Untitled Document
Sign Up | Login    
Dynamic website and Portals
  

Related News

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಡೀನೋಟಿಫಿಕೇಷನ್: ಬಿಜೆಪಿ ದಾಖಲೆ ಬಿಡುಗಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲ್ಲೂಕು...

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ

ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ. ನಗರದ ರಸ್ತೆ ಗುಂಡಿಗಳನ್ನು 10...

ಸಿಎಂ ಪುತ್ರ ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರ ಭೂಮಿ ಮಂಜೂರು: ಹಳೆ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ. ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...

ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೆನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...

ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ನಿತ್ಯೋತ್ಸವ ಕವಿ, ನಾಡೋಜ ಡಾ.ಕೆ ಎಸ್ ನಿಸಾರ್ ಅಹಮದ್ ದಸರಾ ಹಬ್ಬಕ್ಕೆ ವೈಭವದ ಚಾಲನೆ ನೀಡಿದರು. ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಅಗ್ರ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ 8.45ಕ್ಕೆ...

ಶ್ರೀ ರಾಮಚಂದ್ರಾಪುರ ಮಠದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ

ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...

ಕಾವೇರಿ ವಿವಾದ: ಅ.3ರಂದು ಮತ್ತೆ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ವ ಪಕ್ಷಗಳ ಸದನ ನಾಯಕರು, ಕೇಂದ್ರ ಸಚಿವರನ್ನು ಒಳಗೊಂಡಂತೆ ರಾಜ್ಯದ...

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ...

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್. ವಿ ದೇಶಪಾಂಡೆ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗಳ ಚಾಲನಾ...

ಕಾವೇರಿ ಜಲ ವಿವಾದ: ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ

ರಾಜ್ಯದ ನೆಲ, ಜಲ ಹಾಗೂ ಭಾಷೆಗೆ ಸಂಬಂಧಿಸಿದಂತೆ ನಾವೆಂದೂ ವಿಭಿನ್ನ ನಿಲುವು ತೆಗೆದುಕೊಂಡಿಲ್ಲ. ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗಟ್ಟು ಪ್ರದರ್ಶಿಸಿದ್ದವು. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ಗೈರು ಹಾಜರಾಗಿರುವುದಕ್ಕೆ ತಮಗೆ ಕಾರಣ ಗೊತ್ತಿಲ್ಲ....

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...

ಕಾವೇರಿ ಜಲ ವಿವಾದ: ತುರ್ತು ಸಭೆ ಕರೆದ ಸಿಎಂ

ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಲು ರಾಜ್ಯ ಮಂತ್ರಿ ಪರಿಷತ್ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವಿಸೃತವಾಗಿ ಚರ್ಚಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಮಗಾರಿ ನಿರ್ವಹಣೆಗೆ ತಜ್ಞರ ಸಮಿತಿ ನೇಮಕಕ್ಕೆ ಸೂಚನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...

ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣ: ಏಪ್ರಿಲ್ ನಿಂದ ಸಂಚಾರ

ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್‍ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಮಾತನಾಡಿದ ಅವರು,...

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...

ನ್ಯಾಯಾಲಯದ ಆದೇಶ ಪಾಲನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ತುರ್ತು ಸಚಿವ ಸಂಪುಟ...

ಕಾವೇರಿ ಜಲ ವಿವಾದ: ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕಾವೇರಿ ಜಲ ವಿವಾದದ ಕಗ್ಗಂಟನ್ನು ಬಗೆಹರಿಸಲು ಕಾವೇರಿ ಪಾತ್ರದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಸ್ಥಿತಿಯ ಗಂಭೀರತೆಯ ಹಿನ್ನೆಲೆಯಲ್ಲಿ ಕೆಲವೇ ತಾಸುಗಳ ಸೂಚನೆಯಲ್ಲಿ ಸಭೆಯನ್ನು ಆಯೋಜಿಸಿ, ದೂರವಾಣಿ,...

ಬಂದ್ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಎತ್ತಿನ ಹೊಳೆ ಯೋಜನೆ: ಕಾಮಗಾರಿ ವೇಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಹಾಗೂ ಕೋರಮಂಗಲ-ಚಲ್ಲಘಟ್ಟ ಕಣಿವೆ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ...

ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಸಿಎಂಸಿದ್ದರಾಮಯ್ಯ

ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ. ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...

ಕಾವೇರಿ ಜಲವಿವಾದ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ವಿಧಾನ ಮಂಡಲದ ಸಧನದ ಮುಖಂಡರು, ಸಂಸದರು ಮತ್ತು ಆ ಭಾಗದ ಪ್ರಮುಖರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ...

ಜನವರಿ 7, 8 ಮತ್ತು 9ರಂದು ಬೆಂಗಳೂರಿನಲ್ಲಿ ಪ್ರವಾಸಿ ಭಾರತೀಯ ದಿವಸ್: ಸಿಎಂ ಸಿದ್ದರಾಮಯ್ಯ

ಪ್ರವಾಸಿ ಭಾರತೀಯ ದಿವಸ್ 2017ರ ಪೋರ್ಟಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಅನಾವರಣಗೊಳಿಸಿದರು. ಈ ವೇಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್‌ ಆಚರಣೆಯನ್ನು ಅದ್ದೂರಿಯಾಗಿ...

ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ಗೆ ಸಂಪುಟ ಸಮ್ಮತಿ

ತುಮಕೂರಿನ ವಸಂತ ನರಸಾಪುರದಲ್ಲಿ ಸಮಗ್ರ ಆಧುನಿಕ ಉಪಕರಣಾಗಾರೋದ್ಯಾನ ( ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ) ನಿರ್ಮಾಣಕ್ಕೆ ವಿಶೇಷ ಉದ್ದೇಶ ವಾಹಕ ( ಸ್ಪೆಷಲ್ ಪರ್ಪಸ್ ವೆಹಿಕಲ್ ) ರಚನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಸಧ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...

ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ

ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ...

ಅರವಿಂದ ಜಾದವ್ ವಿರುದ್ಧ ಭೂ ಅಕ್ರಮ ಆರೋಪ: ತನಿಖೆ ನಡೆಸುವಂತೆ ಸಿಎಂ ಸೂಚನೆ

ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...

ನಿಗಮ-ಮಂಡಳಿಗಳಿಗೆ ನೇಮಕಾತಿ ಪಟ್ಟಿ ಅಂತಿಮ: ಸಿಎಂ ದೆಹಲಿಗೆ

ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‌ ಒಪ್ಪಿಗೆ ಪಡೆಯಲು ಆ.22ರಂದು ದೆಹಲಿಗೆ ತೆರಳಲಿದ್ದಾರೆ. ಅಂತಿಮಗೊಂಡಿರುವ ಪಟ್ಟಿಯಲ್ಲಿ 20ರಿಂದ 25 ಶಾಸಕರು ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್‌ ಒಪ್ಪುವುದು ಖಚಿತವಿಲ್ಲದ ಕಾರಣ,...

ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕರ್ನಾಟಕದಲ್ಲಿ ಎಂದಿನಂತೆ ನೈಋತ್ಯ ಮುಂಗಾರು ಇದೆ ಎಂಬ ಸಾಮಾನ್ಯ ಗ್ರಹಿಕೆಯನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಾಸ್ತವ ಚಿತ್ರಣವನ್ನು ಪರಿಚಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಸಾಲಿನ ಜೂನ್ 1 ರಿಂದ ಆಗಸ್ಟ್ 15 ರ ವರೆಗಿನ...

70 ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ

70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ರಾಜಕಾಲುವೆ ಒತ್ತುವರಿ ತೆರವು ವಿಚಾರ: ಪ್ರಭಾವಿಗಳ ಒತ್ತಡಕ್ಕೆ ಮಣಿಯುವುದಿಲ್ಲ-ಸಿಎಂ

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್‍ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...

ಜಿಎಸ್ ಟಿ ಮಸೂದೆ ಯುಪಿಎ ಸರ್ಕಾರದ ಕೂಸು: ಸಿದ್ದರಾಮಯ್ಯ

ರಾಷ್ಟ್ರಾಧ್ಯಂತ ಏಕ ರೂಪದ ತೆರಿಗೆ ವ್ಯವಸ್ಥೆ ಇರಬೇಕೆಂಬ ಸದುದ್ದೇಶ ಹೊಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ವಿಧೇಯಕವು ಯುಪಿಎ ಸರ್ಕಾರದ ಕೂಸು ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ...

ಮೈಸೂರು ದಸರಾಗೆ ಅ.1ರಂದು ಚಾಲನೆ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ಮಸೂರು ದಸರಾ ಮಹೋತ್ಸವಕ್ಕೆ ಈ ವರ್ಷದ ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ದಸರಾ ಸಿದ್ಧತೆ ಕುರಿತು ನಡೆದ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಪ್ರದಾಯಿಕವಾಗಿ ಜನರನ್ನು ಆಕರ್ಷಿಸುವಂತೆ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವಿಧಿವಶ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್​ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...

ಅಂಗನವಾಡಿ ಮಕ್ಕಳಿಗೂ ಕ್ಷೀರ ಭಾಗ್ಯ

ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...

ಸಾರಿಗೆ ಮುಷ್ಕರ: ಎಸ್ಮಾ ಜಾರಿ ಇಲ್ಲ; ವೇತನ ಹೆಚ್ಚಳ ಅಸಾಧ್ಯ - ಸಿಎಂ

ರಾಜ್ಯ ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ಮಾ ಜಾರಿಯೂ ಇಲ್ಲ, ಮುಷ್ಕರ ನಿರತರು ಕೇಳಿದಷ್ಟು ಸಂಬಳ ನೀಡಲು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ. ಗೃಹ ಕಛೇರಿ ಕೃಷ್ಣಾದಲ್ಲಿ ಮಾನತಾಡಿದ ಅವರು, ಕಳೆದ ಬಾರಿಯೂ ಶೇ.10ರಷ್ಟು ಸಂಬಳ ಹೆಚ್ಚಳ ಮಾಡಿದ್ದೇವೆ....

ಮುಷ್ಕರ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಮನವಿ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 25 ರಿಂದ ರಾಜ್ಯಾದ್ಯಂತ ಮುಷ್ಕರ ಹೂಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು, ಸಾರ್ವಜನಿಕ ಹಿತಕ್ಕೆ ಆದ್ಯತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇಡೀ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ...

ವೈಚಾರಿಕ ಹಾಗೂ ಪ್ರಗತಿಪರ ಚಿಂತನೆವುಳ್ಳ ಪತ್ರಕರ್ತರ ಸಂಖ್ಯೆ ಹೆಚ್ಚಬೇಕು: ಸಿಎಂ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ 12 ಸರ್ಕಾರಿ...

ರಂಜಾನ್ ಹಬ್ಬ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಶುಭಾಶಯ

ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ಹಬ್ಬದ ಸುಸಂದರ್ಭದಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಷಯ ಕೋರಿದ್ದಾರೆ. ಪವಿತ್ರ ರಂಜಾನ್ ಮಾಸದ ಗಮನಾರ್ಹ ಆಚರಣೆಗಳಲ್ಲಿ ಉಪವಾಸ ವ್ರತಕ್ಕೆ ಪ್ರಥಮಾಧ್ಯತೆ ಹಾಗೂ ಪರಮಾಧ್ಯತೆ. ಉಪವಾಸ ವ್ರತವು...

2018 ರ ಮಹಾಮಸ್ತಕಾಭಿಷೇಕವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ: ಸಿಎಂ ಸಿದ್ದರಾಮಯ್ಯ

ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ, ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಿಎಂ

ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...

ಶಾಲಾ ಮಕ್ಕಳಿಗೆ ಕಡ್ಡಾಯವಾಗಿ ಯೋಗ ಶಿಕ್ಷಣ ಜಾರಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಶಾಲೆಗಳಿಗೆ ಯೋಗ ಗುರುಗಳನ್ನು ನೇಮಿಸಿ ವೈಜ್ಞಾನಿಕವಾಗಿ ಯೋಗ ಶಿಕ್ಷಣ ನೀಡುವಂತಾಗಬೇಕು. ಅದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನಸಿಕ, ದೈಹಿಕ ಸಮತೋಲನ ಇಟ್ಟುಕೊಳ್ಳಲು...

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಚಾಲನೆ

ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ 2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ...

ಸಿದ್ದರಾಮಯ್ಯ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ರಾಜ್ಯ ಸಚಿವ ಸಂಪುಟ ಪುನಾರಚನೆ ಕಸರತ್ತು ಕೊನೆಗೂ ಮುಗಿದಿದ್ದು, ನಿರೀಕ್ಷೆಯಂತೆ ಹದಿಮೂರು ಸಚಿವರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ರೂಢಬಾಯ್ ವಾಲಾ ಅವರು ನೂತನ ಸಚಿವರಿಗೆ ಅಧಿಕಾರದ ಗೌಪ್ಯತೆ ಹಾಗೂ ಪ್ರಮಾಣ ವಚನ ಭೋಧಿಸಿದರು. ಪ್ರಮಾಣ...

ಸಚಿವ ಸಂಪುಟ ಪುನಾರಚನೆ ಸಮಸ್ಯೆ: ಇಂದು ತೆರೆಬೀಳುವ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ. ಸಚಿವ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಮ್ಮತಿ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ...

2018ರ ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಲಾಗುವುದು: ದಿಗ್ವಿಜಯ್ ಸಿಂಗ್

2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯಸಿಂಗ್‌ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್‌, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ...

ಜುಲೈ 4ರಿಂದ ಜುಲೈ 23ರವರೆಗೆ ಮುಂಗಾರು ಅಧಿವೇಶನ

ಜುಲೈ 4ರಿಂದ ಜುಲೈ 23ರವರೆಗೆ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 4ರಿಂದ ಜುಲೈ...

ಕೃಷಿ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ...

ಪೊಲೀಸ್ ಮುಷ್ಕರದ ಹಿನ್ನಲೆ: ಸಿಬ್ಬಂದಿಗೆ ರಜೆ ಮಂಜೂರು ಮಾಡಬಾರದು- ಸಿಎಂ ನಿರ್ದೇಶನ

ಪೊಲೀಸರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ, ಸಾಮೂಹಿಕ ರಜೆ ಹಾಕುವ ಪೊಲೀಸರ ತಂತ್ರಕ್ಕೆ ಬ್ರೇಕ್‌ ಹಾಕಲು ನಿರ್ಧರಿಸಿದ್ದು, ಯಾವುದೇ ಪೊಲೀಸ್‌ ಸಿಬಂದಿಗೆ ರಜೆ ಮಂಜೂರು ಮಾಡದಂತೆ ರಾಜ್ಯದ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಜೂನ್‌...

ಸಿಎಂ ಸಿದ್ದರಾಮಯ್ಯ ಹಾಗೂ 28 ಸಚಿವರ ವಿರುದ್ಧ ಎಸಿಬಿಗೆ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ...

ತಿಂಗಳಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಇದೇ...

ರಾಜ್ಯದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಬಳಿ ವಿಶೇಷ ನೆರವಿಗೆ ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ 12,272 ಕೋಟಿ ರೂ.ಗಳ ವಿಶೇಷ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಈ ಬೇದಿಕೆ...

ರಾಜ್ಯದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಬಳಿಗೆ ನಿಯೋಗ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ...

ನಮ್ಮ ಮೆಟ್ರೋ: ಪೂರ್ವ-ಪಶ್ಚಿಮ ಕಾರಿಡಾರ್‌ ಸುರಂಗ ಮಾರ್ಗಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್‌ ನ ಮೊದಲ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಮೊದಲ ಮೆಟ್ರೋ ಸುರಂಗ ಮಾರ್ಗವಾಗಿದೆ. ಪೂರ್ವ-ಪಶ್ಚಿಮ ಕಾರಿಡಾರ್ ನ 4.8 ಕಿ.ಮೀ ಉದ್ದದ ಸುರಂಗ ಮಾರ್ಗಕ್ಕೆ ವಿಧಾನಸೌಧದ ಮುಂಭಾಗದಲ್ಲಿರುವ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಬ್ರೇಕ್: ಬರ ಜಿಲ್ಲೆಗಳತ್ತ ಗಮನ ಕೊಡಿ ಎಂದ ದಿಗ್ವಿಜಯ್

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ. ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಕೆ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ...

ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಪ್ರವಾಸ: ಬಿ.ಎಸ್.ವೈಗೆ ಟಾಂಗ್ ನೀಡಲು ತಂತ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ವಿಚಾರ: ವರದಿ ನೀಡುವಂತೆ ಸಿಎಂಗೆ ರಾಜ್ಯಪಾಲರ ಗಡುವು

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ. ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶುಕ್ರವಾರ ಬಜೆಟ್ ಮಂಡನೆ

ಮುಖ್ಯಮಂತ್ರಿಯಾಗಿ ನಾಲ್ಕನೆಯ ಹಾಗೂ ಒಟ್ಟಾರೆ 11ನೇ ಬಾರಿಗೆ ಮುಂಗಡ ಪತ್ರವನ್ನು ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕಳೆದ ನಾಲ್ಕು ಬಾರಿ ಅಹಿಂದ, ಕೃಷಿ, ಗ್ರಾಮೀಣ ಭಾಗಗಳಿಗಿದ್ದ ಆದ್ಯತೆಯನ್ನು ತುಸು ಬದಲಾಯಿಸಿ ಅಭಿವೃದ್ಧಿ ಕಡೆ...

ಕರ್ನಾಟಕ ಬಜೆಟ್ 2016-17: ಬಜೆಟ್ ಗಾತ್ರ 1,63,419 ಕೋಟಿ ರೂ

ಮುಖ್ಯಮಂತ್ರಿಯಾಗಿ ನಾಲ್ಕನೇ ಹಾಗೂ ಹಣಕಾಸು ಸಚಿವರಾಗಿ 11ನೇ ಬಜೆಟ್​ನ ಮಂಡನೆಯನ್ನು ಸಿ ಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕವನವೊಂದನ್ನು ಹೇಳಿ, ಬಜೆಟ್ ಭಾಷಣವನ್ನು ಪ್ರಾರಂಭಿಸಿದರು. ಬಜೆಟ್ ನ ಪ್ರಮುಖಾಂದಗಳು ಃ * 2016-17ನೇ ಸಾಲಿನ ಬಜೆಟ್ ಗಾತ್ರ 1,63,419 ಕೋಟಿ...

ಪ್ರತಿ ಅಧಿವೇಶನದ ಒಂದು ದಿನ ಮಹಿಳೆಯರಿಗಾಗಿ ಮೀಸಲಿಡುವ ಕುರಿತು ಸಮಾಲೋಚನೆ ನಡೆಸುವುದಾಗಿ ಸಿಎಂ ಭರವಸೆ

ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಹಿಳಾ...

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಗೆ ಚಾಲನೆ

ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಸದನದಲ್ಲಿ ವಾಚ್ ಗದ್ದಲ

ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್‌ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...

ದುಬಾರಿ ವಾಚ್ ಈಗ ಸರ್ಕಾರದ ಸ್ವತ್ತು

ತೀವ್ರ ವಿವಾದಕ್ಕೀಡಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ಅಂತ್ಯದತ್ತ ಸಾಗಿದೆ. ಹಲವಾರು ದಿನಗಳಿಂದ ಬಾರೀ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ಒಪ್ಪಿಸುವ ಮೂಲಕ ಹಲವಾರು ದಿನಗಳಿಂದ ನಡೆದಿದ ವಾಗ್ವಾದಕ್ಕೆ ಅಂತ್ಯ...

ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣಾ ಮತ ಎಣಿಕೆಃ ಕಾಂಗ್ರೆಸ್ ಮುನ್ನಡೆ

ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಯ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ. 30 ಜಿಲ್ಲಾ ಪಂಚಾಯತಿಗಳ ಪೈಕಿ ಕಾಂಗ್ರೆಸ್ 11ರಲ್ಲಿ ಜಯದ ಹಾದಿಯಲ್ಲಿದ್ದರೆ,...

ರಾಜಭವನದ ಅಂಗಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಚ್ ವಿವಾದ

ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ...

ಪಠಾನ್ ಕೋಟ್ ಉಗ್ರರ ದಾಳಿಃ ಮೂರನೇ ದಿನಕ್ಕೆ ಮುಂದುವರಿದ ಗುಂಡಿನ ಚಕಮಕಿ

ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ 5 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಎನ್‌ಎಸ್‌ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್‌ ಸೇರಿದಂತೆ 7 ಯೋಧರು ವೀರಮರಣವನ್ನಪ್ಪಿದ್ದಾರೆ. ಹಗಲು ರಾತಿ...

ವೈಜ್ಞಾನಿಕ ಸಂಶೋಧನೆ ಮಾಡುವುದನ್ನು ಸುಲಭಗೊಳಿಸಲಾಗುವುದುಃ ಪ್ರಧಾನಿ ನರೇಂದ್ರ ಮೋದಿ

ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...

ನಂದಿನಿ ಹಾಲಿನ ದರ ಹೆಚ್ಚಳ, ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ !

ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...

ವಿಧಾನ ಪರಿಷತ್‌ ಚುನಾವಣೆಃ ಕಾಂಗ್ರೆಸ್ ಜಯಭೇರಿ, ರಾಜ್ಯದ ಮತದಾರರಿಗೆ ಮುಖ್ಯಮಂತ್ರಿ ಅಭಿನಂದನೆ

ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮರುಳಾಗಿಲ್ಲ ಎಂದರು....

ಐದನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಶುಕ್ರವಾರ 2 ಗಂಟೆಗೆ ನಿತೀಶ್ ಕುಮಾರ್ 5ನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ತೇಜಸ್ವಿ ಯಾದವ್ ಅವರನ್ನು ಉಪಮುಖ್ಯಮಂತ್ರಿ ಮಾಡುವ...

ಸೋಮವಾರ ಮೆಟ್ರೋ ರೀಚ್‌-2 ಉದ್ಘಾಟನೆ

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್‌-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ. 6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...

ಮೆಟ್ರೋ ರೀಚ್‌-2 ಗೆ ಚಾಲನೆ

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್ 2 ನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸುಮಾರು ಎರಡೂವರೆ ವರ್ಷಗಳಿಂದ ಈ ಮಾರ್ಗದ ಮೆಟ್ರೋ...

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...

ಹಾವೇರಿಗೆ ರಾಹುಲ್ ಭೇಟಿ: ರೈತ ಕುಟುಂಬಕ್ಕೆ ಸಾಂತ್ವನ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೈದೂರಿನ ಮೃತ ರೈತ ಅಶೋಕ್ ಮಡಿವಾಳ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಕೆಪಿಸಿಸಿ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ರಾಹುಲ್ ಗಾಂಧಿ...

ರೈತರಿಗೆ ಭಾರೀ ಕೊಡುಗೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿಯ ಗುಡಗೂರಿನಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಭಾರೀ ಕೊಡುಗೆಗಳನ್ನು ನೀಡಿದ್ದಾರೆ. ಬರಗಾಲ ಮತ್ತು ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ದೊಡ್ಡ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತ ರೈತರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 2 ಲಕ್ಷದಿಂದ 5...

ಕರ್ನಾಟಕ ಬಂದ್ಃ ರಾಜ್ಯಾದ್ಯಂತ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಶನಿವಾರದ ಕರ್ನಾಟಕ ಬಂದ್ ಗೆ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ಮಂಗಳೂರು, ಉಡುಪಿ, ಭಟ್ಕಳ,...

ಐಐಟಿ ಸ್ಥಳಾಂತರ ವಿರೋಧಿಸಿ ಹುಬ್ಬಳ್ಳಿ-ಧಾರವಾಡ ಬಂದ್

ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ನಡೆಸಲಾಗಿದೆ. ಬಿಜೆಪಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳಿಂದ ಬಂದ್​ಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್...

ತಮಿಳುನಾಡಿಗೆ ನೀರು ಬಿಟ್ಟಿರುವುದು ನಿಜ, ಸಂಕಷ್ಟ ಸೂತ್ರದಂತೆ ನೀರು ಹಂಚಿಕೆ: ಸಿದ್ದರಾಮಯ್ಯ

ಸರ್ಕಾರ ಮಂಗಳವಾರವೂ ಕೂಡಾ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಸರ್ಕಾರದ ಈ ಕ್ರಮಕ್ಕೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತ ಸಂಘಟನೆ ಮತ್ತು ಕನ್ನಡಪರ ಸಂಘಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ...

ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಮುಂದುವರಿಸುತ್ತೇವೆಃ ಸಿಎಂ ಸಿದ್ದರಾಮಯ್ಯ

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಮಂಜುನಾಥ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮೇಯರ್ ಆಗಿ ಆಯ್ಕೆ ಆದ ಬಿ ಎನ್ ಮಂಜುನಾಥ ರೆಡ್ಡಿ...

ಕಾವೇರಿ ನೀರು ಬಿಡಿಸಿ ಎಂದು ಪ್ರಧಾನಿ ಮೋದಿಗೆ ಜಯಲಲಿತಾ ಪತ್ರ

ತೀವ್ರ ಮಳೆ ಕೊರತೆಯಿಂದಾಗಿ ಮುಕ್ಕಾಲು ಭಾಗ ಕರ್ನಾಟಕ ಬರಗಾಲ ಎದುರಿಸುತ್ತಿರುವಾಗಲೇ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಾವೇರಿ ನೀರಿನ ವಿಷಯವಾಗಿ ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿಗೆ ಸಿಗಬೇಕಿರುವ ನೀರನ್ನು ಕರ್ನಾಟಕ ಸರ್ಕಾರ ಬೇಕಂತಲೇ ಹರಿಸುತ್ತಿಲ್ಲ. ಆದ್ದರಿಂದ, ಕಾವೇರಿ ನ್ಯಾಯಾಧಿಕರಣದ ಅಂತಿಮ ಐತೀರ್ಪನ್ನು...

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...

ತೀವ್ರಗೊಂಡ ಮಹದಾಯಿ ಹೋರಾಟ, ಹುಬ್ಬಳ್ಳಿ -ಧಾರವಾಡ ಬಂದ್

ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಹುಬ್ಬಳ್ಳಿ, ಧಾರವಾಡ ಮತ್ತು ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಕರೆಕೊಟ್ಟ ಬಂದ್ ಗೆ ಹುಬ್ಬಳ್ಳಿ-ಧಾರವಾಡ, ಅವಳಿ...

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಗೆ ಮುಖಭಂಗ, ಬಿಜೆಪಿ ಗೆಲುವಿನತ್ತ

ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ. ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...

ಬಿಬಿಎಂಪಿ ಚುನಾವಣೆಃ ಮತ್ತೆ ಅರಳಿದ ಕಮಲ, 'ಕೈ' ಸುಟ್ಟುಕೊಂಡ ಕಾಂಗ್ರೆಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ...

ಬಿಬಿಎಂಪಿ ಚುನಾವಣೆ ಫಲಿತಾಂಶ ಸರ್ಕಾರಕ್ಕೆ ಸಿಕ್ಕ ಜನಾಭಿಪ್ರಾಯವಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಬಿಎಂಪಿ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಫಲಿತಾಂಶ ಬಂದಿಲ್ಲ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೆಂಗಳೂರು ನಗರದ ಜನರ ಮನ ಗೆಲ್ಲಲು ನಮಗೆ ಆಗಲಿಲ್ಲ. ಹಾಗಾಗಿ ಈ ಸೋಲಿನ ಹೊಣೆಯನ್ನು ನಾನು ಹೊರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ, ಬಿಬಿಎಂಪಿ ಚುನಾವಣಾ ಫಲಿತಾಂಶ...

ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...

ದೇವರಾಜ ಅರಸು ಜನ್ಮ ಶತಮಾನೋತ್ಸವ ಅದ್ಧೂರಿ ಆಚರಣೆಗೆ ಸರ್ಕಾರ ನಿರ್ಧಾರ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವವನ್ನು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ, ಆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಅರಸು ಶತಮಾನೋತ್ಸವ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನ್ಮ ಶತಮಾನೋತ್ಸವದ ಆಚರಣೆ...

ಖಾತೆ ಬದಲಾವಣೆ : ಆರ್ ವಿ ದೇಶಪಾಂಡೆ ಅವರಿಗೆ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಆರ್‌.ವಿ. ದೇಶಪಾಂಡೆ ಅವರ ಉನ್ನತ ಶಿಕ್ಷಣ ಖಾತೆಯನ್ನು ಹಿಂಪಡೆದು ಆರ್‌.ವಿ.ದೇಶಪಾಂಡೆ ಅವರ ನೆಚ್ಚಿನ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಖಾತೆಯನ್ನು ವಹಿಸಿಕೊಟ್ಟಿದ್ದಾರೆ. ಶನಿವಾರ ಸಂಜೆ ಈ ನಿರ್ಧಾರ ಮಾಡಿದ್ದು, ಖಾತೆ ಬದಲಾವಣೆ ಕುರಿತು ರಾಜಭವನದಿಂದ...

ಬಿಜೆಪಿಯವರು ಸುಳ್ಳಿನ ಸರದಾರರುಃ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ನ ಅಂಕಿ ಅಂಶದ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿರುವ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ರೊಚ್ಚಿಗೆದ್ದ ಘಟನೆ ನಡೆಯಿತು. ಕೇಂದ್ರದಿಂದ 4,690 ಕೋಟಿ ರೂಪಾಯಿ ಕೊರತೆಯಾಗಿದೆ ಎಂದು ಸಿದ್ದರಾಮಯ್ಯ...

ರೈತರ ಆತ್ಮಹತ್ಯೆ : ಹಾವೇರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ

ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಉಸ್ತುವಾರಿ ಚೆಲ್ಲಕುಮಾರ್‌ ಅವರು ಇತರ ರಾಜ್ಯಗಳಂತೆ...

ರೈತರೇ ಆತ್ಮಹತ್ಯೆಗೆ ಶರಣಾಗಬೇಡಿಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ ಕಿ ಬಾತ್

ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ರೇಡಿಯೋ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದರು. ಆಕಾಶವಾಣಿ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತನ ಸಾವು ನನಗೆ ತೀವ್ರ ನೋವು ತಂದಿದೆ,...

ರೈತರ ಆತ್ಮಹತ್ಯೆ : ಸರ್ಕಾರದ ವರದಿ ಕೇಳಿದ ರಾಜ್ಯಪಾಲ ವಜುಭಾಯಿ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ. ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು...

ಐದು ಭಾಗಗಳಾಗಿ ಬಿಬಿಎಂಪಿ ವಿಭಜನೆಗೆ ಸಮಿತಿ ಶಿಫಾರಸು

ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸೋಮವಾರ ಸಲ್ಲಿಸಿದ ವರದಿಯಲ್ಲಿ ಬಿಬಿಎಂಪಿಯನ್ನು ಐದು...

ಬೆಳಗಾವಿ ಅಧಿವೇಶನ ತೃಪ್ತಿ ತಂದಿದೆ : ಸಿಎಂ ಸಿದ್ದರಾಮಯ್ಯ

ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು. ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ,...

ಅಂಬರೀಶ್ ರಾಜೀನಾಮೆ ನಿರ್ಧಾರ: ಮುಖ್ಯಮಂತ್ರಿ, ಸಚಿವರಿಂದ ಮನವೊಲಿಕೆ ಯತ್ನ

ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಈ ಕುರಿತು...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಮಾತಿಲ್ಲ : ಸಿದ್ದರಾಮಯ್ಯ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ...

ರೈತರ ಬಾಕಿ ಹಣ ಪಾವತಿ: ಖಜಾನೆಯೇನೂ ಅಕ್ಷಯ ಪಾತ್ರೆಯಲ್ಲ- ಸಿಎಂ

ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ಸರ್ಕಾರಕ್ಕಿಲ್ಲ-ಸಿಎಂ

ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು ಪತ್ರ ಬರೆದ ಬೆನ್ನಲ್ಲೇ, ಲೋಕಾಯುಕ್ತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ...

ವಿಧಾನಮಂಡಲ ಅಧಿವೇಶನ: ರೈತರ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿ

ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಮನವಿ

ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...

ರೈತನ ಆತ್ಮಹತ್ಯೆ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ. ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...

ಸಿದ್ದರಾಮಯ್ಯ ಬಿಎಸ್ ವೈಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ?: ಹೆಚ್.ಡಿ.ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...

ಶಾಲಾ ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಧರ್ಮ ಹಾಗೂ ಜಾತಿ ರಹಿತವಾದ ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆ ಸಾಧ್ಯವಿದೆ. ಯೋಗ ಶಿಕ್ಷಣವನ್ನು ಶಾಲಾ ಪಠ್ಯಕ್ರಮದಲ್ಲಿ ಐಚ್ಛಿಕ ವಿಷಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಧಾನಸೌಧದ...

ಬಿಬಿಎಂಪಿ ಚುನಾವಣೆ ನೆಪ: ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ. ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ...

ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ: ಸಿಎಂ, ಪರಮೇಶ್ವರ್ ದೆಹಲಿಗೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಹಾಗೂ ನಿಗಮ ಮಂಡಳಿಗಳಿಗೆ ಬಾಕಿ ಉಳಿದ ಬೆರಳೆಣಿಕೆಯಷ್ಟುಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ. ಮೂಲಗಳ...

ಬಿ.ಎಸ್.ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ...

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಯಲ್ಲಿ ಕಾಂಗ್ರೆಸ್‌ ಗೆ ಜಯ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ...

ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬ

ಗ್ರಾಮಪಂಚಾಯ್ತಿ ಚುನಾವಣೆ ನಂತರವಾದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುತ್ತದೆ ಎಂದು ಕಾಯುತ್ತಿದ್ದ ಕಾಂಗ್ರೆಸ್‌ ನ ಹಿರಿಯ ಶಾಸಕರಿಗೆ ಮತ್ತೂಮ್ಮೆ ಹಿನ್ನಡೆಯಾಗಿದೆ. ಹೈಕಮಾಂಡ್‌ ತಾಕೀತು ಮಾಡದಿದ್ದರೆ ಈ ಬಾರಿಯೂ ಸಂಪುಟ ವಿಸ್ತರಣೆ/ಪುನಾರಚನೆ ಮುಂದಕ್ಕೆ ಹೋಗಲಿದೆ. ಬಿಬಿಎಂಪಿ ಚುನಾವಣೆ ನೆಪದಲ್ಲಿ ಈ...

ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...

ಗ್ರಾಮ ಪಂಚಾಯಿತಿ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದೆ. 15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾನ ಸಂಜೆ 5ಗೆ ಮುಕ್ತಾಯವಾಗಲಿದೆ. ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 48621 ಅಭ್ಯರ್ಥಿಗಳಿದ್ದು,...

ಒಂದಂಕಿ ಲಾಟರಿ ಹಗರಣ: ಸಿಬಿಐಗೆ ನೀಡಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ ನಡೆದಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಕೊನೆಗೂ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಒಂದಂಕಿ ಲಾಟರಿ ಹಗರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬಿಜೆಪಿ, ಜೆಡಿಎಸ್ ಆಗ್ರಹಿಸಿತ್ತು. ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ...

ಸಿದ್ದರಾಮಯ್ಯ ಕುಮಾರಸ್ವಾಮಿಯಲ್ಲ: ಸಿಎಂ

ರಾಜ್ಯದಲ್ಲಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ರಕ್ಷಿಸಲು ಸರ್ಕಾರ ಹೊರಟಿಲ್ಲ. ಜಾತಿ ಹೆಸರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಸಿದ್ದರಾಮಯ್ಯನೇ, ಕುಮಾರಸ್ವಾಮಿಯಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ...

ಸಿಎಂ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತಾರೆ: ಯಡಿಯೂರಪ್ಪ

ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ...

ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ: ಮೇಲ್ಮನವಿ ಬಗ್ಗೆ ನಿರ್ಧರಿಸಿಲ್ಲ-ಸಿಎಂ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ...

ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ಬಿಜೆಪಿ ಪಣ: ಜಗದೀಶ್ ಶೆಟ್ಟರ್

ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...

ಬಿಜೆಪಿ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಕಾಂಗ್ರೆಸ್ ಮುಕ್ತ ಕರ್ನಾಟಕದ ಕನಸು ಕಾಣುತ್ತಿದೆ. ಆದರೆ ಅದು ಎಂದಿಗೂ ಈಡೇರುವುದಿಲ್ಲ. 2018ರ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಪಣ ತೊಟ್ಟು ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪದಿಸಿದ್ದಾರೆ. ದಾವಣಗೆರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ಸವಾಲು

ಸ್ವಚ್ಛ, ಪಾರದರ್ಶಕ, ಹಗರಣ ಮುಕ್ತ ಸರ್ಕಾರ ನೀಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಒಂದಂಕಿ ಲಾಟರಿ ಹಾಗೂ ಮಟ್ಕಾ ದಂಧೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಬೆಂಗಳೂರು...

ಸರ್ಕಾರದ ಎರಡು ವರ್ಷಗಳ ಸಾಧನೆ ತೃಪ್ತಿ ತಂದಿದೆ: ಸಿಎಂ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

ಬಿಬಿಎಂಪಿ ಚುನಾವಣೆ : ತೀರ್ಪಿನ ಪ್ರತಿ ಸಿಕ್ಕ ನಂತರ ನಿರ್ಧಾರ-ಸಿಎಂ

ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ತೀರ್ಪಿನ ಪ್ರತಿ ಕೈಗೆ ಸಿಕ್ಕ ನಂತರ ಕಾನೂನು ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಗ್ರಾಮ ಪಂಚಾಯತ್ ಚುನಾವಣೆ: ಸಿಎಂ ವಿದೇಶ ಪ್ರವಾಸ ರದ್ದು

ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ನಿಗದಿಯಾಗಿದ್ದ ಫ್ರಾನ್ಸ್, ಸ್ವೀಡನ್, ಜರ್ಮನ್ ಪ್ರವಾಸಕ್ಕೆ ತೆರಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ, ಇತರೆ ಕಾರ್ಯಕ್ರಮಗಳ ಒತ್ತಡದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸಕ್ಕೆ ತೆರಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಸಲುವಾಗಿ...

ಗ್ರಾಮ ಪಂಚಾಯತ್ ಚುನಾವಣೆ: ಪುರುಷರು, ಮಹಿಳೆಯರಿಗೆ ಸಮಾನ ಅವಕಾಶ- ಸಿಎಂ

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...

ಮೇಕೆದಾಟು ಯೋಜನೆ: ಸರ್ವಪಕ್ಷ ನಿಯೋಗದಿಂದ ಪ್ರಧಾನಿ ಭೇಟಿ

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ವ ಪಕ್ಷ ನಿಯೋಗ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದೆ. ಮಧ್ಯಾಹ್ನ ಸಂಸತ್‌ ಭವನದಲ್ಲಿ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ನಿಯೋಗ...

ಕನ್ನಡಿಗರ ರಕ್ಷಣೆಗೆ ನೇಪಾಳಕ್ಕೆ ತೆರಳಿದ ಇಬ್ಬರು ಅಧಿಕಾರಿಗಳು

ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ. ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...

ವಿಪಕ್ಷಗಳ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಯತ್ನ ವಿಫಲ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ. ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...

ಸೌರಶಕ್ತಿ ಹಾಗೂ ನವೀಕೃತ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮಾದರಿ: ಸಿ.ಎಂ

'ಸೌರಶಕ್ತಿ' ಹಾಗೂ ನವೀಕೃತ ಇಂಧನ ಉತ್ಪಾದನೆಗೆ ಆದ್ಯತೆ ನೀಡುವುದರಲ್ಲಿ ರಾಜ್ಯ ಸರ್ಕಾರ ದೇಶಕ್ಕೇ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಏ.23ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಶೃಂಗಸಭೆ-2015 ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆದಾರರಿಗೆ...

ಭೂಸ್ವಾಧೀನ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಕಿಸಾನ್ ರ್ಯಾಲಿ

ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್‌ ಕಿಸಾನ್‌ ರ್ಯಾಲಿ ಆಯೋಜಿಸಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...

ಜಾತಿ ಗಣತಿ ಜಾತಿಗಳನ್ನು ಒಗ್ಗೂಡಿಸುವ ಸಾಮಾಜಿಕ ನ್ಯಾಯದ ಕೆಲಸ: ಸಿಎಂ

ಜಾತಿ ಜನಗಣತಿ ವಿರೋಧಿಸುವವರು ಕೊಳಕು ಮನಸ್ಸಿನ ಜಾತಿವಾದಿಗಳು. ವಾಸ್ತವವಾಗಿ ಜಾತಿ ಗಣತಿ ಎಂಬುದು ಜಾತಿಗಳನ್ನು ಒಟ್ಟುಗೂಡಿಸುವ ಸಾಮಾಜಿಕ ನ್ಯಾಯದ ಕೆಲಸವೇ ಹೊರತು ಜಾತಿ ಒಡೆಯುವ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಾತಿ...

ದೇಶದಲ್ಲೇ ಮೊದಲಬಾರಿಗೆ ಬೈಕ್ ಆಂಬುಲೆನ್ಸ್ ಗೆ ಚಾಲನೆ

ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್‌ ಆಂಬುಲೆನ್ಸ್‌' ಗೆ ಚಾಲನೆ ದೊರೆತಿದೆ. ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ಈ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು...

ಏ.20ಕ್ಕೆ ವಿಧಾನಮಂಡಲ ವಿಶೇಷ ಅಧಿವೇಶನ

ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ. ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ,...

ಪರಮೇಶ್ವರ್ ಡಿಸಿಎಂ ಆಗದಿದ್ದರೆ ರಾಷ್ಟ್ರದ ಭವಿಷ್ಯ ಮಂಕಾಗುತ್ತದೆ: ರಾಜಶೇಖರನ್

'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ. ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...

ಬಿಬಿಎಂಪಿ ವಿಭಜನೆಯೋ ಅಥವಾ ಚುನಾವಣೆಯೋ ಇಂದು ನಿರ್ಧಾರ

ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ. ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...

ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ. ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...

ಇಂದಿನಿಂದ ಜಾತಿ ಜನಗಣತಿ ಆರಂಭ: ಏ.30ರವರೆಗೆ ಗಣತಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ' ಶನಿವಾರದಿಂದ ಪ್ರಾರಂಭವಾಗಲಿದೆ. ಜಾತಿವಾರು ಜನಗಣತಿ ಎಂದೇ ಬಿಂಬಿತವಾಗಿರುವ ಈ ಸಮೀಕ್ಷೆ ಏಪ್ರಿಲ್‌ 30 ರವರೆಗೆ ನಡೆಯಲಿದ್ದು, ರಾಜ್ಯದಲ್ಲಿರುವ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ, ಔದ್ಯೋಗಿಕ-ಆರ್ಥಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಅಂಶಗಳ...

ಸಿಎಂ ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ: ಹೆಚ್.ಡಿ.ಕೆ

ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದೇ ತಿರುಗುಬಾಣ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ...

ಗೋ ಮಾಂಸ ಸೇವನೆ ಅವರವರ ವಿವೇಚನೆಗೆ ಬಿಟ್ಟದ್ದು: ಸಿದ್ದರಾಮಯ್ಯ

ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...

ದಕ್ಷಿಣ ಭಾರತದ ಮೊದಲ ಕಾಲುವೆ ಸೌರಫ‌ಲಕ ಇಂದು ಲೋಕಾರ್ಪಣೆ

ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ. ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್‌ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಸಿ.ಎಂ ಸಿದ್ದರಾಮಯ್ಯ

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ...

ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ಯಡಿಯೂರಪ್ಪ ಫೋಟೋ ಹಾಕಿಕೊಳ್ಳಲಿ: ಈಶ್ವರಪ್ಪ

'ಬಿಜೆಪಿ' ಮಾಡಿದ ತಪ್ಪಿನಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ, ಹಾಗಾಗಿ ಸಿದ್ದರಾಮಯ್ಯ ಅವರು ಮಾಜಿ ಸಿ.ಎಂ ಯಡಿಯೂರಪ್ಪ ಅವರ ಫೋಟೊವನ್ನು ಮನೆಯಲ್ಲಿ ಹಾಕಿಕೊಳ್ಳಬೇಕೆಂದು ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ. ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರ ಫೋಟೊವನ್ನು ಸಿದ್ದರಾಮಯ್ಯ ಮನೆಯಲ್ಲಿ ಹಾಕಬೇಕು. ಆದರೆ...

ಸಂಪುಟ ವಿಸ್ತರಣೆಗೆ ಇನ್ನಷ್ಟು ಕಾಲಾವಕಾಶ: ಹೈಕಮಾಂಡ್ ಜತೆ ಸಿಎಂ ಚರ್ಚೆ

ಗ್ರಾಮ ಪಂಚಾಯತ್‌ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಮಾಡುವುದು ಬೇಡ ಎಂಬ ಅಭಿಪ್ರಾಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‌ ಗೂ ಈ ವಿಚಾರ ಮನವರಿಕೆ ಮಾಡಿಕೊಟ್ಟು ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವೊಲಿಸುವ...

ಸೋನಿಯಾ ಗಾಂಧಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಜೊತೆಗೆ ಚರ್ಚಿಸಿದ ವಿಷಯ ಬಹಿರಂಗಪಡಿಸಲ್ಲ. ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ...

ಏ.18ರಂದು ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ

'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...

ಡಿ.ಕೆ ರವಿ ಪ್ರಕರಣ: ಸರ್ಕಾರದ ಕಾಲಮಿತಿಯನ್ನು ತಿರಸ್ಕರಿಸಿದ ಸಿಬಿಐ

'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಬೇಕೆಂಬ ಸರ್ಕಾರದ ಷರತ್ತಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಸಿಬಿಐ ವಾಪಸ್ ಕಳಿಸಿದೆ. ರಾಜ್ಯಾದ್ಯಂತ ನಡೆದ ಪ್ರತಿಭಟನೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ...

ಬಿಬಿಎಂಪಿ 3 ಭಾಗಗಳಾಗಿ ವಿಭಜನೆ: ಸಂಪುಟ ಸಭೆಯಲ್ಲಿ ನಿರ್ಧಾರ

ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಬಗ್ಗೆ ಸುಗ್ರೀವಾಜ್ನೆ ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ, ಬಿಬಿಎಂಪಿಯಲ್ಲಿ ನಡೆದಿರುವ ಕಾಮಗಾರಿಗಳ ತನಿಖೆಯನ್ನು ಸಿಐಡಿಗೆ ವಹಿಸಲೂ ತೀರ್ಮಾನಿಸಲಾಗಿದೆ. ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಬೇಕಾದ ಪರಿಸ್ಥಿತಿ ಒದಗಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ...

ಸಂಪುಟ ವಿಸ್ತರಣೆ ವಿಚಾರ: ಏ.5ಕ್ಕೆ ಸಿಎಂ ದೆಹಲಿಗೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯನ್ನು ಏಪ್ರಿಲ್‌ ನಲ್ಲಿ ನಡೆಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್‌ ಪ್ರಾಥಮಿಕ ಹಂತದ ಚರ್ಚೆ ನಡೆಸಲು ಏ.5ರಂದು ದೆಹಲಿಗೆ ತೆರಳಲಿದ್ದಾರೆ. ಕೇಂದ್ರ ಸರ್ಕಾರವು ಏ.5ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ...

ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ: ಸಿದ್ದರಾಮಯ್ಯ

ಅದಿರು ಲೂಟಿಯಾಗಿದ್ದು ನಮ್ಮ ಅವಧಿಯಲ್ಲಿ ಅಲ್ಲ, ಬಿಜೆಪಿ ಅವಧಿಯಲ್ಲಿ ಗಣಿ ಸಂಪತ್ತು ಲೂಟಿಯಾಗಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನ ಕೊನೆಯ ದಿನದ ಕಲಾಪದಲ್ಲಿ ಮಾತನಾಡಿದ ಅವರು, ಅಕ್ರಮ ಗಣಿ ವಿಷಯದಲ್ಲಿ ರಾಜ್ಯ ಮರ್ಯಾದೆ...

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ: ಪ್ರಕಾಶ್ ಜಾವ್ಡೇಕರ್

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...

ಬೂಸಾ ಬಜೆಟ್ ಪದ ಹೆಚ್.ಡಿ.ಕೆ ವಾಪಸ್ ಪಡೆಯಲಿ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...

ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರ: ಸಿಎಂ,ಸಚಿವರು,ಶಾಸಕರ ವೇತನ ಹೆಚ್ಚಳ

ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ. ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...

ಜಾಹೀರಾತು ಮಾಫಿಯಾಗೆ ಕಡಿವಾಣ ಹಾಕಲು ಹೊಸ ನೀತಿ: ಸಿದ್ದರಾಮಯ್ಯ

ಬೆಂಗಳೂರನ್ನು ಕಾಡುತ್ತಿರುವ ಜಾಹೀರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾ.26ರ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಜಾಹೀರಾತು ಮಾಹಿಫಾ ಬಗ್ಗೆ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರಿನಲ್ಲಿ ದೊಡ್ಡ ಜಾಹೀರಾತು...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಪ್ರಸಕ್ತ ರಜಕೀಯ ಬೆಳವಣಿಗೆ ಕುರಿತು ಚರ್ಚೆ

ಐಎ ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ವಿನಾ ಕಾರಣ ತಮ್ಮನ್ನು ಹಾಗೂ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ...

ಸಾರಾಯಿ ಭಾಗ್ಯ ಜಾರಿಗೆ ತನ್ನಿ, ತೆರಿಗೆ ಸಂಗ್ರಹವಾಗುತ್ತೆ: ಹೆಚ್ ಡಿಕೆ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದೀರಾ. ಅದೇ ರೀತಿ ಮದ್ಯಭಾಗ್ಯ ಜಾರಿ ಮಾಡುವುದರಿಂದ ತೆರಿಗೆ ಸಂಗ್ರಹವಾಗುತ್ತದೆ ಎಂದು ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ವ್ಯಂಗ್ಯವಾಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಕುಮಾರಸ್ವಾಮಿ, ಈ...

ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಅವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಪೊಲೀಸರು

'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ. ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ​ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...

ಮಹಿಳಾ ಅಧಿಕಾರಿಗೆ ಡಿ.ಕೆ ರವಿ ಕರೆ ಮಾಡಿದ್ದು 44 ಬಾರಿ ಅಲ್ಲ ಕೇವಲ 4 ಬಾರಿ!

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ. ರವಿ ಸಾವಿನ ಪ್ರಕರಣಕ್ಕೆ...

ದೇಶದ ರಾಜಕಾರಣ ವಿಷಮತೆಗೆ ಜಾರುತ್ತಿದೆ: ಮಾಜಿ ಸಂಸದ ವಿಶ್ವನಾಥ್

'ಡಿ.ಕೆ ರವಿ' ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಲು ಪಟ್ಟು ಹಿಡಿದಿದ್ದ ವಿರೋಧಪಕ್ಷಗಳ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಾ.24ರಂದು ಬೀದರ್ ನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ ರವಿ ಪ್ರಕರಣಕ್ಕೆ ವಿರೋಧಪಕ್ಷಗಳು ಜಾತಿಲೇಪನ ನೀಡಿವೆ. ದೇಶದ ರಾಜಕಾರಣ...

ರಾಜ್ಯದ ಜನತೆಗೆ ಸಿಎಂ ಸಾಲದ ಭಾಗ್ಯ ಕರುಣಿಸಿದ್ದಾರೆ: ಜಗದೀಶ್ ಶೆಟ್ಟರ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು...

ಧನ ವಿನಿಯೋಗ ವಿಧೇಯಕ ಅಂಗೀಕಾರ

ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು. ಇದಕ್ಕೂ ಮುನ್ನ...

44 ಕಾಲ್ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ: ಸಿಎಂಗೆ ಎಚ್ ಡಿಕೆ ಸವಾಲು

ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ವಿರುದ್ಧವೆ ವಿಪಕ್ಷಗಳು ಮುಗಿಬಿದ್ದಿವೆ. ವಿಧಾನಸಭೆಯ ಕಲಾಪದಲ್ಲಿ ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸುವ...

ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಕೊನೆಗೂ ಸಿಬಿಐ ತನಿಖೆಗೆ ಒಪ್ಪಿಸಿದ ಸರ್ಕಾರ

ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಜನತೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ನಿರೀಕ್ಷೆಯಂತೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಸೋಮವಾರ ವಿಧಾನಮಂಡಲದ ಕಲಾಪ ಆರಂಭವಾಗುತ್ತಿದ್ದಂತೆಯೇ ರವಿ ಸಾವಿನ ಪ್ರಕರಣದ...

ಯುಗಾದಿ ಹಬ್ಬ: ರಾಜ್ಯದ ಜನತೆಗೆ ರಾಜ್ಯಪಾಲರು, ಮುಖ್ಯಮಂತ್ರಿಗಳ ಶುಭ ಹಾರೈಕೆ

ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ. ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...

ಡಿ.ಕೆ.ರವಿ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಬಗ್ಗೆ ಸೋಮವಾರ ಪ್ರಕಟ: ಸಿಎಂ

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ. ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...

ರವಿ ಸಾವಿನ ತನಿಖೆ ಸಿಬಿಐಗೆ ನೀಡುವುದು ಸೂಕ್ತ: ಸಿ.ಎಂ ಗೆ ರಾಜ್ಯಪಾಲರ ಸಲಹೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದು ಸೂಕ್ತ ಎಂದು ರಾಜ್ಯಪಾಲ ವಜುಭಾಯ್ ವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ರವಿ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರವಿ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ: ಸಾಹಿತಿ ದೇವನೂರು ಮಹಾದೇವ ಒತ್ತಾಯ

'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ...

ಸಿ.ಎಂ ಗೆ ಹೈಕಮಾಂಡ್ ತರಾಟೆ: ರವಿ ಸಾವು ಪ್ರಕರಣದ ಬಗ್ಗೆ ಸಿಬಿಐ ತನಿಖೆ ಸಾಧ್ಯತೆ

ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...

ರವಿ ಸಾವಿನ ಪ್ರಕರಣ: ಸಚಿವ ಸಂಪುಟದ ಒತ್ತಾಯಕ್ಕೂ ಮಣಿಯದ ಸಿದ್ದು ಸರ್ಕಾರ

ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಂಪುಟ ಸಚಿವರ ಒತ್ತಾಯದ ಹೊರತಾಗಿಯೂ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ...

ರವಿ ಸಾವು ಪ್ರಕರಣ: ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಂದಲೇ ಸಿಬಿಐ ತನಿಖೆಗೆ ಒತ್ತಾಯ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸ್ವತಃ ಸಿದ್ದರಾಮಯ್ಯ ಸಂಪುಟ ಸಚಿವರೇ ಒತ್ತಾಯಿಸುತ್ತಿದ್ದಾರೆ. ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಧಿವೇಶನ ನಡೆಯುವುದಕ್ಕೂ...

ರವಿ ಸಾವಿನ ಬಗ್ಗೆ ಸಿಬಿಐ ತನಿಖೆ: ಸಿ.ಎಂ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯಪಾಲರ ಭರವಸೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...

ಸಿದ್ದರಾಮಯ್ಯ ಡಿ.ಕೆ ರವಿ ಅವರ ಪೋಸ್ಟ್‌ ಮಾರ್ಟಂ ವರದಿ ತಿರುಚಲು ಯತ್ನಿಸಿದ್ದಾರೆ: ಹೆಚ್.ಡಿ.ಕೆ

ನಿಗೂಢವಾಗಿ ಸಾವನ್ನಪ್ಪಿದ್ದ ಡಿ.ಕೆ ರವಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಯುವ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿ.ಎಂ ಸಿದ್ದರಾಮಯ್ಯ ಮರಣೋತ್ತರ ಪರೀಕ್ಷಾ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಗಂಭೀರ...

ರವಿ ಪೋಷಕರು ಕೈ ಮುಗಿದು ಬೇಡಿದರೂ ಸಿಬಿಐ ತನಿಖೆಗೆ ಒಪ್ಪದ ಸಿ.ಎಂ

'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...

ಡಿ.ಕೆ ರವಿ ಸಾವು : ಪ್ರತಿಭಟನಾ ನಿರತರಿಂದ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಹಾರ

ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...

ವಿರೋಧದ ನಡುವೆಯೂ ಡಿ.ಕೆ ರವಿ ಸಾವಿನ ಪ್ರಕರಣದ ತನಿಖೆ ಸಿಐಡಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...

ರಾಜ್ಯ ಬಜೆಟ್ ಮಂಡನೆಗೆ ಮುನ್ನ ರಾಜ್ಯದ ಜಿಡಿಪಿಯಲ್ಲಿ ಕುಸಿತ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಕೆಲವೇ ಗಂಟೆ ಮುನ್ನ ಜಿಡಿಪಿ ದರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಳೆದ ವರ್ಷಕ್ಕಿಂತಲೂ ಈ ವರ್ಷದ ಜಿಡಿಪಿ ಭಾರಿ ಪ್ರಮಾಣದಲ್ಲಿ ಕುಸಿದಿದೆ. ರೈತರ ಪರವಾಗಿರುವ ಸರ್ಕಾರ...

2015-16ನೇ ಸಾಲಿನ ರಾಜ್ಯ ಬಜೆಟ್ ಮುಖ್ಯಾಂಶಗಳು

2015-16ನೇ ಸಾಲಿನ ಬಜೆಟ್ ಮಂಡನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 10ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ ಕಾಪಾಡುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆ, ಸರ್ಕಾರದ ಆದ್ಯತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಶಸ್ವಿ ಯೋಜನೆಗಳನ್ನು ಬಲಗೊಳಿಸಿದ್ದೇವೆ ಎಂದು ಸಿ.ಎಂ...

ರಾಜ್ಯ ಸರ್ಕಾರದ ಬಜೆಟ್ ಕೇವಲ ಘೋಷಣಾ ಭಾಗ್ಯ: ಬಿಜೆಪಿ ಯುವ ಮುಖಂಡ ತೇಜಸ್ವಿ ಸೂರ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿ ಹೆಚ್ಚು ಬಜೆಟ್ ಮಂಡಿಸಿ ದಾಖಲೆ ಮಾಡಿದರೇ ಹೊರತು ಅತ್ಯುತ್ತಮ ಬಜೆಟ್ ಮಂಡಿಸಿ ದಾಖಲೆ ಮಾಡಲು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟಿದ್ದಾರೆ. ಮಾ.13ರಂದು ಮಂಡನೆಯಾದ ಸಿದ್ದರಾಮಯ್ಯ ಸರ್ಕಾರದ 2015-16ನೇ ಸಾಲಿನ...

ಎಐಸಿಸಿ ಅಧಿವೇಶನದವರೆಗೆ ಸಂಪುಟ ಪುನಾರಚನೆ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ. ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...

ಅತ್ಯಾಚಾರ ಪ್ರಕರಣ : ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನಾಣಯ್ಯ ರಾಜೀಜಿನಾಮೆ

ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ. ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....

ಸಿಎಂ ಸಿದ್ದರಾಮಯ್ಯಗೆ ತೊಗಾಡಿಯಾ ಪತ್ರ

ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್‌ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...

ತಿಂಗಳಿಗೊಮ್ಮೆ ಕೆಪಿಸಿಸಿ ಕಚೇರಿಗೆ ಭೇಟಿ ಕಡ್ಡಾಯ: ಸಿಎಂ ಪತ್ರ

ಕಾಂಗ್ರೆಸ್‌ ಪಕ್ಷದ ಚಟುವಟಿಕೆಗಳ ಬಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನಿರ್ಲಕ್ಷ್ಯದ ಬಗೆಗಿನ ದೂರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದು, ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದಿರುವ ಅವರು, ಈ...

ಅರ್ಕಾವತಿ ಪ್ರಕರಣದಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ: ಜಗದೀಶ್ ಶೆಟ್ಟರ್

'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...

ಸುರೇಶ್ ಪ್ರಭು ಹಳಿ ಇಲ್ಲದ ರೈಲು ಬಿಟ್ಟಿದ್ದಾರೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...

ಸತೀಶ್ ಜಾರಕಿಹೊಳಿಗೆ ಹೆಚ್ಚುವರಿ ಖಾತೆ ನೀಡಲು ಸಿಎಂ ನಿರ್ಧಾರ

ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ...

ಸತೀಶ್ ಜಾರಕಿಹೊಳಿ ಖಾತೆ ಬದಲಾವಣೆ: ಅಬಕಾರಿ ಖಾತೆ ವಾಪಸ್

ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಬದಲಾವಣೆ ಮಾಡಿದ್ದು, ಹಿಂದಿನ ಖಾತೆ ವಾಪಸ್ ಪಡೆದಿದ್ದಾರೆ. ಈ ಸಂಬಂಧ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ...

ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ: ರೈತ ಮುಖಂಡರಿಂದ ಹಲವು ಬೇಡಿಕೆ

'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...

ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ: ವಿವರಣೆ ಕೇಳಿದ ಕಾಂಗ್ರೆಸ್ ಹೈಕಮಾಂಡ್

'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ. ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...

ಗಣಿ ಗುತ್ತಿಗೆ ನವೀಕರಣ: ಸಿಎಂ ಅಕ್ರಮವೆಸಗಿರುವುದು ಸತ್ಯ-ಹೆಚ್.ಡಿ.ಕೆ

ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...

ಸಿ.ಎಂ ಸಿದ್ದರಾಮಯ್ಯ ದಲಿತರ ಬಗ್ಗೆ ಕಾಳಜಿ ಹೊಂದಿದ್ದಾರೆ: ಮೀರಾ ಕುಮಾರ್

ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ. ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಮಾ.13ರಂದು ರಾಜ್ಯ ಬಜೆಟ್: ಸಿದ್ದರಾಮಯ್ಯ

ಮಾ.13ರಂದು ಬಹುನಿರೀಕ್ಷಿತ ರಾಜ್ಯ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.19ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದ್ದು, ಮಾ.13ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಕಳೆದ ಬಜೆಟ್‌ನಲ್ಲಿ ನಿಗದಿ...

2018ರ ಚುನಾವಣೆ ಸ್ಪರ್ಧಿಸುವೆ: ಸಿದ್ದರಾಮಯ್ಯ

ಚುನಾವಣಾ ರಾಜಕಾರಣದಿಂದ ಬೇಸತ್ತು ’ಇದು ನನ್ನ ಕಟ್ಟಕಡೆಯ ಹೋರಾಟ ಇನ್ನು ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಯೂ ಟರ್ನ್ ತೆಗೆದುಕೊಂಡಿದ್ದು, 2018ರ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಹಠಾತ್‌ ನಿಲುವು...

ಮಾರ್ಚ್ 13ರಂದು ರಾಜ್ಯದ 2015-16ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ

ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್‌ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು. ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ವಿಪಕ್ಷಗಳ ವಿರುದ್ಧ ಸಿಎಂ ಆಕ್ರೋಶ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...

ಡಿನೋಟಿಫೈ ನಡೆದಿರುವುದು ಬಿಜೆಪಿ-ಹೆಚ್.ಡಿ.ಕೆ ಕಾಲದಲ್ಲಿ: ಸಿಎಂ

ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...

ತೊಗಾಡಿಗೆ ನಿಷೇಧ ವಿಚಾರ: ಸದನದಲ್ಲಿ ಮುಂದುವರೆದ ಬಿಜೆಪಿ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ನಿಷೇಧ ವಿಚಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಪ್ರತಿಭಟನೆಗೆ ಸಾಕ್ಷಿಯಾಯಿತು. ಈ ವೇಳೆ ತೊಗಾಡಿಯಾಗೆ ನಿಷೇಧ ಹಾಕಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬೆಂಗಳೂರಿಗೆ ಬರದಂತೆ...

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ: ಸಿದ್ದರಾಮಯ್ಯ

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು. ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ...

ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...

ತೊಗಾಡಿಯಾಗೆ ವಿಧಿಸಿರುವ ನಿಷೇಧ ವಾಪಸ್ ಪಡೆಯಬೇಕು: ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ

'ಪ್ರವೀಣ್ ತೊಗಾಡಿಯಾ'ಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಮರು ನಡೆಸುವ ಕಾರ್ಯಕ್ರಮಗಳಿಗೆ ಸಂಘಟನೆ ಮುಖ್ಯಸ್ಥರ ಆಗಮನಕ್ಕೆ ಅನುಮತಿ ನೀಡುವುದು, ಹಿಂದೂಗಳು ನಡೆಸುವ ಕಾರ್ಯಕ್ರಮದಲ್ಲಿ...

ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ: ಚೆಲುವರಾಯಸ್ವಾಮಿ

ಬಿಡಿಎ ಸೈಟ್ ಹಂಚಿಕೆ ವಿಚಾರ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಕಾರಣವಾಯಿತು. ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ವಿಧಾಸಭಾ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಸೈಟ್ ಗಳನ್ನು ಮಾರಾಟ ಆಡುವುದು ಬಿಡಿಎ ಕೆಲಸ. ಆದರೆ ಬಿಡಿಎ...

ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ: ಕೆ.ಎಸ್ ಈಶ್ವರಪ್ಪ

'ವಿಧಾನಮಂಡಲ ಅಧಿವೇಶನ'ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರಿಂದ ಸುಳ್ಳನ್ನು ಹೇಳಿಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಫೆ.2ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ...

81ನೇ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...

ಶಿಕ್ಷಣದ ವ್ಯಾಪಾರೀಕರಣಕ್ಕೆ ತಡೆ ಹಾಕಬೇಕು: ಸಿದ್ದರಾಮಯ್ಯ

ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...

ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಒಪ್ಪಿಗೆ

ಅಬಕಾರಿ ಸಚಿವ ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಸಚಿವರು ಕಡತ ತಿದ್ದುತ್ತಿದ್ದಾರೆ- ಡಿವಿಎಸ್

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...

ಸಿಎಂ ಜತೆ ಮಾತುಕತೆಗೆ ಸಮ್ಮತಿಸಿದ ಜಾರಕಿಹೊಳಿ

ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಕರಣ ಸುಖಾಂತ್ಯ ಕಾಣುವ ಲಕ್ಷಣ ಗೋಚರಿಸಿವೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಮನವೊಲಿಕೆ ಯತ್ನ ನಡೆಸಿದ್ದು, ಮಾತುಕತೆಗೆ ಬೆಂಗಳೂರಿಗೆ ಆಗಮಿಸಲು ಸತೀಶ್‌ ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟ ನಿರ್ಧಾರವಾಗಿಲ್ಲ....

ಜಾರಕಿಹೊಳಿ ಯಾವುದೇ ಷರತ್ತು ವಿಧಿಸಿಲ್ಲ: ಸಿಎಂ

ಸತೀಶ್ ಜಾರಕಿಹೊಳಿ ಯಾವುದೇ ಷರತ್ತುಗಳನ್ನು ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಜಾರಕಿಹೊಳಿ ಯಾವುದೇ ಷರತ್ತು ಹಾಕಿಲ್ಲ ಎಂದರು. ಜಾರಕಿಹೊಳಿ...

ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮದ್ಯ ಮಾರಾಟಗಾರರ ಒಕ್ಕೂಟದ ಒತ್ತಾಯ

'ಅಬಕಾರಿ ಸಚಿವ' ಸತೀಶ್ ಜಾರಕಿಹೊಳಿ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಜ.29ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ, ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...

ಒಬ್ಬರ ರಾಜೀನಾಮೆಯಿಂದ ಸರ್ಕಾರ ಅಭದ್ರವಾಗಲ್ಲ: ಸಿಎಂ

ಸತೀಶ್ ಜಾರಕಿಹೊಳಿ ರಾಜೀನಾಮೆ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಒಬ್ಬರ ರಾಜೀನಾಮೆಯಿಂದ ಸರ್ಕಾರ ಅಭದ್ರವಾಗಲ್ಲ ಎದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸತಿಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ನಮ್ಮ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್ ಸಂಪುಟದಲ್ಲಿ ಯಾವುದೇ ಬಿಕ್ಕಟ್ಟಿಲ್ಲ....

ಡಿನೋಟಿಫಿಕೇಶನ್ ಪ್ರಕರಣದ ದಾಖಲೆ ಸಲ್ಲಿಸಲು ಆತುರ ಬೇಡ : ಹೆಚ್.ಡಿ ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...

ಸತೀಶ್ ಜಾರಕಿಹೋಳಿ ರಾಜೀನಾಮೆ ವಿಷಯದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ: ವಿಶ್ವನಾಥ್

ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ...

ಸಚಿವ ಸತೀಶ್ ಜಾರಕಿ ಹೊಳಿ ರಾಜೀನಾಮೆ

ಹಲವು ದಿನಗಳಿಂದ ರಾಜೀನಾಮೆ ನೀಡುವ ಸೂಚನೆ ನೀಡಿತ್ತಾ ಬಂದಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಜ.27ರಂದು ಸಂಜೆ ಇಲ್ಲಿ ಗೋಕಾಕ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿ ಸಿದ ಜಾರಕಿಹೊಳಿ, ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿ...

ಜಾರಕಿಹೊಳಿ ರಾಜೀನಾಮೆ ವಿಚಾರ: ಸಂಜೆ ಸಿಎಂ ಸಂಧಾನ

ಸಂಪುಟಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಸಂಪುಟ ಸಚಿವರ ಜತೆ ಮಾತುಕತೆ ನಡೆಸುದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ರಾಜೀನಾಮೆ ಪತ್ರ...

ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ: ಜೋಷಿ

ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಇದು ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ರಾಜೀನಾಮೆಯಿಂದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ...

ರಾಜೀನಾಮೆ ವಾಪಸ್ ಪಡೆಯಲ್ಲ: ಸತೀಶ್ ಜಾರಕಿಹೊಳಿ

ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು. ಹೆಚ್.ಸಿ ಮಹದೇವಪ್ಪ,...

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ತಮ್ಮ ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿಯೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಜ.27 ಸಿಎಂ ಸಿದ್ದರಾಮಯ್ಯ ಅವರ ವಿವಾಹ ವಾರ್ಷಿಕೋತ್ಸವ. ಈ ನಿಟ್ಟಿನಲ್ಲಿ ಸಿಎಂ ಜ.26ರಂದೇ ತಮ್ಮ ಕುಟುಂಬ ವರ್ಗದೊಂದಿಗೆ ತಿರುಪತಿಗೆ ತೆರಳಿದ್ದರು. ಸಿದ್ದರಾಮಯ್ಯ...

ಸಿಎಂ ಸಿದ್ದರಾಮಯ್ಯರಿಂದ ರಾಜ್ಯಪಾಲರ ಭೇಟಿ

ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು. ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು. ಸಿಎಂ...

ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ. ರಾಜ್ಯಪಾಲ ವಾಜುಭಾಯಿ...

ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...

ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಸಿಎಂ ಅಸಮಾಧಾನ

'ಬಿಬಿಎಂಪಿ' ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ಪಾಲಿಕೆ ಸದಸ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜ.21ರಂದು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಪಾಲಿಕೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಇಷ್ಟೊಂದು ಕಳಪೆ ಗುಣಮಟ್ಟದ ಕಾಮಗಾರಿಯನ್ನು...

ಬೆಂಗಳೂರಿನಲ್ಲಿ ಫ್ಲೆಕ್ಸ್, ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಕ್ಕೆ ತೀರ್ಮಾನ

ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಗಳನ್ನು ನಿಷೇಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಂತೆಯೇ, ರಾಜ್ಯವ್ಯಾಪೀ ಪ್ಲಾಸ್ಟಿಕ್ ಕೈಚೀಲಗಳನ್ನೂ ನಿಷೇಧಿಸುವ ನಿರ್ಧಾರವನ್ನೂ ಕೂಡಾ ಸರ್ಕಾರ ಕೈಗೊಂಡಿದೆ. ಪ್ಲಾಸ್ಟಿಕ್ ಕೈಚೀಲಗಳ ನಿಷೇಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೊದಲಿಗೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಯವರ...

ಹತ್ತು ಸಾವಿರ ಎಕರೆಯಲ್ಲಿ ಹೊಸ ಐಟಿ ಹಬ್: ಸಿಎಂ ಸಿದ್ದರಾಮಯ್ಯ

ಹೊಸ ಐಟಿ ಹಬ್‌ ಅನ್ನು 10,500 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವೈಟ್‌ಫೀಲ್ಡ್‌ನಲ್ಲಿ ಕ್ಯಾಪ್ ಜಮಿನಿ ಕಂಪೆನಿ ನೂತನವಾಗಿ ನಿರ್ಮಿಸಿರುವ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಐಟಿ ಹಬ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಮೊದಲ...

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ದಾಖಲೆ ಬಿಡುಗಡೆ

ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...

ಕುಮಾರಸ್ವಾಮಿ ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...

ಡಿನೋಟಿಫಿಕೇಷನ್ ಪ್ರಕರಣ: ಸಿಎಂಗೆ ಬಿಎಸ್ ವೈ ಸವಾಲು

ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲು ಎಲ್ಲ...

ಡಿನೋಟಿಫಿಕೆಷನ್ ನಡೆದದ್ದು ಬಿ ಎಸ್ ವೈ ಅವಧಿಯಲ್ಲಿ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು. ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...

ಬಿಜೆಪಿ ಆಡಳಿತದಲ್ಲಿದ್ದಿದ್ದರೆ ರಾಜ್ಯದ ಜನತೆ ಕೈಗೆ ತಟ್ಟೆ ಕೊಡುತ್ತಿದ್ದರು: ಖಾದರ್

ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಮುಂದಾದ ಬಿಜೆಪಿ

'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...

ವಕ್ಫ್ ಆಸ್ತಿ ಒತ್ತುವರಿ ಮಾಡಿದವರ ವಿರುದ್ಧ ಕ್ರಮ: ಸಿದ್ದರಾಮಯ್ಯ

ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...

ಸಿಎಂ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ:ತನಿಖೆಗೆ ಗೃಹ ಸಚಿವರಿಂದ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....

ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣ: ನಾಲ್ವರು ಉಗ್ರರ ಬಂಧನ-ಸಿಎಂ

ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು. ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...

ಬಸ್ ಖರೀದಿ ಅವ್ಯವಹಾರ ತನಿಖೆ : ರಾಮಲಿಂಗಾರೆಡ್ಡಿ

ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್‌ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್‌ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...

ಸಿಎಂ ತೆರಳ ಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ

ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...

ಭಯೋತ್ಪಾದಕರ ನೆಲೆ ಭಟ್ಕಳಕ್ಕೆ ಮಾತ್ರ ಸೀಮಿತ ಅಲ್ಲ: ಸಿದ್ದರಾಮಯ್ಯ

ಭಯೋತ್ಪಾದಕ ನೆಲೆ ಕೇವಲ ಭಟ್ಕಳ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಯೋತ್ಪಾದನೆ ದೇಶದ ಹಲವೆಡೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಗ್ರರ ನೆಲೆಯನ್ನು ಬೇಧಿಸಿರುವ ಪೊಲೀಸರ ಕ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, 2008ರಿಂದಲೂ ಭಟ್ಕಳದಲ್ಲಿ ಉಗ್ರರ ಅಡಗುತಾಣದ ಬಗ್ಗೆ ಮಾಹಿತಿ...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ಜಾತಿ ಗಣತಿ: ಏಪ್ರಿಲ್ 11ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭ

ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...

ಕರ್ನಾಟಕವೇಕೆ ಕಾಂಗ್ರೆಸ್ ಮುಕ್ತವಾಗಬೇಕೆಂಬುದನ್ನು ಅಮಿತ್ ಶಾ ಸ್ಪಷ್ಟಪಡಿಸಲಿ:ಹೆಚ್.ಡಿ.ಕೆ

'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಾನು ಮಾಡಿದ ತಪ್ಪಿನಿಂದಾಗಿ 7 ವರ್ಷಗಳ ಹಿಂದೆಯೇ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ. ಜ.5ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಉರ್ದು ಭಾರತೀಯ ಭಾಷೆ : ಸಿದ್ದರಾಮಯ್ಯ

'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...

ಭ್ರಷ್ಟಾಚಾರದಲ್ಲಿ ಬಿಜೆಪಿಗೆ ಇತಿಹಾಸವೇ ಇದೆ : ಸಿದ್ದರಾಮಯ್ಯ

ಭ್ರಷ್ಟಾಚಾರದ ವಿಷಯವಾಗಿ ಬಿಜೆಪಿಗೆ ದೊಡ್ಡ ಇತಿಹಾಸವೇ ಇದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಕೇಂದ್ರ ಸರ್ಕಾರದ ಕೃಪಾ ಕಟಾಕ್ಷದಿಂದ ಪಾರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ...

ನೀತಿ ಆಯೋಗವು ರಾಜಕೀಯ ಪ್ರೇರಿತ, ಇದರಲ್ಲಿ ಜನಪರ ಕಾಳಜಿ ಇಲ್ಲ: ಸಿದ್ದರಾಮಯ್ಯ

ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಒಕ್ಕೂಟ...

ಬಸ್ ಪ್ರಯಾಣ ದರ ಇಳಿಕೆ ಪ್ರಸ್ತಾವನೆ ತಿರಸ್ಕಾರ

ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...

ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ: ಸಿಎಂ

ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯಗೊಂಡಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂದಣಿ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭದ್ರತೆ ಇನಷ್ಟು ಹೆಚ್ಚಿಸಲು ಕ್ರಮ...

ಜ.1ರಿಂದ ಬಸ್ ಪ್ರಯಾಣ ದರ ಇಳಿಕೆ: ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್‌.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...

ಮಠಗಳನ್ನು ನಿಯಂತ್ರಿಸುವ ಮಸೂದೆಗೆ ಸಿ.ಎಂ, ಸಚಿವರಿಂದಲೇ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...

ಚುನಾವಣೆಗಳಲ್ಲಿ ಸೋತರೂ ಕಾಂಗ್ರೆಸ್ ಗೆ ಪುಟಿದೇಳುವ ಸಾಮರ್ಥ್ಯವಿದೆ:ಸಿದ್ದರಾಮಯ್ಯ

ಜಮ್ಮು-ಕಾಶ್ಮೀರ, ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಎರಡೂ ರಾಜ್ಯಗಳಲ್ಲಿ ತೀವ್ರ ಹಿನ್ನಡೆಯುಂಟಾಗಿರುವುದು ನಿಜ, ಆದರೆ ನಾವು ಪಕ್ಷವನ್ನು ಸಂಘಟಿಸಿ ಮತ್ತೊಮ್ಮೆ ಎಲ್ಲಾ ರಾಜ್ಯಗಳಲ್ಲೂ ಅಧಿಕಾಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಸದನದೊಳಗೆ ಯಾರು ಮೊಬೈಲ್ ತರುವುದು ಬೇಡ: ಸಿದ್ದರಾಮಯ್ಯ

ನಾಳೆಯಿಂದ ಸದನದೊಳಗೆ ಯಾರೂ ಮೊಬೈಲ್ ತರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸದನದಲ್ಲಿ ಶಾಸಕ ಪ್ರಭು ಚೌಹಾಣ್ ಮೊಬೈಲ್ ಫೋಟೊ ವೀಕ್ಷಣೆ ವಿಚಾರ ವಿಧಾನಪರಿಷತ್ತಿನಲ್ಲೂ ಪ್ರತಿಧ್ವನಿಸಿತು. ಉಭಯ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸಿ, ಧರಣಿ ಕೈಗೊಂಡಿದ್ದರು. ಸದನದಲ್ಲಿ ಮೊಬೈಲ್...

ಮೊಬೈಲ್ ಒನ್‌ ಸೇವೆಗೆ ರಾಷ್ಟ್ರಪತಿ ಚಾಲನೆ

ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್‌' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ. ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ...

ಯೋಜನಾ ಆಯೋಗ ರದ್ದತಿಗೆ ಕೇಂದ್ರ ಚಿಂತನೆ: ಸಿಎಂಗಳ ಸಭೆ ಕರೆದ ಪ್ರಧಾನಿ

ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ. ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...

ಯೋಜನಾ ಆಯೋಗ ರದ್ದು ಬೇಡಃ ಸಿದ್ದರಾಮಯ್ಯ

ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...

ಕೆಪಿಸಿಸಿಗೆ ಅಪ್ಪಾಜಿ ನಾಡಗೌಡ ಅಧ್ಯಕ್ಷರಾಗುವ ಸಾಧ್ಯತೆ

ಕೆಲದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್‌ನ ಆಂತರಿಕ ವಲಯದಲ್ಲಿ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರನ್ನು ಕರೆ ತರುವ ಪ್ರಯತ್ನ ಆರಂಭವಾಗಿದೆ. ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಫೆಬ್ರವರಿ ಆರಂಭದಲ್ಲಿ ಪ್ರದೇಶ ಕಾಂಗ್ರೆಸ್‌ಗೆ...

ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸರಿಯಲ್ಲ: ಸಂತೋಷ್ ಹೆಗ್ಡೆ

ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ...

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸೆಂಬರ್...

ಡಾ.ರಾಜ್ ಸ್ಮಾರಕ ಲೋಕಾರ್ಪಣೆ

ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್‍ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್‌ಸ್ಟಾರ್‌ ರಜನೀಕಾಂತ್‌ ರಾಜ್‌ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು. ರಾಜ್‌ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...

ಸಿದ್ದರಾಮಯ್ಯ ವಿರುದ್ಧ ಸಚಿವ ಅಂಬರೀಶ್ ವಾಗ್ದಾಳಿ

'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ. ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...

ಸಂಪುಟ ಸಭೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ

ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...

ಆರೋಗ್ಯ ಕವಚ 108 ಕ್ಕೆ ಹೊಸದಾಗಿ 198 ಆಂಬ್ಯುಲೆನ್ಸ್‌ಗಳ ಲೋಕಾರ್ಪಣೆ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಈಗಾಗಲೇ ಇರುವ 517 ಆಂಬ್ಯುಲೆನ್ಸ್‌ಗಳ ಜೊತೆ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ 198 ಆಂಬ್ಯುಲೆನ್ಸ್‌ಗಳ...

ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪ್ರಕಟ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನಿಗಮ ಮಂಡಳಿಯಲ್ಲಿ ಸ್ಥಾನ ಸಿಗದ ಹಿನ್ನಲೆ: ಕಾಂಗ್ರೆಸ್ ನಾಯಕನಿಂದ ಆತ್ಮಹತ್ಯೆ ಯತ್ನ

ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...

ರಾಜ್ಯದಲ್ಲಿ ನಿರ್ಮಾಣವಾಗಲಿದೆ 6 ಸ್ಮಾರ್ಟ್ ಸಿಟಿ

ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್...

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...

ಮೂಢನಂಬಿಕೆ ಕಾಯ್ದೆ : ಉಪವಾಸ ಅಂತ್ಯಗೊಳಿಸಲಿರುವ ಪ್ರಗತಿ ಪರ ಮಠಾಧೀಶರು

'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರಗತಿಪರ ಮಠಾಧೀಶರು ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮಠಾಧೀಶರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಡುವ ನಿರ್ಧಾರ...

ಕಿಸ್ ಆಫ್ ಲವ್ ಗೆ ಸಿ.ಎಂ ವಿರೋಧ: ಅಶ್ಲೀಲ ಪ್ರತಿಭಟನೆಗೆ ಕಾನೂನು ಕ್ರಮದ ಎಚ್ಚರಿಕೆ

'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಿಸ್ ಡೇ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಕಿಸ್ ಆಫ್ ಲವ್ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು. ಅಶ್ಲೀಲ-ಅಸಭ್ಯವಾಗಿ ಪ್ರತಿಭಟನೆ ನಡೆಸುವವರ...

ನಿಗಮ ಮಂಡಳಿ ಪಟ್ಟಿಯನ್ನು ಸೋನಿಯಾ ಗಾಂಧಿಗೆ ಸಲ್ಲಿಸುವಂತೆ ದಿಗ್ವಿಜಯ್ ತಾಕೀತು

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ. ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...

ನಿಗಮ ಮಂಡಳಿ ನೇಮಕಾತಿ ವಿಚಾರ: ಅಧ್ಯಕ್ಷಗಿರಿನೇ ಬೇಕಂದ್ರೆ ನಾನೆಲ್ಲಿಂದ ತರ್ಲಿ-ಸಿಎಂ

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...

ಕಳಂಕಿತ ಸಚಿವರನ್ನು ಕೈಬಿಡದೇ ಇದ್ದಲ್ಲಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು: ಜೋಷಿ

'ಕಾಂಗ್ರೆಸ್' ನಲ್ಲಿರುವ ಕಳಂಕಿತ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಒತ್ತಾಯಿಸಿದ್ದಾರೆ. ನ.14ರಂದು ಕಲಬುರ್ಗಿಯಲ್ಲಿ ಮಾತನಾಡಿದ ಜೋಷ್ಯಿ, ರಾಜ್ಯ ಸರ್ಕಾರದಲ್ಲಿರುವ 4 ಸಚಿವರ ಅಕ್ರಮ, ದಾಖಲೆಗಳ ಮೂಲಕ ಬಯಲಿಗೆ ಬಂದಿದ್ದರೂ ಅವರನ್ನು ಸಚಿವ ಸಂಪುಟದಲ್ಲೇ...

ಮಕ್ಕಳಿಗೆ ಶಿಕ್ಷಣ ನೀಡದಿರುವುದು ಶೋಷಣೆ ಮಾಡಿದಂತೆ: ಸಿದ್ದರಾಮಯ್ಯ

ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...

ಕಾನೂನು ಸುವ್ಯವಸ್ಥೆ ಸಮಸ್ಯೆ ಜಟಿಲವಾದರೆ ಸರ್ಕಾರದ ವಿರುದ್ಧ ಸೂಕ್ತ ಕ್ರಮ: ರಾಜ್ಯಪಾಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ. ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...

ಕೃಷ್ಣಾನದಿ ನೀರು ಹಂಚಿಕೆ ವಿಚಾರ: ಚಂದ್ರಬಾಬು ನಾಯ್ಡುರಿಂದ ಸಿದ್ದರಾಮಯ್ಯ ಭೇಟಿ

ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಕೆ.ಎಸ್ ಈಶ್ವರಪ್ಪ

'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ವರದಿ ಸಲ್ಲಿಕೆ

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...

ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ಪಕ್ಷ ಸಂಘಟನೆಗಾಗಿ ರಾಹುಲ್ ಸಭೆ: ಸಿಎಂ, ಪರಮೇಶ್ವರ್ ದೆಹಲಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...

ಕಂಪನಿಗಳು, ಕೈಗಾರಿಕೆಗಳ ವಲಸೆ ನಿರ್ಧಾರ: ಅಧಿಕಾರಿಗಳಿಗೆ ಸಿಎಂ ತರಾಟೆ

ಭೂಮಿ, ಮುಲಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡದ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಪ್ರತಿಷ್ಠಿತ ಕಂಪನಿಗಳು, ಕೈಗಾರಿಕೆಗಳು ವಲಸೆ ಹೋಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದರು. ಇನ್ಫೋಸಿಸ್ ಗೆ ಭೂಮಿ ನೀಡುವ...

ತೀರ್ಥಹಳ್ಳಿ ಅತ್ಯಾಚಾರ ಪ್ರಕರಣ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಲಿ: ಶೋಭಾ ಕರಂದ್ಲಾಜೆ

ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸಿ.ಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ನ.5ರಂದು ಮಲ್ಲೇಶ್ವಂ ಬಿಜೆಪಿ ಕಚೇರಿಯಿಂದ ಸಿ.ಎಂ ನಿವಾಸದ ವರೆಗೆ ತೆರಳಿದ ಕಾರ್ಯಕರ್ತರು...

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಸಿದ್ದರಾಮಯ್ಯ

ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು...

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...

ಶಾಲೆಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ: ಜಾರ್ಜ್

ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ, ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇಂಬ್ರಿಡ್ಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ...

ಉದ್ದೇಶಿತ ಗಲಭೆಗಳನ್ನು ತಡೆದಿದ್ದಕ್ಕೆ ಸರ್ಕಾರದ ಮೇಲೆ ಬಿಜೆಪಿಗೆ ಅಸಹನೆ: ಕೆ.ಜೆ ಜಾರ್ಜ್

ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು...

ಸಿ.ಎಂ-ವೈದ್ಯಾಧಿಕಾರಿಗಳ ಮಾತುಕತೆ ಯಶಸ್ವಿ: ವೈದ್ಯರ ಮುಷ್ಕರ ವಾಪಸ್

ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ಯಶಸ್ವಿಯಾಗಿದ್ದು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವೈದ್ಯರು ಮುಷ್ಕರ ವಾಪಸ್ ಪಡೆದಿದ್ದಾರೆ. 14 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಇದಕ್ಕೆ...

439 ಹೊಸ ಗ್ರಾ.ಪಂ.ಗಳ ರಚನೆ: ಪುನರ್‌ ವಿಂಗಡಣಾ ಸಮಿತಿ ವರದಿ

ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....

ತಂಬಾಕು ಸೇವನೆಯಿಂದ ಆರ್ಥಿಕ ಹೊರೆ: ಮುಖ್ಯಮಂತ್ರಿಗೆ ವರದಿ ಸಲ್ಲಿಕೆ

ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...

ವೈದ್ಯರ ರಾಜೀನಾಮೆ ಅಂಗೀಕರಿಸಲ್ಲ: ಸಿದ್ದರಾಮಯ್ಯ

ಸರ್ಕಾರಿ ವೈದ್ಯರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು ಸೇವೆಯಲ್ಲಿ ತೊಡಗಿಕೊಳ್ಳಿವಂತೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಾತುಕತೆಗೆ ಬರುವಂತೆ ಆಹ್ವಾನಿಸಲಾಗಿದೆ ಎಂದರು. ರಾಜೀನಾಮೆ ನೀಡಿರುವ ವೈದ್ಯರ...

ವೈದ್ಯರ ರಾಜೀನಾಮೆ ಸರಿಯಲ್ಲ: ಸಿದ್ದರಾಮಯ್ಯ

ವೈದ್ಯರ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ, ಸರ್ಕಾರಿ ವೈದ್ಯರು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ತಮ್ಮ ಸಮಸ್ಯೆಗಳ ಬಗ್ಗೆ ನೇರವಾಗಿ ಬಂದು ಮಾತನಾಡಲಿ....

ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ಬದ್ಧ: ಜಯಚಂದ್ರ

ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...

ಸಿಬಿಐ ಕಪಾಳಮೋಕ್ಷ ಮಾಡಿ ಡಿ.ಕೆ.ಶಿಯನ್ನು ಜೈಲಿಗೆ ಕಳುಹಿಸಲಿದೆ: ಹಿರೇಮಠ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...

ದೀಪಾವಳಿ ಅಂಗವಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಹೊಸ ಯೋಜನೆಗಳ ಗಿಫ್ಟ್

ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ. ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ...

ರಾಜ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ: ಜಗದೀಶ್ ಶೆಟ್ಟರ್

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...

ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರಲು ನಿರ್ಧಾರ

ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...

ಹೊಸ ಕೈಗಾರಿಕಾ ನೀತಿ ಬಿಡುಗಡೆ

ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...

ದಿಗ್ವಿಜಯ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...

ನಿಗಮ ಮಂಡಳಿ ನೇಮಕಕ್ಕೆ ದಿಗ್ವಿಜಯ್ ಸಿಂಗ್ ಗಡುವು

ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು. ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ಹುಡ್ ಹುಡ್ ಚಂಡಮಾರುತ: ಆಂಧ್ರಕ್ಕೆ ನೆರವು ನೀಡಲು ಸಿದ್ದರಾಮಯ್ಯ ಸಮ್ಮತಿ

ಹುಡ್ ಹುಡ್ ಚಂಡಮಾರುತದ ಅಬ್ಬರದಿಂದ ತತ್ತರಿಸಿರುವ ಆಂಧ್ರಪ್ರದೇಶಕ್ಕೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್ ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ...

ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...

ಲೋಡ್ ಶೆಡ್ಡಿಂಗ್: ಡಿ.ಕೆ.ಶಿವಕುಮಾರ್ ವಿರುದ್ಧ ಜೋಷಿ ವಾಗ್ದಾಳಿ

ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ...

ಸಧ್ಯದಲ್ಲೇ ಬಿಜೆಪಿ ಸೇರಲಿರುವ ಸಿ.ಎಂ ಆಪ್ತ ಇಬ್ರಾಹಿಂ

ಸಿ.ಎಂ ಸಿದ್ದರಾಮಯ್ಯ ಅವರ ಪರಮಾಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿಯತ್ತ ಮುಖಮಾಡಿದ್ದಾರೆ. ಸಧ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಪ್ರಕಾರ, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ...

ಕ್ರೀಡಾಪಟುಗಳಿಗೆ ಶೀಘ್ರ ಭಾರೀ ಕೊಡುಗೆ: ಅಭಯಚಂದ್ರ ಅಭಯ

ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ. ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...

ಎಂ.ಇ.ಎಸ್ ನಿಷೇಧ ಮಾಡಲು ಸಿ.ಎಂ ಗೆ ಸಾಹಿತಿಗಳ ಒಕ್ಕೊರಲ ಒತ್ತಾಯ

ಬೆಳಗಾವಿಯಲ್ಲಿ ಮರಾಠಿ ನಾಮಫಲಕ ಹಾಕಿ ಪದೇ ಪದೇ ಕ್ಯಾತೆ ತೆಗೆಯುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯದ ಹಿರಿಯ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ...

ಡಿವಿಎಸ್ ದೂರವಾಣಿ ಕದ್ದಾಲಿಕೆ: ಸಿ.ಎಂ ರಾಜೀನಾಮೆಗೆ ಸುರೇಶ್ ಕುಮಾರ್ ಒತ್ತಾಯ

'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...

ನ.1ರಂದು ಬೆಳಗಾಂ ಗೆ ಬೆಳಗಾವಿ ಎಂದು ಅಧಿಕೃತ ನಾಮಕರಣ: ಸಿ.ಎಂ ಸ್ಪಷ್ಟನೆ

ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....

ಎರಡು ತಿಂಗಳಲ್ಲಿ ನಗರದ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಆರಂಭ

ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರು ನಗರದ ಎಲ್ಲಾ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಬಿಎಂಪಿ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನಗರದಲ್ಲಿ ಪ್ರಸ್ತುತ 16 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದೆ. ಆದರೆ, ಎರಡು...

ಮಂಡೂರಿನಲ್ಲಿ ಡಿಸೆಂಬರ್ ಮುನ್ನವೇ ಕಸ ವಿಲೇವಾರಿ ಸ್ಥಗಿತ

ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದ ಕಸ ವಿಲೇವಾರಿ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರಿಗೆ ನೀಡಿದ ವಾಗ್ದಾನದಂತೆ ಮಾತ್ರವಲ್ಲದೆ, ನಿಗದಿಪಡಿಸಿದ...

ಚಕ್ರವರ್ತಿ ಸೂಲಿಬೆಲೆ ಆಹ್ವಾನಕ್ಕೆ ಕಾರಣ ನೀಡಲು ಶಂಕರ ಮೂರ್ತಿಗೆ ಕೈ ಕಾರ್ಯಕರ್ತರ ಒತ್ತಾಯ

ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿಲ್ಲ: ಡಾ.ಪರಮೇಶ್ವರ್

ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...

ಭೂಕಬಳಿಕೆ ವಿರುದ್ಧ ನಿರಂತರ ಹೋರಾಟ: ಪ್ರತಿಭಟನಾ ನಿರತರೊಂದಿಗೆ ಸಿ.ಎಂ ಸಭೆ

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಲವು ದಿನಗಳಿಂದ ಟೌನ್ ಹಾಲ್ ಎದುರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮ

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...

ನಿಗಮ ಮಂಡಳಿ ನೇಮಕಾತಿ: 10ದಿನಗಳಲ್ಲಿ ಫಲಿತಾಂಶ ಸಾಧ್ಯತೆ

ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...

ಶ್ರೀರಾಮಸೇನೆ ನಿಷೇಧಿಸಿದರೆ ರಕ್ತಪಾತವಾಗುತ್ತದೆ: ಮುತಾಲಿಕ್ ಎಚ್ಚರಿಕೆ

ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು. ನಾನು ಎಂದಿಗೂ ಭಾಷೆ,...

ಜಂಬೂ ಸವಾರಿಗೆ ಸಿದ್ಧಗೊಂಡಿರುವ ಸಾಂಸ್ಕೃತಿಕ ನಗರಿ

'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಿಶ್ವವಿಖ್ಯಾತ ಜಂಬೂಸವಾರಿಗೆ ಸಿ.ಎಂ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಅರ್ಜುನ ಹೊರಲಿರುವ 750 ಕೆ.ಜೆ. ತೂಕದ ಚಿನ್ನದ ಅಂಬಾರಿಯಲ್ಲಿರುವ...

ಸರ್ಕಾರಿ ಚಾನಲ್ ಗೆ ಸಿಎಂ ಸಮ್ಮತಿ: ರೋಷನ್ ಬೇಗ್

ಸಂಸತ್ ಮಾದರಿಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕೆ ಸರ್ಕಾರದಿಂದಲೇ ಪ್ರತ್ಯೇಕ ಟಿ.ವಿ ಚಾನಲ್ ಆರಂಭವಾಗುವುದು ಖಚಿತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಸ್ವಚ್ಛ ಭಾರತ ಆಂದೋಲನಕ್ಕೆ ಕರೆ: ಶಾಲೆಗಳಿಗೆ ಸುತ್ತೋಲೆ

ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ದೇಶಾದ್ಯಂತ ಸ್ವಚ್ಛ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನಲೆಯಲ್ಲಿ, ಕಡ್ಡಾಯವಾಗಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೇಂದ್ರ ಸರ್ಕಾರದ...

ರೈತರನ್ನು ಒಕ್ಕಲೆಬ್ಬಿಸುವ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿ

ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....

ನವೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ: ಸಿಎಂಗೆ ಸ್ಪೀಕರ್ ಪತ್ರ

ನವೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಪ್ರತಿವರ್ಷ 60 ದಿನ ವಿಧಾನಮಂಡಲ ಅಧಿವೇಶನ ನಡೆಸಬೇಕು ಎಂಬ ನಿಯಮವಿದೆ....

ಬಳ್ಳಾರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....

ಜಯಲಲಿತಾಗೆ ಜೈಲು ಶಿಕ್ಷೆ: ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ-ಸಿದ್ದರಾಮಯ್ಯ

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...

ನಿರೀಕ್ಷೆಗೂ ಮೀರಿ ಮಳೆ ಬಂದ ಕಾರಣ ಅವಾಂತರ: ಸಿದ್ದರಾಮಯ್ಯ

ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ...

ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ದೊರೆತಿದೆ. ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 8.37ರಿಂದ 9.05ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿದಿಯಲ್ಲಿ ಸಾಹಿತಿ ಗಿರೀಶ್ ಕಾರ್ನಾಡ್ ಅಗ್ರಪೂಜೆ...

ಕರ್ನಾಟಕಕ್ಕೂ ವಿಶೇಷ ಪ್ಯಾಕೇಜ್ ಘೋಷಿಸಿ: ಪಿಎಂಗೆ ಸಿಎಂ ಮನವಿ

ತೆಲಂಗಾಣ ಮತ್ತು ಸೀಮಾಂಧ್ರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ತುಮಕೂರಿನಲ್ಲಿ ಫುಡ್ ಪಾರ್ಕ್ ಉದ್ಘಾಟನೆ ವೇಳೆ ಮಾತನಾಡಿದ ಅವರು, ಆಂಧ್ರ ವಿಭಜನೆಯಾದಾಗ...

ಕ್ರಿಯಾ ಯೋಜನೆಗೆ ಅಂತಿಮ ರೂಪ ನೀಡಿ ಶೀಘ್ರ ಹಣ ಬಿಡುಗಡೆ:ಸಿದ್ದರಾಮಯ್ಯ

ರಾಜ್ಯದಲ್ಲಿ ಶೇ.24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಯಿದ್ದು ಜನಸಂಖ್ಯೆಗೆ ಅನುಗುಣವಾಗಿ ರೂ 15,834.16 ಕೋಟಿ ಈ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ...

ಬಿಬಿಎಂಪಿ ನೌಕರರಿಂದ ಬೃಹತ್ ಪ್ರತಿಭಟನೆ:ಪಾಲಿಕೆ ವ್ಯಾಪ್ತಿಯ ಕೆಲಸಗಳಿಗೆ ಕತ್ತರಿ

'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...

ಇನ್ನು ಮುಂದೆ ಕನ್ನಡ ಇಂಗ್ಲೀಷ್ ನಲ್ಲಿ ಟ್ವೀಟ್ ಮಾಡುತ್ತೇನೆ- ಸಿ.ಎಂ ಸಿದ್ದರಾಮಯ್ಯ

ಜನರೊಂದಿಗೆ ನಾನು ನೇರ ಸಂಪರ್ಕ ಇಟ್ಟುಕೊಂಡಿದ್ದೇನೆ, ಆದರೆ ಕಾಲ ಬದಲಾಗಿದ್ದು ಯುವಜನತೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದರಿಂದ ನಾನು ಸಾಮಾಜಿಕ ಜಾಲತಾಣಕ್ಕೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೆ.22ರಂದು ಸಾಮಾಜಿಕ ಜಾಲತಾಣ ಖಾತೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,...

ಮಳೆ ಹಾನಿಯಿಂದ ಬಿದ್ದ ಮನೆಗಳಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿದ್ದರಾಮಯ್ಯ ತರಾಟೆ

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ. ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...

ನಿಗಮ ಮಂಡಳಿ ನೇಮಕಾತಿ ವಿಚಾರ: ಕಾರ್ಯಕಾರಿ ಸಭೆ ಆರಂಭ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...

ರಾಜ್ಯಪಾಲ- ಯಡಿಯೂರಪ್ಪ ಭೇಟಿ, ಅರ್ಕಾವತಿ ಡಿನೋಟಿಫಿಕೇಶನ್ ಬಗ್ಗೆ ಚರ್ಚೆ

ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...

ಪ್ರಕೃತಿ ವಿಕೋಪಕ್ಕೀಡಾಗಿರುವ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡಿ: ಕುಮಾರಸ್ವಾಮಿ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಠಿ-ಅನಾವೃಷ್ಠಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ರೈತರಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಬೀದರ್, ಗುಲ್ಬರ್ಗಾ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ...

ಪ್ರಧಾನಿ ಮೋದಿಗೆ ಮಾತ್ರ ಒಳ್ಳೆ ದಿನಗಳು ಬಂದಿವೆ- ದಿಗ್ವಿಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಕೋರ್ ಕಮಿಟಿ ತೀರ್ಮಾನ

'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...

ಕೆ.ಎಂ.ಎಫ್ ಅಧ್ಯಕ್ಷರ ನೇಮಕಾತಿ ವಿಚಾರ: ಕಾಂಗ್ರೆಸ್ ನಲ್ಲೇ ಅಪಸ್ವರ

ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ. ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...

ಭೂ ಹಗರಣದ ಆರೋಪದ ಬಗ್ಗೆ ಶೆಟ್ಟರ್ ಸ್ಪಷ್ಟನೆ ನೀಡಲಿ- ಟಿ.ಜೆ ಅಬ್ರಾಹಂ

ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ. ಜಗದೀಶ್...

ನಮ್ಮ ಮೆಟ್ರೊ: ಸುರಂಗ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸಿಎಂ ಸೂಚನೆ

’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...

ನಿಗಮ ಮಂಡಳಿ ನೇಮಕಾತಿ ವಿಚಾರ: ಮಾತುಕತೆ ವಿಫಲ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ. ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು. ನಿಗಮ ಮಂಡಳಿಗಳಿಗೆ ಮೊದಲ...

ಮಾಜಿ ಸಿ.ಎಂ ಶೆಟ್ಟರ್ ವಿರುದ್ಧ ಟಿ.ಜೆ ಅಬ್ರಾಹಂ ಗಂಭೀರ ಆರೋಪ

ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ. ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಸಿದ್ದರಾಮಯ್ಯ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...

ಬೆಂಗಳೂರು ಹಜ್‌ಘರ್ ನಿರ್ಮಾಣಕ್ಕೆ 17 ಕೋಟಿ ರೂ. ಅನುದಾನ: ಸಿದ್ದರಾಮಯ್ಯ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್‌ಘರ್‌ಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 17 ಕೋಟಿ ರೂ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ವರ್ಷ ಹಜ್ ಶಿಬಿರ ಈ ನೂತನ ಹಜ್‌ಘರ್‌ನಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ...

ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಸವಾಲು

ಸರ್ಕಾರದ ವತಿಯಿಂದ ಹಿಂದೂ ಪರ ಸಂಘಟನೆಗಳನ್ನು ನಿಷೇಧ ಮಾಡುವುದು ಸರಿಯಲ್ಲ, ತಾಕಿತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ನಿಷೇಧಿಸಲಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳನ್ನು ಕಾನೂನಿನ ಮೂಲಕ ಮಟ್ಟಹಾಕಲು ಮುಖ್ಯಮಂತ್ರಿ...

ಶ್ರೀರಾಮಸೇನೆ ನಿಷೇಧ ವಿಚಾರ: ಸಿಎಂ ಭೇಟಿಗೆ ಮುತಾಲಿಕ್ ನಿರ್ಧಾರ

ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು. ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...

ಶ್ರೀರಾಮ ಸೇನೆಗೆ ನಿಷೇಧ ಹೇರುವ ಬಗ್ಗೆ ಚಿಂತನೆ ನಡೆದಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...

ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ: ಪ್ರಮೋದ್ ಮುತಾಲಿಕ್

ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ...

ತಾಲೂಕು ಪಂಚಾಯತ್ ಗೆ ಚುನಾವಣೆ ಬೇಡ: ಸಿದ್ದರಾಮಯ್ಯ

ತಾಲೂಕು ಪಂಚಾಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪಂಚಾಯತ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದರೆ ಸಾಕು. ತಾಲೂಕು ಪಂಚಯತ್ ಗೆ ಚುನಾವಣೆ ನಡೆಸುವ...

ಸಂಪುಟದಲ್ಲಿ ಸ್ಥಾನ ನೀಡುವ ವಿಶ್ವಾಸವಿದೆ: ಕೋಳಿವಾಡ

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸಂಪುಟ...

ಜಮ್ಮು-ಕಾಶ್ಮೀರದಲ್ಲಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ

ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...

ಸಚಿವ ಸಂಪುಟ ಮೇ ತಿಂಗಳವರೆಗೆ ವಿಸ್ತರಣೆಯಿಲ್ಲ

ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...

ಅತಿವೃಷ್ಟಿಯಿಂದ ಹಾನಿ ಹಿನ್ನಲೆ: ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...

ಅತಿವೃಷ್ಟಿ ಹಿನ್ನಲೆ: ನಾಳೆ ವೈಮಾನಿಕ ಸಮೀಕ್ಷೆ-ಸಿದ್ದರಾಮಯ್ಯ

ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಹಾನಿಗೀಡಾದ ರಾಯಚೂರು, ಗದಗ, ಗುಲ್ಬರ್ಗಾ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಸೆ.6ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ ಎಂದರು. ಅತಿವೃಷ್ಟಿಯಿಂದಾಗಿ 350ರಿಂದ...

ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗೆ ಆಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದು, ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನಿಡಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಇ-ಆಡಳಿತ ಜಾರಿಗೆ ತರುವ ಮೂಲಕ ಕಾಗದ ಮುಕ್ತ ಆಡಳಿತಕ್ಕೆ ಸರ್ಕಾರ ಮುಂದಾಗಿದ್ದು...

ಡಿಸಿಎಂ ಹುದ್ದೆ ಸೃಷ್ಠಿಸಲ್ಲ 'ಪರಮೇಶ್ವರ'!

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...

ಸಂಪುಟ ವಿಸ್ತರಣೆ ವಿಚಾರ: ಮಂತ್ರಿ ಸ್ಥಾನಕ್ಕಾಗಿ ಶಾಸಕರ ಲಾಬಿ

ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ನೂತನ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅಧಿಕಾರ ಸ್ವೀಕಾರ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು. ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...

ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....

ಸಂಪುಟ ವಿಸ್ತರಣೆ ವಿಚಾರ: ಸೆ.3ಕ್ಕೆ ದೆಹಲಿಗೆ-ಸಿದ್ದರಾಮಯ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ...

ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೆರವು ನೀಡಿ: ಸಿದ್ದರಾಮಯ

ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...

ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...

ಸಂಪುಟ ವಿಸ್ತರಣೆ, ಡಿಸಿಎಂ ಹುದ್ದೆ ಸಿಎಂಗೆ ಬಿಟ್ಟಿದ್ದು: ದಿಗ್ವಿಜಯ್ ಸಿಂಗ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ: ಸಿದ್ದರಾಮಯ್ಯ

'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ಸಚಿವ ಸ್ಥಾನಕ್ಕಾಗಿ ಜಾತಿ ಲಾಬಿ ಆರಂಭ

ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ. ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...

ಅಗಲಿದ ಸಾಹಿತಿ ಅನಂತ ಮೂರ್ತಿ ಪಂಚಭೂತಗಳಲ್ಲಿ ಲೀನ

ಆ.22ರಂದು ನಿಧನರಾಗಿದ್ದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಸೂರ್ಯ ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ವೇದಘೋಗಳನ್ನು ಪಠಿಸುವ ಮೂಲಕ...

ಸೆ. 12 ರಂದು ಹಜ್ ಯಾತ್ರೆ ಆರಂಭ: ರೋಷನ್ ಬೇಗ್

ರಾಜ್ಯದಿಂದ ಹಜ್ ಯಾತ್ರೆಯು ಆಗಸ್ಟ್ 27 ರಂದು ಮಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ. ಬೆಂಗಳೂರಿನಿಂದ ಆರಂಭವಾಗುವ ಹಜ್ ಯಾತ್ರೆಗೆ ಮುಖ್ಯಮಂತ್ರಿ...

ಪಡಿತರ ಅಕ್ಕಿಯಲ್ಲಿ ಹುಳ ಕಂಡರೆ ಅಧಿಕಾರಿಗಳ ವಿರುದ್ಧ ಕ್ರಮ: ಸಿದ್ದರಾಮಯ್ಯ

ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ...

ಸ್ಪೀಕರ್ ಆರೋಪಕ್ಕೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಕಾರ

ರಾಜ್ಯಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿರುವುದರ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಗೋಡು ತಿಮ್ಮಪ್ಪ, ಹಿಂದಿನ ಸರ್ಕಾರಕ್ಕೂ ಈ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ...

ಜೆಡಿಎಸ್ ತೊರೆಯುವುದಿಲ್ಲ; ಪಕ್ಷ ವಿಲೀನವೂ ಇಲ್ಲ: ಹೆಚ್.ಡಿ.ಕೆ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ-ಸಿದ್ದರಾಮಯ್ಯ

'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...

ಜೆಡಿಎಸ್ ನಲ್ಲಿ ಗೊಂದಲದ ವಾತಾವರಣವಿದೆ- ಹೆಚ್.ಡಿ ದೇವೇಗೌಡ

'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ. ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ. ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...

ಶಿಕಾರಿಪುರ ಕ್ಷೇತ್ರ ಉಪಚುನಾವಣೆ: ಜೆಡಿಎಸ್ ಬೆಂಬಲ ಕೋರಿದ ಕಾಂಗ್ರೆಸ್

ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ...

ಸಿದ್ದರಾಮಯ್ಯರಿಂದ ಭ್ರಷ್ಟರಿಗೆ ಮಣೆ: ಹೆಚ್.ಡಿ.ಕೆ ಆರೋಪ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...

ಕೆಪಿಎಸ್ ಸಿ ನೇಮಕಾತಿ ರದ್ದು: ಸಿದ್ದರಾಮಯ್ಯಗೆ ಹೆಚ್.ಡಿ.ಕೆ 12 ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...

ಕೆ.ಪಿ.ಎಸ್.ಸಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ, ಎ.ಜಿ ರಾಜೀನಾಮೆಗೆ ಹೆಚ್.ಡಿ.ಕೆ ಒತ್ತಾಯ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್...

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಅಕ್ರಮವೆಸಗಿಲ್ಲ: ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...

ಹೆಚ್.ಡಿ.ಕೆ ಭ್ರಷ್ಟಾಚಾರದ ಪರವೋ, ವಿರುದ್ಧವೋ: ಸಿದ್ದರಾಮಯ್ಯ ಪ್ರಶ್ನೆ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟ್ಚಾರದ ಪರವೋ ವಿರುದ್ಧವೋ ಎಮ್ಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ...

ಕೆಪಿಎಸ್ ಸಿ ನೇಮಕಾತಿ ರದ್ದು ಸಮರ್ಥಿಸಿಕೊಂಡ ಸಿದ್ದರಾಮಯ್ಯ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...

ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....

ತಾಕತ್ ಇದ್ದರೆ ಸಿದ್ದರಾಮಯ್ಯ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ: ಅಭ್ಯರ್ಥಿಗಳ ಸವಾಲು

2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited