Untitled Document
Sign Up | Login    
Dynamic website and Portals
  

Related News

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...

ನಕಲಿ ಗೋರಕ್ಷಕರ ವಿರುದ್ಧ ಪ್ರಧಾನಿ ವಾಗ್ಧಾಳಿ

ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ. ಮೈ ಗವ್‌ ವೆಬ್‌ಸೈಟ್‌ ಹಾಗೂ ಆ್ಯಪ್‌ಗೆ 2 ವರ್ಷ ವರ್ಷ ಸಂದ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿ ನಡೆದ...

2018 ರ ಮಹಾಮಸ್ತಕಾಭಿಷೇಕವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ: ಸಿಎಂ ಸಿದ್ದರಾಮಯ್ಯ

ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಪೊಲೀಸ್ ಮುಷ್ಕರದ ಹಿನ್ನಲೆ: ಸಿಬ್ಬಂದಿಗೆ ರಜೆ ಮಂಜೂರು ಮಾಡಬಾರದು- ಸಿಎಂ ನಿರ್ದೇಶನ

ಪೊಲೀಸರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ, ಸಾಮೂಹಿಕ ರಜೆ ಹಾಕುವ ಪೊಲೀಸರ ತಂತ್ರಕ್ಕೆ ಬ್ರೇಕ್‌ ಹಾಕಲು ನಿರ್ಧರಿಸಿದ್ದು, ಯಾವುದೇ ಪೊಲೀಸ್‌ ಸಿಬಂದಿಗೆ ರಜೆ ಮಂಜೂರು ಮಾಡದಂತೆ ರಾಜ್ಯದ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜೂನ್‌...

ಬಿ.ಎಸ್.ವೈ ವಿರುದ್ಧದ ಪ್ರಕರಣ ಕುರಿತು ಸುಪ್ರೀಂ ಮೆಟ್ಟಿಲೇರಲು ರಾಜ್ಯ ಸರ್ಕಾರ ನಿರ್ಧಾರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ...

ಬೆಂಗಳೂರು ನಗರದೊಳಗಡೆ ಬಸ್‌ಗಳ ಪ್ರವೇಶ ನಿಷೇಧ

ರಾಜ್ಯ ಸರ್ಕಾರ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಹಾಗೂ ಹೊರ ರಾಜ್ಯದ ಎಲ್ಲಾ ಬಸ್ ಗಳಿಗೆ ಬೆಂಗಳೂರು ನಗರ ಪ್ರವೇಶವನ್ನು ನಿರ್ಬಂಧಿಸಿದೆ. ಫೆ. 1ರಿಂದ 10 ದಿನಗಳ ಕಾಲ ಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯದ ನೆಪವೊಡ್ಡಿ ...

ರಾಘವೇಶ್ವರ ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರದ ಮುಳುಬಾಗಿಲುವಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಭೆ

ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...

ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್ ಮಾಡಿ: ಕೆ ಎಸ್ ಈಶ್ವರಪ್ಪ

ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ, ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ ಈಶ್ವರಪ್ಪ ಅವರು, ರಾಜ್ಯದಲ್ಲಿ ಟಿವಿ ಚಾನೆಲ್, ದಿನ ಪತ್ರಿಕೆಗಳನ್ನು ಬ್ಯಾನ್...

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...

ಗೋಸೇವಾ ಆಯೋಗ ವಿಸರ್ಜನೆಗೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ. ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ. ಜುಲೈ 28 ರಂದು ನಡೆಯಬೇಕಿದ್ದ ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...

ಬೆಂಗಳೂರಿನಲ್ಲಿ 2 ಸಿಗ್ನಲ್‌ಫ್ರೀ ಕಾರಿಡಾರ್‌ಗೆ ಬಿಬಿಎಂಪಿ ಮತ್ತೆ ಚಾಲನೆ

ಈಗಾಗಲೇ ಚಾಲನೆಗೊಂಡಿರುವ ಓಕಳಿಪುರ ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಯ ಜೊತೆಗೆ ಮೂರು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಎರಡು ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಸಿದ್ಧತೆ ನಡೆಸಿದೆ. 2012ರಲ್ಲಿ ನಾಯಂಡಹಳ್ಳಿಯಿಂದ ಸಿಲ್ಕ್ ಬೋರ್ಡ್ ವರೆಗಿನ ಹೊರವರ್ತುಲ ರಸ್ತೆ ಹಾಗೂ ಹೋಪ್‌ಫಾರಂನಿಂದ...

ಬಿಬಿಎಂಪಿ ಚುನಾವಣೆ ಮುಂದೂಡಿಕೆ ಅರ್ಜಿ ವಿಚಾರಣೆ ಜುಲೈ 3ಕ್ಕೆ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಪ್ರಯತ್ನಿಸಿ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 3 ರಂದು ನಡೆಯಲಿದೆ. ಸರ್ಕಾರದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. 2011ರ ಜನಗಣತಿ ಆಧಾರದ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಃ ಲೋಕಾಯುಕ್ತ ಪೊಲೀಸ್ ತನಿಖೆಗೆ ಹೈಕೋರ್ಟ್ ತಡೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆ ನೀಡಿದೆ. ಪ್ರಕಣದ ಆರೋಪಿಯಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ವೈ.ಭಾಸ್ಕರ್‌ ರಾವ್‌ ಅವರ ಪುತ್ರ ಅಶ್ವಿ‌ನ್‌ ರಾವ್‌...

ಬಿಬಿಎಂಪಿ ಚುನಾವಣೆ ತಡೆಗೆ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್‌ನ ಮೊರೆ ಹೋಗಿದೆ. 2011ರ ಜನಗಣತಿ ಆಧಾರದ ಮೇಲೆ ಹೊಸ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಇದಕ್ಕಾಗಿ ಚುನಾವಣೆ ನಡೆಸಲು ಸರ್ಕಾರಕ್ಕೆ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ತನಿಖೆಗೆ ಎಸ್.ಐ.ಟಿ ರಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ. ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್‌ ಪಂಥ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ...

ವಿಧಾನಮಂಡಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು, ಕೊಪ್ಪಳದ ಯಲ್ಲಾಲಿಂಗ ಕೊಲೆ ಪ್ರಕರಣ, ಒಂದಂಕಿ ಲಾಟರಿ ಹಗರಣ, ಅಕ್ರಮ ಮರಳು ದಂಧೆ ಸೇರಿದಂತೆ ಹಲವು ಅಸ್ತ್ರಗಳನ್ನು ಮುಂದಿರಿಸಿಕೊಂಡು ಸಜ್ಜಾಗಿರುವ...

ವಿಧಾನಮಂಡಲ ಅಧಿವೇಶನ: ರೈತರ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿ

ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...

ಗುರುವಾರ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ

ಗುರುವಾರ 12 ಗಂಟೆಗೆ ನಡೆಯಲಿರುವ ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ. ಜುಲೈ ಕೊನೆಯ ವಾರದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಜ್ಯ ಚುನಾವಣಾ ಆಯುಕ್ತರಾದ ಶ್ರೀನಿವಾಸ ಚಾರಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ಹೈ ಕೋರ್ಟ್...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...

ರಾಜ್ಯ ಸರ್ಕಾರ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ: ಜಗದೀಶ್ ಶೆಟ್ಟರ್

ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...

ಪಿಯುಸಿ ತರಗತಿಗಳು ಆರಂಭ: ಪಠ್ಯಕ್ರಮದ ಬಗ್ಗೆ ಇನ್ನೂ ಬಗೆಹರಿಯದ ಗೊಂದಲ

ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯಾದ್ಯಂತ 2015-16ನೇ ಸಾಲಿನ ದ್ವಿತೀಯ ಪಿಯು ಜೂ.1ರಿಂದ ಹಾಗೂ ಪ್ರಥಮ ಪಿಯು ತರಗತಿಗಳು ಜೂ.15ರಿಂದ ಆರಂಭವಾಗಲಿವೆ. ಆದರೆ ವಿಜ್ನಾನ ವಿಭಾಗದ ವಿದ್ಯಾರ್ಥಿಗಳಿಗೆ ಯಾವ ಪಠ್ಯಕ್ರಮ ಅಳವಡಿಸಬೇಕೆಂಬ ಬಗ್ಗೆ ಪದವಿ ಪೂರ್ವ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...

ಲಾಟರಿ ಹಗರಣ: ವರದಿ ನೀಡುವಂತೆ ಸರ್ಕಾರಕ್ಕೆ ಗವರ್ನರ್ ಪತ್ರ

ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಕೈಗೊಂಡ ಕ್ರಮ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರೂ ರಾಜಭವನಕ್ಕೆ ಮಾಹಿತಿ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...

ಸರ್ಕಾರದ ಎರಡು ವರ್ಷಗಳ ಸಾಧನೆ ತೃಪ್ತಿ ತಂದಿದೆ: ಸಿಎಂ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಲು ಯುಜಿಸಿ ಶಿಫಾರಸ್ಸು

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಬೇಕೆಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಎಲ್ಲಾ ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು, ಚಲನವಲನಗಳ ಮೇಲೆ ಗಮನಹರಿಸಲು ಅನುಕೂಲವಾಗುವುದರಿಂದ ಈ ವ್ಯವಸ್ಥೆ ಜಾರಿಗೆ ತರಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಯುಜಿಸಿ ಸೂಚನೆ...

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯಕ್ಕೆ ಸುಪ್ರೀಂ ಸೂಚನೆ

'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...

ದಾಳಿಂಬೆ ಬೆಳೆಗಾರರ 335 ಕೋಟಿ ಹಣವನ್ನು ಶೀಘ್ರ ಬಿಡುಗಡೆ ಮಾಡಿ: ಹೆಚ್.ಡಿ.ಕೆ ಆಗ್ರಹ

ಉತ್ತರ ಕರ್ನಾಟಕದ ದಾಳಿಂಬೆ ಬೆಳೆಗಾರರ 335 ಕೋಟಿ ರೂ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಂಬೆ ಬೆಳೆ ನಷ್ಟದಿಂದ ರೈತರು ಕಂಗಲಾಗಿದ್ದು , ಅವರ ನೆರವಿಗೆ...

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಮೂಲ ವೇತನದ ಶೇ. 25.25ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.28.75ಕ್ಕೆ ಪರಿಷ್ಕರಿಸಿದೆ. ಈ ಮೂಲಕ ಚಾಲ್ತಿ ಇರುವ ತುಟ್ಟಿಭತ್ಯೆಯಲ್ಲಿ ಶೇ.3.5ರಷ್ಟು ಏರಿಕೆ ಮಾಡಿದಂತಾಗಿದೆ. ಪರಿಷ್ಕೃತ ತುಟ್ಟಿಭತ್ಯೆ 2015ರ ಜ.1ರಿಂದಲೇ ಪೂರ್ವಾನ್ವಯವಾಗುವಂತೆ ಏ.24ರಂದು ರಾಜ್ಯ ಸರ್ಕಾರ ಆದೇಶ...

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್ ದ್ವಿಸದಸ್ಯ ಪೀಠ

'ಬಿಬಿಎಂಪಿ' ಚುನಾವಣೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣಯನ್ನು ಏ.24ರಂದು ಇತ್ಯರ್ಥಗೊಳಿಸಿರುವ...

ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ. ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...

ಕಡ್ಡಾಯ ಮತದಾನ ವಿಚಾರ: ರಾಜ್ಯಪಾಲರಿಂದ ಮತ್ತೆ ಆಕ್ಷೇಪ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...

ಬಿಬಿಎಂಪಿ ವಿಭಜನೆಗೆ ಪರಿಷತ್ ನಲ್ಲಿ ಅಡ್ಡಿ

ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ. ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...

ಬಿಬಿಎಂಪಿ ವಿಭಜನೆ: ಹೊರಬೀಳಲಿದೆ ಸ್ಪಷ್ಟ ಚಿತ್ರಣ

ಬಿಬಿಎಂಪಿ ವಿಭಜನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ನಡೆದಿರುವ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಬಿಬಿಎಂಪಿಯನ್ನು ವಿಭಜನೆ ಮಾಡಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2015...

ಬಿಬಿಎಂಪಿ ವಿಸರ್ಜನೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅಧಿಕಾರ ಸ್ವೀಕರಿಸಿದ್ದಾರೆ. ರಾಜೇಂದ್ರಕುಮಾರ್ ಕಟಾರಿಯಾ ವರದಿಯಲ್ಲಿ ಬಿಬಿಎಂಪಿಯ ತ್ಯಾಜ್ಯ ನಿರ್ವಹಣೆ, ಜಾಹೀರಾತು ವಿಭಾಗ, ಒಎಫ್ ಸಿಯಲ್ಲಿನ ಅಕ್ರಮ ಸೇರಿದಂತೆ ಹಲವು ಅವ್ಯವಹಾರಗಳನ್ನು ತಿಳಿಸಲಾಗಿತ್ತು. ಇದನ್ನೇ ಆಧರಿಸಿ ಸರ್ಕಾರ ಬಿಬಿಎಂಪಿ...

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಒಕ್ಕೂಟ ಶನಿವಾರ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿರುವ ಫೋರಂ ಮಾಲ್, ಆಟೊ ಯೂನಿಯನ್, ಚಿತ್ರಮಂದಿರ, ಸಾರಿಗೆ ಸಂಸ್ಥೆ,...

ಬಿಬಿಎಂಪಿ ಚುನಾವಣೆ ತಡೆಗೆ ಸೂಪರ್‌ಸೀಡ್‌ ತಂತ್ರ

ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಪಾಲಿಕೆಯನ್ನು ಸೂಪರ್‌ಸೀಡ್‌ ಮಾಡುವ ನಿರ್ಧಾರ ಕೈಗೊಂಡಿದ್ದು, ಆಡಳಿತಾಧಿಕಾರಿ ನೇಮಕ ಮಾಡಲಿದೆ. ಈ ಬಗೆಗಿನ ಆದೇಶ ಶನಿವಾರ ಅಧಿಕೃತವಾಗಿ ಹೊರಬೀಳಲಿದೆ. ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ಬೆಳವಣಿಗೆ ಕುರಿತು ನಡೆದ ವಿಸ್ತೃತ ಚರ್ಚೆ ನಂತರ ರಾಜ್ಯ...

ಬೆಂಗಳೂರಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ: ಹೆಚ್.ಡಿ.ಕೆ

ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸುದೀಪ್ ಶೆಟ್ಟಿ ಅವರು ಅಕ್ರಮ ವಲಸಿಗರ ಕುರಿತಂತೆ ಹೊರತಂದಿರುವ ಸಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ. ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...

ಏ.20ಕ್ಕೆ ವಿಧಾನಮಂಡಲ ವಿಶೇಷ ಅಧಿವೇಶನ

ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ. ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ,...

ಬಿಬಿಎಂಪಿ ವಿಭಜನೆಯೋ ಅಥವಾ ಚುನಾವಣೆಯೋ ಇಂದು ನಿರ್ಧಾರ

ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ. ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...

ಬಿಬಿಎಂಪಿ ವಿಭಜನೆಗೆ ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ. ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ: ಪ್ರಕಾಶ್ ಜಾವ್ಡೇಕರ್

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...

ಇನ್ನೂ ಫೋರೆನ್ಸಿಕ್ ತಜ್ನರ ಕೈಸೇರದ ರವಿ ಮೃತ ದೇಹದ ಮಾದರಿಗಳು

'ಡಿ.ಕೆ ರವಿ' ಅವರದ್ದು ಆತ್ಮಹತ್ಯೆ ಎಂದು ರಾಜ್ಯ ಸರ್ಕಾರ ಬಲವಾಗಿ ವಾದಿಸುತ್ತಿರಬೇಕಾದರೆ, ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಮೃತದೇಹದ ಮಾದರಿಗಳು ಇನ್ನೂ ಫೋರೆನ್ಸಿಕ್ ಲ್ಯಾಬ್ ತಲುಪಿಲ್ಲ ಎಂಬ ವಿಷಯ ಬಹಿರಂಗವಾಗಿದೆ. ಮಾ.17ರಂದೇ ಡಿ.ಕೆ ರವಿ ಅವರ ಮೃತದೇಹದ...

ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ಬೆನ್ನಲ್ಲೇ ಸಿಐಡಿ ಐಜಿಪಿ ಎತ್ತಂಗಡಿ

ಐಎಎಸ್‌ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಮರುದಿನವೇ ಸಿಐಡಿ ಐಜಿಪಿ ಪ್ರಣವ್‌ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಖಡಕ್‌ ಅಧಿಕಾರಿಯೆಂದೇ ಹೆಸರು ಪಡೆದ ಪ್ರಣವ್‌ ಮೊಹಾಂತಿ ಅವರನ್ನು ಸಿಐಡಿ ವಿಭಾಗದಿಂದ ಲೋಕಾಯುಕ್ತಕ್ಕೆ ಸರ್ಕಾರ...

ಬಿಬಿಎಂಪಿ ಅಕ್ರಮ: ಮೇಯರ್,ಉಪಮೇಯರ್,ಆಯುಕ್ತರಿಗೆ ನೋಟಿಸ್

ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿದ ತನಿಖಾ ವರದಿ ಅನುಸಾರ ಕ್ರಮ...

ಪ್ರಣವ್ ಮೊಹಾಂತಿ ವರ್ಗಾವಣೆ ತಡೆ ಹಿಡಿದ ರಾಜ್ಯ ಸರ್ಕಾರ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರ ಮತ್ತೆ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಹೆಗಲಿಗೇರಿಸಿದೆ. ಆ ಮೂಲಕ ಪ್ರಣವ್ ಮೊಹಾಂತಿ ವರ್ಗಾವಣೆಯನ್ನು ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ. ಡಿ.ಕೆ.ರವಿ...

ವಿರೋಧದ ನಡುವೆಯೂ ಡಿ.ಕೆ ರವಿ ಸಾವಿನ ಪ್ರಕರಣದ ತನಿಖೆ ಸಿಐಡಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...

ಸಿಎಂ ಸಿದ್ದರಾಮಯ್ಯಗೆ ತೊಗಾಡಿಯಾ ಪತ್ರ

ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್‌ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...

ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ವಜಾ

ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...

ನಕ್ಸಲರ ಪುನರ್ವಸತಿಗೆ ಪ್ಯಾಕೇಜ್: ಕೆ.ಜೆ ಜಾರ್ಜ್

ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...

ನಂಜಂಡಪ್ಪ ವರದಿ ಶಿಫಾರಸ್ಸು ಅನುಷ್ಠಾನಕ್ಕೆಉನ್ನತಾಧಿಕಾರ ಸಮಿತಿ ರಚನೆ

ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ...

ಬೆಂಗಳೂರಿನಲ್ಲಿ ಫ್ಲೆಕ್ಸ್, ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ ತೀರ್ಮಾನ

ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಗಳನ್ನು ನಿಷೇಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಂತೆಯೇ, ರಾಜ್ಯವ್ಯಾಪೀ ಪ್ಲಾಸ್ಟಿಕ್ ಕೈಚೀಲಗಳನ್ನೂ ನಿಷೇಧಿಸುವ ನಿರ್ಧಾರವನ್ನೂ ಕೂಡಾ ಸರ್ಕಾರ ಕೈಗೊಂಡಿದೆ. ಪ್ಲಾಸ್ಟಿಕ್ ಕೈಚೀಲಗಳ ನಿಷೇಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೊದಲಿಗೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಯವರ...

ಮಸೀದಿ, ಚರ್ಚ್ ಗಳ ಆಡಳಿತವನ್ನೂ ಸ್ವಾಧೀನಪಡಿಸಿಕೊಳ್ಳಲಿ: ತೊಗಾಡಿಯಾ

ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್‌ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗೊಡಿಯಾ ಸವಾಲು ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಸುವರ್ಣ ಸಂಭ್ರಮದ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಆಯೋಜಿಸಿದ್ದ...

ಬಸ್ ಪ್ರಯಾಣ ದರ ಇಳಿಕೆ

ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ವೈ-ಫೈ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ: ಕುಮಾರಸ್ವಾಮಿ

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...

ಛತ್ತೀಸ್ ಗಢದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ 8 ಮಹಿಳೆಯರು ಸಾವು

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ. ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...

ಜಲ ಪ್ರಹಾರ: ಕಾವೇರಿ ನೀರಿನ ದರದಲ್ಲಿ ಭಾರೀ ಹೆಚ್ಚಳ

ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ. ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...

ಬಿಬಿಎಂಪಿ ವಿಭಜನೆ : ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...

ವಿಚಾರಣಾಧೀನ ಕೈದಿಗಳ ಬಿಡುಗಡೆ: ಸುಪ್ರೀಂ ಆದೇಶ

ತಾನು ಎಸಗಿದ ಅಪರಾಧಕ್ಕೆ ಸಿಗಬಹುದಾದ ಗರಿಷ್ಠ ಶಿಕ್ಷೆಯ ಪೈಕಿ ಅರ್ಧದಷ್ಟನ್ನು ಜೈಲಿನಲ್ಲಿ ಕಳೆದಿರುವ ಎಲ್ಲಾ ವೀಚಾರಣಾಧೀನ ಕೈದಿಗಳನ್ನು ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಕೆಳಹಂತದ ನ್ಯಾಯಾಂಗ ಅಧಿಕಾರಿಗಳು ಅ.1ರಿಂದ...

ಅಬ್ದುಲ್ ನಾಸೀರ್ ಮದನಿ ಜಾಮೀನು ಅವಧಿ ಮತ್ತೊಮ್ಮೆ ವಿಸ್ತರಣೆ

ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited