Untitled Document
Sign Up | Login    
Dynamic website and Portals
  

Related News

ವೈಚಾರಿಕ ಹಾಗೂ ಪ್ರಗತಿಪರ ಚಿಂತನೆವುಳ್ಳ ಪತ್ರಕರ್ತರ ಸಂಖ್ಯೆ ಹೆಚ್ಚಬೇಕು: ಸಿಎಂ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ 12 ಸರ್ಕಾರಿ...

ಸತತ 5ನೇ ಬಾರಿಗೆ ಚಾಂಪಿಯನ್‌ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 11 ಹಾಗೂ 12 ರಂದು ನಡೆದ 'ನವಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್‌ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ...

ಮಧ್ಯಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲೀಂ ಸಮುದಾಯದಿಂದ ಜಾಗ ದಾನ

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಸಮುದಾಯವೇ ಜಾಗವನ್ನು ಕೊಟ್ಟು, ಹಣಕಾಸಿನ ನೆರವು ನೀಡಿದೆ ಎಂದು ಜೀ ನ್ಯೂಸ್ ಮಾಧ್ಯಮ ವರದಿ ತಿಳಿಸಿದೆ. ಇದೊಂದು ಕೋಮು ಸೌಹಾರ್ದತೆಗೆ ಉತ್ತಮ ಉದಾಹರಣೆಯಾಗಿದೆ. ಮೊರೆನಾದ ಖೇಡಾಕಾಲಾ ಗ್ರಾಮದಲ್ಲಿ ಶ್ರೀ ರಾಮ್ ಜಾನಕಿ...

ಮುಂಡಾಜೆ ಶತಾಬ್ದಿ ವಿದ್ಯಾಲಯ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ ಭಿಡೆ ನಾರಾಯಣ ಭಟ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಉಜಿರೆ ಉದ್ಯಮಿ ಉಮೇಶ್ ಶೆಟ್ಟಿ ಪಥ ಸಂಚಲನ ಹಾಗೂ ಶತಾಬಿ ವಿದ್ಯಾಲಯ...

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...

ಸ್ನೇಹ ಶಾಲೆಯಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಗಾರ

ಶುಕ್ರವಾರ, ಜು. 31 ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಗಾರ ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಉಪನ್ಯಾಸಕರಾದ ಡಾ. ಗಣೇಶ್ ನಾಯಕ್ ಇವರು ಭಾಗವಹಿಸಿ ಡೆಂಗ್ಯೂ ಎಂದರೇನು?, ಅದು ಹೇಗೆ ಹರಡುತ್ತದೆ?, ರೋಗದ ಲಕ್ಷಣ...

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ: ದೇವೇಗೌಡ

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ. ಇಡೀ ಕರ್ನಾಟಕದಲ್ಲಿ ಅಂತಹವರು ಯಾರೂ ಸಿಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾನು ದೇಶದ ಪ್ರಧಾನಿಯಾಗಿದ್ದು ಆಕಸ್ಮಿಕ....

ಬೋಫೋರ್ಸ್ ಹಗರಣ ಎಂದು ಕೋರ್ಟ್ ನಲ್ಲಿ ಸಾಬೀತಾಗಿಲ್ಲ: ಪ್ರಣಬ್ ಮುಖರ್ಜಿ

ಭಾರತದ ಯಾವುದೇ ನ್ಯಾಯಾಲಯದಲ್ಲಿ ಬೊಫೋರ್ಸ್‌ ಪ್ರಕರಣ ಈ ತನಕವೂ ಒಂದು ಹಗರಣವೆಂದು ಸಾಬೀತಾಗಿಲ್ಲ; ಬೊಫೋರ್ಸ್‌ ಹಗರಣವು ಕೇವಲ ಮಾಧ್ಯಮ ವಿಚಾರಣೆಯ ಫ‌ಲಶ್ರುತಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ಸ್ವೀಡನ್‌ ಪತ್ರಿಕೆ ಡೇಜನ್ಸ್‌ ನ್ಹೆಟರ್‌ ಗೆ ನೀಡಿದ ಸಂದರ್ಶನದಲ್ಲಿ, ರಾಷ್ಟ್ರಪತಿ ಮುಖರ್ಜಿ ಅವರಿಗೆ...

ಭಾರತದ ಭೂಪಟವನ್ನು ತಿರುಚಿ ಉದ್ಧಟತನ ಮೆರೆದ ಚೀನೀ ಮಾಧ್ಯಮ

ಒಂದೆಡೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಕೋರಿ ಉಭಯ ದೇಶಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುತ್ತಿದ್ದರೆ ಇನ್ನೊಂದೆಡೆ ಚೀನೀ ಮಾಧ್ಯಮಗಳು ಭಾರತದ ಭೂಪಟವನ್ನು ತಿರುಚಿ ತಮ್ಮ ಉದ್ಧಟತನವನ್ನು ಮೆರೆಯುತ್ತಿವೆ. ಪ್ರಧಾನಿ ಮೋದಿ ಮೂರು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದು, ಗಡಿ...

ಕೇಜ್ರಿವಾಲ್ ಸುತ್ತೋಲೆಗೆ ಸುಪ್ರೀಂ ಕೋರ್ಟ್ ತಡೆ

ತಮ್ಮ ಸರ್ಕಾರ ಹಾಗೂ ಸಚಿವರು, ಶಾಸಕರ ವಿರುದ್ಧ ವರದಿ ಬಿತ್ತರಿಸಿದರೆ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಸುತ್ತೋಲೆಗೆ ಸುಪ್ರೀಂ...

ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ಸವಾಲು

ಸ್ವಚ್ಛ, ಪಾರದರ್ಶಕ, ಹಗರಣ ಮುಕ್ತ ಸರ್ಕಾರ ನೀಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಒಂದಂಕಿ ಲಾಟರಿ ಹಾಗೂ ಮಟ್ಕಾ ದಂಧೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಬೆಂಗಳೂರು...

ಸರ್ಕಾರದ ಎರಡು ವರ್ಷಗಳ ಸಾಧನೆ ತೃಪ್ತಿ ತಂದಿದೆ: ಸಿಎಂ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಮಾತೃಭಾಷೆಯಲ್ಲಿ ಶಿಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಒಲವು: ವೆಂಕಯ್ಯ ನಾಯ್ಡು

ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ...

ರಾಜಕೀಯದಲ್ಲಿ ನನ್ನನ್ನು ವಿಲನ್‌ ನಂತೆ ಚಿತ್ರಿಸಿದರು: ದೇವೇಗೌಡ

ರಾಜಕೀಯವಾಗಿ ತಮ್ಮಷ್ಟು ಪೆಟ್ಟು ತಿಂದ ರಾಜಕಾರಣಿ ಮತ್ತೂಬ್ಬರಿರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ. ಅಲ್ಲದೆ, ರಾಜಕೀಯದಲ್ಲಿ ತಮ್ಮನ್ನು ವಿಲನ್‌ ಆಗಿಯೇ ಹೆಚ್ಚು ಚಿತ್ರಿಸಲಾಯಿತು ಎಂದು ಕಿಡಿಕಾರಿದ್ದಾರೆ. ಹಾಸನದಲ್ಲಿ ನಡೆದ ಪತ್ರಕರ್ತರ 32ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,...

ಉಗ್ರ ಅಜ್ಮಲ್ ಕಸಬ್ ಬಗ್ಗೆ ವಕೀಲ ಉಜ್ವಲ್ ನಿಕ್ಕಮ್ ಹೇಳಿದ್ದ ಸುಳ್ಳು ಬಹಿರಂಗ!

ಇತಿಹಾಸದ ಪುಟ ಸೇರಿರುವ ಮುಂಬೈ ದಾಳಿ ಉಗ್ರ ಅಜ್ಮಲ್ ಕಸಬ್ ಬಿರಿಯಾನಿ ಕೇಳಿದ ಬಗ್ಗೆ ಸತ್ಯವೊಂದು ಹೊರಬಿದ್ದಿದೆ. ಜೈಪುರದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹದ ಬಗ್ಗೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಸರ್ಕಾರಿ ಅಭಿಯೋಜಕ ಉಜ್ವಲ್ ನಿಕ್ಕಮ್ ಅಜ್ಮಲ್ ಕಸಬ್ ಗೆ ಸಂಬಂಧಿಸಿದ...

ಕನ್ನಡ ಕಡ್ಡಾಯ: ಅಧಿವೇಶನದಲ್ಲಿ ಮಸೂದೆ ಮಂಡನೆ

ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕೊನೆಯ ಅಸ್ತ್ರವಾಗಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಬಜೆಟ್‌ ಅಧಿವೇಶನದಲ್ಲೇ ತಿದ್ದುಪಡಿ ಕಾಯ್ದೆ ಮಂಡಿಸಲು ತೀರ್ಮಾನಿಸಿದೆ. ಜತೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ 1ರಿಂದ 12ನೇ ತರಗತಿವರೆಗೆ ಕನ್ನಡ ಒಂದು...

ಕನ್ನಡಿಗರು ದೀರ್ಘ‌ ಆಂದೋಲನಕ್ಕೆ ಸಿದ್ಧರಾಗಬೇಕು: ಡಾ.ಸಿದ್ದಲಿಂಗಯ್ಯ

ಸಾಹಿತ್ಯ ಮತ್ತು ಪ್ರಾದೇಶಿಕ ಅಸಮಾನತೆಯ ನಿವಾರಣೆಗಿಂತ ಮೊದಲು, ಭಾಷೆಯ ಆತಂಕವನ್ನು ತೊಡೆಯುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಿದ್ಧಲಿಂಗಯ್ಯ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕನ್ನಡವನ್ನು ಉಳಿಸಬೇಕು. ಕನ್ನಡಿಗನಿಗೆ...

ಪ್ರಾಥಮಿಕ ತರಗತಿಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು: ಯುಪಿ ರಾಜ್ಯಪಾಲ ರಾಮ್ ನಾಯ್ಕ್

'ಇಂಗ್ಲೀಷ್ ಭಾಷೆ'ಯನ್ನು ಪ್ರಾಥಮಿಕವಾಗಿ ಕಲಿಸುವುದನ್ನು ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ವಿರೋಧಿಸಿದ್ದು, ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ. ಅಲಹಾಬಾದ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಮ್ ನಾಯ್ಕ್, ವಿದ್ಯಾರ್ಥಿಗಳ ತಿಳುವಳಿಕೆ ಪಕ್ವವಾದ...

ಜಗತ್ತಿನ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರಗಳ ಪೈಕಿ ಭಾರತಕ್ಕೆ 2ನೇ ಸ್ಥಾನ

ಜಗತ್ತಿನ ಎರಡನೇ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಸ್ವಿಸ್ ನ ಸಾರ್ವಜನಿಕ ಸಂಪರ್ಕಗಳ ಸಂಸ್ಥೆ ಎಡೆಲ್ಮ್ಯಾನ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ವಿವಿಧ ದೇಶಗಳ ವ್ಯಾಪಾರ, ಮಾಧ್ಯಮ ಮತ್ತು ಸರಕಾರೇತರ ಸಂಸ್ಥೆಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ...

ಸುನಂದಾ ಪುಷ್ಕರ್ ಸಾವಿನ ಪ್ರಕಣದ ತನಿಖೆಗೆ ಸಂಪೂರ್ಣ ಸಹಕಾರ: ಶಶಿ ತರೂರ್

'ಸುನಂದಾ ಪುಷ್ಕರ್' ನಿಗೂಢ ಸಾವಿನ ಬಗ್ಗೆ ಪೂರ್ವಾಗ್ರಹವಿಲ್ಲದ ತನಿಖೆ ನಡೆಯಬೇಕೆಂದು ಮಾಜಿ ಕೇಂದ್ರ ಸಚಿವ, ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕೇರಳದ ತ್ರಿಶೂರ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ಮಾಧ್ಯಮ ಪ್ರತಿನಿಧಿಗಳ ಮೈಕ್ ಕಿತ್ತೆಸೆದ ಸೋನಿಯಾ ಗಾಂಧಿ ಅಳಿಯ ವಾಧ್ರ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ, ನ.1ರಂದು ಮಾಧ್ಯಮ ಪ್ರತಿನಿಧಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹರ್ಯಾಣದಲ್ಲಿ ವಾಧ್ರ ನಡೆಸಿರುವ ಭೂ ಅಕ್ರಮದ ಬಗ್ಗೆ ವರದಿಗಾರನ ಪ್ರಶ್ನೆಗೆ ಕೋಪಗೊಂಡ ವಾಧ್ರ, ಮಾಧ್ಯಮ ಪ್ರತಿನಿಧಿಯ ಮೈಕ್(ಧ್ವನಿವರ್ಧಕವನ್ನು) ನೂಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ.ವಿ...

ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...

ಪ್ರಸಕ್ತ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ: ಕಿಮ್ಮನೆ ರತ್ನಾಕರ

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 16 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖಾ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಇಲಾಖೆಯಲ್ಲಿ ಸುಮಾರು 28 ಸಾವಿರ ಹುದ್ದೆಗಳು ಬಾಕಿ ಇದ್ದು ಸಧ್ಯ...

ಡಿ.ಕೆ ಸಹೋದರರು ದಾಖಲೆ ತಿರುಚುವುದರಲ್ಲಿ ನಿಸ್ಸೀಮರು-ಹೆಚ್.ಡಿ ಕುಮಾರಸ್ವಾಮಿ

ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೆ.22ರಂದು ರಾಮನಗರದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್...

ಮಾಧ್ಯಮದವರನ್ನು ಹೂತು ಹಾಕುತ್ತೇವೆ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್

ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...

ಕನ್ನಡ ಮಾಧ್ಯಮ ಸಾಧನೆಗೆ ಅಡ್ಡಿಯಾಗುವುದಿಲ್ಲ: ಕಿಮ್ಮನೆ ರತ್ನಾಕರ

ಕನ್ನಡ ಮಾಧ್ಯಮ ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂತ್ರಿಗಳಾದ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಸಮಾರಂಭದಲ್ಲಿ ಶಾಸನ ಶಾಸ್ತ್ರ ಡಿಪ್ಲೋಮಾ ,ಪ್ರವೇಶ, ಕಾವ,ಜಾಣ ,ರತ್ನ ಪರೀಕ್ಷೆಗಳಲ್ಲಿ ರಾಂಕ್ ಪಡೆದವರನ್ನು ಹಾಗೂ ಎಸ್ ಎಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited