Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...

ಸಚಿವ ಸ್ಥಾನ ಸಿಗದಿದ್ದರೆ ರಾಜಿನಾಮ: ಶಾಸಕರ ಬೆದರಿಕೆ

ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ. ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಸಿ.ಎಂ ಸಿದ್ದರಾಮಯ್ಯ

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ...

ಸಿ.ಎಂ ಗೆ ಹೈಕಮಾಂಡ್ ತರಾಟೆ: ರವಿ ಸಾವು ಪ್ರಕರಣದ ಬಗ್ಗೆ ಸಿಬಿಐ ತನಿಖೆ ಸಾಧ್ಯತೆ

ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...

ಎಐಸಿಸಿ ಅಧಿವೇಶನದವರೆಗೆ ಸಂಪುಟ ಪುನಾರಚನೆ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ. ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...

ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನ ಸಾಧ್ಯತೆ

ಹಲವಾರು ಕಾರ್ಯಕರ್ತರು ಹಾಗೂ ಮುಖಂಡರ ಬೇಡಿಕೆಗೆ ಕೊನೆಗೂ ಮಣಿಯಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌, ಪ್ರಿಯಾಂಕಾ ಗಾಂಧಿ ಅವರಿಗೆ ಶೀಘ್ರದಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಲು ಕಳೆದ 3 ತಿಂಗಳಿನಿಂದ ಉಪಾಧ್ಯಕ್ಷ ರಾಹುಲ್‌...

ಸರ್ಕಾರದ ವಿರುದ್ಧ ಹೈಕಮಾಂಡ್‌ ಗೆ ಪರಮೇಶ್ವರ್ ದೂರು

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್‌ ಗೆ ದೂರು ನೀಡಿದ್ದಾರೆ. ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...

ನನಗೂ ಸಿಎಂ ಆಗುವ ಅರ್ಹತೆಯಿದೆ: ಪರಮೇಶ್ವರ್

ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ಬಿಜೆಪಿ ಆಡಳಿತದಲ್ಲಿದ್ದಿದ್ದರೆ ರಾಜ್ಯದ ಜನತೆ ಕೈಗೆ ತಟ್ಟೆ ಕೊಡುತ್ತಿದ್ದರು: ಖಾದರ್

ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ: ಕುಮಾರಸ್ವಾಮಿ

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...

ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೆ ಸ್ಥಾನ ನೀಡಿ: ದಿಗ್ವಿಜಯ್ ಸೂಚನೆ

ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...

ನಿಗಮ ಮಂಡಳಿ ನೇಮಕಾತಿ ವಿಚಾರ: ಅಧ್ಯಕ್ಷಗಿರಿನೇ ಬೇಕಂದ್ರೆ ನಾನೆಲ್ಲಿಂದ ತರ್ಲಿ-ಸಿಎಂ

ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲಿರುವ ಬಿಜೆಪಿ

'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ...

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಾರ್ತಿ ಚಿದಂಬರಂ ಕಿಡಿ

ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್‌ನಲ್ಲಿ ಬೇರೂರಿರುವ ಹೈಕಮಾಂಡ್‌ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್‌ ಅವರು ಹೊಸ...

ಮಹಾ ಸಿ.ಎಂ ದೇವೇಂದ್ರ ಫಡ್ನವೀಸ್ ಗೆ ಸ್ವಂತ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವಿಲ್ಲ: ಕಾಂಗ್ರೆಸ್

'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸ್ವಂತ ನಿರ್ಧಾರ ಕೈಗೊಂಡು ಸರ್ಕಾರ ನಡೆಸಲು ಸಾಧ್ಯವಾಗುವುದಿಲ್ಲ, ಅವರೂ ಕಾಂಗ್ರೆಸ್ ನಾಯಕರಂತೆಯೇ ಹೈಕಮಾಂಡ್ ಒತ್ತಡಕ್ಕೊಳಗಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ನಾರಾಯಣ್ ರಾಣೆ ಹೇಳಿದ್ದಾರೆ. ಆಡಾಳಿತದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೂ ಸ್ವಂತ ನಿರ್ಧಾರ...

ಪಕ್ಷದ ಬಗ್ಗೆ ಕಾಂಗ್ರೆಸ್ಸಿಗರಿಗೆ ಜಿಗುಪ್ಸೆ: ವರಿಷ್ಠರ ವಿರುದ್ಧ ಕಾರ್ತಿ ಚಿದಂಬರಂ ಗರಂ

'ಕಾಂಗ್ರೆಸ್' ನಲ್ಲಿ ಬದಲಾವಣೆ ಪರ್ವ ಸ್ಪಷ್ಟವಾಗಿ ಕಾಣುತ್ತಿದೆ. ಇಷ್ಟು ದಿನ ರಾಜ್ಯ ಕಾಂಗ್ರೆಸ್ಸಿಗರನ್ನು ಹೈಕಮಾಂಡ್ ನಿಯಂತ್ರಣದಲ್ಲಿಟ್ಟುಕೊಳ್ಳುತ್ತಿತ್ತು. ಆದರೆ ಮೇ 2014ರ ಲೋಕಸಭಾ ಚುನಾವಣೆ ಹಾಗೂ ಆ ನಂತರದ ವಿಧಾನಸಭಾ ಚುನಾವಣೆಗಳ ಸರಣಿ ಸೋಲಿನ ಪರಿಣಾಮ ಇದೀಗ ರಾಜ್ಯ ಕಾಂಗ್ರೆಸ್ಸಿಗರೇ ಹೈಕಮಾಂಡ್ ನ್ನು...

ಹೆಚ್ಚುತ್ತಿರುವ ರೇಪ್ ಪ್ರಕರಣ: ವರದಿ ನೀಡಲು ಸಿದ್ದರಾಮಯ್ಯಗೆ ಹೈಕಮಾಂಡ್ ಆದೇಶ

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...

ಹೈಕಮಾಂಡ್ ಗೆ ಸೆಡ್ಡು: ಪಕ್ಷ ತೊರೆದ ತಮಿಳುನಾಡು ಕಾಂಗ್ರೆಸ್ ಮುಖಂಡ ವಾಸನ್

ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಗೆ ಭಿನ್ನಮತದ ಬಿಸಿ ತಟ್ಟಿದೆ. ತಮಿಳುನಾಡು ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರು ಪಕ್ಷ ತೊರೆದು, ನೂತನ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ನ.3ರಂದು ಅಧಿಕೃತವಾಗಿ ನಿರ್ಧಾರ ಪ್ರಕಟಿಸಿರುವ ವಾಸನ್, ಪ್ರಮುಖ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ನಿಗಮ ಮಂಡಳಿ ನೇಮಕಾತಿ ವಿಚಾರ: ಮಾತುಕತೆ ವಿಫಲ

ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ. ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು. ನಿಗಮ ಮಂಡಳಿಗಳಿಗೆ ಮೊದಲ...

ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...

ಸಚಿವ ಸಂಪುಟ ಮೇ ತಿಂಗಳವರೆಗೆ ವಿಸ್ತರಣೆಯಿಲ್ಲ

ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...

ಡಿಸಿಎಂ ಹುದ್ದೆ ಸೃಷ್ಠಿಸಲ್ಲ 'ಪರಮೇಶ್ವರ'!

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...

ಸಂಪುಟ ವಿಸ್ತರಣೆ ವಿಚಾರ: ಮಂತ್ರಿ ಸ್ಥಾನಕ್ಕಾಗಿ ಶಾಸಕರ ಲಾಬಿ

ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಸಂಪುಟ ವಿಸ್ತರಣೆ ವಿಚಾರ: ಸೆ.3ಕ್ಕೆ ದೆಹಲಿಗೆ-ಸಿದ್ದರಾಮಯ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited