Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...

ಸಿಂಧೂ ನದಿ ಒಪ್ಪಂದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ. ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 18...

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ...

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯರಾಜ್ಯಗಳಲ್ಲಿ ಉಂಟಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ...

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ. ಕಾವೇರಿ ಗಲಭೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದ್ದು, ಪ್ರಕ್ಷುಬ್ದ ವಾತಾವರಣ...

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀ ಕೋರ್ಟ್ ಆದೇಶ ಖಂಡಿಸಿ ರಾಜ್ಯದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.ರಾಜಧಾನಿ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ...

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ...

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ. ಕೆಆರ್ ಎಸ್ ನಿಂದ ನಿನ್ನೆ ರಾತ್ರಿ ಸುಮಾರು 11 ಸಾವಿರ ಕ್ಯೂಸೆಕ್ ನೀರು ಹರಿದಿದ್ದು, ಕಬಿನಿ ಜಲಾಶಯದಿಂದ...

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ...

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ತಮಿಳುನಾಡಿನ ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿದ್ದು, ರೈತರು ತಮಿಳುನಾಡಿನಾದ್ಯಂತ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿವೆ. ಕಾವೇರಿ ನದಿಯಲ್ಲಿ 50 ಟಿಎಂಸಿಗಿಂತಲೂ ನೀರು ಕಡಿಮೆಯಿದ್ದು, ಕರ್ನಾಟಕದ ಜನರಿಗೇ ಕುಡಿಯುವುದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದೆ. ರಾಜ್ಯದಲ್ಲಿ...

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಕೆಹೆಚ್‍ಬಿಯಿಂದ 12,000 ನಿವೇಶನ ಹಂಚಿಕೆಗೆ ಸಿದ್ಧತೆ

ಕರ್ನಾಟಕ ಗೃಹ ಮಂಡಳಿ ಮೂಲಕ ರಾಜ್ಯದಲ್ಲಿ ಒಟ್ಟು 12,000 ನಿವೇಶನಗಳನ್ನು ಹಂಚಿಕೆಗೆ ಸಿದ್ದಪಡಿಸಲಾಗಿದೆ ಹಾಗೂ 2,175 ಎಕರೆ ಭೂಮಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಎಸ್.ಜಿ.ನಂಜಯ್ಯನ ಮಠ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ತಮ್ಮ...

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಕೇಂದ್ರ ಸಂಪುಟ ವಿಸ್ತರಣೆ: ಖಾತೆ ಹಂಚಿಕೆ ಮಾಡಿದ ಪ್ರಧಾನಿ ಮೋದಿ

ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಈ ವೇಳೆ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಮಾನವ ಸಂಪನ್ಮೂಲ ಖಾತೆಯನ್ನು ಸಚಿವೆ ಸ್ಮತಿ ಇರಾನಿ ಅವರಿಂದ ಹಿಂಪಡೆದು ಸಂಪುಟ ದರ್ಜೆಗೆ ಭಡ್ತಿ ಹೊಂದಿದ ಪ್ರಕಾಶ್‌ ಜಾವಡೇಕರ್‌...

ಕಪ್ಪು ಹಣ ವಾಪಸ್ ತರುವ ವಿಚಾರದಲ್ಲಿ ಮಹತ್ವದ ಹೆಜ್ಜೆಯಿಟ್ಟ ಪ್ರಧಾನಿ ಮೋದಿ

ಸ್ವಿಜರ್ಲೆಂಡ್ ನಲ್ಲಿ ಕಪ್ಪು ಹಣದ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಮೂಲಕ ಕಪ್ಪು ಹಣ ವಾಪಸ್ ತರುವ ವಿಚಾರದಲ್ಲಿ ಮೋದಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. ಸ್ವಿಜರ್ಲೆಂಡ್‌ನ‌ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣ ಬಯಲೆಗೆಳೆಯುವ ನಿಟ್ಟಿನಲ್ಲಿ ಸಹಕಾರ ವೃದ್ಧಿಸಲು ಉಭಯ...

2ಜಿ ಹಗರಣದಲ್ಲಿ ಮನಮೋಹನ್ ಸಿಂಗ್ ಪಾತ್ರವಿಲ್ಲ: ಸಿಬಿಐ

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರ ಏನು ಇಲ್ಲ ಎಂದು ವಿಶೇಷ ಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ನಡೆಯುತ್ತಿದ್ದು,...

ಪ್ಯಾರಿಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಪ್ಯಾರಿಸ್ ನಲ್ಲಿ ಎನ್ಆರ್‍ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...

ಕಲ್ಲಿದ್ದಲು ಹಗರಣ: ಮನಮೋಹನ್ ಸಿಂಗ್ ಗೆ ನೀಡಿದ್ದ ಸಮನ್ಸ್ ಗೆ ತಡೆ

ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿ ಗೆ ನೀಡಲಾಗಿದ್ದ ಸಮನ್ಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಿಂಡಾಲ್ಕೊ ಕಂಪೆನಿಯ ಜಂಟಿ ಉದ್ಯಮಕ್ಕೆ ಒಡಿಶಾದ ದ್ವಿತೀಯ ತಲಬಿರಾ ಕಲ್ಲಿದ್ದಲು ನಿಕ್ಷೇಪವನ್ನು ಅಕ್ರಮವಾಗಿ ಹಂಚಿಕೆ ಮಾಡಲಾದ...

ಸೋನಿಯಾ ಗಾಂಧಿ ವಿರುದ್ಧ ಹೆಚ್.ಆರ್.ಭಾರದ್ವಾಜ್‌ ವಾಗ್ದಾಳಿ

ಕರ್ನಾಟಕ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬಳಿಕ ಮೌನಕ್ಕೆ ಶರಣಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ದಿಢೀರನೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2ಜಿ ಸ್ಪೆಕ್ಟ್ರಂ ಹಂಚಿಕೆ ಪ್ರಕರಣದ ವಿಚಾರದಲ್ಲಿ ತಮ್ಮ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ...

ಕಲ್ಲಿದ್ದಲು ಹಂಚಿಕೆ ಹಗರಣ: ಮೇಲ್ಮನವಿ ಸಲ್ಲಿಸಲು ಡಾ.ಸಿಂಗ್ ನಿರ್ಧಾರ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ಜಾರಿಯಾಗಿರುವ ಸಮನ್ಸ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ. ಹಿಂಡಾಲ್ಕೊ ಕಂಪೆನಿಯನ್ನು ಒಳಗೊಂಡ ಕಲ್ಲಿದ್ದಲು ಹಂಚಿಕೆ ಹಗರಣದಲ್ಲಿ ಓರ್ವ ಆರೋಪಿಯಾಗಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ವಿಶೇಷ ಸಿಬಿಐ...

ಕಲ್ಲಿದ್ದಲು, ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿದ ಲಾಭ

'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ. ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...

ಕೇಜ್ರಿವಾಲ್ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ

ದೆಹಲಿಯ 8ನೇ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಈ ಕುರಿತು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿಯ ಮೊದಲ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಅವರು ತಮ್ಮ...

ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ: ಚೆಲುವರಾಯಸ್ವಾಮಿ

ಬಿಡಿಎ ಸೈಟ್ ಹಂಚಿಕೆ ವಿಚಾರ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಕಾರಣವಾಯಿತು. ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ವಿಧಾಸಭಾ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಸೈಟ್ ಗಳನ್ನು ಮಾರಾಟ ಆಡುವುದು ಬಿಡಿಎ ಕೆಲಸ. ಆದರೆ ಬಿಡಿಎ...

ಕಲ್ಲಿದ್ದಲು ಹಗರಣ: ಪ್ರಗತಿ ವರದಿ ವಿಶೇಷ ಕೋರ್ಟಿಗೆ ಸಲ್ಲಿಸಿದ ಸಿಬಿಐ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದ ಪ್ರಗತಿ ವರದಿಯನ್ನು ಸಿಬಿಐ, ಮಂಗಳವಾರ ಮುಚ್ಚಿದ ಲಕೋಟೆಯಲ್ಲಿ ಇರಿಸಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪಾರೇಖ್‌ ಮತ್ತು ಇತರ ಕೆಲವರನ್ನು ಒಳಗೊಂಡ ಕಲ್ಲಿದ್ದಲು ಹಗರಣಕ್ಕೆ...

ಡಿಕೆಶಿ ವಿರುದ್ಧ ತನಿಖೆಗೆ ದೊರೆಸ್ವಾಮಿ ಆಗ್ರಹ

ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಸುಮಾರು ಮೂರು ಸಾವಿರ ಕೋಟಿ ರೂ.ಗಳಷ್ಟು ಅವ್ಯವಹಾರ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಭೂ ಕಬಳಿಕೆದಾರರ ವಿರೋಧಿ ಹೋರಾಟ ಸಮಿತಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಸಚಿವ ಮಹದೇವ ಪ್ರಸಾದ್ ಅವರ...

ಕಲ್ಲಿದ್ದಲು ತನಿಖೆ: ಮಾಜಿ ಪ್ರಧಾನಿ ಸಿಂಗ್ ವಿಚಾರಣೆ ಮಾಡಿಲ್ಲ ಏಕೆ-ಕೋರ್ಟ್

'ಕಲ್ಲಿದ್ದಲು ನಿಕ್ಷೇಪ ಹಂಚಿಕೆ' ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ದೆಹಲಿ ವಿಶೇಷ ನ್ಯಾಯಾಲಯ ಸಿಬಿಐನ್ನು ಪ್ರಶ್ನಿಸಿದೆ. ಯುಪಿಎ ಸರ್ಕಾರದ ಬಹುಕೋಟಿ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಉದ್ಯಮಿ ಕೆ.ಎಂ....

ಜಾರ್ಖಂಡ್ ನ ಎ.ಜೆ.ಎಸ್.ಯುಮ್ ಎಲ್.ಜೆ.ಪಿ ಎನ್.ಡಿ.ಎ ಮೈತ್ರಿಕೂಟದಲ್ಲೇ ಉಳಿಯಲಿವೆ:ಬಿಜೆಪಿ

'ಜಾರ್ಖಂಡ್' ನ ಪ್ರಾದೇಶಿಕ ಪಕ್ಷಗಳಾದ ಆಲ್ ಜಾರ್ಕಂಡ್ ಸ್ಟೂಡೆಂಟ್ಸ್ ಯೂನಿಯನ್ಸ್(ಎ.ಜೆ.ಎಸ್.ಯು) ಹಾಗೂ ಲೋಕ ಜನಶಕ್ತಿ ಎನ್.ಡಿ.ಎ ಮಿತ್ರ ಪಕ್ಷಗಳಾಗಿ ಮುಂದುವರೆಯಲಿವೆ ಎಂದು ಬಿಜೆಪಿ ತಿಳಿಸಿದೆ. ನ.12ರಂದು ಜಾರ್ಖಂಡ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್,...

ಕೇಂದ್ರ ಸಂಪುಟ ವಿಸ್ತರಣೆ: ಸಚಿವರಿಗೆ ಖಾತೆ ಹಂಚಿಕೆ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜತೆ ಹಲವಾರು ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ. ರೈಲ್ವೆ ಖಾತೆಯನ್ನು ನಿರ್ವಹಿಸುತ್ತಿದ್ದ ಡಿ.ವಿ.ಸದಾನಂದಗೌಡ ಅವರ ಖಾತೆ ಬದಲಾವಣೆ ಮಾಡಲಾಗಿದ್ದು,...

ಕೃಷ್ಣಾನದಿ ನೀರು ಹಂಚಿಕೆ ವಿಚಾರ: ಚಂದ್ರಬಾಬು ನಾಯ್ಡುರಿಂದ ಸಿದ್ದರಾಮಯ್ಯ ಭೇಟಿ

ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...

ಕನ್ನಿಮೋಳಿ ವಿರುದ್ಧದ ಬಂಧನ ವಾರಂಟ್ ರದ್ದು

ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿಯವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಿಮೋಳಿ ನ.10ರಂದು ದೆಹಲಿಯ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕನ್ನಿಮೋಳಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ....

ಮೋದಿ ಸಚಿವ ಸಂಪುಟ ತೊರೆಯುವುದಿಲ್ಲ- ಶಿವಸೇನೆ ಮುಖಂಡ ಅನಂತ್ ಗೀತೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಂಪುಟ ತೊರೆಯುವುದಿಲ್ಲ ಎಂದು ಶಿವಸೇನೆ ಮುಖಂಡ, ಕೇಂದ್ರ ಸಚಿವ ಅನಂತ್ ಗೀತೆ ಸ್ಪಷ್ಟಪಡಿಸಿದ್ದಾರೆ. ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು ಆದರೆ ಎಂದಿಗೂ ಶಿವಸೇನೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಪಟ್ಟು ಸಡಿಲಿಸಿದ ಬಿಜೆಪಿ-ಶಿವಸೇನೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಸೀಟು ಹಂಚಿಕೆ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆಯಾದರೂ ಬಿಜೆಪಿ ಹಾಗೂ ಶಿವಸೇನೆ ಎರಡೂ ಪಕ್ಷಗಳು ಕೊಂಚ ತಮ್ಮ ಪಟ್ಟು ಸಡಿಲಿಸಿವೆ. ಬಿಜೆಪಿ ಮೊದಲಿನ 135 ಸ್ಥಾನದ ಪಟ್ಟು ಸಡಿಲಿಸಿ 130 ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

ಬಿಜೆಪಿ-ಶಿವಸೇನೆ ನಡುವೆ ಬಗೆಹರಿದ ಸೀಟು ಹಂಚಿಕೆ ಬಿಕ್ಕಟ್ಟು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಉಭಯ ಪಕ್ಷಗಳ ನಾಯಕರು ನಡೆಸಿದ ಮಾತುಕತೆ ಸಫಲವಾಗಿದೆ. ಬಿಜೆಪಿ-ಶಿವಸೇನೆ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಯಲ್ಲಿ ಮೈತ್ರಿ ಮುಂದುವರೆಸಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. 288 ವಿಧಾನಸಭಾ...

ಸೀಟು ಹಂಚಿಕೆ ಬಗ್ಗೆ ಅಮಿತ್ ಶಾರಿಂದ ಕರೆ ಬಂದಿಲ್ಲ: ಉದ್ಧವ್ ಠಾಕ್ರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಕಗ್ಗಂಟಾಗಿಯೇ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಪಟ್ಟು ಸಡಿಲಿಸಿ, ಮೈತ್ರಿ ಉಳಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮನವಿ ಮಾಡಿದ್ದಾರೆ ಎಂಬ ಸುದ್ಧಿಯನ್ನು ಉದ್ಧವ್ ಠಾಕ್ರೆ ನಿರಾಕರಿಸಿದ್ದಾರೆ. ಸೀಟು ಹಂಚಿಕೆ ಗೊಂದಲಕ್ಕೆ...

ಮಹಾ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಮುಂದುವರೆದ ಸೀಟು ಹಂಚಿಕೆ ಬಿಕ್ಕಟ್ಟು

ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ. ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...

ಮಹಾರಾಷ್ಟ್ರ ಚುನಾವಣೆ: ಬಿಜೆಪಿಗೆ ಉದ್ಧವ್ ಠಾಕ್ರೆ ಪ್ರಬಲ ಸಂದೇಶ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ಸೀಟು ಹಂಚಿಕೆ ಬಿಕ್ಕಟ್ಟು ಮುಂದುವರೆದಿದೆ. ಈ ನಡುವೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಶಿವಸೇನೆ ಮಹತ್ವದ ಸಭೆ ನಡೆಯುತ್ತಿದ್ದು, ಈ ವೇಳೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮಾತುಕತೆಗೆ ಒಪ್ಪಿದ ಬಿಜೆಪಿ-ಶಿವಸೇನೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ. ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ. ತನ್ನ...

ವೈದ್ಯಕೀಯ ದಂತ ವೈದ್ಯಕೀಯ ಸಿಇಟಿ: 3 ನೇ ಸುತ್ತಿನ ಸೀಟು ಹಂಚಿಕೆ

ಹಂಚಿಕೆಯಾಗದೇ ಉಳಿದಿರುವ 115 ವೈದ್ಯಕೀಯ ಮತ್ತು 12 ದಂತ ವೈದ್ಯಕೀಯ ಸಿಇಟಿ ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳು ರದ್ದುಪಡಿಸಿದ, ಕಾಲೇಜಿಗೆ ಪ್ರವೇಶ ಪಡೆಯದೇ ಉಳಿದಿರುವ 18 ವೈದ್ಯಕೀಯ ಮತ್ತು 230 ದಂತ ವೈದ್ಯಕೀಯ ಸೀಟು ಸೇರಿದಂತೆ ಒಟ್ಟು 133...

ಉಪಚುನಾವಣೆ ಫಲಿತಾಂಶ: ಶಿವಸೇನೆಯಿಂದ ಬಿಜೆಪಿಗೆ ನೀತಿ ಪಾಠ

ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ನಲ್ಲಿ ನಡೆದ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಡಿ.ಎ ಮೈತ್ರಿ ಪಕ್ಷ ಶಿವಸೇನೆ,ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಪಾಠ ಕಲಿಯಬೇಕು ಎಂದು ಎಚ್ಚರಿಸಿದೆ. ಮುಂಬೈ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸನಿಹದಲ್ಲೇ...

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ: ಸುಪ್ರೀಂ ಕೋರ್ಟ್

ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ, 1993ರಿಂದ ಈ ವರೆಗಿನ ಎಲ್ಲಾ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಕಲ್ಲಿದ್ದಲು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಆರ್.ಎಂ.ಲೋಧಾ ನೇತೃತ್ವದ ತ್ರಿಸದಸ್ಯ ಪೀಠ,...

ಸಿಇಟಿ 2014 ಇಂಜಿನಿಯರಿಂಗ್ ಸೀಟು ಹಂಚಿಕೆ ಪೂರ್ಣ

2014-15 ನೇ ಸಾಲಿನಲ್ಲಿ ಸಿಇಟಿ ಮುಖಾಂತರ ಬಿಇ ಪ್ರಥಮ ವರ್ಷದ ಸೀಟುಗಳನ್ನು ನಿಯಮಾನುಸಾರ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ತಿಯಾಗದೇ ಉಳಿದ ಸೀಟುಗಳನ್ನು ಸರ್ಕಾರದ ಸೂಚನೆಯಂತೆ ಆಯಾ ಕಾಲೇಜುಗಳಿಗೆ ಹಿಂತಿರುಗಿಸಿದೆ. ಆಯಾ ಸರ್ಕಾರೀ ಕಾಲೇಜು ಪ್ರಾಂಶುಪಾಲರು 15.08.2014...

ಸಿಇಟಿ-2014 ಮತ್ತೊಂದು ಸುತ್ತಿನ ಸೀಟು ಹಂಚಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2014 ರ, ಎಂಜಿನಿಯರಿಂಗ್ ಮತ್ತು ಅರ್ಕಿಟೆಕ್ಚರ್ ಸೀಟುಗಳ ಮತ್ತೊಂದು ಸುತ್ತಿನ ಹಂಚಿಕೆಯನ್ನು ನಡೆಸಲಿದೆ. ಸೀಟ್ ಮ್ಯಾಟ್ರಿಕ್ಸ್ ವಿವರಗಳು ಆಗಸ್ಟ್ 8 ರಂದು ಮಧ್ಯಾಹ್ನ 1 ಗಂಟೆಯಿಂದ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತವೆ. ಅದೇ ದಿನ ಸಂಜೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited