Untitled Document
Sign Up | Login    
Dynamic website and Portals
  

Related News

ಒಂದಂಕಿ ಲಾಟರಿ ಹಗರಣ: ಪಾರಿರಾಜನ್ ಬಂಧನ ಅವಧಿ ವಿಸ್ತರಣೆ

ಒಂದಂಕಿ ಲಾಟರಿ ಹಗರಣದ ಕಿಂಗ್‌ ಪಿನ್ ಪಾರಿರಾಜನ್ ಬಂಧನ ಅವಧಿಯನ್ನು ಜೂ.26ರವರೆಗೆ ವಿಸ್ತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ಪಾರಿರಾಜನ್‌ ನನ್ನು ಪೊಲೀಸರು ಬಿಗಿಭದ್ರತೆಯಲ್ಲಿ ಕೆಜಿಎಫ್‌ನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬಿಗಿಭದ್ರತೆಯಲ್ಲಿ ಹಾಜರುಪಡಿಸಿದರು. ಪೊಲೀಸ್ ವಶಕ್ಕೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು...

ಬಿ.ಎಸ್.ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ...

ಒಂದಂಕಿ ಲಾಟರಿ ಹಗರಣ ಇ.ಡಿ.ಯಿಂದ ತನಿಖೆ: ಕೆ.ಜೆ.ಜಾರ್ಜ್

ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ ಜಾರಿ ನಿರ್ದೇಶನಾಲಯದಿಂದ (ಇ.ಡಿ) ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಲಾಟರಿ ದಂಧೆ ಕುರಿತು ಸಿಐಡಿ ಪೊಲೀಸರೇ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲಿದ್ದಾರೆ....

ಒಂದಂಕಿ ಲಾಟರಿ ಹಗರಣ: ಸಿಬಿಐಗೆ ನೀಡಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ ನಡೆದಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಕೊನೆಗೂ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಒಂದಂಕಿ ಲಾಟರಿ ಹಗರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬಿಜೆಪಿ, ಜೆಡಿಎಸ್ ಆಗ್ರಹಿಸಿತ್ತು. ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ...

ಸಿದ್ದರಾಮಯ್ಯ ಕುಮಾರಸ್ವಾಮಿಯಲ್ಲ: ಸಿಎಂ

ರಾಜ್ಯದಲ್ಲಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ರಕ್ಷಿಸಲು ಸರ್ಕಾರ ಹೊರಟಿಲ್ಲ. ಜಾತಿ ಹೆಸರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಸಿದ್ದರಾಮಯ್ಯನೇ, ಕುಮಾರಸ್ವಾಮಿಯಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ...

ಒಂದಂಕಿ ಲಾಟರಿ ಹಗರಣ: 6 ಅಧಿಕಾರಿಗಳಿಗೆ ಸಿಐಡಿ ನೋಟಿಸ್

ರಾಜ್ಯದಲ್ಲಿ ನಡೆಯುತ್ತಿದ್ದ ಬಹುಕೋಟಿ ಒಂದಂಕಿ ಅಕ್ರಮ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಐಜಿ ಮಟ್ಟದ 6 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಇಂದೂ ಕೂಡ ಅವರ...

ಲಾಟರಿ ಹಗರಣ: ವರದಿ ನೀಡುವಂತೆ ಸರ್ಕಾರಕ್ಕೆ ಗವರ್ನರ್ ಪತ್ರ

ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಕೈಗೊಂಡ ಕ್ರಮ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರೂ ರಾಜಭವನಕ್ಕೆ ಮಾಹಿತಿ...

ಒಂದಂಕಿ ಲಾಟರಿ ಹಗರಣ: ಐಜಿಪಿ ಅಲೋಕ್ ಕುಮಾರ್ ಅಮಾನತು

ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿ ರಾಜನ್ ಬಂಧನಕ್ಕೆ ಅಡ್ಡಿಯಾಗಿದ್ದಾರೆಂಬ ಆರೋಪದಡಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಸರ್ಕಾರ ಶನಿವಾರ ಅಮಾನತುಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಲಾಟರಿ ದಂಧೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ...

ಸಿಐಡಿ ಪೊಲೀಸರಿಂದ ಅಲೋಕ್ ಕುಮಾರ್ ವಿಚಾರಣೆ

ಅಕ್ರಮ ಲಾಟರಿ ಮಾರಾಟ ದಂಧೆ ರೂವಾರಿ ಪಾರಿರಾಜನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಕಾನೂನು ಸುವ್ಯವಸ್ಥೆ ವಿಭಾಗ (ಪಶ್ಚಿಮ) ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್‌ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆಯೇ...

ಲಾಟರಿ ಹಗರಣ: ಎಡಿಜಿಪಿ, ಐಜಿಪಿ ಹೆಸರು - ಸಿಐಡಿ ಪತ್ತೆ

ಲಾಟರಿ ಹಗರಣದ ದಂಧೆಕೋರರ ಶೋಧ ಕಾರ್ಯಾಚರಣೆಗಿಳಿದು ಸಿಐಡಿ ನಡೆಸುತ್ತಿರುವ ತನಿಖೆಯಲ್ಲಿ ಈಗ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಹಾಗೂ ಆರಕ್ಷಕ ಮಹಾ ನಿರೀಕ್ಷಕ (ಐಜಿಪಿ) ಮಟ್ಟದ ಇಬ್ಬರು ಉನ್ನತ ದರ್ಜೆಯ ಅಧಿಕಾರಿಗಳ ಹೆಸರು ಕೇಳಿ ಬಂದಿರುವುದು ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಪ್ರಕರಣದ ಪ್ರಮುಖ...

ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ಸವಾಲು

ಸ್ವಚ್ಛ, ಪಾರದರ್ಶಕ, ಹಗರಣ ಮುಕ್ತ ಸರ್ಕಾರ ನೀಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಒಂದಂಕಿ ಲಾಟರಿ ಹಾಗೂ ಮಟ್ಕಾ ದಂಧೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಬೆಂಗಳೂರು...

ರಾಜ್ಯದಲ್ಲಿ ಅಣ್ಣ ಕಾರುಣ್ಯ ಆರೋಗ್ಯ ಯೋಜನೆ ಜಾರಿಗೆ ಸಿ.ಎಂ.ಇಬ್ರಾಹಿಂ ಸಲಹೆ

ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited