Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ...

ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿ: ಸಿಎಂಗೆ ಗೌಡರ ಸಲಹೆ

ತಮಿಳುನಾಡಿಗೆ ನೀರು ಬಿಡದಿರಲು ದೃಢ ನಿರ್ಧಾರ ತೆಗೆದುಕೊಳ್ಳಿ. ರಾಜ್ಯದಲ್ಲಿ ಮೊದಲು ಕುಡಿಯುವ ನೀರಿಗೆ ಆದ್ಯತೆಕೊಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ನೀಡಿರುವ ತೀರ್ಪು...

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ: ದೇವೇಗೌಡ

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ. ಇಡೀ ಕರ್ನಾಟಕದಲ್ಲಿ ಅಂತಹವರು ಯಾರೂ ಸಿಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾನು ದೇಶದ ಪ್ರಧಾನಿಯಾಗಿದ್ದು ಆಕಸ್ಮಿಕ....

ದೇವೇಗೌಡ-ಪ್ರಧಾನಿ ಮೋದಿ ಭೇಟಿ: ಕೃಷಿ ಬೆಳವಣಿಗೆಗೆ ಒತ್ತು ನೀಡುವಂತೆ ಸಲಹೆ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ಭೇಟಿ ಬಗ್ಗೆ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದು, ಮಾತುಕತೆ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ತಿಳಿಸಿದ್ದಾರೆ. ತಮ್ಮ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂದಿನ ಆಡಳಿತ...

ದೇವೇಗೌಡರಿಗೆ ಚಾಯ್ ಪೆ ಚರ್ಚಾಗೆ ಪ್ರಧಾನಿ ಮೋದಿ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ’ಚಾಯ್‌ ಪೆ ಚರ್ಚಾ'ಗೆ ಆಹ್ವಾನ ನೀಡಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಜತೆ ಚಹಾಕೂಟ ನಡೆಸಿದ್ದ ನರೇಂದ್ರ ಮೋದಿ ಇದೀಗ ಗೌಡರಿಗೂ ಆಹ್ವಾನ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ದೇವೇಗೌಡರೇ ಖಚಿತಪಡಿಸಿದ್ದು, ’ಪ್ರಧಾನಿ...

ರಾಜಕೀಯದಲ್ಲಿ ನನ್ನನ್ನು ವಿಲನ್‌ ನಂತೆ ಚಿತ್ರಿಸಿದರು: ದೇವೇಗೌಡ

ರಾಜಕೀಯವಾಗಿ ತಮ್ಮಷ್ಟು ಪೆಟ್ಟು ತಿಂದ ರಾಜಕಾರಣಿ ಮತ್ತೂಬ್ಬರಿರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ. ಅಲ್ಲದೆ, ರಾಜಕೀಯದಲ್ಲಿ ತಮ್ಮನ್ನು ವಿಲನ್‌ ಆಗಿಯೇ ಹೆಚ್ಚು ಚಿತ್ರಿಸಲಾಯಿತು ಎಂದು ಕಿಡಿಕಾರಿದ್ದಾರೆ. ಹಾಸನದಲ್ಲಿ ನಡೆದ ಪತ್ರಕರ್ತರ 32ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,...

ನಾವು ಬೆಳೆಸಿದವರೇ ಪಕ್ಷಕ್ಕೆ ಮುಳುವಾಗಿದ್ದಾರೆ: ದೇವೇಗೌಡ

ನಾವು ಬೆಳೆದವರೇ ಜೆಡಿಎಸ್ ಗೆ ಮುಳುವಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜತೆ ಇದ್ದು ಬೆಳೆದು ಈಗ ಬೇರೆ ಮನೆಗೆ...

ಹೆಚ್ ಡಿಡಿ ಬಿಪಿಎಲ್ ಕಾರ್ಡ್ ದಾರರಂತೆ ವರ್ತಿಸುತ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್

ಹೆಚ್ ಡಿ ದೇವೇಗೌಡ ಕುಟುಂಬದವರು ಬಿಪಿಎಲ್ ಕಾರ್ಡ್ ಹೊಂದಿರುವವರಂತೆ ಆಡುತ್ತಿದ್ದಾರೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಛೇರಿ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ವಿರುದ್ಧ ತೀವ್ರ ವಾಗ್ದಾಳಿ...

ನೈಸ್ ಭೂ ಒತ್ತುವರಿ ಆರೋಪ: ತನಿಖೆಗೆ ಸಿದ್ಧ-ಡಿ.ಕೆ.ಶಿವಕುಮಾರ್

ನೈಸ್ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೆಗೌಡರು ತಮ್ಮ ವಿರುದ್ದ ಮಾಡಿರುವ ಆರೋಪಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತ ಯಾವುದೇ ತನಿಖೆಗೂ ತಾವು ಸಿದ್ದ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೆಗೌಡರು ತಮ್ಮ...

ನೈಸ್ ಅಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ: ದೇವೇಗೌಡ

ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...

ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾಯಿಸಿ: ದೇವೇಗೌಡ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾವಣೆ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಯಲಲಿತಾ ಪ್ರಕರಣವನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ ಎಂದರು. ನಿತ್ಯ...

ಜೆಡಿಎಸ್ ಕೋರ್ ಕಮಿಟಿ 2-3ದಿನಗಳಲ್ಲಿ ರಚನೆ: ಹೆಚ್.ಡಿ.ಕೆ

ಜೆಡಿಎಸ್ ನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು 2-3ದಿನಗಳಲ್ಲಿ ಕೋರ್ ಕಮಿಟಿ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ...

ಜೆಡಿಎಸ್ ನಲ್ಲಿ ಹಣವಿಲ್ಲ: ಹೆಚ್.ಡಿ.ದೇವೇಗೌಡ

ನನಗೆ ರಾಜಕೀಯ ಅನುಭವವಿಲ್ಲ, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಪಕ್ಷದ ಕಛೇರಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದರು. ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited