Untitled Document
Sign Up | Login    
Dynamic website and Portals
  

Related News

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...

ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ:ಬಿ.ಎಸ್.ವೈ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಈ 2 ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ...

ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...

ಬಿ.ಎಸ್.ವೈ ವಿರುದ್ಧದ ಪ್ರಕರಣ ಕುರಿತು ಸುಪ್ರೀಂ ಮೆಟ್ಟಿಲೇರಲು ರಾಜ್ಯ ಸರ್ಕಾರ ನಿರ್ಧಾರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ವೈ ಅಧಿಕಾರ ಸ್ವೀಕಾರ

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು. ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ...

ಚೆಲುವರಾಯಸ್ವಾಮಿ, ಸಿ.ಪಿ ಯೋಗೇಶ್ವರ್ ಬಿಜೆಪಿ ಸೇರ್ಪಡೆ ಸಾಧ್ಯತೆ

ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮತ್ತೆ ಆಪರೇಷನ್‌ ಕಮಲ...

ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಪ್ರವಾಸ: ಬಿ.ಎಸ್.ವೈಗೆ ಟಾಂಗ್ ನೀಡಲು ತಂತ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...

ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ, ಸಂಸದ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರನ್ನಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಪ್ರಹ್ಲಾದ್ ಜೋಶಿ ಅವರಿಂದ ತೆರವಾಗುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇದೀಗ 4ನೇ ಬಾರಿಗೆ ಬಿಎಸ್ ವೈ ಅವರನ್ನು...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಸ್ಥಾನ: ಬೆಂಬಲಿಗರ, ಕಾರ್ಯಕರ್ತರ ಸಂಭ್ರಮ

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಿದ್ದಂತೆ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಮೂಲಕ ಬಿಎಸ್‌ವೈ ಕಟ್ಟಾ ಅಭಿಮಾನಿಗಳ ಯುಗಾದಿ ಸಂಭ್ರಮ ಇಮ್ಮಡಿಯಾಗಿದೆ. ಶಿವಮೊಗ್ಗದ ವಿನೋಬಾ ನಗರದ ಯಡಿಯೂರಪ್ಪ ಅವರ ನಿವಾಸದಲ್ಲಿ ಸಿಹಿ ಹಂಚಿ,...

ಏ.14ರಂದು ಬಿ.ಎಸ್.ವೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ, ಸಂಸದ, ಮಾಜಿ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪನವರ ಮನೆಗೆ ಬಿಜೆಪಿ ನಾಯಕರ ದಂಡೇ ಹರಿದು...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ಬಿಬಿಎಂಪಿ ಚುನಾವಣೆಃ ಮತ್ತೆ ಅರಳಿದ ಕಮಲ, 'ಕೈ' ಸುಟ್ಟುಕೊಂಡ ಕಾಂಗ್ರೆಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ...

ಸಿದ್ದರಾಮಯ್ಯ ಬಿಎಸ್ ವೈಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ?: ಹೆಚ್.ಡಿ.ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...

ಡಿನೋಟಿಫಿಕೇಶನ್ ಪ್ರಕರಣ: ಹೆಚ್.ಡಿ.ಕೆ ಹಾಗೂ ಬಿ.ಎಸ್.ವೈ ವಿರುದ್ಧ ಎಫ್.ಐ.ಆರ್

ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಮೂಲಕ ನಿವೇಶನಗಳನ್ನು ಹಂಚಿರುವುದರ ಬಗ್ಗೆ ಸಿಎಜಿ ವರದಿಯನ್ನು ಆಧರಿಸಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿ ಐ)...

ಸುಷ್ಮಾ ಸ್ವರಾಜ್ ಮಾನವೀಯತೆ ದೃಷ್ಟಿಯಿಂದ ನೆರವು ನೀಡಿದ್ದಾರೆ: ಬಿ.ಎಸ್.ವೈ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಯಾವುದೇ ತಪ್ಪು...

ಬಿ.ಎಸ್.ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ...

ಸಿಎಂ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತಾರೆ: ಯಡಿಯೂರಪ್ಪ

ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ...

ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಫ್.ಐ.ಆರ್‌ ದಾಖಲು

ಡಿನೋಟಿಫಿಕೇಷನ್‌ ಉರುಳು ಮತ್ತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಸುತ್ತ ಸುತ್ತಿಕೊಂಡಿದ್ದು, ಲೋಕಾಯುಕ್ತ ಪೊಲೀಸರು ಈ ಇಬ್ಬರೂ ನಾಯಕರ ವಿರುದ್ಧ ಎಫ್.ಐ.ಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಆರ್‌.ಟಿ.ನಗರ ಬಳಿ ಇರುವ ಮಠದಹಳ್ಳಿ ಲೇಔಟ್‌ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು...

ಉಚಿತ ಅಕ್ಕಿ ಕೊಡುತ್ತಿರೋರು ಯಡಿಯೂರಪ್ಪ ಎಂದ ಜನ: ಸಚಿವರು ಕಂಗಾಲು

ರಾಜ್ಯದಲ್ಲಿ ಉಚಿತವಾಗಿ ಅಕ್ಕಿ ನೀಡುತ್ತಿರೋರು ಯಾರು ಎಂಬ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಪ್ರಶ್ನೆಗೆ, ಜನರು ಬಿ.ಎಸ್,ಯಡಿಯೂರಪ್ಪ ಎಂಬ ಉತ್ತರ ಉತ್ತರ ನೀಡಿದ್ದು, ಇದನ್ನು ಕೇಳಿ ಸಚಿವರು ತಬ್ಬಿಬ್ಬಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಶಾಂತಿನಗರಕ್ಕೆ ಭೇಟಿ ನೀಡಿದ ಸಚಿವರು, ಸಾಮಾಜಿಕ...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟ ಹೇಳಿಕೆ ವಿಚಾರ: ಅಮಿತ್ ಶಾ ಗರಂ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ. ಪ್ರಭಾಕರ್ ಕೋರೆಗೆ ನೋಟಿಸ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಬಿಜೆಪಿಯಲ್ಲಿ ಹೆಚ್ಚಿನ ಸ್ಥಾನಮಾನ ಬಯಸಿಲ್ಲ: ಯಡಿಯೂರಪ್ಪ

ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ...

ಬಿ.ಎಸ್.ವೈಗೆ ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಲಾಬಿ

ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರ ಹುದ್ದೆಯ ಅವಧಿ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಮುಂದಿನ ಅಧ್ಯಕ್ಷರಾಗಲು ಈಗಲೇ ಲಾಬಿ ಆರಂಭವಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮತ್ತೂಮ್ಮೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆ ಬಹಿರಂಗವಾಗಿ ಹೊರಬಿದ್ದಿದೆ. ಪಕ್ಷದ ಮೂರು ದಿನಗಳ ಮಹತ್ವದ ರಾಷ್ಟ್ರೀಯ...

ಡಿನೋಟಿಫಿಕೇಷನ್ ಪ್ರಕರಣ: ಸಿಎಂಗೆ ಬಿಎಸ್ ವೈ ಸವಾಲು

ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲು ಎಲ್ಲ...

ಡಿನೋಟಿಫಿಕೆಷನ್ ನಡೆದದ್ದು ಬಿ ಎಸ್ ವೈ ಅವಧಿಯಲ್ಲಿ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು. ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...

ಸಿದ್ದರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ಬಿ.ಎಸ್.ವೈ

ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಅಕ್ರಮ ಆಸ್ತಿ ಗಳಿಕೆ ಪ್ರಕರಣ :ಬಿಎಸ್ ವೈ, ಈಶ್ವರಪ್ಪಗೆ ಸಂಕಷ್ಟ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಅರುಣಾದೇವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳನ್ಯಾಯಾಲಯ ನೀಡಿದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಹೊಸದಾಗಿ ಅರ್ಜಿ ಪರಿಗಣಿಸುವಂತೆ ಸೂಚಿಸಿದೆ. ಈ...

ಸಂಪನ್ಮೂಲ ಕ್ರೂಢೀಕರಣದಲ್ಲಿ ಸರ್ಕಾರ ವಿಫಲ: ಬಿಎಸ್ ವೈ

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ...

ಪಕ್ಷದ ನಿರ್ಲಕ್ಷವೇ ಸೋಲಿಗೆ ಕಾರಣ: ಬಿ.ಎಸ್.ಯಡಿಯೂರಪ್ಪ

ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...

ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಆಯ್ಕೆ

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited