Untitled Document
Sign Up | Login    
Dynamic website and Portals
  

Related News

ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಸಿಎಂಸಿದ್ದರಾಮಯ್ಯ

ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಅಬು ಜುಂದಾಲ್ ಸೇರಿದಂತೆ 7 ಜನರಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಔರಂಗಾಬಾದ್​ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 26/11ಮುಂಬೈ ದಾಳಿಯ ಸೂತ್ರಧಾರ ಅಬು ಜುಂದಾಲ್ ಸೇರಿ 7 ಜನರಿಗೆ ಮೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮೋಕಾ ವಿಶೇಷ ನ್ಯಾಯಾಲಯ ಕಳೆದ ಗುರುವಾರ ಅಬು ಜುಂದಾಲ್...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟ

2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ಸತತ ವಿಚಾರಣೆ ಬಳಿಕ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ...

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ನಡೆದ ಹಿಂಸಾಚಾರದ ಬಳಿಕ ನಡೆದ ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸತತ 14 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದ್ದು, ಪ್ರಕರಣದಲ್ಲಿ...

ಕಲ್ಲಿದ್ದಲು ಹಗರಣ: ಮೊದಲ ತೀರ್ಪು ಪ್ರಕಟ

ಯುಪಿಎ-2 ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತೀರ್ಪು ಪ್ರಕಟವಾಗಿದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ವಂಚಿಸಿ ಜಾರ್ಖಂಡ್‌ ನ‌ಲ್ಲಿ ಕಲ್ಲಿದ್ದಲು ಗಣಿ ಮಂಜೂರು ಮಾಡಿಸಿಕೊಂಡ ಪ್ರಕರಣದಲ್ಲಿ ಜಾರ್ಖಂಡ್‌ ಇಸ್ಪಾತ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ...

26/11 ಮುಂಬಯಿ ದಾಳಿಃ ಉಗ್ರ ಡೇವಿಡ್‌ ಹೆಡ್ಲಿಗೆ ಮುಂಬಯಿ ನ್ಯಾಯಾಲಯ ಕ್ಷಮಾದಾನ

26/11 ಮುಂಬಯಿ ದಾಳಿ ನಡೆಸಲು ಲಷ್ಕರ್‌-ಎ-ತಯ್ಯಬಾ ಉಗ್ರರ ಜೊತೆ ಒಲಸಮ್ಚು ರೂಪಿಸಿದ್ದ, ಡೇವಿಡ್‌ ಹೆಡ್ಲಿ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಒಪ್ಪಿಗೆ ಸೂಚಿಸಿದ ನಂತರ ಮುಂಬಯಿ ವಿಶೇಷ ನ್ಯಾಯಾಲಯ ಕ್ಷಮಾದಾನ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ಈಗ ಅಮೆರಿಕದ ಜೈಲಿನಲ್ಲಿರುವ ಹೆಡ್ಲಿ...

ಸತ್ಯಂ ಕಂಪ್ಯೂಟರ್ಸ್ ಹಗರಣ: ಎಲ್ಲಾ 10 ಜನರ ವಿರುದ್ಧ ಆರೋಪ ಸಾಬೀತು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣಕ್ಕೆ ಸಂಬಧಿಸಿದಂತೆ ಪ್ರಕರಣದ ಎಲ್ಲಾ 10 ಜನನರ ವಿರುದ್ಧ ಆರೋಪ ಸಾಬೀತಾಗಿದೆ. ಸತ್ಯಂ ಕಂಪ್ಯೂಟರ್ಸ್ ನ ಮುಖ್ಯಸ್ಥ ವ್ಯವಸ್ಥಾಪಕ ರಾಮಲಿಂಗಾರಾಜು ಸೇರಿದಂತೆ ಒಟ್ಟು 10 ಜನರು ತಪ್ಪಿತಸ್ಥರು ಎಂದು ಹೈದ್ರಾಬಾದ್ ನ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು...

ಸತ್ಯಂ ಕಂಪ್ಯೂಟರ್ಸ್ ಹಗರಣ: ರಾಮಲಿಂಗಾರಾಜು ಸೇರಿ 10 ಮಂದಿಗೆ 7ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್‌.ಎನ್‌ ಚಕ್ರವರ್ತಿ,...

ಕಲ್ಲಿದ್ದಲು ಹಂಚಿಕೆ ಹಗರಣ: ಮೇಲ್ಮನವಿ ಸಲ್ಲಿಸಲು ಡಾ.ಸಿಂಗ್ ನಿರ್ಧಾರ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ಜಾರಿಯಾಗಿರುವ ಸಮನ್ಸ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ. ಹಿಂಡಾಲ್ಕೊ ಕಂಪೆನಿಯನ್ನು ಒಳಗೊಂಡ ಕಲ್ಲಿದ್ದಲು ಹಂಚಿಕೆ ಹಗರಣದಲ್ಲಿ ಓರ್ವ ಆರೋಪಿಯಾಗಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ವಿಶೇಷ ಸಿಬಿಐ...

ಸಿಬಿಐ ಸಮನ್ಸ್: ಮನಮೋಹನ್ ಸಿಂಗ್ ಗೆ ಬೆಂಬಲ ಘೋಷಿಸಿ ಕಾಂಗ್ರೆಸ್ ಏಕತಾ ಮೆರವಣಿಗೆ

'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ. ಮನಮೋಹನ್ ಸಿಂಗ್ ನೆರವಿಗೆ...

ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋರ್ಟ್ ತೀರ್ಪಿನಿಂದ ಸಿ.ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಉನ್ನತ ಶಿಕ್ಷಣ ಸಚಿವರೂ ಆಗಿರುವ ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್...

ಕಲ್ಲಿದ್ದಲು ಹಗರಣ: ಪ್ರಗತಿ ವರದಿ ವಿಶೇಷ ಕೋರ್ಟಿಗೆ ಸಲ್ಲಿಸಿದ ಸಿಬಿಐ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದ ಪ್ರಗತಿ ವರದಿಯನ್ನು ಸಿಬಿಐ, ಮಂಗಳವಾರ ಮುಚ್ಚಿದ ಲಕೋಟೆಯಲ್ಲಿ ಇರಿಸಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪಾರೇಖ್‌ ಮತ್ತು ಇತರ ಕೆಲವರನ್ನು ಒಳಗೊಂಡ ಕಲ್ಲಿದ್ದಲು ಹಗರಣಕ್ಕೆ...

ಜನಾರ್ದನ ರೆಡ್ಡಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಮಂಜೂರು

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ...

ಪ್ಯಾಲೇಸ್ತಿನ್‌ ಯುವತಿಯನ್ನು ವರಿಸಿದ್ದ ಮಜೀದ್‌

6 ತಿಂಗಳ ಹಿಂದಷ್ಟೇ ಪ್ರವಾಸದನೆಪದಲ್ಲಿ ಇರಾಕ್‌ ಮತ್ತು ಸಿರಿಯಾಗೆ ತೆರಳಿ ಅಲ್ಲಿ ಐಸಿಸ್‌ (ಇಸ್ಲಾಮಿಕ್‌ ಸ್ಟೇಟ್‌) ಉಗ್ರಗಾಮಿ ಸಂಘಟನೆ ಸೇರಿ ತವರಿಗೆ ಮರಳಿರುವ ಮುಂಬೈನ ಕಲ್ಯಾಣ್‌ ಪ್ರದೇಶದ ಯುವಕ ಆರಿಫ್ ಮಜೀದ್‌ (22) ಪ್ಯಾಲೇಸ್ತಿನ್‌ ಯುವತಿಯನ್ನು ವಿವಾಹವಾಗಿದ್ದ ಎಂದು ವರದಿಯಾಗಿದೆ. ಜುಲೈ ತಿಂಗಳಿನಲ್ಲಿ...

ಕಲ್ಲಿದ್ದಲು ತನಿಖೆ: ಮಾಜಿ ಪ್ರಧಾನಿ ಸಿಂಗ್ ವಿಚಾರಣೆ ಮಾಡಿಲ್ಲ ಏಕೆ-ಕೋರ್ಟ್

'ಕಲ್ಲಿದ್ದಲು ನಿಕ್ಷೇಪ ಹಂಚಿಕೆ' ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ದೆಹಲಿ ವಿಶೇಷ ನ್ಯಾಯಾಲಯ ಸಿಬಿಐನ್ನು ಪ್ರಶ್ನಿಸಿದೆ. ಯುಪಿಎ ಸರ್ಕಾರದ ಬಹುಕೋಟಿ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಉದ್ಯಮಿ ಕೆ.ಎಂ....

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

'ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ'ದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ.24ರಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಜನಾರ್ದನ ರೆಡ್ಡಿ ಅವರಿಗೆ ಇನ್ನೂ 3 ಪ್ರಕರಣಗಳಲ್ಲಿ ಜಾಮೀನು ದೊರೆಯಬೇಕಿರುವ ಹಿನ್ನೆಲೆಯಲ್ಲಿ ರೆಡ್ಡಿ ಅವರಿಗೆ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿಲ್ಲ. ...

ಕನ್ನಿಮೋಳಿ ವಿರುದ್ಧದ ಬಂಧನ ವಾರಂಟ್ ರದ್ದು

ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿಯವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಿಮೋಳಿ ನ.10ರಂದು ದೆಹಲಿಯ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕನ್ನಿಮೋಳಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ....

ಜಯಲಲಿತಾ ಬಿಡುಗಡೆಗೆ ಕ್ಷಣಗಣನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು...

ಡಿ.ಕೆ.ಶಿವಕುಮಾರ್ ವಿರುದ್ಧ ಹಿರೇಮಠ ವಾಗ್ದಾಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪಿಗೆ ಕ್ಷಣಗಣನೆ

ದೇಶಾದ್ಯಂತ ಕುತೂಹಲ ಕೆರಳಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ ಪ್ರಕಟಿಸಲಿದೆ. 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪನ್ನು ಬೆಳಿಗ್ಗೆ 11 ಗಂಟೆಗೆ...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...

2ಜಿ ಹಗರಣ: ದಯಾಳು ಅಮ್ಮಾಳ್ ಗೆ ಜಾಮೀನು

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಧಿಸಿದಂತೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ ಸೈನಿ, ಅನಾರೋಗ್ಯ ಹಿನ್ನಲೆಯಲ್ಲಿ ದಯಾಳು ಅಮ್ಮಾಳ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. 5 ಲಕ್ಷ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited