Untitled Document
Sign Up | Login    
Dynamic website and Portals
  

Related News

70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ದೇಶಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮ. ಈ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದ್ದಾರೆ. 70ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ 3ನೇ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಸ್ವತಂತ್ರ ದಿನೋತ್ಸವದ ಶುಭಾಶಯ...

70 ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ

70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ದಯಾಶಂಕರ ವಜಾ

ಬಿಎಸ್ ಪಿ ನಾಯಕಿ ಮಾಯಾವತಿಯವರನ್ನು ವಿವಾದಾತ್ಮಕವಾಗಿ ಹೋಲಿಕೆ ಮಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಘಟಕದ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ರನ್ನು ವಜಾಗೊಳಿಸಲಾಗಿದೆ. ದಯಾಶಂಕರ ಸಿಂಗ್ ಹೇಳಿಕೆ ಸಂಸತ್ ಉಭಯ ಸದನಗಳಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು ಉತ್ತರ ಪ್ರದೇಶ ರಾಜ್ಯದ...

ಮಥುರಾ ಗಲಭೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ

29 ಮಂದಿ ಸಾವಿಗೆ ಕಾರಣವಾದ ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ. ಘೊಷ್ ಮತ್ತು ಅಮಿತವ ರಾಯ್ ಅವರನ್ನೊಳಗೊಂಡ ರಜಾಕಾಲದ ನ್ಯಾಯಪೀಠ ಸಿಬಿಐ ತನಿಖೆ ಕೋರಿದ...

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ವಜಾ

ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು...

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿ ದೊಡ್ಡ ಗಣತಂತ್ರ ದೇಶ. ಹಲವಾರು ತೊಂದರೆಗಳನ್ನು ಸಮರ್ಥವಾಗಿ ಎದುರಿಸಿದ್ದು,...

ಯಾಕೂಬ್ ಗಲ್ಲು ವಜಾ ಅರ್ಜಿ: ತೀರ್ಪು ಮುಂದಕ್ಕೆ

ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಇಬ್ಬರು ನ್ಯಾಯಾಧೀಶರುಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. 1993 ರ ಮುಂಬೈ ಸರಣಿ ಸ್ಪೋಟದ ಸಂಚಿನಲ್ಲಿ ಭಾಗಿಯಾದ ಕಾರಣ ಗಲ್ಲು ಶಿಕ್ಷೆಗೆ ಗುರಿಯಾದ...

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...

ಆಪ್ ನಿಂದ ಜಿತೇಂದ್ರ ತೋಮರ್ ಉಚ್ಛಾಟನೆ ಸಾಧ್ಯತೆ

ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿದ ಆರೋಪದಡಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಬಂಧನಕ್ಕೊಳಗಾಗಿರುವುದು ಆಪ್ ಪಕ್ಷದಲ್ಲಿ ಅಸಮಾಧಾನ ಉಂಟುಮಾಡಿದೆ. ಪ್ರಕರಣದಿಂದ ತೀವ್ರ ಆಕ್ರೋಶಗೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಿತೇಂದ್ರ ತೋಮರ್ ಅವರನ್ನು ಪಕ್ಷದಿಂದ...

ಜಿತೇಂದ್ರ ಸಿಂಗ್ ತೋಮರ್ ಜಾಮೀನು ಅರ್ಜಿ ವಜಾ

ನಕಲಿ ಕಾನೂನು ಪದವಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ. ಜೀತೆಂದ್ರ ಸಿಂಗ್ ತೋಮರ್ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು...

ಅವಕಾಶ ಸಿಕ್ಕಾಗಲೆಲ್ಲಾ ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಿಸುತ್ತೇನೆ: ಆಸಿಯಾ ಅಂದ್ರ

'ಕಾಶ್ಮೀರ'ದಲ್ಲಿ ದೇಶವಿರೋಧಿ ರ್ಯಾಲಿ ನಡೆಸಿ ಬಂಧನಕ್ಕೊಳಗಾಗುತ್ತಿದ್ದರೂ ಪ್ರತ್ಯೇಕತಾವಾದಿಗಳ ಸೊಕ್ಕು ಕಡಿಮೆಯಾಗಿಲ್ಲ. ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜಾರೋಹಣ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ, ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನ ಧ್ವಜಾರೋಣ ಮಾಡುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನ ಧ್ವಜಾರೋಹಣ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ...

ಮುಂಬೈ ಸರಣಿ ಸ್ಫೋಟ ಪ್ರಕರಣ: ಯಾಕೂಬ್‌ ಮೆಮೋನ್‌ ಗೆ ಗಲ್ಲು ಶಿಕ್ಷೆ

1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ತನಗೆ ನೀಡಲಾಗಿರುವ ಮರಣ ದಂಡನೆಯ ಶಿಕ್ಷೆಯನ್ನು ಪುನರ್ ಪರಿಶೀಲಿಸುವಂತೆ ಯಾಕೂಬ್‌ ಅಬ್ದುಲ್‌ ರಝಾಕ್‌ ಮೆಮೋನ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ನಿಟ್ಟಿನಲ್ಲಿ ಮೆಮೋಮ್ ಗೆ ಯಾವುದೇ ಹೊತ್ತಿನಲ್ಲಿ...

ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ವಜಾ

ರಾಜೀನಾಮೆ ನೀಡುವಂತೆ ಸೂಚಿಸಿದ್ದ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕಿಳಿದು, ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಮಿಜೋರಂ ರಾಜ್ಯಪಾಲ ಅಜೀಜ್‌ ಖುರೇಶಿ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ. ಖುರೇಶಿ ಅವರಿಂದ ತೆರವಾಗಿರುವ ಮಿಜೋರಂ ರಾಜ್ಯಪಾಲ ಹುದ್ದೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿ...

ಆದರ್ಶ ಹೌಸಿಂಗ್ ಸೊಸೈಟಿ ಹಗರಣ: ಅಶೋಕ್ ಚೌಹಾಣ್ ಅರ್ಜಿ ವಜಾ

ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್‌ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ. ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...

ಆಪ್‌ ನಲ್ಲಿ ಭಿನ್ನಮತ : ಭೂಷಣ್‌, ಯಾದವ್‌ ತಲೆದಂಡ ಸಾಧ್ಯತೆ

ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್‌ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್‌ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ. ಯಾದವ್‌ ಮತ್ತು ಭೂಷಣ್‌ ಆಪ್‌ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...

ಆಪ್‌ ನಲ್ಲಿ ಎಲ್ಲವೂ ಸರಿಯಿಲ್ಲ: ಎಲ್‌.ರಾಮದಾಸ್‌

ಆಮ್‌ ಆದ್ಮಿ ಪಕ್ಷದ ನಿರ್ಣಾಯಕ ರಾಜಕೀಯ ಸಮಿತಿಯಿಂದ ಯೋಗೇಂದ್ರ ಯಾದವ್‌ ಅವರನ್ನು ವಜಾಮಾಡಬೇಕು ಎಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ, ಪಕ್ಷದ ಆಂತರಿಕ ಲೋಕಪಾಲ ಅಡ್ಮಿರಲ್‌ ಎಲ್‌.ರಾಮದಾಸ್‌ ಅವರು ಆಪ್‌ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಪತ್ರ ಬರೆದಿದ್ದಾರೆ. ಪಕ್ಷದ ಮುಖಂಡರಿಗೆ ಇ-ಮೇಲ್‌ ಮೂಲಕ...

ನಿಧಿ ದುರುಪಯೋಗ ಆರೋಪಕ್ಕೆ ರಾಜಕೀಯ ಬಣ್ಣ ನೀಡಬೇಡಿ: ಸೆಟಲ್ವಾಡ್ ಗೆ ಸುಪ್ರೀಂ ಎಚ್ಚರಿಕೆ

ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ. ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...

ಸುನಂದಾ ಪುಷ್ಕರ್ ಹತ್ಯೆ ಪ್ರಕರಣ: ಶಶಿತರೂರ್ ಅರ್ಜಿ ವಜಾ

'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುನಂದಾ...

ಕೇಂದ್ರ ಗೃಹ ಕಾರ್ಯದರ್ಶಿ ಅನಿಲ್‌ ಗೋಸ್ವಾಮಿ ರಾಜೀನಾಮೆ

ಶಾರದಾ ಚಿಟ್‌ ಪಂಡ್ ಹಗರಣ ಸಂಬಂಧ, ಕೇಂದ್ರದ ಮಾಜಿ ಸಚಿವ ಮಾತಂಗ್‌ ಸಿನ್‌ ಅವರನ್ನು ಬಂಧಿಸದಂತೆ ತಡೆಯಲು ಯತ್ನಿಸಿದ್ದ ಗೃಹ ಇಲಾಖೆಯ ಕಾರ್ಯದರ್ಶಿ ಅನಿಲ್‌ ಗೋಸ್ವಾಮಿ ಅವರನ್ನು ಹುದ್ದೆಯಿಂದ ವಜಾ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದಷ್ಟೇ ಸಿಬಿಐ,...

ಗೃಹ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎಲ್‌.ಸಿ ಗೋಯಲ್‌ ಅಧಿಕಾರ ಸ್ವೀಕಾರ

‌ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನಿಲ್‌ ಗೋಸ್ವಾಮಿ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಎಲ್‌.ಸಿ ಗೋಯಲ್‌ ಅವರನ್ನು ನೂತನ ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 1979 ರ ತಂಡದ ಐಎಎಸ್‌ ಅಧಿಕಾರಿಯಾಗಿರುವ ಎಲ್‌.ಸಿ ಗೋಯಲ್‌ ಅವರು ಗುರುವಾರ...

ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ವಜಾ

ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...

ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸಬಹುದು: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...

ಉಪರಾಷ್ಟ್ರಪತಿಗಳು ಗಣರಾಜ್ಯೋತ್ಸವದಂದು ಶಿಷ್ಟಾಚಾರ ಉಲ್ಲಂಘಿಸಿಲ್ಲ

'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ. ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...

ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ: ಶಂಕರ ಬಿದರಿ

'ಭ್ರಷ್ಟಾಚಾರ'ದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಶಂಕರಬಿದರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ನಡೆದ 66ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಂಕರ್ ಬಿದರಿ, ...

ಡಿಆರ್‌ಡಿಒ ಮುಖ್ಯಸ್ಥ ಅವಿನಾಶ್‌ ಚಂದರ್‌ ವಜಾ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್‌ ಚಂದರ್‌ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ. ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್‌ ಚಂದರ್‌ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ...

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ಕಾರ್ತಿಕ್ ಗೌಡ ವಿವಾಹ ಪ್ರಕರಣ: ಕೌಟುಂಬಿಕ ನ್ಯಾಯಲಯದಿಂದ ಮೈತ್ರಿಯಾ ಅರ್ಜಿ ವಜಾ

'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶೋಭಾ ಕರಂದ್ಲಾಜೆ ಪೊಲೀಸರ ವಶಕ್ಕೆ

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ. ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ಜಾಮೀನು ಅರ್ಜಿ ವಜಾ: ಜಯಲಲಿತಾಗೆ ಆಘಾತ

ಜಾಮೀನು ಅರ್ಜಿ ವಜಾ ಆದೇಶ ಹೊರಬೀಳುತ್ತಿದ್ದಂತೆಯೇ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಆಘಾತವಾಗಿದ್ದು, ಜೈಲಿನಲ್ಲಿಯೇ ಕುಸಿದು ಬಿದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದ್ಯ ಪೀಠದಲ್ಲಿ ನಡೆದಿತ್ತು. ಬೆಳಿಗ್ಗೆಯಿಂದಲೂ ಕೋರ್ಟ್ ವಿಚಾರಣೆ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ತೀರ್ಪು ವರ್ಗಾವಣೆ ಅರ್ಜಿ ವಜಾ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ತೀರ್ಪನ್ನು ಬೇರೆಡೆ ಪ್ರಕಟಿಸಬೇಕೆಂದು ಕೋರಿ ವಕೀಲ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜಯಲಲಿತಾ ಅಕ್ರಮ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಸೆ.27ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್...

ಯುಪಿಎಸ್ ಸಿ ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಯುಪಿಎಸ್ ಸಿ ಅಭ್ಯರ್ಥಿಗಳು ಪ್ರಾಥಮಿಕ ಪ್ರವೇಶ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಸಿವಿಲ್ ಸರ್ವಿಸ್ ಯೋಗ್ಯತಾ ಪರೀಕ್ಷೆ(CSAT)ವಿವಾದ ಹಿನ್ನಲೆಯಲ್ಲಿ ಆ.24ರಂದು ನಡೆಯಬೇಕಿದ್ದ ಯುಪಿಎಸ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಅಭ್ಯರ್ಥಿಗಳು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ...

ರಂಜಾನ್ ವ್ರತಭಂಗ ಪ್ರಕರಣ: ಸಂಸದರ ವಿರುದ್ಧದ ಪಿ.ಐ.ಎಲ್‌ ವಜಾ

'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ. ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ. ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...

ವೇದಿಕೆ ಮೇಲಿಂದ ಕುಸಿದುಬಿದ್ದ ಜಾರ್ಖಂಡ್ ರಾಜ್ಯಪಾಲ

'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಜಾರ್ಖಂಡ್ ನ ರಾಜ್ಯಪಾಲರು ಅಸ್ವಸ್ಥರಾದ ಘಟನೆ ನಡೆದಿದೆ. ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥರಾಗಿ ಕುಸಿದುಬಿದ್ದ ರಾಜ್ಯಪಾಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ ಸಯೀದ್ ಅಹಮದ್ ಅವರಿಗೆ ಯಾವುದೇ ಅಪಾಯವಿಲ್ಲ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited