Untitled Document
Sign Up | Login    
Dynamic website and Portals
  
October 3, 2016

ಕಾವೇರಿ ಜಲ ವಿವಾದ: ಆದೇಶ ನಿರಾಕರಿಸುತ್ತಿರುವ ರಾಜ್ಯದ ನಡೆಗೆ ಸುಪ್ರೀಂ ಅಸಮಾಧಾನ

ನವದೆಹಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.

ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ ತಮಿಳುನಾಡಿಗೆ ನೀರು ಬಿಡುವ ಕುರಿತು ಸೂಕ್ತ ತೀರ್ಮಾನ ಕೈಗೊಂಡು ನಾಳೆ ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಸೆ.30ರಂದು ಕಾವೇರಿ ನಿರ್ವಹಣಾ ಮಂಡಳಿ ರಚಿಸುವುದಾಗಿ ಹೇಳಿದ್ದ ಅಟಾರ್ನಿ ಜನರಲ್ ಮುಕಲ್ ರೋಹ್ಟಗಿ ಅವರು ಇಂದು ಕೇಂದ್ರ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಆದೇಶದಂತೆ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ. ನಿರ್ವಹಣಾ ಮಂಡಳಿ ರಚನೆ ಜವಾಬ್ದಾರಿ ಸಂಸತ್ತಿನ ನಿರ್ಧಾರವಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ನಿರ್ವಹಣಾ ಮಂಡಳಿ ರಚಿಸಬೇಕಿದೆ ಎಂದು ಸುಪ್ರೀಂ ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ಕೂಡ ಇಂದು ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

 

 

Share this page : 
 

Table 'bangalorewaves.bv_news_comments' doesn't exist