Untitled Document
Sign Up | Login    
Dynamic website and Portals
  
June 16, 2016

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಇನ್ನಷ್ಟು ಕತ್ತರಿ ಬೀಳಲಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 5 ಪೈಸೆ ,ಡೀಸೆಲ್ ಬೆಲೆ ಲೀಟರ್​ಗೆ 1.26 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಕಳೆದ ಮಾರ್ಚ್​ನಿಂದ ಪೆಟ್ರೋಲ್ ಬೆಲೆಯಲ್ಲಿ 9.04 ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 11.05 ರೂ. ಏರಿಕೆಯಾದಂತಾಗಿದೆ.

ಬುಧವಾರ ತಡರಾತ್ರಿಯಿಂದಲೇ ನೂತನ ದರ ಜಾರಿ ಬಂದಿದೆ.ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಪರಿಷ್ಕೃತ ದರ 65.55ರೂ ಆಗಿದ್ದು, ಡಿಸೇಲ್ ದರ ಪ್ರತಿ ಲೀಟರ್​ಗೆ 55.19ರೂ ಆಗಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೆರೇಶನ್ ತಿಳಿಸಿದೆ.

ಪ್ರತಿ 15 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪರಿಷ್ಕರಣೆ ಮಾಡುತ್ತಿವೆ. ಮುಂದಿನ ದಿನಗಳಲ್ಲಿ ತೈಲ ಬೆಲೆ ಇನ್ನೂ ಏರಿಕೆ ಕಾಣುವ ಸಾಧ್ಯತೆಯಿದೆ. ಜತೆಗೆ ರೂಪಾಯಿ ಹಾಗೂ ಅಮೆರಿಕನ್ ಡಾಲರ್ ವಿನಿಮಯ ದರದಲ್ಲೂ ಬದ ಲಾವಣೆ ಉಂಟಾಗಲಿದ್ದು, ಇದಕ್ಕೆ ಅನುಗುಣವಾಗಿ ತೈಲ ಬೆಲೆ ಇನ್ನಷ್ಟು ಏರುವ ಸಾಧ್ಯತೆಯಿದೆ ಎನ್ನಲಾಗಿದೆ.

 

 

Share this page : 
 

Table 'bangalorewaves.bv_news_comments' doesn't exist