Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...

ಕೆಹೆಚ್‍ಬಿಯಿಂದ 12,000 ನಿವೇಶನ ಹಂಚಿಕೆಗೆ ಸಿದ್ಧತೆ

ಕರ್ನಾಟಕ ಗೃಹ ಮಂಡಳಿ ಮೂಲಕ ರಾಜ್ಯದಲ್ಲಿ ಒಟ್ಟು 12,000 ನಿವೇಶನಗಳನ್ನು ಹಂಚಿಕೆಗೆ ಸಿದ್ದಪಡಿಸಲಾಗಿದೆ ಹಾಗೂ 2,175 ಎಕರೆ ಭೂಮಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಎಸ್.ಜಿ.ನಂಜಯ್ಯನ ಮಠ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ತಮ್ಮ...

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಕೃಷಿ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ...

ಕಬ್ಬಿನ ಬಾಕಿ ಹಣ ಪಾವತಿಗೆ ಒತ್ತಾಯ: ಬಿಜೆಪಿ ಪಾದಯಾತ್ರೆ ಆರಂಭ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಕಬ್ಬಿನ ಬಾಕಿ ಹಣ ಬರದೆ ಆತ್ಮಹತ್ಯೆ ಮಾಡಿಕೊಂಡ ರೈತ ಗುರುನಾಥ ಚಾಪಗಾವಿ...

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಮನವಿ

ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...

ದೇಶದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ: ಪ್ರಧಾನಿ ಮೋದಿ

ನಮ್ಮ ಸರ್ಕಾರ ದೇಶದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸಮಾಡುತ್ತಿದೆ. ಜನತೆ ನಮ್ಮ ಮೇಲಿರಿಸಿದ್ದ ವಿಶ್ವಾಸ ಎಳ್ಳಷ್ಟೂ ಕಡಿಮೆಯಾಗಿಲ್ಲ ,ನಮ್ಮ ಸರ್ಕಾರಕ್ಕೆ ಜನ ಫುಲ್ ಮಾರ್ಕ್ಸ್ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆಕಾಶವಾಣಿಯಲ್ಲಿ 8 ನೇ ಬಾರಿಗೆ ಮನ್‌ ಕಿ...

ಕಿಸಾನ್‌ ಚಾನೆಲ್‌ ಗೆ ಪ್ರಧಾನಿ ಮೋದಿ ಚಾಲನೆ

ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಲು ಕೇಂದ್ರ ಸರ್ಕಾರ ಪ್ರಾರಂಭಿಸಿರುವ ಕಿಸಾನ್‌ ಚಾನಲ್‌ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತ ಸಮುದಾಯ ದೇಶದ ಅತ್ಯಂತ ದೊಡ್ಡ ಸಮುದಾಯ. ಅವರ ಏಳಿಗೆಯನ್ನು ನಿರ್ಲಕ್ಷಿಸಿ ದೇಶ...

ಮಂಗೋಲಿಯಾಕ್ಕೆ ಮೋದಿ ಆರ್ಥಿಕ ನೆರವು: ಶಿವಸೇನೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದರೆ ಮಂಗೋಲಿಯಾಕ್ಕೆ 1 ಬಿಲಿಯನ್ ಡಾಲರ್ ನೆರವು ಘೋಷಿದ್ದಾರೆ ಎಂದು ಮಿತ್ರಪಕ್ಷವಾದ ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಮೋದಿ ವಿದೇಶ ಪ್ರವಾಸದ ಬಗ್ಗೆ ನೇರ ವಾಗ್ದಾಳಿ ನಡೆಸಿದೆ. ಹಾಗಾಗಿ ಮಹಾರಾಷ್ಟ್ರಕ್ಕಿಂತ ಮಂಗೋಲಿಯಾ ಅದೃಷ್ಟಶಾಲಿ...

ಶೀಘ್ರದಲ್ಲೇ ಮಹಾರಾಷ್ಟ್ರ, ತೆಲಂಗಾಣಕ್ಕೆ ರಾಹುಲ್ ಗಾಂಧಿ ಭೇಟಿ

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಗಾಂಧಿಯ ಭೇಟಿಯ ಉದ್ದೇಶವಾಗಿದೆ. ರಜಾ ಕಳೆದು ವಾಪಸ್ ...

ಭೂಸ್ವಾಧೀನ ಮಸೂದೆ ವಿರುದ್ಧ ಆಪ್ ಪ್ರತಿಭಟನೆ

ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ ದೆಹಲಿಯ ಜಂತರ್-ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರುವಿಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇನ್ನು ಕೇಂದ್ರ ಸರ್ಕಾರದ ವಿರುದ್ಧ ತೀವ್ರ...

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ: ರಾಹುಲ್ ಗಾಂಧಿ

ರೈತರ ರಕ್ತದಿಂದ ನಮ್ಮ ದೇಶ ಕಟ್ಟಲಾಗಿದೆ. ಆದರೆ ಇಂದು ದೇಶದ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆತಂಕದಿಂದ ದಿನಕಳೆಯುವಂತಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೃಹತ್...

ಭೂಸ್ವಾಧೀನ ಸುಗ್ರೀವಾಜ್ಞೆ ಮರುಜಾರಿಗೆ ಕೇಂದ್ರ ನಿರ್ಧಾರ

ಭೂಸ್ವಾಧೀನ ಸುಗ್ರೀವಾಜ್ಞೆಯ ಮರುಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈಗಾಗಲೇ ಹೊರಡಿಸಿರುವ ಸುಗ್ರೀವಾಜ್ಞೆ ಅವಧಿ ಏ.5ರಂದು ಅಂತ್ಯಗೊಳ್ಳಲಿದೆ. ಹೀಗಾಗಿ ಮರುಜಾರಿಗೆ ಕೇಂದ್ರ ಸಂಪುಟ ನಿರ್ಧರಿಸಿದೆ. ಈ ನಡುವೆ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ....

ಮೇಕೆದಾಟು ಯೋಜನೆ ತಡೆಯಲು ತಮಿಳುನಾಡು ರೈತರು ಸಜ್ಜು

ಬೆಂಗಳೂರು ಸೇರಿದಂತೆ ಗಡಿಭಾಗದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕರ್ನಾಟಕದ ಮಹತ್ವಾಕಾಂಕ್ಷೆಯ ಸುಮಾರು 450 ಕೋಟಿ ರೂ.ಗಳಿಗೂ ಹೆಚ್ಚಿನ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 6 ಸಾವಿರ...

ಭೂಸ್ವಾಧೀನ ಮಸೂದೆ ವಿಚಾರ: ಕೇಂದ್ರ ಸರ್ಕಾರಕ್ಕೆ ರಾಮ್‌ ದೇವ್‌ ಸಲಹೆ

ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್‌ ದೇವ್‌ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಬೀದರ್ ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ ರಾಮ್‌ ದೇವ್‌, ಸುದ್ದಿಗಾರರೊಂದಿಗೆ ಮಾತನಾಡಿ ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವಾಗದಂತೆ...

ಕೃಷಿ ಭಾಗ್ಯ: ಫಲಾನುಭವಿಗಳಿಗೆ ಮೂರು ಹಂತಗಳಲ್ಲಿ ಹಣ ಬಿಡುಗಡೆ

ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ರೈತರಿಗೆ ಮೂರು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದೆಂದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯ ಕವಟಗಿ ಮಠ ಮಹಾಂತೇಶ ಮಲ್ಲಿಕಾರ್ಜುನ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯಡಿ...

ಬಿಡಿ ಸಿಗರೇಟು ಮಾರಾಟ ನಿಷೇಧ ಸದ್ಯಕ್ಕಿಲ್ಲ

ಬಿಡಿ ಸಿಗರೇಟು ಮಾರಾಟಕ್ಕೆ ನಿಷೇಧ ಹೇರುವ ನಿರ್ಧಾರವನ್ನು ತಕ್ಷಣಕ್ಕೆ ಜಾರಿಗೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಬಿಡಿ ಸಿಗರೇಟು ನಿಷೇಧದಿಂದ ತಂಬಾಕು ಬೆಳೆಯುವ ರೈತರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರು ಹಾಗೂ ಸಂಸದರು ಆತಂಕ ವ್ಯಕ್ತಪಡಿಸಿದ...

ಗೋದಾಮುಗಳ ಕೊರತೆ ನೀಗಲು ಕ್ರಮ: ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳನ್ನು ಸಂಗ್ರಹಿಸಡಲು ಗೋದಾಮುಗಳ ಕೊರತೆಯಿದ್ದು, ರಾಜ್ಯದ ಎಲ್ಲ ಭಾಗಗಳಲ್ಲಿ ವೈಜ್ಞಾನಿಕ ಗೋದಾಮುಗಳನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಕೃಷಿ ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಬಾರ್ಡ್ ವತಿಯಿಂದ...

ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಸಂಸದ ಆದರ್ಶ ಗ್ರಾಮ ಯೋಜನೆ ದೇಶದ ಬಡವರು, ರೈತರಿಗಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ರಾಜ್ಯಗಳೂ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ವಿಜ್ನಾನ ಭವನದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ...

ಮೆಗಾಫುಡ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದಲ್ಲಿ ವೈಜ್ನಾನಿಕ ಯೋಜನೆ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನೆ, ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತುಮಕೂರಿನ ವಸಂತನರಸಾಪುರದಲ್ಲಿ ದೇಶದ ಅತಿ ದೊಡ್ಡ ಮೆಗಾಫುಡ್ ಪಾರ್ಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಮಾತನಾಡಿದ ಅವರು,...

ಸಚಿವ ಹೆಚ್.ಆಂಜನೇಯ ವಿರುದ್ಧ ರೈತರ ಆಕ್ರೋಶ

ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರೈತರು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರನ್ನು ಘೇರಾವ್ ಹಾಕಿದ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನಡೆದ ಭದ್ರಾ ಮೇಲ್ದಂಡೆ ನೀರು ಹಕ್ಕೊತ್ತಾಯ ಸಮಾವೇಶದ ವೆಳೆ ಮಾತನಾಡಿದ ಸಚಿವ ಹೆಚ್.ಆಂಜನೇಯ, ಭದ್ರಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited