Untitled Document
Sign Up | Login    
Dynamic website and Portals
  
October 10, 2017

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾ, ತೆಲಂಗಾಣ, ರಾಯಲಸೀಮೆ, ಉತ್ತರ ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಕುರಿತು ಮುನ್ನೆಚ್ಚರಿಕೆ ನೀಡಲಾಗಿದೆ.

ಪ್ರತಿಕೂಲ ಹವಾಮಾನದಿಂದಾಗಿ ಈ ತಿಂಗಳ 13 ರವರೆಗೂ ಅಂದರೆ ಮುಂದಿನ ನಾಲ್ಕು ದಿನಗಳು ಬಿರುಗಾಳಿ ಸಹಿತ ಭಾರೀ ಮಳೆ ಬೀಳಲಿದೆ. ಇನ್ನು ಬಿರುಗಾಳಿ ನಿಧಾನವಾಗಿ ಪಶ್ಚಿಮ-ನೈರುತ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದ್ದು, 24 ಗಂಟೆಗಳ ಬಳಿಕ ಉತ್ತರಾಭಿಮುಖವಾಗಿ ಸಂಚರಿಸಲಿದೆ ಎಂದು ಇಲಾಖೆ ತಿಳಿಸಿದೆ.

 

 

Share this page : 
 

Table 'bangalorewaves.bv_news_comments' doesn't exist