ಇಂದಿನಿಂದ ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ.
ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರ, ಎನ್ ಎಸ್ ಜಿ ಸದಸ್ಯತ್ವ ಪಡೆಯುವಲ್ಲಿ ಕೇಂದ್ರದ ವೈಫಲ್ಯ, ಕೆಲವು ರಾಜ್ಯಗಳಲ್ಲಿನ ಪ್ರವಾಹದ ಬಗ್ಗೆ, ಕೃಷಿ ಸಮಸ್ಯೆಗಳು ಮತ್ತು ಭಯೋತ್ಪಾದನೆ,...
ಮುಂಗಾರು ಅಧಿವೇಶನದ ವೇಳೆ ಸಂಸತ್ತಿನ ಎರಡೂ ಸದನಗಳಲ್ಲಿ ದೇಶಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಿದ್ದಾರೆ.
ಅಧಿವೇಶ ಆರಂಭಕ್ಕೂ ಮುನ್ನ ಸಂಸತ್ ಹೊರಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾನು...
ಟರ್ಕಿಯಲ್ಲಿ ಸೇನಾ ಪಡೆಗಳು ಅನಿರಿಕ್ಷಿತವಾಗಿ ಕ್ರಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ನಾಗರಿಕರು, ಪೊಲೀಸರು ಸೇರಿ ಸುಮಾರು 60 ಜನರು ಮೃತಪಟ್ಟಿದ್ದಾರೆ.
ಸಂಸತ್ ಮೇಲೆ ಬಾಂಬ್ ದಾಳಿಯೂ ನಡೆದಿದ್ದು, ಇದೂವರೆಗೂ 60 ಮಂದಿ ಗುಂಡಿನದಾಳಿಗೆ ಬಲಿಯಾಗಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಮಂದಿ ನಾಗರಿಕರೇ...
ವಿಶ್ವದ ಅತಿ ದೊಡ್ಡ ಮತ್ತು ಅತಿ ಹಳೆಯ ಪ್ರಜಾಪ್ರಭುತ್ವ ನಮ್ಮನ್ನಿಂದು ಮತ್ತಷ್ಟು ಸನಿಹಕ್ಕೆ ಕರೆತಂದಿದೆ ಎಂದು ಪ್ರಧಾನಿ ನರೆಂದ್ರ ಮೋದಿ ಹೆಳಿದ್ದಾರೆ.
ಅಮೆರಿಕ ಕಾಂಗ್ರೆಸ್ (ಸಂಸತ್)ನಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭಾಷಣ ಮಾಡಿದರು. ಭಾಷಣದ ಉದ್ದಕ್ಕೂ ಸಂಸತ್ ಸದಸ್ಯರು ಚಪ್ಪಾಳೆಯ ಸುರಿಮಳೆಯನ್ನೇಗೈದರು....
ಜೂನ್ ತಿಂಗಳಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಜೂ.8ರಂದು ಅಲ್ಲಿನ ಸಂಸತ್ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಕುರಿತು ಅಮೆರಿಕದ ಸಂಸತ್ ನ ಸ್ಪೀಕರ್ ಪಾಲ್ ರ್ಯಾನ್ ವಾಷಿಂಗ್ಟನ್ ನಲ್ಲಿ ಮಾಹಿತಿ ನೀಡಿದ್ದಾರೆ. ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯ...
ಸಂಸತ್ ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸರ್ಕಾರ ಮಹತ್ವದ ಜಿ.ಎಸ್.ಟಿ ಸೇರಿದಂತೆ 13 ಮಸೂದೆಗಳನ್ನು...
ಏ.೨೫ರಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ.
ಉತ್ತರಾಖಂಡ್ ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು...
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಪ್ರಮುಖಾಂಶ ಈ ಕೆಳಗಿದೆ.
* ಸ್ವಚ್ಛತೆ ಬಡವರಿಗೆ ಹೆಚ್ಚು ಸಹಾಯವಾಗುತ್ತದೆ. ಸ್ವಚ್ಛತೆ ಇಲ್ಲದಿರುವುದರಿಂದ ಬಡವರು ಔಷಧಿಗಾಗಿ ಹೆಚ್ಚು ಹಣ ಖರ್ಚು ಮಾಡಬೆಕಾಗುತ್ತದೆ.
* ಸ್ವಚ್ಛತೆ ಒಂದು ಸಾಮೂಹಿಕ...
ಮಂಗಳವಾರದಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.ಕಳೆದ ಎರಡು ಅಧಿವೇಶನಗಳೂ ಪ್ರತಿಪಕ್ಷದ ಗದ್ದಲದ ನಡುವೆ, ಯಾವುದೆ ಚರ್ಚೆ ನಡೆಯದೇ ಬಲಿಯಾಗಿವೆ. ಆದ್ದರಿಂದ ಈಗ ಎಲ್ಲರ ದೃಷ್ಟಿ ಬಜೆಟ್ ಅಧಿವೇಶನದ ಮೇಲೆ.
ಬಜೆಟ್ ಅಧಿವೇಶನದಲ್ಲಿಯೂ ಹೈದರಾಬಾದ್ ಕೇಂದ್ರೀಯ ವಿವಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ,...
ಅಫ್ಘಾನಿಸ್ತಾನದಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಒಂದು ಭಾಗದ ಕಟ್ಟಡಕ್ಕೆ ಅಟಲ್ ಬ್ಲಾಕ್ ಎಂದು ಹೆಸರಿಸುವುದು ಸಂತಸ ತಂದಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕಿಂತ ಒೞೆಯ ದಿನವನ್ನು ನಾವು ಆಯ್ಕೆ...
ಕಾಂಗ್ರೆಸ್ ಪ್ರತಿಭಟನೆಯಿಂದ ಮುಂಗಾರು ಅಧಿವೇಶನದಲ್ಲಿ ಯಾವುದೇ ಮಸೂದೆಯನ್ನು ಮಂಡಿಸಲೂ ಸಾಧ್ಯವಾಗದ ಹಿನ್ನಲೆಯಲ್ಲಿ, ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು ಸರಕು ಮತ್ತು ಸೇವಾ ತೆರಿಗೆ ಮಸೂದೆ (ಜಿ ಎಸ್ ಟಿ) ಅನುಮೋದನೆ ಪಡೆಯಲು ಸೆಪ್ಟಂಬರ್ ನಲ್ಲಿ ಕೇಂದ್ರ ಸರ್ಕಾರ ಎರಡು ದಿನಗಳ ಸಂಸತ್...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ನಿರಂತರ ಪ್ರತಿಭಟನೆ ನಡೆಸಿ ಮೂರು ವಾರಗಳ ಸಂಸತ್ ಕಲಾಪಕ್ಕೆ ಆಡ್ಡಿ ಮಾಡಿದ ಕಾಂಗ್ರೆಸ್, ತನ್ನ ನಾಯಕರು ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೇಲೆ ಮಾಡಿದ ದಾಳಿಗೆ ಪ್ರತಿಸ್ಪರ್ಧೆ ಕೊಟ್ಟಂತೆ ಇತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ಒಂದು ಕುಟುಂಬವನ್ನು ಉಳಿಸಲು ಬಯಸುತ್ತದೆ,...
ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಅಫ್ಘಾನಿಸ್ತಾನದ ಸಂಸತ್ ಭವನದ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಸಂಸತ್ ಭವನದ ಒಳಗೆ ಒಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದರೆ, ಸಂಸತ್ ಆವರಣದಲ್ಲಿ ಮೂರು ಬಾಂಬ್ ಸೇರಿದಂತೆ ಒಟ್ಟು ಆರು ಕಡೆ ಸ್ಫೋಟಗೊಂಡಿರುವುದಾಗಿ...
ಮೂರು ದಿನಗಳ ಯಶಸ್ವೀ ಚೀನಾ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಂಗೋಲಿಯಾಕ್ಕೆ 2 ದಿನಗಳ ಭೇಟಿಗಾಗಿ ಆಗಮಿಸಿದರು. ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಮಂಗೋಲಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಈ ನೀಟ್ಟಿನಲ್ಲಿ ಐತಿಹಾಸಿಕ ಭೇಟಿ ಸಾಕಷ್ಟು ಮಹತ್ವ...
ಪಂಜಾಬ್ ನ ಮೊಗಾದಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಬಸ್ ನಿಂದ ಹೊರಗೆಸೆದು ಹತ್ಯೆ ಮಾಡಿದ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.
ಲೋಕಸಭೆಯಲ್ಲಿ ಬಾಲಕಿ ಸಾವಿನ ಪ್ರಕರಣದ ಕುರಿತು ನಿಲುವಳಿ ಸೂಚನೆ ಮಂಡಿಸಿ ಮತನಾಡಿದ ಕಾಂಗ್ರೆಸ್ ನಾಯಕ...
ಪಂಜಾಬ್ ಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಏ.29ರಂದು ಸಂಸತ್ ನಲ್ಲಿ ರೈತರ ಸಮಸ್ಯೆಗಳ ಕುರಿತು ಭಾಷಣ ಮಾಡುವ ಸಾಧ್ಯತೆ ಇದೆ.
ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ರೈತರ ಸಮಸ್ಯೆಗಳ ಕುರಿತು ಮಾತನಾಡಲು ಅನುಮತಿ ನೀಡಬೇಕೆಂದು ರಾಹುಲ್...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಕೈಗೊಳ್ಳಲಿದ್ದಾರೆ.
ಏ.3ರಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಮಹಾರಾಷ್ಟ್ರದ ವಿದರ್ಭದಿಂದ ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಭೂಸ್ವಾಧೀನ ಕಾಯ್ದೆಯಿಂದ ಉಂಟಾಗುವ...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಯ್ದೆಗೆ ಬೆಂಬಲ ನೀಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಭೂಸ್ವಾಧೀನ ಕಾಯ್ದೆ ಸಂಬಂಧ ನಮ್ಮ ನಿಲುವನ್ನು ಸಂಸತ್ ನಲ್ಲಿಯೇ ಸ್ಪಷ್ಟಪಡಿಸಿದ್ದೇವೆ,...
ಆಮ್ ಆದ್ಮಿ ಪಕ್ಷ ಹಮ್ಮಿಕೊಂಡಿದ್ದ ರೈತರ ರ್ಯಾಲಿಯಲ್ಲಿ ಪ್ರತಿಭಟನಾಕಾರರ ಎದುರೇ ಆತ್ಮಹತ್ಯೆಗೆ ಶರಣಾಗಿದ್ದ ರಾಜಸ್ತಾನದ ರೈತ ಗಜೇಂದ್ರ ಸಿಂಗ್ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿ ಗದ್ದಲ, ಕೋಲಾಹಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
ಆಪ್...
'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ....
'ಸಂಸತ್ ಅಧಿವೇಶನ'ದ ಪ್ರಶ್ನೋತ್ತರ ಕಲಾಪವನ್ನು ರದ್ದುಗೊಳಿಸಿ ನೆಟ್ ನ್ಯೂಟ್ರಲಿಟಿ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ನೆಟ್ ನ್ಯೂಟ್ರಲಿಟಿ ಬಗ್ಗೆ ಇಂದಿನ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ, ಇದಕ್ಕಾಗಿ ಪ್ರಶ್ನೋತ್ತರ ಕಲಾಪವನ್ನು...
'ಸಂಸತ್ ಅಧಿವೇಶನ'ದ ಲೋಕಸಭೆಯ ಕಲಾಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕಾ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಬಗ್ಗೆ ಮಾತನಾಡಿದ್ದಾರೆ.
'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದಾಗ ಟೈಮ್ ಮ್ಯಾಗಜೀನ್ ನಲ್ಲಿ ಅಮೆರಿಕದ ಅಧ್ಯಕ್ಷ ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದರ ಸಂಬಂಧ ತಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಭೇಟಿ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಿರಿರಾಜ್ ಸಿಂಗ್...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವರ್ಣಬೇಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ.
ಏ.20ರಂದು ಸಂಸತ್ ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗಿದೆ. ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಗದ್ದಲವೆಬ್ಬಿಸಿದ ಕಾಂಗ್ರೆಸ್ ಸದಸ್ಯರು, ತಮ್ಮ ನಾಯಕಿ ಸೋನಿಯಾ...
'ರಾಹುಲ್ ಗಾಂಧಿ', ಸೋನಿಯಾ ಗಾಂಧಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲೇ ಭಿನ್ನಮತ ಕಾಣಿಸಿಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವದ ಪರ ದೆಹಲಿ ಮಾಜಿ ಸಿ.ಎಂ ಶೀಲಾ ದೀಕ್ಷಿತ್ ಬ್ಯಾಟಿಂಗ್ ನಡೆಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾದೀಕ್ಷಿತ್, ಸೋನಿಯಾ ಗಾಂಧಿ ಯಾವುದೇ ರಾಜಕೀಯ ಜವಾಬ್ದಾರಿಗಳಿಂದ...
'ಎ.ಐ.ಸಿ.ಸಿ' ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಡ್ತಿ ನೀಡುವ ವಿಚಾರ 5 ತಿಂಗಳ ಕಾಲ ಮುಂದೂಡಲ್ಪಟ್ಟಿದೆ.
ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಎಐಸಿಸಿ ಅಧಿವೇಶನವನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಿದೆ.
ಹಿರಿಯ...
ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಎನ್ ಡಿಎ ಸರ್ಕಾರದ ಭೂ ಸ್ವಾಧೀನ ಮಸೂಧೆ ಸುಗ್ರೀವಾಜ್ಞೆ ಅವಧಿ ಇದೇ ಏ.5ರಂದು ತನ್ನಿಂದ ತಾನಾಗಿಯೇ ರದ್ದುಗೊಳ್ಳಲಿದೆ.
ಈ ಸುಗ್ರೀವಾಜ್ಞೆ ಘೋಷಿಸಿ, ಏ.5ಕ್ಕೆ ಆರು ತಿಂಗಳು ಪೂರ್ಣವಾಗಲಿದ್ದು, ಬಜೆಟ್ ಅಧಿವೇಶನದಲ್ಲಿ ಒಳಗೆ ಸದನದಲ್ಲಿ...
'ರಾಜ್ಯಸಭೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡು ಪ್ರಮುಖ ಮಸೂದೆಗಳು ಅಂಗೀಕಾರವಾಗಿದೆ. ಕಲ್ಲಿದ್ದಲು ಹಾಗೂ ಖನಿಜ (ತಿದ್ದುಪಡಿ) ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಮೋದಿ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ.
ಮಾ.20ಕ್ಕೆ ಸಂಸತ್ ನ ಬಜೆಟ್ ಅಧಿವೇಶನದ ಪ್ರಥಮ ಭಾಗ ಮುಕ್ತಾಯಗೊಳ್ಳಲಿದ್ದು, ಈ ಎರಡೂ...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...
ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ.
ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ...
ಏಕತೆ ಮತ್ತು ಅಖಂಡತೆಗೆ ಶ್ರೀಲಂಕಾ ಮಾದರಿಯಾಗಿದ್ದು ಲಂಕಾ ಪ್ರಗತಿಯಲ್ಲಿ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಾ.13ರಂದು ಶ್ರೀಲಂಕಾ ಸಂಸತ್ ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ ಹಾಗೂ ಶ್ರೀಲಂಕಾ ದಶಕಗಳ ಕಾಲ ಉಗ್ರವಾದವನ್ನು ಅನುಭವಿಸಿವೆ....
ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...
ದೇಶದ ಅಖಂಡತೆ-ಏಕತೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಪ್ರತ್ಯೇಕತಾವಾದಿಗಳ ವಿರುದ್ಧ ನಮ್ಮೆಲ್ಲರ ಧ್ವನಿಯೂ ಒಂದೇ ಆಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಪ್ರತ್ಯೇಕತಾವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ವಿವಾದ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಈ ಕುರಿತು ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾದ ಸಂಸತ್ ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎಂದು ವಿದೇಶಾಂಗ ಇಲಾಖೆ ಕಚೇರಿ ಮೂಲಗಳು ಮಾಹಿತಿ ನೀಡಿದೆ.
ಮಾ.12ರಿಂದ 15ರ ಒಳಗಿನ ಅವಧಿಯಲ್ಲಿ ಪ್ರಧಾನಿ ಮೋದಿ ಭಾಷಣ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಲಿದೆ. ಶ್ರೀಲಂಕಾದ ಪ್ರಮುಖ ನಗರಗಳಾದ ಅನುರಾಧಪುರ, ಕ್ಯಾಂಡೀಸ್,...
2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಪ್ಜಲ್ ಗುರುಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಮಣಿಶಂಕರ್ ಅಯ್ಯರ್, ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಉಗ್ರ ಅಫ್ಜಲ್ ನನ್ನು...
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಶೇ.26ರಷ್ಟು ಹೆಚ್ಚಾಗಿದೆ ಎಂದು ಇಂಡಿಯಾ ಟು ಡೆ ಅಂತರ್ಜಾಲ ಪತ್ರಿಕೆ ವರದಿ ಮಾಡಿದೆ.
ಮಹಾರಾಷ್ಟ್ರದಲ್ಲಿಯೇ ಅತ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ತೆಲಂಗಾಣ, ಜಾರ್ಖಂಡ್ ನಂತರದ ಸ್ಥಾನ...
ತಮ್ಮನ್ನು ಪ್ರಧಾನ ಸೇವಕನೆಂದೇ ಹೇಳುವ ಪ್ರಧಾನಿ ನರೇಂದ್ರ ಮೋದಿ ಇಂದು ಪಾರ್ಲಿಮೆಂಟ್ ನ ಕ್ಯಾಂಟೀನ್ ನಲ್ಲಿ ಗುಜರಾತ್ ಸಂಸದರೊಂದಿಗೆ ಮಧ್ಯಾಹ್ನದ ಭೋಜನ ಸವಿದಿದ್ದಾರೆ.
ಸಂಸತ್ ಭವನದಲ್ಲಿರುವ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿದ ನರೇಂದ್ರ ಮೋದಿ, ವೆಜಿಟೇರಿಯನ್ ತಾಲಿ ಗೆ ಆರ್ಡರ್...
ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ನಡೆಯಲು ಭಾರತದ ಸಂವಿಧಾನ ಅವಕಾಶ ನೀಡಿದೆ. ಈ ವಿಷಯವನ್ನು ಪಾಕಿಸ್ತಾನವೂ ಅರ್ಥಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ...
ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕ್ಷಮೆಯಾಚಿಸುವಂತೆ ವಿರೋಧಪಕ್ಷಗಳು ಪಟ್ಟು ಹಿಡಿದಿದ್ದು, ಕ್ಷಮೆ ಯಾಚಿಸದೇ ಇದ್ದರೆ ರೈಲ್ವೆ ಬಜೆಟ್ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿವೆ.
ವಿರೋಧ ಪಕ್ಷಗಳು ಸದನ ಹಾಳುಮಾಡುವ ಮನಸ್ಥಿತಿಯನ್ನು ಹೊಂದಿವೆ ಎಂದು ವೆಂಕಯ್ಯ ನಾಯ್ಡು...
'ಎಐಸಿಸಿ'ಯಿಂದ ರಜೆ ಪಡೆದಿದ್ದ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿಲ್ಲ, ಭಾರತದಲ್ಲೇ ಇದ್ದಾರೆ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ ಅವರ ಮಾಹಿತಿಯನ್ನು ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿಗಳು ಅಲ್ಲಗಳೆದಿದ್ದಾರೆ.
ಸಂಸತ್ ಅಧಿವೇಶನ, ಪಕ್ಷದ ಕೆಲಸಗಳಿಂದ ರಾಹುಲ್ ಗಾಂಧಿ ರಜೆ ಪಡೆದಿರುವ...
ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ.
ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ...
ಸಂಸತ್ ನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ದಾಳಿಗೆ ವಿಪಕ್ಷಗಳು ಸಜ್ಜಾಗಿವೆ.
ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ 6 ಕಾನೂನುಗಳಿಗೆ ವಿಧೇಯಕದ ರೂಪ ನೀಡುವ ಸವಾಲು ಸಹ ಸರ್ಕಾರದ ಮುಂದಿದೆ.
ವಿವಾದಾಸ್ಪದ ಘರ್ ವಾಪಸಿ, ಸಂಘ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....
ಪಕ್ಷದ ಸರಣಿ ಸೋಲಿನಿಂದ ಕಂಗೆಟ್ಟಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಬಗ್ಗೆ ದೀರ್ಘವಾಗಿ ಆವಲೋಕನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನದಿಂದ ಒಂದು ವಾರ ರಜೆ ಪಡೆದಿದ್ದಾರೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ರಜೆ ಬಗ್ಗೆ ತಿಳಿಸಿರುವ ರಾಹುಲ್ ಗಾಂಧಿ...
ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ...
ನಿರಂತರ ಸೋಲುಗಳಿಂದ ಬೇಸತ್ತಿರುವ ರಾಹುಲ್ ಗಾಂಧಿ ಒಂದು ವಾರಗಳ ಕಾಲ ರಜೆ ಪಡೆದಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಈಗಾಗಲೇ ದೀರ್ಘಾವಧಿ ರಜೆಯಲ್ಲಿದೆ ಎಂದು ಹೇಳಿದೆ.
ರಾಹುಲ್ ಗಾಂಧಿ ಅವರು ತಾವಾಗಿಯೇ ರಜೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ, ದೇಶದ ಜನತೆಯೇ ರಜೆ ನೀಡಿದ್ದಾರೆ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್ ಭವನದ ಮೇಲೆ ಆತ್ಮಾಹುತಿ ಬಾಂಬ್ ದಾಳಿಗೆ ಸಜ್ಜಾಗಿದ್ದಾರೆ ಎಂದು...
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 2015-16ರ ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 28 ರಂದು ಮಂಡಿಸಲಿದ್ದಾರೆ.
ಫೆ. 23ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.26ರಂದು ರೈಲ್ವೆ ಮುಂಗಡಪತ್ರ ಮಂಡನೆಯಾಗಲಿದೆ.
ಫೆ.27ರಂದು ಆರ್ಥಿಕ ಸಮೀಕ್ಷೆ ಮತ್ತು ಫೆ.28ರಂದು...
ಅನಾವಶ್ಯಕ ಕಾರಣಗಳನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪವನ್ನು ವ್ಯರ್ಥ ಮಾಡದಿರುವಂತೆ ವಿರೋಧ ಪಕ್ಷಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚನೆ ನೀಡಿದ್ದಾರೆ.
ಐಐಟಿ, ಎನ್.ಐ.ಟಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕಳೆದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ಕೋಲಾಹಲದಿಂದ ಸಂಸತ್ ಅಧಿವೇಶನ ವ್ಯರ್ಥವಾಗಿದ್ದರ...
ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ.
ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...
ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ.
ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...
'ಭಯೋತ್ಪಾದನೆ' ವಿರುದ್ಧ ಹೋರಾಡುವುದಾಗಿ ಪಣತೊಟ್ಟಿರುವ ಪಾಕಿಸ್ತಾನಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಸವಾಲು ಹಾಕಿದ್ದು, "ನೀವು ನಿಜವಾಗಿಯೂ ಭಯೋತ್ಪಾದನೆ ವಿರುದ್ಧ ಹೋರಾಡುವುದೇ ಆದರೆ ಉಗ್ರ ಸಯ್ಯದ್ ಹಫೀಜ್ ಹಾಗೂ ದಾವೂದ್ ಇಬ್ರಾಹಿಂ ನನ್ನು ನಮ್ಮ ವಶಕ್ಕೆ ಒಪ್ಪಿಸಿ" ಎಂದು ಹೇಳಿದ್ದಾರೆ.
ಡಿ.18ರ ಸಂಸತ್...
'ಹಿಂದೂ ಧರ್ಮ'ದಿಂದ ಅನ್ಯ ಧರ್ಮಕ್ಕೆ ಮತಾಂತರವಾಗಿದ್ದವರನ್ನು ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಿಂದ ತೀವ್ರ ವಿರೋಧವಾಗುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಲ್ಲೇ ಘರ್ ವಾಪಸಿ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ.
ರಾಯ್...
ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ ನೀಡಿದ್ದ ರಾಜ್ಯಪಾಲ ರಾಮ್ ನಾಯ್ಕ್ ವಿರುದ್ಧ ಸಂಸತ್ ನಲ್ಲಿ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಡಿ.12ರ ಸಂಸತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ರಾಮ್ ನಾಯ್ಕ್ ವಿರುದ್ಧ ಪ್ರತಿಭಟನೆ ನಡೆಸಿದ ವಿರೋಧ ಪಕ್ಷಗಳು, ರಾಮಮಂದಿರ ನಿರ್ಮಾಣವಾಗಬೇಕೆಂದು ಹೇಳಿಕೆ...
'ಕಾಂಗ್ರೆಸ್' ಪಕ್ಷ ಮಹಾತ್ಮಾ ಗಾಂಧಿಯ ತತ್ವಗಳನ್ನು ಹತ್ಯೆ ಮಾಡಿದೆ ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಸಾಕ್ಷಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಡಿ.12ರ ಸಂಸತ್ ಕಲಾಪ ಆರಂಭವಾದ ನಂತರ...
ಪ್ರೇಮಿಸಿದ ವ್ಯಕ್ತಿಯನ್ನು ವಿವಾಹವಾಗಲೆಂದು ಯುವತಿಯೋರ್ವಳು ಹಿಂದೂ ಧರ್ಮಕ್ಕೆ ಮತಾಂತರವಾಗಿರುವುದು ಉತ್ತರ ಪ್ರದೇಶದ ಮುಜಾಫರ್ ನಗರಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಈಶ್ವರ್ ಸಿಂಗ್ ಎಂಬಾತನನ್ನು ಪ್ರೀತಿಸಿದ್ದ ಅನ್ಯ ಧರ್ಮೀಯ ಯುವತಿ ನ.3ರಂದು ಆತನೊಂದಿಗೆ ವಿವಾಹವಾಗಿದ್ದಳು, ಈ ಮೂಲಕ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಈ...
'ಉತ್ತರ ಪ್ರದೇಶ'ದಲ್ಲಿ ಮುಸ್ಲಿಂರನ್ನು ಹಿಂದೂ ಧರ್ಮಕ್ಕೆ ಮತಾಂತರ ಮಾಡಿರುವ ಆರೋಪ ಎದುರಿಸುತ್ತಿರುವ ಧರ್ಮ ಜಾಗರಣ ಮಂಚ್ ಮೇಲೆ ಡಿ.11ರಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಚೇರಿಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ...
ಖಾಪ್ ಪಂಚಾಯತ್ ಗಳೂ ಸೇರಿದಂತೆ ಯಾವುದೇ ಸಾಂಪ್ರದಾಯಿಕ ನ್ಯಾಯಾಲಯಗಳು ಅಸಾಂವಿಧಾನಿಕ ಎಂದು ಕೇಂದ್ರ ಕಾನುನು ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.
ಸಂಸತ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದ ಗೌಡ, ಸಾಂಪ್ರದಾಯಿಕ ನ್ಯಾಯಾಲಯಗಳು ದೇಶದ ಕಾನೂನಿಗೆ ವಿರುದ್ಧವಾಗಿದ್ದು ಇಂತಹ ನ್ಯಾಯಾಲಯಗಳ...
'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದನ್ನು ವಿರೋಧಿಸಿ ಸಂಸತ್ ನಲ್ಲಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿವೆ.
ಮುಸ್ಲಿಮರು ಸಾಮೂಹಿಕವಾಗಿ ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿ.10ರಂದು ಕೇರಳಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಬಿಜೆಪಿಯದ್ದೂ ಸೇರಿದಂತೆ ಹಿಂದಿನ ಯಾವುದೇ...
ದೆಹಲಿ ಸರ್ಕಾರ ರಚನೆ ಕುರಿತಂತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆ ಕುರಿತಾದ ಗೊಂದಲ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿದ್ದು, ಯಾವುದೇ ಕಲಾಪವೂ ನಡೆಯಲಿಲ್ಲ.
ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡಬೇಕು ಎಂಬುದು...
ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.
ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ...
ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು...
ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಹೇಳಿಕೆ ಅಸಂಬದ್ಧವಾದದ್ದು, ಇನ್ನು ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸಾಧ್ವಿ ನಿರಂಜನ್ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಮಾರ್ದನಿಸಿತು. ವಿಪಕ್ಷ...
'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...
ಕಪ್ಪುಹಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿ ಟಿಎಂಸಿ ಸದಸ್ಯರು ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.
ಸಂಸತ್ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಹಲವು ವಿಘ್ನಗಳು ಎದುರಾಗಿವೆ. ಪ್ರಮುಖ ವಿಷಯಗಳಾದ ಕಪ್ಪುಹಣ, ಸಿಬಿಐ...
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ರಾಜೀವ್ ಪ್ರತಾಪ್ ರೂಢಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್ನ ಚಳಿಗಾಲದ ಅಧಿವೇಶನದ ಬಗ್ಗೆ ಚರ್ಚಿಸುವ ಸಲುವಾಗಿ ಭಾನುವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ.
ಸಂಸತ್ನ ಸುಗಮ ಕಾರ್ಯ ಕಲಾಪಗಳು ನಡೆಯುವ ಸಲುವಾಗಿ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ...
ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ.
ನ.24ರಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...
ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ...
ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...
ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ.
ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...
'ಜಮ್ಮು-ಕಾಶ್ಮೀರ'ಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸದೇ ಇದ್ದ ಪಾಕ್ ಯೋಧರು, ಅ.25ರಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ.
ಜಮ್ಮು ಪ್ರದೇಶದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕಳೆದ ರಾತ್ರಿ ಪೂಂಚ್...
ಕೆನಡಾ ಸಂಸತ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಧ್ರತಾ ಪಡೆಯ ಯೋಧ ಸಾವನ್ನಪ್ಪಿದ ಘಟನೆ ನಡೆದಿದೆ.
ಕೆನಡಾ ಪ್ರಧಾನಿ ಸ್ಟಿಫನ್ ಹಾರ್ಪರ್ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕೊಠಡಿಯ ಹೊರಗೆ ಈ ಗುಂಡಿನ ದಾಳಿ ನಡೆದಿದೆ. ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲಿ...
ಸಂಸತ್ ಮಾದರಿಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕೆ ಸರ್ಕಾರದಿಂದಲೇ ಪ್ರತ್ಯೇಕ ಟಿ.ವಿ ಚಾನಲ್ ಆರಂಭವಾಗುವುದು ಖಚಿತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,...
'ಕಾಂಗ್ರೆಸ್' ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ಕೇಳುವುದು ತಪ್ಪು ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಂ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 99ನೇ ಜನ್ಮದಿನೋತ್ಸವದ ಅಂಗವಾಗಿ ಸೆ.10ರಂದು ಮೈಸೂರಿನ ಜೆ.ಎಸ್.ಎಸ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಎಸ್.ಎಂ...
ಭ್ರಷ್ಟಾಚಾರ, ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕಳಂಕಿತ ಜನಪ್ರತಿನಿಧಿಗಳನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಪಿ.ಐ.ಎಲ್ ನ್ನು ಸುಪ್ರೀಂ...
ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ.
ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...
'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ.
ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...