Untitled Document
Sign Up | Login    
Dynamic website and Portals
  
September 30, 2017

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.

ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ವೈಭವದ ವಿಜಯದಶಮಿ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಸಂಪುಟ ಸಹದ್ಯೋಗಿಗಳು, ದಸರಾ ಉದ್ಘಾಟನೆ ಮಾಡಿದ್ದ ಕವಿ ನಿಸ್ಸಾರ್ ಅಹ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಇದರೊಂದಿಗೆ ನಂದಿಧ್ವಜ, ನಿಶಾನೆ ಆನೆ ಬಲರಾಮ, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವ 40 ಸ್ತಬ್ದಚಿತ್ರಗಳು ಹಾಗೂ 40 ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿವೆ. ಈ ವರ್ಷ ಜಂಬೂಸವಾರಿ ಮೆರವಣಿಗೆಯನ್ನು ದೆಹಲಿಯ ಗಣರಾಜ್ಯೋತ್ಸವ ಪರೇಡ್‌ ಮಾದರಿಯಲ್ಲಿ ಅತ್ಯಂತ ಶಿಸ್ತುಬದಛಿವಾಗಿ ಸಾಗಿರುವುದು ವಿಶೇಷ.

 

 

Share this page : 
 

Table 'bangalorewaves.bv_news_comments' doesn't exist