Untitled Document
Sign Up | Login    
Dynamic website and Portals
  
September 18, 2016

ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ನವದೆಹಲಿ : ಜಮ್ಮು-ಕಾಶ್ಮೀರದ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ. ಅದೊಂದು ಭಯೋತ್ಪಾದಕ ರಾಷ್ಟ್ರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಉರಿ ಸೆಕ್ಟರ್ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಉಗ್ರರ ದಾಳಿಯಿಂದ ತೀವ್ರ ಆಘಾತ ಉಂಟಾಗಿದೆ. ಈ ದಾಳಿಗೆ ಪಾಕಿಸ್ತಾನದ ನೇರ ಬೆಂಬಲವಿದೆ. ಭಯೋತ್ಪಾದಕ ರಾಷ್ಟ್ರವಾಗಿರುವ ಪಾಕಿಸ್ತಾನವನ್ನು ವಿಶ್ವದಲ್ಲಿ ಒಂಟಿ ಮಾಡಬೇಕು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರಿಗೆ ಬೆಂಬಲ ನೀಡುವುದನ್ನು ಮುಂದುವರೆಸಿದೆ. ವಿಶ್ವ ಸಮುದಾಯದಿಂದ ಪಾಕಿಸ್ತಾನಕ್ಕೆ ಬೆಂಬಲ ಸಿಗದಂತೆ ಪ್ರತ್ಯೇಕಿಸಬೇಕು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಬೆಳಿಗ್ಗೆ 5:30 ರ ವೇಳೆಗೆ ಉರಿ ಸೆಕ್ಟರ್ ನಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 17 ಯೋಧರು ಹುತಾತ್ಮರಾಗಿದ್ದಾರೆ.

 

 

Share this page : 
 

Table 'bangalorewaves.bv_news_comments' doesn't exist