ಬಂದ್‌ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯದ 4,000 ಬಂಕ್‌ಗಳು...

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹಾಗೂ ಜಲ ವಿವಾದಕ್ಕೆ ದೀರ್ಘಾವಧಿ ಪರಿಹಾರ ಹುಡುಕಲು ಆಗ್ರಹಿಸಿ ನಡೆಸುತ್ತಿರುವ ತಮಿಳುನಾಡು ಬಂದ್ ಗೆ ಮಿಶ್ರ...

ತಮಿಳುನಾಡು ಬಂದ್ ಹಿನ್ನಲೆ: ಪ್ರತಿಭಟನೆಗೆ ಮುಂದಾದ ವೈಕೋ ಸೇರಿದಂತೆ ಹಲವರ ಬಂಧನ

ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕೆಲವೆಡೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಚೆನ್ನೈನ ಹಲವೆಡೆ ಬಂದ್...

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...

ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ,...

ಕಾವೇರಿ ವಿವಾದ ಪ್ರತಿಭಟನೆ: ಅಹಿತಕರ ಘಟನೆ ತಪ್ಪಿಸಲು ಲಘು ಲಾಠಿ ಪ್ರಹಾರ- ಪರಮೇಶ್ವರ್

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಕೆಆರ್‍ಎಸ್ ಡ್ಯಾಮ್ ಗೇಟ್‍ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಆಗಬಹುದಾದ ಅನಾಹುತನವನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು...

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ಥಬ್ಧವಾಗಿವೆ. ಇನ್ನು...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ಪ್ರತಿಭಟನೆಗೆ ಮಣಿದ ಸರ್ಕಾರ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಬೇಕು ಎಂಬ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಳಿಗ್ಗೆ 9 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾರಂಭಿಸಿದೆ. ಅಣೆಕಟ್ಟೆಯ ಎಲ್ಲ ನಾಲೆಗಳಿಗೆ 4 ಸಾವಿರ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ತಮಿಳುನಾಡಿಗೆ 12 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ....

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ. ಕೆಆರ್ ಎಸ್ ನಿಂದ ನಿನ್ನೆ ರಾತ್ರಿ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದಿದ್ದು, ಕಬಿನಿ ಜಲಾಶಯದಿಂದ...

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಮಂಡ್ಯದಲ್ಲಿ ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ. ಸುಪ್ರೀಂ ತೀರ್ಪು ವಿರೋಧಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ...

ಭಾರತೀಯ ಸೇನೆ ವಿರುದ್ಧ ಘೋಷಣೆ: ಎಬಿವಿಪಿ ಪ್ರತಿಭಟನೆ; ಲಘು ಲಾಠಿ ಪ್ರಹಾರ

ಕಾಶ್ಮೀರ ವಿಚಾರ ಸಂವಾದದಲ್ಲಿ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ...

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ; ಐದು ಜನರ ಸಾವು: ಹಲವರಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಲ್ಲಿನ ಬುಡಗಾಂವ್ ಜಿಲ್ಲೆಯ ಮಾಗಾಂ ಪ್ರದೇಶದಲ್ಲಿ ಪ್ರತಿಭಟನೆ ಆರಂಭಿಸಿದ ಪ್ರತ್ಯೇಕತಾವಾದಿಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿ...

ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ

ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ನಿಂದ ನಡೆದ ಕಾಶ್ಮೀರ ಸಂಘರ್ಷ ಕುರಿತಾದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು...

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಉತ್ತರ ಪ್ರದೇಶ ಬಿಜಿಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್​ ರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಎಸ್​ಪಿ ಕಾರ್ಯಕರ್ತರು ಲಖ್ನೌದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆಯೂ ದಯಾಶಂಕರ್...

ದೆಹಲಿ ಅಸೆಂಬ್ಲಿಯೊಳಗೆ ಬೆಂಚ್ ಹತ್ತಿ ಪ್ರತಿಭಟಿಸಿದ ಶಾಸಕ

ಬಿಜೆಪಿ ಶಾಸಕರೊಬ್ಬರು ವಿಧಾನಸಭೆಯೊಳಗೆ ಬೆಂಚ್ ಹತ್ತಿ ಪ್ರತಿಭಟನೆ ನಡೆಸಿದ ಘಟನೆ ದೆಹಲಿ ಅಸೆಂಬ್ಲಿಯಲ್ಲಿ ನಡೆದಿದೆ. ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ವಿಜೇಂದ್ರ...

ಪೊಲೀಸ್ ಸಿಬ್ಬಂದಿಗಳ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

ಪೊಲೀಸ್ ಸಿಬ್ಬಂದಿಗಳ ಸಾಮೂಹಿಕ ಪ್ರತಿಭಟನೆಗೆ ರಾಜ್ಯಾಧ್ಯಂತ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ...

ಜೂನ್ 4ರಂದು ಎಲ್ಲ ಪೊಲೀಸ್ ಸಿಬ್ಬಂದಿಗಳೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ

ಜೂನ್ 4ರಂದು ಶನಿವಾರ ಪೊಲೀಸ್‌ ಇಲಾಖೆಯ ಯಾರೊಬ್ಬರೂ ಶನಿವಾರ ರಜೆ ಪಡೆಯುವುದಿಲ್ಲ. ಪ್ರತಿಯೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಸ್ಪಷ್ಟಪಡಿಸಿದ್ದಾರೆ. ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಪ್ರತಿಭಟನೆಗೆ ಸಂಬಂಧಿಸಿದಂತೆ...

ಪೊಲೀಸರು ಪ್ರತಿಭಟನೆ ನಡೆಸುತ್ತಿಲ್ಲ: ಜಿ.ಪರಮೇಶ್ವರ್

ಜೂನ್ ೪ರಂದು ಪೊಲೀಸರು ಕೆಲಸಕ್ಕೆ ಗೈರುಹಾಜರಾಗಿ ಪ್ರತಿಭಟನೆ ನಡೆಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ತಮಗೆ ಬಂದಿರುವ ಮಾಹಿತಿ ಪ್ರಕಾರ ಜೂನ್ ೪ರಂದು ಪೊಲೀಸರು...

ಪಟೇಲ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹ: ಹಿಂಸಾಚಾರಕ್ಕಿಳಿದ ಪ್ರತಿಭಟನೆ

ಹಾರ್ದಿಕ್ ಪಟೇಲ್ ಬಂಧನದ ನಂತರ ತಣ್ಣಗಾಗಿದ್ದ ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಗುಜರಾತ್ ನಲ್ಲಿ ಮತ್ತೆ ಭುಗಿಲೆದ್ದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ನಡೆಸಲಾಗಿದ್ದ ಪ್ರತಿಭಟನೆ ವೇಳೆ ಹಾರ್ದಿಕ್ ಪಟೇಲ್ ಹಾಗೂ ಇನ್ನಿತರೆ ನಾಯಕರನ್ನು ಪೊಲೀಸರು...

ರೈತರ ಮೇಲಿನ ಲಾಠಿ ಪ್ರಹಾರ ಖಂಡಿಸಿ ಕೋಲಾರ, ಚಿಕ್ಕಬಳ್ಳಾಪುರ ಬಂದ್

ಗುರುವಾರ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ, ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್‌ ಆಚರಿಸಲಾಗುತ್ತಿದೆ. ಶಾಶ್ವತ ನೀರಾವರಿ ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿದ್ದು ವಿವಿಧ...

ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ: ಕಲಬುರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ

ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕುಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೆಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ...

ನೇಪಾಳದಲ್ಲಿ ಭಾರತೀಯನ ಹತ್ಯೆ ಅತ್ಯಂತ ವಿಷಾದನೀಯ: ಪ್ರಧಾನಿ ಮೋದಿ

ಪೊಲೀಸ್ ಗೋಲೀಬಾರ್ ನಲ್ಲಿ ಸಾವಿಗೀಡಾದ ಭಾರತೀಯನ ಸಾವನ್ನು ಅತ್ಯಂತ ವಿಷಾದನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತ್ತೀಚೆಗೆ ನೇಪಾಳ ಸಂಸತ್ ಅಂಗೀಕರಿಸಿದ ನೂತನ ಸಂವಿಧಾನದಲ್ಲಿ ತಮಗೆ ಸಿಗಬೇಕಾದ ನ್ಯಾಯ, ಪ್ರಾಶಸ್ತ್ಯ ಸಿಗಲಿಲ್ಲ ಎಂದು ಹೋರಾಡುತ್ತಿರುವ ಮಾಧೇಸಿ ಹಾಗೂ ಇತರ ಭಾರತೀಯ...

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಃ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿವುದಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತೆ ಭರವಸೆ ನೀಡಿದ ನಂತರ, ಮೂವರು ಮಾಜಿ ಸೈನಿಕರು ತಮ್ಮ ಅಮರಣಾಂತರ ಉಪವಾಸ ಸತ್ಯಾಗ್ರಹವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗೋವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು...

ತೀವ್ರಗೊಂಡ ಮಹದಾಯಿ ಹೋರಾಟ, ಹುಬ್ಬಳ್ಳಿ -ಧಾರವಾಡ ಬಂದ್

ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಹುಬ್ಬಳ್ಳಿ, ಧಾರವಾಡ ಮತ್ತು ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಕರೆಕೊಟ್ಟ ಬಂದ್ ಗೆ ಹುಬ್ಬಳ್ಳಿ-ಧಾರವಾಡ, ಅವಳಿ...

ಸರಕು ಮತ್ತು ಸೇವಾ ತೆರಿಗೆ ಮಸೂದೆ ಅನುಮೋದನೆಗೆ 2 ದಿನದ ವಿಶೇಷ ಅಧಿವೇಶನದ ಸಾಧ್ಯತೆ

ಕಾಂಗ್ರೆಸ್ ಪ್ರತಿಭಟನೆಯಿಂದ ಮುಂಗಾರು ಅಧಿವೇಶನದಲ್ಲಿ ಯಾವುದೇ ಮಸೂದೆಯನ್ನು ಮಂಡಿಸಲೂ ಸಾಧ್ಯವಾಗದ ಹಿನ್ನಲೆಯಲ್ಲಿ, ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು ಸರಕು ಮತ್ತು ಸೇವಾ ತೆರಿಗೆ ಮಸೂದೆ (ಜಿ ಎಸ್ ಟಿ) ಅನುಮೋದನೆ ಪಡೆಯಲು ಸೆಪ್ಟಂಬರ್ ನಲ್ಲಿ ಕೇಂದ್ರ ಸರ್ಕಾರ ಎರಡು ದಿನಗಳ ಸಂಸತ್...

ಜಿ.ಎಸ್.ಟಿ ಮಸೂದೆಯನ್ನು ಪಾಸು ಮಾಡಿಯೇ ಮಾಡುತ್ತೇವೆ: ಪ್ರಕಾಶ್ ಜಾವ್ಡೇಕರ್

ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ. ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...

ಕಾಂಗ್ರೆಸ್ ಪ್ರತಿಭಟನೆಗೆ ಮುಂಗಾರು ಅಧಿವೇಶನ ನೀರುಪಾಲು: ಅನಿರ್ಧಿಷ್ಠಾವಧಿ ಮುಂದೂಡಿಕೆ

ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು. ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...

ಕಾಂಗ್ರೆಸ್ ಒಂದು ಕುಟುಂಬವನ್ನು, ಬಿಜೆಪಿ ರಾಷ್ಟ್ರವನ್ನು ಉಳಿಸಲು ಬಯಸುತ್ತದೆ: ಪ್ರಧಾನಿ ಮೋದಿ

ನಿರಂತರ ಪ್ರತಿಭಟನೆ ನಡೆಸಿ ಮೂರು ವಾರಗಳ ಸಂಸತ್ ಕಲಾಪಕ್ಕೆ ಆಡ್ಡಿ ಮಾಡಿದ ಕಾಂಗ್ರೆಸ್, ತನ್ನ ನಾಯಕರು ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೇಲೆ ಮಾಡಿದ ದಾಳಿಗೆ ಪ್ರತಿಸ್ಪರ್ಧೆ ಕೊಟ್ಟಂತೆ ಇತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಒಂದು ಕುಟುಂಬವನ್ನು ಉಳಿಸಲು ಬಯಸುತ್ತದೆ,...

ಕಾಂಗ್ರೆಸ್ ವಿರೋಧದ ನಡುವೆ ಸರಕು ಮತ್ತು ಸೇವಾ ತೆರಿಗೆ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...

ಗಾಂಧಿ ಕುಟುಂಬದ ಹೊರಗಿನವರು ದೇಶ ನಡೆಸುವುದು ಸೋನಿಯಾ-ರಾಹುಲ್ ಗೆ ಸಹ್ಯವಾಗುತ್ತಿಲ್ಲ-ಜೇಟ್ಲಿ

2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...

ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ: ಕಾಂಗ್ರೆಸ್ಸಿಗೆ ಮುಲಾಯಂ

'ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ' - ಇದು ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೀಡಿದ ಎಚ್ಚರಿಕೆ. ಮುಂಗಾರು ಅಧಿವೇಶನ ಆರಂಬವಾದಂದಿನಿಂದ ಒಂದೇ ಒಂದು ದಿನ ಕಲಾಪ ನಡೆಸಲು ಬಿಡದೆ ನೂರಾರು ಕೋಟಿ ರೂ....

ಸುಷ್ಮಾ ಸ್ವರಾಜ್ ವಿರುದ್ಧ ಮುಂದುವರಿದ ಸೋನಿಯಾ, ರಾಹುಲ್ ವಾಗ್ದಾಳಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಶುಕ್ರವಾರವೂ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಸೋನಿಯಾ ಗಾಂಧಿ ಹೇಳಿದರೆ, ರಾಹುಲ್ ಗಾಂಧಿ ಇನ್ನೂ ಒಂದು ಹೆಜ್ಜೆ...

ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ ಹೇಳಿಕೆ ಕೊಡುವುದು ಸುಲಭ: ಸೋನಿಯಾಗೆ ಸ್ಮೃತಿ ತಿರುಗೇಟು

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...

ಮನ್ ಕಿ ಬಾತ್ ಚಾಂಪಿಯನ್ ಮೌನ ವೃತ ತಾಳಿದ್ದಾರೆ - ಸೋನಿಯಾ ಗಾಂಧಿ

ವಿವಾದದ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಮುಖಂಡರ ರಾಜೀನಾಮೆಯವರೆಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತನ್ನ ಪ್ರತಿಭಟನೆ ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ,...

ಲೋಕಸಭಾ ಕಲಾಪಕ್ಕೆ ಅಡ್ಡಿ: 27 ಕಾಂಗ್ರೆಸ್ ಸಂಸದರ ಅಮಾನತು

ಮುಂಗಾರು ಅಧಿವೇಶನ ಆರಂಭವಾದಂದಿನಿಂದ ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಕಾಂಗ್ರೆಸ್ ಸಂಸದರ ವರ್ತನೆ ಇಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ತಾಳ್ಮೆಯನ್ನು ಕೆಡಿಸಿತು. ಲೋಕಸಭೆ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದೀರೆಂದು 27 ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ 5 ದಿನಗಳವರೆಗೆ ಅಮಾನತುಗೊಳಿಸಿದ್ದಾರೆ. ಕಲಾಪಕ್ಕೆ ಭಿತ್ತಿಪತ್ರ ಮತ್ತು...

ಶ್ರೀನಗರದಲ್ಲಿ ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ ಪ್ರತಿಭಟನಾಕಾರರು

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು. ಗಿಲಾನಿ ಮತ್ತು ಇತರ ಪ್ರತ್ಯೇಕತಾವಾದಿ ನಾಯಕರನ್ನು ನಗರದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದೆ....

ಒನ್‌ ರಾಂಕ್‌ ಒನ್‌ ಪೆನ್ಶನ್‌ ಆಗ್ರಹ: ಮಾಜಿ ಸೈನಿಕರಿಂದ ಪ್ರತಿಭಟನೆ

ಒನ್‌ ರಾಂಕ್‌ ಒನ್‌ ಪೆನ್ಶನ್‌ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು. ಇಂಡಿಯನ್‌ ಎಕ್ಸ್‌ ಸರ್ವಿಸ್‌ ಮೆನ್‌ ಮೂವ್‌ಮೆಂಟ್‌ ವತಿಯಿಂದ ಪ್ರತಿಭಟನೆ ನಡೆದಿದ್ದು, ಯೋಜನೆ ಶೀಘ್ರ...

ಮಂಗಳೂರಿನಲ್ಲಿ ಭಯಾನಕ ಅಂಟು ರೋಗ ಪತ್ತೆ: ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನಲ್ಲಿ 'ಎಂಆರ್‌ಎಸ್‌ಎ'(Methicillin-resistant Staphylococcus aureus ) ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬ್ಯಾಕ್ಟಿರಿಯಾದಿಂದ ಗಾಳಿಯ ಮೂಲಕ ಹರಡುವ 'ಎಂಆರ್‌ಎಸ್‌ಎ' ಕಾಯಿಲೆ ಮಂಗಳೂರಿನ ಬಲ್ಮಠದಲ್ಲಿರುವ ಲಕ್ಷ್ಮಿ ಮೆಮೋರಿಯಲ್ ನರ್ಸಿಂಗ್ ಕಾಲೇಜ್‌ನ 120 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಯೂರೋಪಿಯನ್ ರಾಷ್ಟ್ರಗಳಲ್ಲಿ ಕಂಡುಬರುವ ಈ ಭಯಾನಕ...

ಜಮ್ಮುವಿನಲ್ಲಿ ಭಿಂದ್ರನ್ ವಾಲೆ ಫೋಸ್ಟರ್ ತೆರವು:ಸಿಖ್ ಸಮುದಾಯದಿಂದ ತೀವ್ರ ಪ್ರತಿಭಟನೆ

ಪ್ರತ್ಯೇಕ ಖಲೀಸ್ತಾನ್ ನಾಯಕ, ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಫೋಸ್ಟರ್ ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ಸಿಖ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಮ್ಮು ಪಠಾಣ್ ಕೋಟ್ ಹೈವೇಯನ್ನು ಬಂದ್ ಮಾಡಿ ಪ್ರತಿಭಟನೆ ಮುಂದುವರಿಸಿದ್ದಾರೆ. ಜೂ.4ರಂದು ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ನಡೆಸಿದ...

ಐಐಟಿ ವಿದ್ಯಾರ್ಥಿ ಸಂಘಟನೆ ನಿಷೇಧ: ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...

ಗುಜ್ಜಾರ್ ಪ್ರತಿಭಟನೆ: ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...

ಪಿಯು ಫಲಿತಾಂಶ ಗೊಂದಲ: ಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಿಮ್ಮನೆ

ವಿದ್ಯಾರ್ಥಿಗಳಿಗೆ ವರುಷ, ಪಿಯು ಬೋರ್ಡ್ ಗೆ ನಿಮಿಷ.. ವಿದ್ಯಾರ್ಥಿಗಳು ವರ್ಷವಿಡೀ ನಡೆಸಿದ ಪ್ರಯತ್ನಗಳಿಗೆ ಪಿಯು ಮಂಡಳಿ ನೀರೆರೆದಿದ್ದು, ಅವರ ಭವಿಷ್ಯಗಳ ಮೇಲೆಯೇ ಆಟವಾಡುತ್ತಿದೆ. ದ್ವಿತೀಯ ಪಿಯು ಮೌಲ್ಯಮಾಪನದಲ್ಲಿ ಉಂಟಾಗಿರುವ ತಪ್ಪುಗಳ ವಿರುದ್ಧ ಕಳೆದ ಕೆಲವು ದಿನಗಳಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಇನ್ನಷ್ಟು ತೀವ್ರತೆ...

ದ್ವಿತೀಯ ಪಿಯು ಫಲಿತಾಂಶ ಗೊಂದಲ: ರೊಚ್ಚಿಗೆದ್ದ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಣೆಯಲ್ಲಿ ಭಾರೀ ಪ್ರಮಾಣದ ಗೊಂದಲ, ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದ್ದು, ಕಂಗಾಲಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಂದೊಂದು ವೆಬ್ ಸೈಟ್ ನಲ್ಲಿ ಒಂದೊಂದು ರೀತಿಯ ಫಲಿತಾಂಶ...

ಭೂಸ್ವಾಧೀನ ಮಸೂದೆ ವಿರುದ್ಧ ಆಪ್ ಪ್ರತಿಭಟನೆ

ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ ದೆಹಲಿಯ ಜಂತರ್-ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರುವಿಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇನ್ನು ಕೇಂದ್ರ ಸರ್ಕಾರದ ವಿರುದ್ಧ ತೀವ್ರ...

ಕಾಶ್ಮೀರದಲ್ಲಿ ಬಂದ್: ಪೊಲೀಸರ ಗುಂಡಿಗೆ ಓರ್ವ ಬಲಿ, ಇಬ್ಬರಿಗೆ ಗಂಭೀರ ಗಾಯ

'ಜಮ್ಮು-ಕಾಶ್ಮೀರ'ದ ನರ್ಬಾಲ್ ಎಂಬ ಪ್ರದೇಶದಲ್ಲಿ ಪೊಲೀಸರು ಗುಂಡು ಹಾರಿಸಿರುವ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಳೆದ ವಾರ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಸೇನಾ ಪಡೆ ಗುಂಡಿಗೆ ಇಬ್ಬರು ಯುವಕರು ಬಲಿಯಾದ ಹಿನ್ನೆಲೆಯಲ್ಲಿ ಕೆಲ ಯುವಕರು ಪ್ರತಿಭಟನೆ ನಡೆಸುತ್ತಿದ್ದರು....

ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ, ಸಿ.ಎಂ ವಿರುದ್ಧ ಬೀದಿಗಿಳಿದ ಕಾಶ್ಮೀರದ ಜನತೆ

'ಕಾಶ್ಮೀರ' ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಜನಾಥ್ ಸಿಂಗ್...

ರವಿ ಸಾವಿನ ತನಿಖೆ ಸಿಬಿಐಗೆ ನೀಡುವುದು ಸೂಕ್ತ: ಸಿ.ಎಂ ಗೆ ರಾಜ್ಯಪಾಲರ ಸಲಹೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದು ಸೂಕ್ತ ಎಂದು ರಾಜ್ಯಪಾಲ ವಜುಭಾಯ್ ವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ರವಿ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರವಿ ಸಾವು ಪ್ರಕರಣ: ಸರ್ಕಾರದ ವಿರುದ್ಧ ತೀವ್ರಗೊಂಡ ವಿಪಕ್ಷಗಳ ಪ್ರತಿಭಟನೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ. ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ. ಡಿ.ಕೆ...

ರವಿ ಪೋಷಕರು ಕೈ ಮುಗಿದು ಬೇಡಿದರೂ ಸಿಬಿಐ ತನಿಖೆಗೆ ಒಪ್ಪದ ಸಿ.ಎಂ

'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...

ಭೂಸ್ವಾಧೀನ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

'ಭೂಸ್ವಾಧೀನ ಕಾಯ್ದೆ'ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಷ್ಟ್ರಪತಿ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಕಾಯ್ದೆಯನ್ನು ವಿರೋಧಿಸುತ್ತಿರುವ ಇನ್ನಿತರ ವಿರೋಧ ಪಕ್ಷಗಳ ನೇತೃತ್ವ ವಹಿಸಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಜಯ್ ಚೌಕ್ ನಿಂದ ರಾಷ್ಟ್ರಪತಿ ಭವನದ ವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ....

ರೈತರು ನಿಮ್ಮ ಸೊಕ್ಕನ್ನು ಮುರಿಯಲಿದ್ದಾರೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...

ಭೂಸ್ವಾಧೀನ ಕಾಯ್ದೆ ವಿರುದ್ಧ ನಿತೀಶ್‌ ಕುಮಾರ್ ಉಪವಾಸ ಧರಣಿ

ಕೇಂದ್ರ ಎನ್‌.ಡಿ.ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಮಸೂದೆ ವಿರೋಧಿಸಿ ಸಂಯುಕ್ತ ಜನತಾದಳ (ಜೆಡಿಯು) ಕಾರ್ಯಕರ್ತರು ಬಿಹಾರದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಒಂದು ದಿನ ಉಪವಾಸ ಧರಣಿ ನಡೆಸಿದ್ದಾರೆ. ಜೆಡಿಯುದ ಎಲ್ಲ ಶಾಸಕರು, ಕಾರ್ಯಕರ್ತರು, ಸಂಸದರು ಕೂಡ 12...

ಲಖ್ವಿ ಬಿಡುಗಡೆ: ಪಾಕ್‌ ವೈಫ‌ಲ್ಯಕ್ಕೆ ಭಾರತ ಪ್ರತಿಭಟನೆ

ಮುಂಬೈ ದಾಳಿಯ ರೂವಾರಿ ಝಕೀ ಉರ್ ರೆಹಮಾನ್‌ ಲಖ್ವಿಯನ್ನು ಪಾಕ್‌ ಕೋರ್ಟಿನ ಆದೇಶದ ಪ್ರಕಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಂತೆಯೇ ಪಾಕ್‌ ಸರ್ಕಾರದ ವೈಫ‌ಲ್ಯವನ್ನು ಭಾರತ ಬಲವಾಗಿ ಪ್ರತಿಭಟಿಸಿದೆ. ಲಖ್ವಿಯು ಜೈಲಿನಿಂದ ಹೊರಗೆ ಬಾರದಂತೆ ನೋಡಿಕೊಳ್ಳುವುದು ಇಸ್ಲಾಮಾಬಾದ್‌...

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡು ರೈತರು ಸಜ್ಜು

ಬೆಂಗಳೂರು ಸೇರಿದಂತೆ ಗಡಿಭಾಗದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕದ ಮಹತ್ವಾಕಾಂಕ್ಷೆಯ ಸುಮಾರು 450 ಕೋಟಿ ರೂ.ಗಳಿಗೂ ಹೆಚ್ಚಿನ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 6 ಸಾವಿರ...

ಜೈಲಿಗೆ ನುಗ್ಗಿ ರೇಪ್‌ ಆರೋಪಿ ಹತ್ಯೆ

ಯುವತಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಪ್ರತಿನಟನೆಗಿಳಿದ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಜೈಲಿಗೆ ನುಗ್ಗಿ ಆರೋಪಿಯನ್ನು ಹೊರಗೆಳೆದು ತಂದು ನಗ್ನಗೊಳಿಸಿ ಥಳಿಸಿ ಹತ್ಯೆಗೈದ ಘಟನೆ ನಾಗಾಲ್ಯಾಂಡ್‌ ನ‌ ದಿಮಾಪುರ್ ನ ವಾಣಿಜ್ಯ ನಗರದಲ್ಲಿ ನಡೆದಿದೆ. ಹತ್ಯೆಗೀಡಾದ ಅತ್ಯಾಚಾರ ಆರೋಪಿ 35...

ಪಾದಚಾರಿಗಳ ಅನುಕೂಲಕ್ಕಾಗಿ ಸ್ಕೈ ವಾಕ್ ನಿರ್ಮಾಣ: ಕೆ.ಜೆ ಜಾರ್ಜ್

ಪಾದಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈ ವಾಕ್ ಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಜಾರ್ಜ್ ಹೇಳಿದ್ದಾರೆ. ನೀರಿನ ಟ್ಯಾಂಕರ್ ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ...

ಕೆಂಪಾಪುರ ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ: ಸ್ಕೈವಾಕ್ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

'ನೀರಿನ ಟ್ಯಾಂಕರ್' ಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯನ್ನು ಖಂಡಿಸಿ ಹೆಬ್ಬಾಳದಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಂಪಾಪುರ ಜಂಕ್ಷನ್ ಬಳಿಯ ದೇವನಹಳ್ಳಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿ ವಾಹನಗಳು ಅತಿ ವೇಗವಾಗಿ ಚಲಿಸುತ್ತವೆ, ಪರಿಣಾಮ, ಅತಿ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್‌ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು. ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...

ದೆಹಲಿಯಲ್ಲಿ ಕಾಂಗ್ರೆಸ್ ಸೋಲು: ಕಾರ್ಯಕರ್ತರ ಪ್ರತಿಭಟನೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳಲ್ಲಿ ಖಾತೆಯನ್ನೇ ತೆರೆಯದೆ ಶೂನ್ಯ ಸ್ಥಾನ ಸಂಪಾದಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮುಂಭಾಗ ಸೇರಿರುವ ಕಾಂಗ್ರೆಸ್...

ತೊಗಾಡಿಗೆ ನಿಷೇಧ ವಿಚಾರ: ಸದನದಲ್ಲಿ ಮುಂದುವರೆದ ಬಿಜೆಪಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ನಿಷೇಧ ವಿಚಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಪ್ರತಿಭಟನೆಗೆ ಸಾಕ್ಷಿಯಾಯಿತು. ಈ ವೇಳೆ ತೊಗಾಡಿಯಾಗೆ ನಿಷೇಧ ಹಾಕಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬೆಂಗಳೂರಿಗೆ ಬರದಂತೆ...

ವಿದ್ಯುತ್ ಮೀಟರ್ ಖರೀದಿ ಪ್ರಕರಣ: ಪರಿಷತ್ ನಲ್ಲಿ ಬಿಜೆಪಿ ಪ್ರತಿಭಟನೆ

ವಿದ್ಯುತ್ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯವಹಾರ ಪ್ರಕರಣ ವಿಧಾನಪರಿಷತ್ ನಲ್ಲಿ ಅತ್ತೆ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರ ಪ್ರತಿಭಟನೆಗೆ ಸಾಕ್ಷಿಯಾಯಿತು. ವಿದ್ಯುತ್ ಮೀಟರ್ ಖರೀದಿಯಲ್ಲಿ ಅವ್ಯವಹರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸಿದ್ದು, ವಿಧಾನ ಪರಿಷತ್ ಕಲಾಪ...

ತೊಗಾಡಿಯಾಗೆ ವಿಧಿಸಿರುವ ನಿಷೇಧ ವಾಪಸ್ ಪಡೆಯಬೇಕು: ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ

'ಪ್ರವೀಣ್ ತೊಗಾಡಿಯಾ'ಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಮರು ನಡೆಸುವ ಕಾರ್ಯಕ್ರಮಗಳಿಗೆ ಸಂಘಟನೆ ಮುಖ್ಯಸ್ಥರ ಆಗಮನಕ್ಕೆ ಅನುಮತಿ ನೀಡುವುದು, ಹಿಂದೂಗಳು ನಡೆಸುವ ಕಾರ್ಯಕ್ರಮದಲ್ಲಿ...

ಮೆಸೆಂಜರ್ ಆಫ್ ಗಾಡ್ ವಿವಾದ: ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ

ಡೇರಾ ಸಚ್ಚಾ ಸೌದ ಸಮುದಾಯದ ಧರ್ಮಗುರು ಗುರ್ಮೀತ್‌ ರಾಮ್‌ ರಹೀಮ್‌ ಸಿಂಗ್‌ ನಿರ್ದೇಶಿಸಿ, ನಟಿಸಿರುವ ಮೆಸೆಂಜರ್ ಆಫ್ ಗಾಡ್ ಚಿತ್ರ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ ನೀಡಿದ್ದಾರೆ. ಜ.16ರಂದು ಮಂಡಳಿಯ ಅಧ್ಯಕ್ಷೆ ಲೀಲಾ ಸ್ಯಾಮ್ಸನ್...

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಹಿಂಸಾಚಾರಕ್ಕೆ ತಿರುಗಿದಪ್ರತಿಭಟನೆ

ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಶಾಲಾ ದೈಹಿಕ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆ ವರದಿಯಾಗುತ್ತಿದ್ದಂತೆಯೇ ಶಾಲಾ ದೈಹಿಕ ಶಿಕ್ಷಕನ ಮೇಲೆ ಪೋಷಕರು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಸುಮಾರು...

ಡಿಕೆಶಿ ವಿರುದ್ಧ ತನಿಖೆಗೆ ದೊರೆಸ್ವಾಮಿ ಆಗ್ರಹ

ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಸುಮಾರು ಮೂರು ಸಾವಿರ ಕೋಟಿ ರೂ.ಗಳಷ್ಟು ಅವ್ಯವಹಾರ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಭೂ ಕಬಳಿಕೆದಾರರ ವಿರೋಧಿ ಹೋರಾಟ ಸಮಿತಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಸಚಿವ ಮಹದೇವ ಪ್ರಸಾದ್ ಅವರ...

ಪಿಕೆ ಚಿತ್ರ ಪಾಕ್ ನಲ್ಲಿ ಮಾಡಿದ್ದರೆ ನಿರ್ದೇಶಕ ಜೈಲು ಸೇರುತ್ತಿದ್ದ:ತಸ್ಲೀ ನಸ್ರೀನ್

'ಪಿಕೆ' ಚಿತ್ರಕ್ಕೆ ಹೆಸರಾಂತ ಲೇಖಕಿ ತಸ್ಲೀಮಾ ನಸ್ರೀನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ತಸ್ಲೀಮಾ ನಸ್ರೀನ್, ಪಿಕೆ ಚಿತ್ರವನ್ನು ಪಾಕಿಸ್ತಾನದಲ್ಲೋ ಅಥವಾ ಬಾಂಗ್ಲಾದೇಶದಲ್ಲೋ ಮಾಡಿದ್ದರೆ, ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ಅಮೀರ್ ಖಾನ್ ಎಲ್ಲರನ್ನೂ ಕೊಲ್ಲಲಾಗುತ್ತಿತ್ತು ಇಲ್ಲವೇ ಜೈಲಿಗೆ ಅಟ್ಟಲಾಗುತ್ತಿತ್ತು...

ಪಿಕೆ ಸಿನಿಮಾಗೆ ಅಖಿಲೇಶ್ ಯಾದವ್ ಮೆಚ್ಚುಗೆ: ಮನರಂಜನಾ ತೆರಿಗೆ ವಿನಾಯಿತಿ

ದೇಶಾದ್ಯಂತ ಪಿಕೆ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪಿಕೆ ಚಿತ್ರವನ್ನು ಉತ್ತಮ ಪ್ರೇರಣಾತ್ಮಕ ಚಿತ್ರ ಎಂದು ಬಣ್ಣಿಸಿದ್ದಾರೆ. ಪಿಕೆ ಉತ್ತಮ ಮೌಲ್ಯಗಳನ್ನು ಹೊಂದಿರುವ ಚಿತ್ರ ಆದ್ದರಿಂದ ರಾಜ್ಯದಲ್ಲಿ ಪಿಕೆ ಚಿತ್ರಕ್ಕೆ ಮನರಂಜನಾ ತೆರಿಗೆಯನ್ನು ಮುಕ್ತಗೊಳಿಸಲಿದ್ದೇವೆ ಎಂದು...

ಪಿಕೆ ವಿರುದ್ಧದ ಪ್ರತಿಭಟನೆಗೆ ಮೌನ: ಬಿಜೆಪಿ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಪಿಕೆ' ಸಿನಿಮಾ ವಿರುದ್ಧ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಕೆ ಚಿತ್ರವನ್ನು ವಿರೋಧಿಸಿ ವಿಧ್ವಂಸಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಲಿದ್ದಾರೆಯೇ? ಎಂದು...

ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...

ನಾವು ಬಿಹಾರ,ಯುಪಿಗೆ ಸೀಮಿತವಲ್ಲ, ದೆಹಲಿಯಲ್ಲೂ ಅಧಿಕಾರಕ್ಕೆ ಬರುತ್ತೇವೆ: ಮುಲಾಯಂ ಸಿಂಗ್

'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ...

ಡಿ.25ರಂದು ನಡೆಯಬೇಕಿದ್ದ ಘರ್ ವಾಪಸಿ ಕಾರ್ಯಕ್ರಮ ರದ್ದು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಧರ್ಮ ಜಾಗರಣ ಸಮಿತಿ ಡಿ.25ರಂದು ನಡೆಸಲು ಉದ್ದೇಶಿಸಲಾಗಿದ್ದ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮವನ್ನು ನಡೆಸದೇ ಇರಲು ತೀರ್ಮಾನಿಸಿದೆ. ಈ ಬಗ್ಗೆ ಪಿಟಿಐ ಗೆ ಸ್ಪಷ್ಟನೆ ನೀಡಿರುವ ಧರ್ಮ ಜಾಗರಣ ಸಮಿತಿ ಮುಖ್ಯಸ್ಥ, ಡಿ.25ರಂದು ನಡೆಸಬೇಕಿದ್ದ ಘರ್ ವಾಪಸಿ...

ಮರುಮತಾಂತರದ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ: ಕಾಂಗ್ರೆಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ನಡೆದ ಮರುಮತಾಂತರದ ವಿಷಯದ ಬಗ್ಗೆ ಸಂಸತ್ ನಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಗದ್ದಲ ಮುಂದುವರೆಸಿವೆ. ಮರುಮತಾಂತರದ ಬಗ್ಗೆ ಕೋಲಾಹಲ ಸೃಷ್ಠಿಸಿರುವ ಸಂಸತ್ ಸದಸ್ಯರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ....

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಸಾಧ್ಯತೆ

ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...

ಪಶ್ಚಿಮ ಬಂಗಾಳ ಸಚಿವ ಮದನ್ ಮಿತ್ರಾ ಬಂಧನ ಖಂಡಿಸಿ ಟಿಎಂಸಿ ಪ್ರತಿಭಟನೆ

'ಶಾರದಾ ಚಿಟ್ ಫಂಡ್' ಹಗರಣದಲ್ಲಿ ಸಚಿವ ಮದನ್ ಮಿಶ್ರಾ ಅವರನ್ನು ಬಂಧಿಸಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡಿ.13ರಂದು ಮಧ್ಯಾಹ್ನ 1ಗಂಟೆಗೆ ಸೆಂಟ್ರಲ್ ಕೋಲ್ಕತ್ತಾದ ಮೈದಾನ್ ಏರಿಯಾದಲ್ಲಿ ಟಿಎಂಸಿ ಪ್ರತಿಭಟನೆ ನಡೆಸಲಿದೆ. ಶಾರದಾ ಚಿಟ್...

ರಾಮ ಮಂದಿರ ನಿರ್ಮಾಣವಾಗಬೇಕೆಂದ ಯುಪಿ ರಾಜ್ಯಪಾಲರ ವಿರುದ್ಧ ವಿಪಕ್ಷಗಳ ಆಕ್ರೋಶ

ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ...

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

'ಕಾಂಗ್ರೆಸ್' ಪಕ್ಷ ಮಹಾತ್ಮಾ ಗಾಂಧಿಯ ತತ್ವಗಳನ್ನು ಹತ್ಯೆ ಮಾಡಿದೆ ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಸಾಕ್ಷಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಡಿ.12ರ ಸಂಸತ್ ಕಲಾಪ ಆರಂಭವಾದ ನಂತರ...

ಅಧಿಕಾರ ದುರಾಸೆಗೆ ಬಿಜೆಪಿ ಪ್ರತಿಭಟನೆ : ಕೆ.ಜೆ.ಜಾರ್ಜ್

ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ...

ಬಾಬ್ರಿ ಮಸೀದಿ ಧ್ವಂಸ ದಿನ: ದೇಶಾದ್ಯಂತ ಕಟ್ಟೆಚ್ಚರ

ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...

ಮಲ್ಲೇಶ್ವರಂ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್

'ಮಲ್ಲೇಶ್ವರಂ' ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್ ನೀಡಿದ್ದು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಪ್ರತಿ ಮಳಿಗೆಗಳಿಗೂ ನೊಟೀಸ್ ನೀಡಿರುವ ಬಿಬಿಎಂಪಿ ಅಧಿಕಾರಿಗಳು, 7 ದಿನದ ಒಳಗೆ ಮಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಗಡುವು ಮುಕ್ತಾಯಗೊಳ್ಳುವುದರೊಳಗಾಗಿ ಮಳಿಗೆಗಳನ್ನು ಖಾಲಿ ಮಾಡದಿದ್ದರೆ ತೆರವುಗೊಳಿಸುವುದಾಗಿ ಎಚ್ಚರಿಕೆ...

ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚ ಪ್ರತಿಭಟನೆ: ಕಾರ್ಯಕರ್ತರ ಬಂಧನ

ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚ ಕಾರ್ಯಕರ್ತರು ಡಿ.2ರಂದು ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಿದರು. ಟೌನ್ ಹಾಲ್ ಎದುರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ವಿಧಾನ ಪರಿಷತ್ ಸದಸ್ಯೆ...

ಗೋರೂರಿನಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರ ವಿರೋಧ

ಗೋರೂರಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಗ್ರಾಮಸ್ಥರ ಪ್ರತಿಭಟನೆ ಬುಗಿಲೆದ್ದಿದೆ. ಕಸವಿಲೇವಾರಿ ಘಟಕ ಸ್ಥಾಪನೆಗಾಗಿ ರಾಮನಗರ ಜಿಲ್ಲೆ ಗೋರೂರು ಗ್ರಾಮದಲ್ಲಿ ಸರ್ವೆ ಕಾರ್ಯ ಆರಂಭವಾಗಿದ್ದು, ಗ್ರಾಮಸ್ಥರ ವಿರೋಧದ ನಡುವೆಯೂ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಸರ್ವೆ ಕಾರ್ಯಕ್ಕೆ...

ಸಂಪುಟ ಸಭೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ

ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...

ಬಾಬಾ ರಾಮ್ ಪಾಲ್ ಬಂಧನಕ್ಕೆ ಖರ್ಚಾಗಿದ್ದು 26 ಕೋಟಿ!

'ಬಿಬಿಎಂಪಿ'ಯಲ್ಲಿ ಇಲಿಯನ್ನು ಹಿಡಿಯಲು 2 ಲಕ್ಷ ಖರ್ಚಾಗಿರುವ ಕತೆ ಕೇಳಿದ್ದೀರ ಆದರೆ ಆರೋಪಿಯೋರ್ವನನ್ನು ಬಂಧಿಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುವುದನ್ನು ಎಲ್ಲಾದರೂ ಕೇಳಿದ್ದೀರಾ? ಅಂಥದ್ದೊಂದು ಘಟನೆ ನಡೆದಿದೆ. ವಿವಾಧಿತ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್ ಪತ್ತೆ ಮತ್ತು ಬಂಧನಕ್ಕೆ ಬರೋಬ್ಬರಿ...

ಕಪ್ಪುಹಣ ಕುರಿತು ಚರ್ಚೆಗೆ ಒತ್ತಾಯ: ಟಿಎಂಸಿ, ಜೆಡಿಯು ಪ್ರತಿಭಟನೆ

ಕಪ್ಪುಹಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿ ಟಿಎಂಸಿ ಸದಸ್ಯರು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಸಂಸತ್‌ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಹಲವು ವಿಘ್ನಗಳು ಎದುರಾಗಿವೆ. ಪ್ರಮುಖ ವಿಷಯಗಳಾದ ಕಪ್ಪುಹಣ, ಸಿಬಿಐ...

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶೋಭಾ ಕರಂದ್ಲಾಜೆ ಪೊಲೀಸರ ವಶಕ್ಕೆ

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ. ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ...

ಸರ್ಕಾರದ ವೈಫಲ್ಯ ಖಂಡಿಸಿ ಡಿ.9ಕ್ಕೆ ಸುವರ್ಣ ಸೌಧ ಮುತ್ತಿಗೆ: ಯಡಿಯೂರಪ್ಪ

ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಡಿ.9ರಂದು ಆರಂಭವಾಗುವ ವಿಧಾನಮಂಡಲ ಅಧಿವೇಶನದ ದಿನ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಸದ ಯಡಿಯೂರಪ್ಪ ಹೇಳಿದ್ದಾರೆ. ಅತಿ ವೃಷ್ಠಿ ಹಾಗೂ ಅನಾವೃಷ್ಠಿಯಿಂದಾಗಿ ಬೆಳೆಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಡಾ.ರಾಜ್ ಪ್ರತಿಮೆಗೆ ದುಷ್ಕರ್ಮಿಗಳಿಂದ ಬೆಂಕಿ

ವರನಟ ಡಾ.ರಾಚ್‌ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ನಗರದ ಬಲಮುರಿ ಸೇವಾ ಸಂಘದ ವತಿಯಿಂದ ಈ ಪ್ರತಿಮೆಯನ್ನು ನಿರ್ಮಾಣಗೊಳಿಸಲಾಗಿದ್ದು ಇದೇ ನ. 23ರಂದು ಪ್ರತಿಮೆಯ ಆನಾವರಣಗೊಳ್ಳಬೇಕಿತ್ತು. ನ.12ರಂದು ಈ ಪ್ರತಿಮೆಯನ್ನು ಪ್ರತಿಷ್ಥಾಪನೆ ಮಾಡಲಾಗಿತ್ತು. ಸ್ಥಳದಲ್ಲಿ ರಾಜ್‌ ಆಭಿಮಾನಿಗಳು...

ಕಲಾವಿದರ ಸಂಘದಿಂದ ತೇಜಸ್ವಿನಿ ಗೌಡ ವಿರುದ್ಧ ಪ್ರತಿಭಟನೆ

ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿರುದ್ಧ ಕಲಾವಿದರ ಸಂಘದ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉಮಾಶ್ರೀ ಅವರ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಲಾವಿದರ ಸಂಘದ ಸದಸ್ಯರು ತೇಜಸ್ವಿನಿ ಗೌಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಸಂಸದೆ ತೇಜಸ್ವಿನಿ ಗೌಡ ಸಚಿವೆ ಉಮಾಶ್ರೀ...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಕೆ.ಎಸ್ ಈಶ್ವರಪ್ಪ

'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ವಾರದೊಳಗೆ ಪ್ರಯಾಣ ದರ ಇಳಿಕೆಯಾಗದಿದ್ದರೆ ಬಸ್ ಸಂಚರಿಸಲು ಬಿಡುವುದಿಲ್ಲ: ಬಿಜೆಪಿ

ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...

ಕೇಂಬ್ರಿಡ್ಜ್ ಶಾಲೆಯಲ್ಲಿ ಶಿಕ್ಷಕನಿಂದಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗಿದೆ. ಆರ್ಕಿಡ್ಸ್ ಶಾಲೆಯ ಲೈಂಗಿಕ ದೌರ್ಜನ್ಯ ನಡೆದ ಬೆನ್ನಲ್ಲೇ ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾಗಿದ್ದು ಈ ರಾಕ್ಷಸೀ ಕೃತ್ಯವನ್ನು ಖಂಡಿಸಿ ಪೋಷಕರು ಹಾಗೂ ಬಿಜೆಪಿ ಕಾರ್ಯಕರ್ತರು ಶಾಲೆಯ ಮುಂದೆ...

ಗೊರೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ

'ತ್ಯಾಜ್ಯ ವಿಲೇವಾರಿ ಘಟಕ' ಸ್ಥಾಪನೆಗೆ ಮತ್ತೆ ಅಡ್ಡಿ ಉಂಟಾಗಿದೆ. ರಾಮನಗರದ ಮಾಗಡಿ ಬಳಿ ಇರುವ ಗೊರೂರಿನಲ್ಲಿ ತ್ಯಾಜ್ಯ ಘಟಕ ಸ್ಥಾಪನೆ ಮಾಡುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ ನಿಂದ ಮಂಡೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ ಎಂದು ಸರ್ಕಾರ ಅಲ್ಲಿನ ಗ್ರಾಮಸ್ಥರಿಗೆ ಭರವಸೆ...

ಸಿ.ಎಂ-ವೈದ್ಯಾಧಿಕಾರಿಗಳ ಮಾತುಕತೆ ಯಶಸ್ವಿ: ವೈದ್ಯರ ಮುಷ್ಕರ ವಾಪಸ್

ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ಯಶಸ್ವಿಯಾಗಿದ್ದು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವೈದ್ಯರು ಮುಷ್ಕರ ವಾಪಸ್ ಪಡೆದಿದ್ದಾರೆ. 14 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಇದಕ್ಕೆ...

ಭೂಕಬಳಿಕೆ ವಿರುದ್ಧ ನಿರಂತರ ಹೋರಾಟ: ಪ್ರತಿಭಟನಾ ನಿರತರೊಂದಿಗೆ ಸಿ.ಎಂ ಸಭೆ

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಲವು ದಿನಗಳಿಂದ ಟೌನ್ ಹಾಲ್ ಎದುರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಎಐಎಡಿಎಂಕೆ ಪ್ರತಿಭಟನೆಗೆ ವಿಜಯಕಾಂತ್ ಖಂಡನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ಎಐಎಡಿಎಂಕೆ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಡಿಎಂಡಿಕೆ ಮುಖ್ಯಸ್ಥ, ನಟ ವಿಜಯಕಾಂತ್ ಖಂಡಿಸಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾಧ್ಯಂತ ಪ್ರತಿ ದಿನ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ರಾಜ್ಯದ ಜನತೆ ಪ್ರತಿಭಟನೆಯಿಂದ ನಲುಗಿ...

ಜಯಲಲಿತಾ ಬಿಡುಗಡೆಗೆ ಆಗ್ರಹ: ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಸತ್ಯಾಗ್ರಹ

ಜಯಲಲಿತಾ ಬಿಡುಗಡೆಗೆ ಆಗ್ರಹಿಸಿ ತಮಿಳುನಾಡು ನಿಯೋಜಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಎಐಎಡಿಎಂಕೆ ನಾಯಕರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜಯಲಲಿತಾ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹರ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು,...

ಬಿಬಿಎಂಪಿ ನೌಕರರಿಂದ ಬೃಹತ್ ಪ್ರತಿಭಟನೆ:ಪಾಲಿಕೆ ವ್ಯಾಪ್ತಿಯ ಕೆಲಸಗಳಿಗೆ ಕತ್ತರಿ

'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಮೇಥಿ ಲೋಕಸಭಾ ಕ್ಷೇತ್ರದ ಜನತೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ತಾವು ಪ್ರತಿನಿಧಿಸುತ್ತಿದ್ದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸೆ.4ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ...

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ- ನವಾಜ್ ಷರೀಫ್ ಸ್ಪಷ್ಟನೆ

ಆಡಳಿತ ವಿರೋಧಿ ಪ್ರತಿಭಟನೆ ಎದುರಿಸುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸೆ.2ರಂದು ಪಾಕಿಸ್ತಾನದ ರಾಜಕೀಯ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ್ದು ರಾಜೀನಾಮೆಯನ್ನೂ ಕೊಡುವುದಿಲ್ಲ, ರಜೆ ಮೇಲೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಸಂವಿಧಾನದ ನಿಯಮವಿದ್ದು ಅದನ್ನು ಮೀರಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾ...

ಪಾಕ್ ರಾಜಕೀಯ ಬಿಕ್ಕಟ್ಟು: ಪೊಲೀಸರ ಮೇಲೆ ಪ್ರತಿಭಟನಾ ನಿರತರಿಂದ ಹಲ್ಲೆ

'ಪಾಕಿಸ್ತಾನ'ದಲ್ಲಿ ಆಂತರಿಕ ಬಿಕ್ಕಟ್ಟು ಉಲ್ಬಣಿಸಿದ್ದು ಸೆ.1ರಂದೂ ಪಾಕ್ ಸಂಸತ್ ಭವನದ ಎದುರು ಆಡಳಿತ ವಿರೋಧಿ ಪ್ರತಿಭಟನೆ ಮುಂದುವರೆದಿದೆ. ಪಾಕ್ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಒತ್ತಾಯಿಸಿ ಅಲ್ಲಿನ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಹಾಗೂ...

ಪಾಕ್ ನಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪಾಕಿಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ನಾಯಕ ಇಮ್ರಾನ್ ಖಾನ್ ಹಾಗೂ ತಾಹಿರ್ ಉಲ್ ಖಾದ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ನವಾಜ್ ಷರೀಫ್ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಇದರಿಂದಾಗಿ...

ಕೇಂದ್ರ ಸಚಿವ ಡಿ.ವಿ.ಎಸ್ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ರೈಲ್ವೇ ಸಚಿವ ಡಿ.ವಿ ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‌ನ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು...

ಮತಗಟ್ಟೆ ಸ್ಥಾಪನೆಗೆ ಆಗ್ರಹ: ಮತದಾನ ಬಹಿಷ್ಕಾರ

ಮತಗಟ್ಟೆ ಸ್ಥಾಪನೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಆದರೆ ಶಿಕಾರಿಪುರ ಕ್ಷೇತ್ರದ ಮಾಳಗೊಂಡಕೊಪ್ಪದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ...

ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಕಾರ್ ಮೇಲೆ ಗುಂಡಿನ ದಾಳಿ

ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಮಾಜಿ ಕ್ರಿಕೆಟಿಗ, ಪಾಕ್ ರಾಜಕಾರಣಿ ಇಮ್ರಾನ್ ಖಾನ್ ಕಾರಿನ ಮೇಲೆ 15 ಗುಂಡಿನ ದಾಳಿ ನಡೆದಿದೆ. ಪ್ರಾಣಾಪಾಯದಿಂದ ಇಮ್ರಾನ್ ಖಾನ್ ಬಚಾವಾಗಿದ್ದಾರೆ. ತಮ್ಮ ಮೇಲೆ ಗುಂಡಿನ ದಾಳಿ ನಡೆದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್...

ಮಾಜಿ ಸಿ.ಎಂ ಕುಮಾರಸ್ವಾಮಿಗೆ ಮಾಜಿ ಸಂಸದ ವಿಶ್ವನಾಥ್ 13 ಪ್ರಶ್ನೆ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಹೆಚ್.ವಿಶ್ವನಾಥ್ 13 ಪ್ರಶ್ನೆಗಳನ್ನು ಕೇಳಿದ್ದಾರೆ. ಆಯ್ಕೆಯಾಗಿರುವ 362 ಅಭ್ಯರ್ಥಿಗಳ ಪೈಕಿ 127 ಅಭ್ಯರ್ಥಿಗಳು ಕುಮಾರಸ್ವಾಮಿ ಕಡೆಯವರು ಎಂಬ ಮಾಹಿತಿ...

ನನ್ನ ದೂರವಾಣಿ ಸಂಭಾಷಣೆ ದಾಖಲೆ ಕಲೆ ಹಾಕಲು ಕುಮಾರಸ್ವಾಮಿ ಯಾರು?: ಡಾ.ಮೈತ್ರಿ

'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ. ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...

ಇಲಾಖಾ ತನಿಖೆ ಎದುರಿಸಿದ್ದ ಕೆ.ಎಸ್.ಆರ್.ಪಿ ಪೇದೆ ಆತ್ಮಹತ್ಯೆಗೆ ಯತ್ನ

'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು...

ಕೆಪಿಎಸ್ ಸಿ ನೇಮಕಾತಿ ರದ್ದು: ಸಿದ್ದರಾಮಯ್ಯಗೆ ಹೆಚ್.ಡಿ.ಕೆ 12 ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಅಕ್ರಮವೆಸಗಿಲ್ಲ: ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...

ಕೆಪಿಎಸ್ಸಿ ನೇಮಕಾತಿ ರದ್ದು ನಿರ್ಧಾರ ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ-ಅನಂತ್ ಕುಮಾರ್

ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ) 2011ನೇ ಸಾಲಿನ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ಖಂಡಿಸಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮ, ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ. ಆ.10ರಂದು...

ಕೆಪಿಎಸ್ ಸಿ ನೇಮಕಾತಿ ರದ್ದು: ಹೆಚ್.ಡಿ.ಕೆ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ,...

ತಾಕತ್ ಇದ್ದರೆ ಸಿದ್ದರಾಮಯ್ಯ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ: ಅಭ್ಯರ್ಥಿಗಳ ಸವಾಲು

2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited