Untitled Document
Sign Up | Login    
Dynamic website and Portals
  
October 1, 2016

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕುಳಿತು ಉಪವಾಸ ಸತ್ಯಾಗ್ರಹ ಆರಂಭಿಸಿರುವ ದೇವೇಗೌಡರಿಗೆ ಪರಿಷತ್ ಸದಸ್ಯ ಟಿಎ ಷರವಣ ಹಾಗೂ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಸಾಥ್ ನೀಡಿದ್ದಾರೆ.

ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ರಾಜ್ಯದ ಪಾಲಿಗೆ ಮರಣಶಾಸನವಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಲಸಂಗ್ರಹ ಕುರಿತಂತೆ ವಾಸ್ತವ ಸ್ಥಿತಿ ಅರಿಯಲು ಕರ್ನಾಟಕ ಹಾಗೂ ತಮಿಳುನಾಡಿಗೆ ತಜ್ಞರ ತಂಡ ಕಳುಹಿಸಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು. ಈ ಮೂಲಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಕರ್ನಾಟಕದ ಕಾವೇರಿ ಕೊಳ್ಳದ ಸುಮಾರು 2.3 ಕೋಟಿ ಜನರಿಗೆ ಕುಡಿಯಲು ನೀರು ಕೊಡಿ. ಬಳಿಕ ತಮಿಳುನಾಡು ರೈತರ ಸಾಂಬಾ ಬೆಳೆಗೆ ನೀರು ಬಿಡಿ ಎಂದು ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ ದೇವೇಗೌಡರ ಉಪವಾಸ ಸತ್ಯಾಗ್ರಹದ ನಿರ್ಧಾರದಿಂದಾಗಿ ಕಾವೇರಿ ಜಲ ವಿವಾದದ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡಂತಾಗಿದೆ.

 

 

Share this page : 
 

Table 'bangalorewaves.bv_news_comments' doesn't exist