Untitled Document
Sign Up | Login    
Dynamic website and Portals
  

Related News

ಕಾಶ್ಮೀರದಲ್ಲಿ ಮತ್ತೆ ಘರ್ಷಣೆ: ಇಬ್ಬರು ನಾಗರಿಕರ ಸಾವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅನಂತ್‍ನಾಗ್ ಜಿಲ್ಲೆಯ ಬೊಟೆಂಗೋ ಪ್ರದೇಶದಲ್ಲಿ ಪ್ರತಿಭಟನಾಕಾರರು ಸೇನಾಪದೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ...

ಪಾಕ್ ಜತೆ ಐದು ಅಜೆಂಡಾ ಕುರಿತು ಚರ್ಚಿಸಲು ಭಾರತ ಸಿದ್ಧವಿದೆ: ವಿಕಾಸ್ ಸ್ವರೂಪ್

ಪಾಕಿಸ್ತಾನದ ಜತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಸುವುದು ಈಗ ಪಾಕಿಸ್ತಾನದ ನಿರ್ಧಾರವನ್ನು ಅವಲಂಬಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್‌.ಜೈಶಂಕರ್‌ ಪಾಕಿಸ್ತಾನಕ್ಕೆ ತಿಳಿಸಿದ್ದಾರೆ ಎಂದು ವಿದೇಶಾಂಗ ವಕ್ತಾರ ವಿಕಾಸ್‌ ಸ್ವರೂಪ್‌ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ, ಜಮ್ಮು ಮತ್ತು ಕಾಶ್ಮೀರದ ಭಾಗಗಳ ಅಕ್ರಮ ಸ್ವಾಧೀನ...

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ; ಐದು ಜನರ ಸಾವು: ಹಲವರಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಲ್ಲಿನ ಬುಡಗಾಂವ್ ಜಿಲ್ಲೆಯ ಮಾಗಾಂ ಪ್ರದೇಶದಲ್ಲಿ ಪ್ರತಿಭಟನೆ ಆರಂಭಿಸಿದ ಪ್ರತ್ಯೇಕತಾವಾದಿಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿ...

ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗ: ಪ್ರಧಾನಿ

ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ಭದ್ರತೆ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಉಗ್ರ ಬುರ್ಹಾನ್ ವನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸತ್...

ಕಾಶ್ಮೀರ ಹಿಂಸಾಚಾರದ ನೇತೃತ್ವ ವಹಿಸಿದ್ದು ಲಷ್ಕರ್ ಸಂಘಟನೆ: ಹಫೀಜ್ ಸಯೀದ್

ಹಿಜ್ಬುಲ್‌ ಮುಜಾಹಿದ್ದೀನ್‌ ಕಮಾಂಡರ್‌ ಬುರ್ಹಾನ್‌ ವಾನಿ ಹತ್ಯೆಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ನಡೆದ ಹಿಂಸಾಚಾರದ ನೇತೃತ್ವವನ್ನು ವಹಿಸಿದ್ದು ನಿಷೇಧಿತ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಜಮಾತ್‌ ಉದ್‌ ದಾವಾ ಮುಖ್ಯಸ್ಥ ಹಫೀಜ್‌ ಸಯೀದ್‌ ಹೇಳಿದ್ದಾನೆ. ಪಾಕಿಸ್ತಾನದ ಫೈಸಲಾಬಾದ್ ನಲ್ಲಿ ರ್ಯಾಲಿಯೊಂದನ್ನು...

ಕಾಶ್ಮೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ರಾಜನಾಥ್ ಸಿಂಗ್

ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದ ಹಿಂಸಾಚಾರ ಹಾಗೂ ನಿರಂತರ ಕರ್ಫ್ಯೂ ಹೇರಿದ್ದರಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಅವಲೋಕನ ನಡೆಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಹತ್ಯೆ ನಂತರ...

ಕಾಶ್ಮೀರದಲ್ಲಿನ ಹಿಂಸಾಚಾರದ ಹಿಂದೆ ಪಾಕ್ ಕೈವಾಡವಿದೆ: ರಾಜನಾಥ್ ಸಿಂಗ್

ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ನೇರ ಹೊಣೆ. ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪಾಕ್ ಹಣ ನೀಡುತ್ತಿದೆ ಎಂದು ಕೆಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರ ಭಾರತ ದೇಶದ ಕಿರೀಟ ಇದ್ದಂತೆ. ಹಾಗಾಗಿ ಯಾವುದೇ ಪರಿಸ್ಥಿತಿ ಎದುರಿಸಲು ಕೇಂದ್ರ...

ಗಲಭೆ ಹಿನ್ನಲೆಯಲ್ಲಿ ಶ್ರೀನಗರದಿಂದ ಸ್ಥಳಾಂತರಗೊಳ್ಳುತ್ತಿರುವ ಕಾಶ್ಮೀರಿ ಪಂಡಿತರು

ಉಗ್ರ ಬುರ್ಹಾನ್ ವನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ. ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ...

ಇಂದಿನಿಂದ ಸಂಸತ್ ನ ಮುಂಗಾರು ಅಧಿವೇಶನ: ಜಿಎಸ್‌ಟಿ ಮಸೂದೆ ಅಂಗೀಕಾರ ಸಾಧ್ಯತೆ

ಇಂದಿನಿಂದ ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ. ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರ, ಎನ್ ಎಸ್ ಜಿ ಸದಸ್ಯತ್ವ ಪಡೆಯುವಲ್ಲಿ ಕೇಂದ್ರದ ವೈಫಲ್ಯ, ಕೆಲವು ರಾಜ್ಯಗಳಲ್ಲಿನ ಪ್ರವಾಹದ ಬಗ್ಗೆ, ಕೃಷಿ ಸಮಸ್ಯೆಗಳು ಮತ್ತು ಭಯೋತ್ಪಾದನೆ,...

ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಗಲಭೆ: ಅಮರನಾಥ್ ಯಾತ್ರೆ ಮತ್ತೆ ಸ್ಥಗಿತ

ಕಾಶ್ಮೀರದಲ್ಲಿ ಉಗ್ರ ಬುರ್ಹಾನ್ ವಾನಿ ಹತ್ಯೆಯಿಂದಾಗಿ ಉಂಟಾಗಿರುವ ಗಲಭೆ ವಾತಾವರಣ ಇನ್ನೂ ಅಮರನಾಥ್ ಯಾತ್ರೆ ಮತ್ತೊಮ್ಮೆ ಸ್ಥಗಿತಗೊಂಡಿದೆ. ಅನಂತ್ ನಾಗ್ ಜಿಲ್ಲೆಯಲ್ಲಿ ಹೊಸದೊಂದು ಗಲಭೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಎರಡನೇ ಬಾರಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ...

ಪೊಲೀಸ್ ಗನ್ ಗಳನ್ನೇ ಹೊತ್ತೊಯ್ದ ಕಾಶ್ಮೀರಿ ಯುವಕರ ಗುಂಪು

ಉಗ್ರ ಬುರ್ಹಾನ್ ವಾನಿ ಹತ್ಯೆ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕಾಶ್ಮೀರಿ ಯುವಕರ ಗುಂಪೊಂದು 70 ಪೊಲೀಸ್ ಗನ್ ಗಳನ್ನು ಲೂಟಿ ಮಾಡಿದೆ. ಇಲ್ಲಿನ ಕುಲ್‌ ಗಾಂ ನಲ್ಲಿನ ದಮ್‌ಹಾಲ್‌ ಹಾಂಜಿ ಪೋರಾ ಪೊಲೀಸ್‌ ಠಾಣೆಗೆ ನುಗ್ಗಿದ ಕಾಶ್ಮೀರಿ ಯುವಕರ ಗುಂಪೊಂದು ಸುಮಾರು...

ಅಮರನಾಥ್ ಯಾತ್ರಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪರಿಣಾಮ ಕರ್ನಾಟಕದಿಂದ ಯಾತ್ರೆಗೆ ಹೊರಟಿದ್ದ ಇನ್ನೂರಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಅವರೆಲ್ಲರೂ ಸುರಕ್ಶಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಯಾತ್ರಾರ್ಥಿಗರು ಸರ್ಕಾರದ ಸಹಾಯ ಕೇಳಿದ ಹಿನ್ನಲೆಯಲ್ಲಿ...

ಉಗ್ರ ಬರ್ಹಾನ್ ವಾನಿ ಹತ್ಯೆ: ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ

ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಯ ಬುರ್ಹಾನ್‌ ವಾನಿಯನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವಾನಿ ಪರವಾಗಿ ಬೀದಿಗಿಳಿ ದಿರುವ ಅಪಾರ ಸಂಖ್ಯೆಯ ಜನರು ಕಾಶ್ಮೀರದಾದ್ಯಂತ ಹಿಂಸಾ ಚಾರ ನಡೆಸಿದ್ದಾರೆ. ಮೂರು ಪೊಲೀಸ್‌ ಕಟ್ಟಡ ಸೇರಿ ಹಲವಾರು ಬಿಲ್ಡಿಂಗ್‌ಗಳಿಗೆ...

ಪಟೇಲ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹ: ಹಿಂಸಾಚಾರಕ್ಕಿಳಿದ ಪ್ರತಿಭಟನೆ

ಹಾರ್ದಿಕ್ ಪಟೇಲ್ ಬಂಧನದ ನಂತರ ತಣ್ಣಗಾಗಿದ್ದ ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಗುಜರಾತ್ ನಲ್ಲಿ ಮತ್ತೆ ಭುಗಿಲೆದ್ದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ನಡೆಸಲಾಗಿದ್ದ ಪ್ರತಿಭಟನೆ ವೇಳೆ ಹಾರ್ದಿಕ್ ಪಟೇಲ್ ಹಾಗೂ ಇನ್ನಿತರೆ ನಾಯಕರನ್ನು ಪೊಲೀಸರು...

ಹಿಂಸಾಚಾರ ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ಮೋದಿ

ಹಿಂಸಾಚಾರ ಯಾವುದೇ ಸಮಸ್ಯೆಗಳಿಗೂ ಪರಿಹಾರವಲ್ಲ. ನಕ್ಸಲರು ಮಕ್ಕಳಿಗೆ ಬಂದೂಕು ಕೊಡುತ್ತಿದ್ದರು, ಆದರೆ ಸರ್ಕಾರ ಅವರ ಕೈಗಳಿಗೆ ಪೆನ್ ನೀಡಿದೆ. ಆ ನಿಟ್ಟಿನಲ್ಲಿ ಛತ್ತೀಸ್ ಗಢದಲ್ಲೂ ನಕ್ಸಲ್ ಸಮಸ್ಯೆ ಕಡಿಮೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸವ್ಯಕ್ತಪಡಿಸಿದ್ದಾರೆ. ಛತ್ತೀಸ್ ಗಢದ ನಕ್ಸಲ್ ಪೀಡಿತ...

ಉಗ್ರವಾದ ನಿಲ್ಲಿಸಿದರೆ ಮಾತ್ರ ಮಾತುಕತೆ ಸಾಧ್ಯ: ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

'ಭಯೋತ್ಪದನೆ' ಹಾಗೂ ಹಿಂಸಾಚಾರ ರಹಿತ ವಾತಾವರಣದಲ್ಲಿ ಮಾತ್ರ ಭಾರತ-ಪಾಕಿಸ್ತಾನ ನಡುವೆ ಇರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಶುಭಾಷಯ ತಿಳಿಸಿ...

ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಉಗ್ರರ ಚಟುವಟಿಕೆ ಹೆಚ್ಚಿದೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಗ್ರರ ಚಟುವಟಿಕೆಗಳು ಹೆಚ್ಚಾಗತೊಡಗಿವೆ ಎಂಬ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಜಾರ್ಖಂಡ್‌ನ ರಾಮ್‌ಗಡದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ಕಳೆದ 10 ವರ್ಷಗಳ ಕಾಲ...

ವಿವಾದಿತ ದೇವಮಾನವ ರಾಮ್ ಪಾಲ್ ಬಂಧನ

15 ಸಾವಿರಕ್ಕೂ ಹೆಚ್ಚು ಸ್ತ್ರೀಯರನ್ನು ತಡೆಗೋಡೆಯಾಗಿಟ್ಟುಕೊಂಡು ಬಂಧನದಿಂದ ಪಾರಾಗಲು ಯತ್ನಿಸಿದ್ದ ಹರ್ಯಾಣದ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್‌ನನ್ನು ಬಂಧಿಸುವಲ್ಲಿ ಹರ್ಯಾಣ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ನ.19 ರಾತ್ರಿ 9ರ ವೇಳೆಗೆ ಬಾಬಾ ರಾಮ್ ಪಾಲ್ ನನ್ನು ಆಶ್ರಮದಲ್ಲಿ ಬಂಧಿಸಲಾಗಿದೆ. ನ್ಯಾಯಾಂಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited