Untitled Document
Sign Up | Login    
Dynamic website and Portals
  

Related News

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ. ಈ ಮೂಲಕ ಪಿ.ವಿ ಸಿಂಧು 2017ರ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸುಗೊಂಡಿರುವ ಭಾರತದ ಎರಡನೇ ಕ್ರೀಡಾಪಟುವಾಗಿದ್ದಾರೆ. ಈ ಹಿಂದೆ ಇದೇ ಪ್ರಶಸ್ತಿಗೆ ಭಾರತ ಕ್ರಿಕೆಟ್ ತಂಡದ...

ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ವಾನ್‌ ಹಿಪ್ಪಲ್‌ ಪ್ರಶಸ್ತಿ

ಹಿರಿಯ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌ ಅವರಿಗೆ ಅಮೆರಿಕದ ಅತ್ಯುನ್ನತ ‘ವಾನ್‌ ಹಿಪ್ಪಲ್‌’ ಪ್ರಶಸ್ತಿ ಲಭಿಸಿದೆ. ಅಮೆರಿಕದ ಮೆಟಿರಿಯಲ್‌ ರಿಸರ್ಚ್‌ ಸೊಸೈಟಿಯು ಮೆಟಿರಿಯಲ್‌ ರಿಸರ್ಚ್‌ (ವಸ್ತುಗಳ ಸಂಶೋಧನೆ) ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಈ ಪ್ರಶಸ್ತಿ ನೀಡುತ್ತದೆ. ಈ ಪ್ರಶಸ್ತಿ ಪಡೆಯುತ್ತಿರುವ ಏಷ್ಯಾದ ಖಂಡದ...

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ ಅವರಿಗೆ ನೊಬೆಲ್ ಪ್ರಶಸ್ತಿ

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ 2016ನೇ ಸಾಲಿನ ವೈದ್ಯಕೀಯ ವಿಭಾಗದ ನೊಬೆಲ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಯೊಶಿನೊರಿ ಅವರು ದೇಹ ರಚನಾ ಪದಾರ್ಥಗಳು ಜೀರ್ಣಿಸುವ ಪ್ರಕ್ರಿಯೆ (ಅಟೋಫೇಜಿ ಕಾರ್ಯವೈಖರಿ)ಯಲ್ಲಿ ನಡೆಸಿರುವ ಸಂಶೋಧನೆಗಾಗಿ ನೊಬೆಲ್‌ ಪ್ರಶಸ್ತಿಯನ್ನು ನೀಡಲಾಗಿದೆ. ಯೊಶಿನೊರಿ ಒಶುಮಿ ಅವರ ಸಂಶೋಧನೆಯು ಕ್ಯಾನ್ಸರ್‌ ಹಾಗೂ ಪಾರ್ಕಿನ್ಸನ್ಸ್‌...

ಪ್ರಧಾನಿ ಮೋದಿಗೆ ಅಮೀರ್‌ ಅಮಾನುಲ್ಲಾ ಖಾನ್‌ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಫ್ಘಾನಿಸ್ತಾನ ಸರ್ಕಾರ, ತನ್ನ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಅಮೀರ್‌ ಅಮಾನುಲ್ಲಾ ಖಾನ್‌ ಪ್ರಶಸ್ತಿ ನೀಡಿ ಗೌರವಿಸಿದೆ. ಆಪ್ಘಾನಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ಮೋದಿ,ಭಾರತ-ಆಫ್ಘಾನಿಸ್ತಾನ ಸ್ನೇಹದ ಸಂಕೇತವಾದ ಸಲ್ಮಾ ಅಣೆಕಟ್ಟು ಉದ್ಘಾಟನೆ ಮಾಡಿದರು. ಈ ವೇಳೆ ಮೋದಿ...

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ, ವಿಜಯ ರಾಘವೇಂದ್ರ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರೆ, ಮಾಲಾಶ್ರೀ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಸಚಿವ ರೋಶನ್...

ಸತತ 5ನೇ ಬಾರಿಗೆ ಚಾಂಪಿಯನ್‌ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 11 ಹಾಗೂ 12 ರಂದು ನಡೆದ 'ನವಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್‌ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ...

ಸೋಮವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪದ್ಮ ಪ್ರಶಸ್ತಿ ಪ್ರದಾನ

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪದ್ಮ ಪ್ರಶಸ್ತಿ ವಿಜೇತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿಯವರು 5 ಪದ್ಮ ವಿಭೂಷಣ, 8 ಪದ್ಮ ಭೂಷಣ್ ಮತ್ತು 43 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪದ್ಮ ವಿಭೂಷಣಃ *...

ಆಳ್ವಾಸ್ ಮೀಡಿಯಾ ಬಝ್ಃ ಎಸ್.ಡಿ.ಎಂಗೆ ಸಮಗ್ರ ಪ್ರಶಸ್ತಿ

ಇತ್ತೀಚೆಗೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆಳ್ವಾಸ್ ಮೀಡಿಯಾ ಬಝ್ - 2016ರ ರಾಷ್ಟ್ರೀಯ ಮಾಧ್ಯಮ ಉತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆದ್ದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು 11 ಸ್ಪರ್ಧೆಗಳ ಪೈಕಿ 10 ಸ್ಪರ್ಧೆಗಳಲ್ಲಿ...

ಪ್ರತಿ ಅಧಿವೇಶನದ ಒಂದು ದಿನ ಮಹಿಳೆಯರಿಗಾಗಿ ಮೀಸಲಿಡುವ ಕುರಿತು ಸಮಾಲೋಚನೆ ನಡೆಸುವುದಾಗಿ ಸಿಎಂ ಭರವಸೆ

ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಹಿಳಾ...

ನಟ,ಪದ್ಮಭೂಷಣ ಅನುಪಮ್‌ ಖೇರ್‌ ಗೆ ಪಾಕ್‌ ವೀಸಾ ನಿರಾಕರಣೆ

ಕರಾಚಿ ಸಾಹಿತ್ಯೋತ್ಸವಕ್ಕೆ ಆಹ್ವಾನಿತರಾಗಿರುವ, ಇತ್ತೀಚಿಗೆ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾಗಿರುವ ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರಿಗೆ ಪಾಕಿಸ್ತಾನ ವೀಸಾ ನಿರಾಕರಿಸಿದೆ. ಅನುಪಮ್‌ ಖೇರ್‌ ಅವರು ಫೆಬ್ರವರಿ 5ರಂದು ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದ ಒಟ್ಟು 18 ಮಂದಿಯ ಪೈಕಿ...

ಪದ್ಮ ಪ್ರಶಸ್ತಿ ಪ್ರಕಟಃ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ

67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ. ಈ ಬಾರಿ 10 ಪದ್ಮವಿಭೂಷಣ, 19...

ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚೆನ್ನೈನಲ್ಲಿ ಮೊದಲ ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರ ಒಂದು ದಿನದ ಭೇಟಿಯ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ತ ಮೋದಿ ಅವರು ಕೈಮಗ್ಗ ನೇಕಾರರಿಗೆ...

ವಾಜಪೇಯಿ ಪರವಾಗಿ 'ಲಿಬರೇಶನ್ ಆಫ್ ವಾರ್' ಪ್ರಶಸ್ತಿ ಸ್ವೀಕರಿಸಿದ ಮೋದಿ

ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು...

ಶಶಿ ಕಪೂರ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ಬಾಲಿವುಡ್‌ ನ‌ ಹಿರಿಯ ನಟ ಶಶಿ ಕಪೂರ್‌ ಅವರಿಗೆ 2015 ನೇ ಸಾಲಿನ ಅತ್ಯುನ್ನತ ಚಲನ ಚಿತ್ರ ಪ್ರಶಸ್ತಿಯಾದ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಂಬೈಯ ಪ್ರಥ್ವಿ ಚಿತ್ರಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ...

ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ: ಬಾಬಾ ರಾಮ್ ದೇವ್

ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ತಾರೆ ಎಂದಿರುವ ರಾಮ್...

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬೇಡ: ಸರ್ಕಾರಕ್ಕೆ ಆಯ್ಕೆ ಸಮಿತಿ ಶಿಫಾರಸು

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬಿರುದಾವಳಿಗಳನ್ನು ನೀಡುವ ಅರಸೊತ್ತಿಗೆ ಸಂಸ್ಕೃತಿ ಕೊನೆಯಾಗಬೇಕು ಎಂದು ರಾಷ್ಟ್ರಕವಿ ಪ್ರಶಸ್ತಿ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋ.ಚನ್ನಬಸಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ 16 ಪುಟಗಳ ವರದಿ ಸಲ್ಲಿಸಿದ್ದು,...

ಶತಮಾನದ ಬಾಕ್ಸಿಂಗ್‌ ಪ್ರಶಸ್ತಿ ಗೆದ್ದ ಫ್ಲಾಯ್ಡ ಮೇವೆದರ್‌

ವಿಶ್ವಾದ್ಯಂತ ಕ್ರೀಡಾ ಪ್ರೇಮಿಗಳಲ್ಲಿ ಸಂಚಲನ ಮೂಡಿಸಿದ್ದ ಶತಮಾನದ ಬಾಕ್ಸಿಂಗ್‌ ಪ್ರಶಸ್ತಿಯನ್ನು ಅಮೇರಿಕಾದ ಫ್ಲಾಯ್ಡ ಮೇವೆದರ್‌ ಅವರು ಗೆಲ್ಲುವ ಮೂಲಕ ಬರೋಬ್ಬರಿ 900 ಕೋಟಿ ರೂಪಾಯಿ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಲಾಸ್‌ ವೇಗಾಸ್‌ ನ ಎಂಜಿಎಂ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ ...

ಹಿಂದಿ ದಿವಸ್: ಇಂದಿರಾ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಮರು ನಾಮಕರಣ

'ಹಿಂದಿ ದಿವಸ್' ಅಂಗವಾಗಿ ನೀಡಲಾಗುತ್ತಿದ್ದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೆಸರಿನ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ. ಪ್ರತಿ ವರ್ಷ ಹಿಂದಿ ದಿವಸ್ ಅಂಗವಾಗಿ ಕೇಂದ್ರ ಸರ್ಕಾರದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ...

2015ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ 91 ಸಾಧಕರು

ಪ್ರಸಕ್ತ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 91 ಮಂದಿ ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗಿದೆ. ಏ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮೇಯರ್ ಶಾಂತಕುಮಾರಿ, ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಾನ್ ಸಾಧನೆಗಳನ್ನು ಗುರುತಿಸಿ...

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುಸ್ತಫಾ ಕಮಲ್ ರಾಜೀನಾಮೆ

ಕ್ರಿಕೆಟ್‌ ವಿಶ್ವಕಪ್‌ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್‌ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್‌ ಪಂದ್ಯದಲ್ಲಿ ಅಂಪೈರಿಂಗ್‌ ನಲ್ಲಿ ಗುಣಮಟ್ಟವಿರಲಿಲ್ಲ....

ಇಸ್ರೋಗೆ 2014ರ ಗಾಂಧಿ ಶಾಂತಿ ಪ್ರಶಸ್ತಿ ಪ್ರಕಟ

ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) 2014ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನವಾಗಿದೆ. ದೇಶಕ್ಕೆ ಬಾಹ್ಯಾಕಾಶ ತಂತ್ರಜ್ಞಾನ ಸೇವೆ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅಹಿಂಸಾ ಮಾರ್ಗದ ಮೂಲಕ ಸಾಮಾಜಿಕ, ಆರ್ಥಿಕ, ರಾಜಕೀಯ ಸೇವೆಗೈದವರಿಗೆ ಈ...

ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಮಟ್ಟದ ಐಕಾನ್: ರಾಜನಾಥ್ ಸಿಂಗ್

ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ. ನಮ್ಮ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ. ’ನಾನು ಅವನಲ್ಲ, ಅವಳು' ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿ ಸಂಚಾರಿ ವಿಜಯ್‌ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ. ಇತಿಹಾಸದಲ್ಲೇ ಕನ್ನಡ ಚಿತ್ರ...

ಬಾಲಿವುಡ್‌ ನಟ ಶಶಿ ಕಪೂರ್‌ ಗೆ ಫಾಲ್ಕೆ ಪ್ರಶಸ್ತಿ ಗೌರವ

ಖ್ಯಾತ ನಟ ಶಶಿ ಕಪೂರ್ ಅವರಿಗೆ 2014ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಸ್ವರ್ಣ ಕಮಲ, 10 ಲಕ್ಷ ರೂ. ನಗದು ಹಾಗೂ ಶಾಲನ್ನು ಫಾಲ್ಕೆ ಪ್ರಶಸ್ತಿ ಹೊಂದಿದೆ. ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಬಿಂಬಿತವಾಗಿರುವ ಫಾಲ್ಕೆ...

ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮ ಪ್ರಶಸ್ತಿ ಹಿಂಪಡೆಯುವ ಸಾಧ್ಯತೆ?

ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ. ನಟ ಸೈಫ್ ಅಲಿ ಖಾನ್‌ ಮುಂಬೈನ ಹೋಟೆಲ್‌ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...

ನಿರ್ದೇಶಕ ಸಿದ್ದಲಿಂಗಯ್ಯ ನಿಧನ

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಮಾ.12ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ, ಕಳೆದ ಕೆಲವು ದಿನಗಳಿಂದ ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರಿಗೆ ಎಚ್1ಎನ್1 ಸೋಂಕು ಕೂಡ ಆವರಿಸಿತ್ತು. ಬಂಗಾರದ ಮನುಷ್ಯ, ಭೂತಯ್ಯನ ಮಗ ಅಯ್ಯು, ದೂರದಬೆಟ್ಟ...

ಕೇಂದ್ರ ಸರ್ಕಾರದ ವಿರುದ್ಧ ಅಮಾರ್ತ್ಯ ಸೇನ್ ಆಕ್ರೋಶ

'ನೊಬೆಲ್ ಪ್ರಶಸ್ತಿ' ಪುರಸ್ಕೃತ ಅರ್ಥಶಾಸ್ತ್ರಜ್ನ ಅಮಾರ್ತ್ಯ ಸೇನ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಎರಡನೇ ಅವಧಿಗೆ ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮುಂದುವರೆಯಬೇಕಿದ್ದ ಅವಕಾಶವನ್ನು ಕೇಂದ್ರ ಸರ್ಕಾರ ತಪ್ಪಿಸಿದೆ ಎಂದು ಅಮಾರ್ತ್ಯಸೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಪತ್ರ...

ಪದ್ಮ ಪ್ರಶಸ್ತಿ ಬೇಡವೆಂದ ರಾಮ್‌ ದೇವ್, ರವಿಶಂಕರ್ ಗುರೂಜಿ

ಯೋಗಗುರು ಬಾಬಾ ರಾಮ್‌ ದೇವ್ ಹಾಗೂ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ತಮಗೆ ಪದ್ಮ ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ. ಗಣರಾಜ್ಯೋತ್ಸವದಂದು ಘೋಷಣೆಯಾಗಲಿರುವ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ರಾಮ್‌ ದೇವ್ ಹಾಗೂ ರವಿಶಂಕರ್ ಗುರೂಜಿ ಹೆಸರು ಕೂಡ ಇದೆ ಎಂಬ...

ಪದ್ಮ ಪ್ರಶಸ್ತಿ ಪ್ರಕಟ

2014-15ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಆರು ಜನ ಗಣ್ಯರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಹಾಗೂ ಐವರು ಗಣ್ಯರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ, ಯೋಗ ಗುರು ಬಾಬಾರಾಮ್ ದೇವ್,ಆರ್ಟ್ ಆಫ್ ಲಿವಿಂಗ್...

ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ನಿಧನ

ಟಾಲಿವುಡ್‌ನ ಖ್ಯಾತ ಹಾಸ್ಯ ನಟ ಎಂ.ಎಸ್ ನಾರಾಯಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಎಂ.ಎಸ್ ನಾರಾಯಣ ಅವರು ಕಳೆದ ಒಂದು ವಾರದಿಂದ ಮಧಪುರ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಕ್ರಾಂತಿ ಹಬ್ಬ ಆಚರಿಸಲೆಂದು ಆಂಧ್ರದ...

ಎಸ್.ಎಲ್ ಭೈರಪ್ಪ, ರವಿಶಂಕರ್ ಗುರೂಜಿಗೆ ಪದ್ಮವಿಭೂಷಣ ಪ್ರಶಸ್ತಿ?

'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ. ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ...

ಎಲ್.ಕೆ.ಅಡ್ವಾಣಿಯವರಿಗೆ ಪದ್ಮವಿಭೂಷಣ ಪ್ರಶಸ್ತಿ ಸಾಧ್ಯತೆ

ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಯೋಗಗುರು ಬಾಬಾ ರಾಮ್‌ದೇವ್, ಯೋಗ...

ಕೇಂದ್ರದಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...

ಏಷ್ಯಾದ ವರ್ಷದ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ...

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...

2012-13 ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

ಜಾನಪದ ಅಕಾಡೆಮಿಯು 2012 ಮತ್ತು 2013ರ ಸಾಲಿನ ಜಾನಪದ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಗೆ ಇಬ್ಬರಂತೆ ಒಟ್ಟು 30 ಜಿಲ್ಲೆಗಳಿಂದ 60 ಮಂದಿ ಕಲಾವಿದರನ್ನು ಹಾಗೂ 4 ಮಂದಿ ವಿದ್ವಾಂಸರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ...

ವಿವಿಧ 16 ಪ್ರಶಸ್ತಿಗಳ ಆಯ್ಕೆಗಾಗಿ ಸಮಿತಿ ಪ್ರಕಟ

2014 ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ವಿವಿಧ 16 ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಹಾಗೂ ನಾಡು-ನುಡಿಗೆ ಅತ್ಯುತ್ತಮ ಕೊಡುಗೆ ನೀಡಿದ ಗಣ್ಯ ಸಾಹಿತಿ/ಕಲಾವಿದರು/ಗಣ್ಯರನ್ನು ಗುರುತಿಸಿ...

ಭಾರತ-ಪಾಕ್ ಶಾಂತಿಗಾಗಿ ಒಟ್ಟಿಗೆ ಕೆಲಸ ಮಾಡಲು ಮಲಾಲಾಗೆ ಕೈಲಾಶ್ ಸತ್ಯಾರ್ಥಿ ಸಲಹೆ

'ಪಾಕಿಸ್ತಾನ' ಹಾಗೂ ಭಾರತ ದೇಶಗಳ ನಡುವೆ ಶಾಂತಿಯ ವಾತಾವರಣ ಮೂಡಿಸಲು ಪಾಕಿಸ್ತಾನದ ಹೆಣ್ಣುಮಕ್ಕಳ ಶಿಕ್ಷಣ ಪರ ಹೋರಾಟಗಾರ್ತಿ ಮಲಾಲಾ ಯುಸುಫ್ ಝೈ ಹಾಗೂ ತಾವು ಕೆಲಸ ಮಾಡಬೇಕಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಭಾಜನರಾಗಿರುವ ಕೈಲಾಶ್ ಸತ್ಯಾರ್ಥಿ ತಿಳಿಸಿದ್ದಾರೆ. ಪಾಕಿಸ್ತಾನದ ಹೆಣ್ಣು...

ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿಗೆ ನೊಬೆಲ್ ಪ್ರಶಸ್ತಿ

2014ನೇ ಸಾಲಿನ ಶಾಂತಿ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ಭಾರತದ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದ ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಯೂಸೂಫ್ ಝೈ ಅವರಿಗೆ ಪ್ರಶಸ್ತಿ ದೊರೆತಿದೆ. ಕೈಲಾಶ್‌ ಮಕ್ಕಳ ಹಕ್ಕು ಹೋರಾಟಗಾರರಾಗಿದ್ದು, ಎನ್‌.ಜಿ.ಓ...

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ನಿಧನ

ಪ್ರಸಾರ ಭಾರತಿ ಬೋರ್ಡ್ ನ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಎಂ.ವಿ ಕಾಮತ್(93 ) ನಿಧನರಾಗಿದ್ದಾರೆ. ಅ.9ರ ಬೆಳಿಗ್ಗೆ ಹೃದಯಾಘಾತದಿಂದ ಕಾಮತ್ ಮೃತಪಟ್ಟಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 7.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾದ...

ಮಹಾತ್ಮಗಾಂಧಿ ಸೇವಾ ಪ್ರಶಸ್ತಿಗೆ ಗಾಂಧೀವಾದಿ ಎಸ್.ಎನ್ ಸುಬ್ಬರಾವ್ ಆಯ್ಕೆ

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪ್ರಪ್ರಥಮ ಬಾರಿಗೆ ಸ್ಥಾಪಿಸಿರುವ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಮಧ್ಯಪ್ರದೇಶದಲ್ಲಿ ಚಂಬಲ್ ಕಣಿವೆಯ ಡಕಾಯಿತರ ಮನಪರಿವರ್ತನೆ ಮಾಡಿ ಮುಖ್ಯವಾಹಿನಿಗೆ ತಂದ ಹಿರಿಯ ಗಾಂಧೀವಾದಿ ಡಾ ಎಸ್. ಎನ್. ಸುಬ್ಬರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...

ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರುವ ದೇವರು: ಪ್ರಧಾನಿ ಮೋದಿ

ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಶಿಕ್ಷಕ...

ಖ್ಯಾತ ಇತಿಹಾಸಕಾರ ಬಿಪನ್ ಚಂದ್ರ ನಿಧನ

ಹೆಸರಾಂತ ಇತಿಹಾಸಕಾರ ಬಿಪನ್ ಚಂದ್ರ(86) ಅವರು ಆ.30ರಂದು ನಿಧನರಾಗಿದ್ದಾರೆ. ನಿದ್ದೆಯಲ್ಲಿರುವಾಗಲೇ ಏಕಾಏಕಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆ.30ರ ಬೆಳಿಗ್ಗೆ 6 ಗಂಟೆ ವೇಳೆಗೆ ಬಿಪನ್ ಚಂದ್ರ ನಿದ್ದೆಯಲ್ಲೇ ಗುರಗಾಂವ್ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಕೆಲವು ತಿಂಗಳಿನಿಂದ ಬಿಪನ್...

2011-12ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟ

2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ತಲ್ಲಣ ಪ್ರಥಮ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿರಿಯ ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನೇತೃತ್ವದ ಸಮಿತಿ, ಒಟ್ಟು...

ಜ್ಞಾನಪೀಠ ಪುರಸ್ಕೃತ ಡಾ.ಯು.ಆರ್ ಅನಂತ ಮೂರ್ತಿ ಇನ್ನಿಲ್ಲ

'ಜ್ಞಾನಪೀಠ' ಪ್ರಶಸ್ತಿ ಪುರಸ್ಕೃತ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತ ಮೂರ್ತಿ ಅವರು ಆ.22ರಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದರಾದರೂ ಲಘು...

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ನಿಧನ

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...

ಭಾರತೀಯ ಮೂಲದ ಪ್ರೊಫೆಸರ್ ಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ

ಭಾರತೀಯ ಮೂಲದ ಇಬ್ಬರು ಪ್ರೊಫೆಸರ್ ಗಳಿಗೆ ಗಣಿತ ವಿಭಾಗದಲ್ಲಿ ಜಾಗತಿಕ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪೈಕಿ ಒಬ್ಬರಿಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ. ಭಾರತೀಯರಾದ ಪ್ರೊ.ಮಂಜುಳ್ ಭಾರ್ಗವ ಅವರಿಗೆ ಫೀಲ್ಡ್ ಮೆಡಲ್ (ಗಣಿತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ), ಪ್ರೊ.ಸುಭಾಷ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited