Untitled Document
Sign Up | Login    
Dynamic website and Portals
  
August 16, 2016

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ವಾಹನ ಸವಾರರಿಗೆ ಒಂದು ಸಿಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಇಳಿಕೆಯಾಗಿವೆ.

ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್ ದರದಲ್ಲಿ 2 ರೂ. ಕಡಿತಗೊಂಡಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರಗಳ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಪರಿಣಾಮ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ದರ ಇಳಿಕೆ ಮಾಡಿ ಭಾರತೀಯ ತೈಲೋತ್ಪನ್ನ ಸಂಸ್ಥೆಗಳು ನಿರ್ಧಾರ ಕೈಗೊಂಡಿದ್ದರಿಂದ ನೂತನ ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ ಕೂಡ ದರ ಇಳಿಕೆಗೆ ಕಾರಣ ಎಂದು ಹೇಳಲಾಗುತ್ತಿದೆ.

 

 

Share this page : 
 

Table 'bangalorewaves.bv_news_comments' doesn't exist