Untitled Document
Sign Up | Login    
Dynamic website and Portals
  

Related News

ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ ಹೇಳಿಕೆ ಕೊಡುವುದು ಸುಲಭ: ಸೋನಿಯಾಗೆ ಸ್ಮೃತಿ ತಿರುಗೇಟು

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...

ಕ್ಷಮೆ ಯಾಚಿಸುವಂತೆ ವೆಂಕಯ್ಯ ನಾಯ್ಡುಗೆ ವಿಪಕ್ಷಗಳ ಆಗ್ರಹ

ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕ್ಷಮೆಯಾಚಿಸುವಂತೆ ವಿರೋಧಪಕ್ಷಗಳು ಪಟ್ಟು ಹಿಡಿದಿದ್ದು, ಕ್ಷಮೆ ಯಾಚಿಸದೇ ಇದ್ದರೆ ರೈಲ್ವೆ ಬಜೆಟ್ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿವೆ. ವಿರೋಧ ಪಕ್ಷಗಳು ಸದನ ಹಾಳುಮಾಡುವ ಮನಸ್ಥಿತಿಯನ್ನು ಹೊಂದಿವೆ ಎಂದು ವೆಂಕಯ್ಯ ನಾಯ್ಡು...

ಸಿ.ಎಂ ಸಿದ್ದರಾಮಯ್ಯ ದಲಿತರ ಬಗ್ಗೆ ಕಾಳಜಿ ಹೊಂದಿದ್ದಾರೆ: ಮೀರಾ ಕುಮಾರ್

ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ. ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಆಯ್ಕೆ ಅಸಂವಿಧಾನಿಕ: ಕೋರ್ಟ್

'ಜೆಡಿಯು' ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಮಹತ್ವ...

ನಾನು ಏನೂಂತ ತಿಳಿಯಲು ಕಾಗೋಡು ಮತ್ತೊಮ್ಮೆ ಹುಟ್ಟಿ ಬರಬೇಕು: ಜನಾರ್ದನ ಪೂಜಾರಿ

ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಜನಾರ್ದನ ಪೂಜಾರಿ ಯಾರು ಎಂದು ಗೋತ್ತಾಗಬೇಕಾದರೆ ಇನ್ನೊಮ್ಮೆ ಹುಟ್ಟಿ ಬರಬೇಕು. ಬಹುಶಃ ಅವರಿಗೆ ಅರಳು, ಮರಳು ಇರಬೇಕು ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಡುಗಿದ್ದಾರೆ. ಪೂಜಾರಿ ಯಾರೆಂದು ಗೊತ್ತಿಲ್ಲ ಎನ್ನುವ ಕಾಗೋಡು ತಿಮ್ಮಪ್ಪ, ನಾನು ವಕೀಲ...

ವಿಧಾನಸಭಾ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ: ಕೋಲಾಹಲದ ನಡುವೆಯೇ ಕಲಾಪ ಅಂತ್ಯ

ಕಳೆದ 10 ದಿನಗಳಿಂದ ನಡೆಯುತ್ತಿದ್ದ ವಿಧಾನ ಮಂಡಲ ಅಧಿವೇಶನ ಡಿ.20ರಂದು ಮುಕ್ತಾಯಗೊಂಡಿದೆ. ವಿಧಾನಸಭಾ ಕಲಾಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ವಿಧಾನಸಭಾ ಕಲಾಪದ ಕೊನೆಯ ದಿನವೂ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ವಿಧಾಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಳಂಕಿತ...

ಅಧಿವೇಶನ ಸಮಾಧಾನಕರವಾಗಿ ನಡೆಯಲಿಲ್ಲ: ಸ್ಪೀಕರ್ ಕಾಗೋಡು ತಿಮ್ಮಪ್ಪ

'ಬೆಳಗಾವಿ'ಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳು ನಡೆದ ಅಧಿವೇಶನ ಸಮಾಧಾನಕರವಾಗಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನಸಭೆಯ ಕಾರ್ಯಕಲಾಪಗಳು ತೃಪ್ತಿ ತರುವ ನಿಟ್ಟಿನಲ್ಲಿ ಜರುಗಲಿಲ್ಲ ಎಂಬ ನೋವು...

ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನ ಖುರ್ಚಿಯಲ್ಲಿ ಕುಳಿತುಕೊಳ್ಳಲಿರುವ ಖರ್ಗೆ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ. ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...

ವಿಶ್ವಾಸಮತ ಸಾಬೀತು ಪಡಿಸಿದ ಸಿಎಂ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಅಲ್ಪಮತದ ಮೂಲಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ವಿಶ್ವಾಸಮತ ಸಾಬಿತು ಪಡಿಸುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಭಾರೀ ಮುಖಭಂಗವಾದಂತಾಗಿದೆ. ಒಟ್ಟು 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ...

ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ಬದ್ಧ: ಜಯಚಂದ್ರ

ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...

ಸ್ಪೀಕರ್ ಆರೋಪಕ್ಕೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಕಾರ

ರಾಜ್ಯಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿರುವುದರ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಗೋಡು ತಿಮ್ಮಪ್ಪ, ಹಿಂದಿನ ಸರ್ಕಾರಕ್ಕೂ ಈ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ...

ಕಾಂಗ್ರೆಸ್ ಗೆ ಪ್ರತಿಪಕ್ಷ ಸ್ಥಾನ ಇಲ್ಲ: ಸ್ಪೀಕರ್ ಅಧಿಕೃತ ಘೋಷಣೆ

'ಕಾಂಗ್ರೆಸ್' ಗೆ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಆ.19ರಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕಳೆದ ತಿಂಗಳು ಲೋಕಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು. ಮನವಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited